Just In
- 1 hr ago
ಅನಾವರಣವಾಯ್ತು ಫೋಕ್ಸ್ವ್ಯಾಗನ್ ಗಾಲ್ಫ್ ಜಿಟಿಐ ಕ್ಲಬ್ಸ್ಪೋರ್ಟ್ 45 ಕಾರು
- 3 hrs ago
35 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಉಚಿತ ಲಸಿಕೆ ನೀಡಲು ಮುಂದಾದ ಟಿವಿಎಸ್ ಕಂಪನಿ
- 5 hrs ago
ವಾರದ ಪ್ರಮುಖ ಸುದ್ದಿ: ಏರ್ಬ್ಯಾಗ್ ಕಡ್ಡಾಯ, ಬಿಡುಗಡೆಗೆ ಸಜ್ಜಾದ ಸಿಟ್ರನ್, ಟೊಯೊಟಾ ನೌಕರರ ಮುಷ್ಕರ ಅಂತ್ಯ!
- 15 hrs ago
ವೆಂಟೊ ಟ್ರೆಂಡ್ಲೈನ್ ವೆರಿಯೆಂಟ್ ಬುಕ್ಕಿಂಗ್ ಪ್ರಕ್ರಿಯೆಗೆ ಸ್ಥಗಿತಗೊಳಿಸಿದ ಫೋಕ್ಸ್ವ್ಯಾಗನ್
Don't Miss!
- Movies
ಅಮೆರಿಕಾದಲ್ಲಿ ಇಂಡಿಯನ್ ರೆಸ್ಟೋರೆಂಟ್ ಪ್ರಾರಂಭಿಸಿದ ಪ್ರಿಯಾಂಕಾ ಚೋಪ್ರಾ: ಪೂಜೆಯ ಫೋಟೋ ವೈರಲ್
- Finance
ದಕ್ಷಿಣ ಭಾರತದ ಅತಿದೊಡ್ಡ ಆಭರಣ ರೀಟೈಲರ್ ಮೇಲೆ ಐಟಿ ದಾಳಿ
- News
ಚಿನ್ನ ಕಳ್ಳ ಸಾಗಾಣಿಕೆ ಅನುಮಾನ; 48 ಲಕ್ಷ ವಾಚ್ ಒಡೆದ ಅಧಿಕಾರಿಗಳು!
- Sports
ಐಪಿಎಲ್ 2021: ಅಧಿಕೃತ ವೇಳಾಪಟ್ಟಿ ಬಿಡುಗಡೆ, ಮೊದಲ ಪಂದ್ಯದಲ್ಲಿ ಆರ್ಸಿಬಿಗೆ ಮುಂಬೈ ಎದುರಾಳಿ
- Lifestyle
"ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?"
- Education
Mandya District Court Recruitment 2021: 10 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮೇಡ್ ಇನ್ ಇಂಡಿಯಾ ಜಿಮ್ನಿ ಎಸ್‍ಯುವಿಯ ರಫ್ತು ಆರಂಭಿಸಿದ ಮಾರುತಿ ಸುಜುಕಿ
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯೊಂದಿಗೆ ಈ ಐಕಾನಿಕ್ ಆಫ್-ರೋಡರ್ ಸುಜುಕಿ ಜಿಮ್ನಿ ದಾಖಲೆಯ ಮಟ್ಟದಲ್ಲಿ ಮಾರಾಟವಾಗುತ್ತಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರಸ್ತುತ ತಲೆಮಾರಿನ ಸುಜುಕಿ ಜಿಮ್ನಿ ಮಿನಿ ಎಸ್‍ಯುವಿಯು 2018ರಿಂದ ಮಾರಾಟವಾಗುತ್ತಿದೆ.

ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ ಕಂಪನಿಯು ಭಾರತದಿಂದ ಸುಜುಕಿಯ ಪ್ರಸಿದ್ಧ ಕಾಂಪ್ಯಾಕ್ಟ್ ಆಫ್-ರೋಡರ್ ಜಿಮ್ನಿ ರಫ್ತು ಮಾಡಲು ಪ್ರಾರಂಭಿಸಿದೆ. ಗುಜರಾತ್‌ನ ಮುಂಡ್ರಾ ಬಂದರಿನಿಂದ ಲ್ಯಾಟಿನ್ ಅಮೆರಿಕದ ದೇಶಗಳಾದ ಕೊಲಂಬಿಯಾ ಮತ್ತು ಪೆರುವಿಗೆ 184 ಯುನಿಟ್ ಗಳನ್ನು ಮೊದಲ ಬ್ಯಾಚ್ ಆಗಿ ರಫ್ತು ಮಾಡಲಾಗಿದೆ. ಮೂರು ಡೋರಿನ ಸುಜುಕಿ ಜಿಮ್ನಿ ಮಾದರಿಯನ್ನು ಭಾರತದಿಂದ ಲ್ಯಾಟಿನ್ ಅಮೆರಿಕ, ಮಧ್ಯಪ್ರಾಚ್ಯ ಮತ್ತು ಆಫ್ರಿಕನ್ ಮಾರುಕಟ್ಟೆಗಳಿಗೆ ರಫ್ತು ಮಾಡಲಾಗುತ್ತದೆ.

2020ರ ಆಟೋ ಎಕ್ಸ್‌ಪೋ ಸಂದರ್ಭದಲ್ಲಿ ಮಾರುತಿ ಸುಜುಕಿ ಭಾರತದಲ್ಲಿ ಜಿಮ್ನಿಯನ್ನು ಪ್ರದರ್ಶಿಸಿದರು. ಇದು ಆಫ್-ರೋಡ್ ವಾಹನ ಪ್ರಿಯರಿಗೆ ಹೆಚ್ಚಿನ ಕುತೂಹಲ ಹುಟ್ಟು ಹಾಕಿತು. ಮಾರುತಿ ಸುಜುಕಿ ಈ ಜಿಮ್ನಿ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಮುಂದಾಗಿದೆ. ವರದಿಗಳ ಪ್ರಕಾರ, ಜಿಮ್ನಿ ಎಸ್‍ಯುವಿಯನ್ನು 5-ಡೋರಿನ ರೂಪದಲ್ಲಿ ಭಾರತದಲ್ಲಿ ಬಿಡುಗಡೆಗೊಳಿಸಲಾಗುತ್ತದೆ.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಟೊಯೊಟಾ

ಇದನ್ನು ಭಾರತದಲ್ಲಿ 5-ಡೋರಿನ ಮಾದರಿಯಾಗಿ ಪ್ರತ್ಯೇಕವಾಗಿ ಮಾರಾಟ ಮಾಡಲಾಗುವುದು. ವರದಿ ಪ್ರಕಾರ, 2022ರ ಜುಲೈ ತಿಂಗಳಲ್ಲಿ ಈ ಐಕಾನಿಕ್-ಆಫ್ ರೋಡರ್ ಜಿಮ್ನಿ ಎಸ್‍ಯುವಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸಬಹುದು.

ಈ ಸುಜುಕಿ ಜಿಮ್ನಿ ಎಸ್‍ಯುವಿಯು ಯುರೋಪಿಯನ್ ದೇಶಗಳಲ್ಲಿ ಬಹುಬೇಡಿಕೆಯನ್ನು ಪಡೆದುಕೊಂಡಿದೆ, ಅಲ್ಲದೇ ಸುಜುಕಿ ಜಿಮ್ನಿ ತವರು ಜಪಾನ್ ನಲ್ಲಿಯು ಬೇಡಿಕೆ ಹೆಚ್ಚಾಗಿದೆ. ಸುಜುಕಿ ಕಂಪನಿಯ ಜಪಾನ್ ನಲ್ಲಿರುವ ಕೊಸೈನ ಘಟಕದಲ್ಲಿ ಉತ್ಪಾದನೆಯನ್ನು ಗರಿಷ್ಠ ಪ್ರಮಾಣಕ್ಕೆ ಏರಿಸಿದೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಆದರೂ ಬೇಡಿಕೆಗೆ ಅನುಗುಣವಾಗಿ ಪೂರೈಸಲು ಸಾಧ್ಯವಾಗುತ್ತಿಲ್ಲ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಐಕಾನಿಕ್ ಆಪ್-ರೋಡರ್ ಜಿಮ್ನಿ ಬೇಡಿಕೆಯು ಅಷ್ಟರ ಪ್ರಮಾಣಕ್ಕೆ ಇದೆ. ಇದರಿಂದ ಭಾರತದಲ್ಲಿ ಮಾರುತಿ ಸುಜುಕಿಯ ಗುರುಗಾಂವ್‌ನಲ್ಲಿರುವ ಘಟಕದಲ್ಲಿ ಉತ್ಪಾದನೆಯನ್ನು ಮಡಲಾಗುತ್ತಿದೆ.

ಇನ್ನು ಜಿಮ್ನಿಯನ್ನು ಇತ್ತೀಚೆಗೆ ಮೆಕ್ಸಿಕೊದಲ್ಲಿ ಸುಜುಕಿ ಕಂಪನಿಯು ಬಿಡುಗಡೆಗೊಳಿಸಿತ್ತು. ಇದು ಕೇವಲ 72 ಗಂಟೆಗಳ ಅವಧಿಯಲ್ಲಿ ಸೋಲ್ಡ್ ಔಟ್ ಆಯ್ತು. ಈ ಮಿನಿ ಎಸ್‍ಯುವಿಯನ್ನು 2018ರಲ್ಲಿ ಜಾಗತಿಕವಾಗಿ ಅನಾವರಣಗೊಂಡಿತು. ಜಾಗತಿಕವಾಗಿ ಅನಾವರಣಗೊಂಡು 1.5 ವರ್ಷಗಳ ಬಳಿಕ ಭಾರತದ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಿದೆ.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಈ ಮಿನಿ-ಎಸ್‌ಯುವಿ 2019 ರ 'ವರ್ಲ್ಡ್ ಅರ್ಬನ್ ಕಾರ್ ಅಫ್ ದಿ ಇಯರ್' ಎಂಬ ಪ್ರತಿಷ್ಠಿತ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಹೊಸ ಜಿಮ್ನಿ ಲ್ಯಾಡರ್-ಫ್ರೇಮ್ ಚಾಸಿಸ್ ಅನ್ನು ಆಧರಿಸಿದೆ. ಇದು 3 ಲಿಂಕ್ ಆಕ್ಸಲ್ ಸಸ್ಪೆಂಷನ್ ಅನ್ನು ಹೊಂದಿದೆ. ಇದು ಕಠಿಣ ಭೂಪ್ರದೇಶಗಳಲ್ಲಿ ಸುಗಮವಾಗಿ ಸಾಗಲು ನೆರವಾಗುತ್ತದೆ. ಈ ಮಿನಿ ಎಸ್‍ಯುವಿಯಲ್ಲಿ 1.5 ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ.

ಈ ಎಂಜಿನ್‍ನೊಂದಿಗೆ 5 ಸ್ಪೀಡ್ ಅಥವಾ 4 ಸ್ಪೀಡ್ ಗೇರ್‍ಬಾಕ್ಸ್ ಅನ್ನು ಅಳವಡಿಸಲಾಗಿದೆ. ಭಾರತದಲ್ಲಿ ಬಿಡುಗಡೆಯಾದರೆ ಈ ಜಿಮ್ನಿ ಎಸ್‍ಯುವಿ 33 ವರ್ಷಗಳ ಕಾಲ ದೇಶದಲ್ಲಿ ಮಾರಾಟವಾಗಿದ್ದ ಜನಪ್ರಿಯ ಜಿಪ್ಸಿ ಎಸ್‍ಯುವಿಯ ಉತ್ತರಾಧಿಕಾರಿಯಾಗಲಿದೆ.

ಭಾರತದಲ್ಲಿ ಆಫ್-ರೋಡ್ ವಾಹನ ಎಂದು ಹೇಳಿದಾಗ ಮೊದಲು ಯೋಚನೆಗೆ ಬರುವುದು ಮಹೀಂದ್ರಾ ಥಾರ್ ಎಂದು ಹೇಳಬಹುದು. ಆದರೆ ಅದೇ ರೀತಿ ಉತ್ತಮ ಆಫ್-ರೋಡ್ ಸಾಮರ್ಥ್ಯವನ್ನು ಹೊಂದಿರುವ ಜಿಮ್ನಿ ಭಾರತದಲ್ಲಿ ಬಿಡುಗಡೆಗೊಂಡ ಬಳಿಕ ಥಾರ್ ಎಸ್‍ಯುವಿಗೆ ಪ್ರಬಲ ಎದುರಾಳಿ ಆಗುತ್ತದೆ.