Just In
- 10 min ago
ವಿನೂತನ ವೈಶಿಷ್ಟ್ಯತೆಯೊಂದಿಗೆ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನವಾದ ರಾಯಲ್ ಎನ್ಫೀಲ್ಡ್ ಮಿಟಿಯೊರ್ 350
- 47 min ago
ಹೊಸ ಜೀಪ್ ರ್ಯಾಂಗ್ಲರ್ ರೂಬಿಕಾನ್ 392 ಲಾಂಚ್ ಎಡಿಷನ್ ಬಿಡುಗಡೆ
- 1 hr ago
ಸ್ಪ್ಲೆಂಡರ್ ಬೈಕುಗಳ ಮೇಲೆ ಭರ್ಜರಿ ಡಿಸ್ಕೌಂಟ್ ನೀಡುತ್ತಿದೆ ಹೀರೋ ಮೋಟೊಕಾರ್ಪ್
- 2 hrs ago
2021ರ ಸ್ವಿಫ್ಟ್ ಕಾರಿನ ಆಕ್ಸೆಸರಿಸ್ ಪ್ಯಾಕೇಜ್ ಬಿಡುಗಡೆ ಮಾಡಿದ ಮಾರುತಿ ಸುಜುಕಿ
Don't Miss!
- News
ಅಂತರರಾಷ್ಟ್ರೀಯ ವಿಮಾನ ಸಂಚಾರದ ಮೇಲಿನ ನಿರ್ಬಂಧ ಮುಂದುವರಿಕೆ
- Movies
ನಿರ್ದೇಶಕನಿಗೆ ಅವಮಾನ: ಸ್ಟಾರ್ ನಟ ಆಗಿದ್ರೆ ಸುಮ್ಮನೆ ಬಿಡುತ್ತಿದ್ರಾ? ಚಂದ್ರಶೇಖರ್ ಅಸಮಾಧಾನ
- Finance
ಮುಂದಿನ 6 ತಿಂಗಳಿನಲ್ಲಿ ದೆಹಲಿಯ ಎಲ್ಲಾ ಸರ್ಕಾರಿ ಕಾರುಗಳು, ಎಲೆಕ್ಟ್ರಿಕ್ ಕಾರುಗಳಾಗಿ ಬದಲಾಗಲಿವೆ!
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Sports
ಐಪಿಎಲ್ 2021: ರಾಜಸ್ಥಾನ್ ರಾಯಲ್ಸ್ ಜೊತೆ ಇಶ್ ಸೋಧಿ ಒಪ್ಪಂದ
- Lifestyle
ಅರಿಶಿನದ ಈ ಆರೋಗ್ಯ ಪ್ರಯೋಜನಗಳನ್ನು ಕೇಳಿದರೆ, ನೀವೂ ಶಾಕ್ ಆಗ್ತೀರಾ!
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಅರೆನಾ ಮಾರಾಟ ಮಳಿಗೆಗಳಿಗೂ ಡಿಜಿಟಲ್ ಫೈನಾನ್ಸ್ ಸರ್ವಿಸ್ ಪರಿಚಯಿಸಿದ ಮಾರುತಿ ಸುಜುಕಿ
ಪ್ರೀಮಿಯಂ ಕಾರು ಖರೀದಿದಾರರಿಗೆ ಅತಿ ಸರಳ ಸಾಲ ಸೌಲಭ್ಯಗಳನ್ನು ಒದಗಿಸುವ ಸಂಬಂಧ ಒಂದೇ ಸೂರಿನಡಿ ವಿವಿಧ ಬ್ಯಾಂಕ್‌ಗಳ ಸಾಲ ಸೌಲಭ್ಯಗಳ ಮಾಹಿತಿಗಾಗಿ ಡಿಜಿಟಲ್ ಫೈನಾನ್ಸ್ ಪ್ಲ್ಯಾಟ್‌ಫಾರ್ಮ್‌ಗೆ ಚಾಲನೆ ನೀಡಿದ್ದ ಮಾರುತಿ ಸುಜುಕಿಯು ಇದೀಗ ಅರೆನಾ ಕಾರು ಮಾರಾಟ ಮಳಿಗೆಗಳಿಗೂ ಸ್ಮಾಟ್ ಫೈನಾನ್ಸ್ ಆಯ್ಕೆ ನೀಡುತ್ತಿದೆ.

ದಸರಾ ಮತ್ತು ದೀಪಾವಳಿ ನಂತರ ಹೊಸ ವರ್ಷದ ಆಫರ್‌ಗಳ ಮೂಲಕ ಗ್ರಾಹಕರನ್ನು ಸೆಳೆಯುತ್ತಿರುವ ಆಟೋ ಕಂಪನಿಗಳು ಗ್ರಾಹಕರಿಗೆ ಗರಿಷ್ಠ ಡಿಸ್ಕೌಂಟ್ ನೀಡುತ್ತಿದ್ದು, ಮಾರುತಿ ಸುಜುಕಿ ಸಹ ವಿವಿಧ ಡಿಸ್ಕೌಂಟ್ ಆಫರ್‌ಗಳೊಂದಿಗೆ ಕಾರು ಖರೀದಿಯನ್ನು ಸುಲಭಗೊಳಿಸಲು ಸ್ಮಾರ್ಟ್ ಡಿಜಿಟಲ್ ಫೈನಾನ್ಸ್ ಪ್ಲ್ಯಾಟ್‌ಫಾರ್ಮ್‌ಗೆ ಚಾಲನೆ ನೀಡಿದೆ. ಆರಂಭಿಕವಾಗಿ ಹೊಸ ಫೈನಾನ್ಸ್ ಪ್ಲ್ಯಾಟ್‌ಫಾರ್ಮ್ ಅನ್ನು ನೆಕ್ಸಾ ಕಾರು ಖರೀದಿದಾರರಿಗೆ ಮಾತ್ರ ಪರಿಚಯಿಸಿದ್ದ ಕಂಪನಿಯು ಇದೀಗ ಹೊಸ ಹಣಕಾಸು ಸೇವೆಯನ್ನು ಅರೆನಾ ಮಾರಾಟ ಮಳಿಗೆಗಳಿಗೂ ವಿಸ್ತರಿಸಲಿದೆ.

ಮಾರುತಿ ಸುಜುಕಿಯು ವಿವಿಧ ಕಾರು ಮಾದರಿಗಳಿಗೆ ಎರಡು ಮಾದರಿಯ ಮಾರಾಟ ಸೌಲಭ್ಯವನ್ನು ಹೊಂದಿದ್ದು, ಸಾಮಾನ್ಯ ಕಾರು ಮಾದರಿಗಳನ್ನು ಅರೆನಾದಲ್ಲಿ ಮತ್ತು ಪ್ರೀಮಿಯಂ ಕಾರು ಮಾದರಿಗಳನ್ನು ನೆಕ್ಸಾ ಶೋರೂಂಗಳಲ್ಲಿ ಮಾರಾಟ ಮಾಡುತ್ತದೆ.

ಅರೆನಾದಲ್ಲಿ ಎಸ್-ಪ್ರೆಸ್ಸೊ, ಸ್ವಿಫ್ಟ್, ವಿಟಾರಾ ಬ್ರೆಝಾ, ಆಲ್ಟೊ, ವ್ಯಾಗನ್ಆರ್, ಡಿಸೈರ್, ಇಕೋ, ಸೆಲೆರಿಯೊ, ಎರ್ಟಿಗಾ ಕಾರುಗಳ ಮಾರಾಟ ಹೊಂದಿದ್ದರೆ ನೆಕ್ಸಾದಲ್ಲಿ ಇಗ್ನಿಸ್, ಬಲೆನೊ, ಎರ್ಟಿಗಾ ಎಕ್ಸ್6, ಎಸ್-ಕ್ರಾಸ್ ಮತ್ತು ಸಿಯಾಜ್ ಕಾರುಗಳ ಮಾರಾಟ ಹೊಂದಿದೆ.

ಮಾರುತಿ ಸುಜುಕಿಯು ಪರಿಚಯಿಸಿರುವ ಹೊಸ ಡಿಜಿಟಲ್ ಫೈನಾನ್ಸ್ ಪ್ಲ್ಯಾಟ್‌ಫಾರ್ಮ್ ಸೇವೆಗಳು ನೆಕ್ಸಾ ಮತ್ತು ಅರೆನಾದಲ್ಲಿನ ಎಲ್ಲಾ ಕಾರು ಮಾದರಿಗಳಿಗೂ ಅನ್ವಯವಾಗಲಿದ್ದು, ಹೊಸ ಕಾರು ಖರೀದಿದಾರರಿಗೆ ಎಂಡ್-ಟು-ಎಂಡ್ ಮತ್ತು ಲೈವ್ ಕಾರ್ ಫೈನಾನ್ಸ್ ಒದಗಿಸುವ ಗುರಿ ಹೊಂದಿದೆ. ಕಾರ್ ಫೈನಾನ್ಸ್ ಆಯ್ಕೆಯನ್ನು ಸರಳಗೊಳಿಸುವ ಉದ್ದೇಶದಿಂದ ಸಂಪೂರ್ಣ ಆಟೋ ಫೈನಾನ್ಸ್ ಅಗತ್ಯಗಳಿಗಾಗಿ ‘ಒನ್ ಸ್ಟಾಪ್ ಶಾಪ್' ಒದಗಿಸಲಾಗಿದ್ದು, ಗ್ರಾಹಕರು ತಮ್ಮ ಅಗತ್ಯತೆ ಮತ್ತು ಅನುಕೂಲಕ್ಕೆ ತಕ್ಕಂತೆ ಫೈನಾನ್ಸ್ ಆಯ್ಕೆಗಳನ್ನು ಪಡೆದುಕೊಳ್ಳಬಹುದು.

ಕಾರುಗಳ ಖರೀದಿಗೆ ಸುಲಭವಾದ ಸಾಲಸೌಲಭ್ಯ ಯಾವುದು? ಯಾವ ಬ್ಯಾಂಕ್ ಸಾಲದಿಂದ ಎಷ್ಟು ಲಾಭ? ಯಾವ ಮಾದರಿಯು ಸಾಲ ಸೌಲಭ್ಯ ಮರುಪಾವತಿಗೆ ಸರಳವಾಗಿರುತ್ತೆ ಎನ್ನುವುದನ್ನು ಡಿಜಿಟಲ್ ಫೈನಾನ್ಸ್ ಪ್ಲ್ಯಾಟ್‌ಫಾರ್ಮ್ ಅತಿ ಸುಲಭವಾಗಿ ವಿವರಿಸುತ್ತದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಮಾರುತಿ ಸುಜುಕಿಯು ಸದ್ಯ ಎಚ್‌ಡಿಎಫ್‌ಸಿ ಬ್ಯಾಂಕ್, ಯೆಸ್ ಬ್ಯಾಂಕ್, ಐಸಿಸಿಐ ಬ್ಯಾಂಕ್, ಇಂಡಸ್ಇಂಡ್ ಬ್ಯಾಂಕ್, ಚೋಳಮಂಡಲಂ ಫೈನಾನ್ಸ್, ಎಯು ಸ್ಮಾಲ್ ಫೈನಾನ್ಸ್ ಬ್ಯಾಂಕ್, ಮಹೀಂದ್ರಾ ಫೈನಾನ್ಸ್ ಮತ್ತು ಕೊಟಕ್ ಮಹೀಂದ್ರಾ ಪ್ರೈಮ್ ಜೊತೆ ಪಾಲುದಾರಿಕೆ ಹೊಂದಿದ್ದು, ಸಾಕಷ್ಟು ಹಣಕಾಸು ಆಯ್ಕೆಗಳು ಗ್ರಾಹಕರಿಗೆ ಲಭ್ಯವಿದೆ.

ಈ ಮೂಲಕ ಡಿಜಿಟಲ್ ಸೇವೆಯು ಸುಲಭವಾಗಿ ಹಣಕಾಸಿನ ನೆರವು ಆಯ್ಕೆಗಳನ್ನು ನೀಡುವುದರ ಜೊತೆಗೆ ಸಾಲ ಪ್ರಕ್ರಿಯೆಯ ಪ್ರತಿಯೊಂದು ಹಂತದಲ್ಲೂ ಸಂಪೂರ್ಣವಾಗಿ ಪಾರದರ್ಶಕವಾಗಿಸಲು ಸಹಕಾರಿಯಾಗಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಹೊಸ ಡಿಜಿಟಲ್ ಫೈನಾನ್ಸ್ ಪ್ಲ್ಯಾಟ್‌ಫಾರ್ಮ್ ಸೇವೆಯನ್ನು ಸದ್ಯ ದೆಹಲಿ, ಗುರುಗ್ರಾಮ್, ಲಕ್ನೋ, ಜೈಪುರ್, ಮುಂಬೈ, ಪುಣೆ, ಅಹಮದಾಬಾದ್, ಚೆನ್ನೈ, ಬೆಂಗಳೂರು, ಹೈದರಾಬಾದ್, ಇಂದೋರ್, ಕೋಲ್ಕತಾ, ಕೊಚ್ಚಿ, ಗುವಾಹಟಿ, ಗೋವಾ, ಭುವನೇಶ್ವರ, ಭೋಪಾಲ್, ಕೊಯಮತ್ತೂರು, ಸೂರತ್, ವಡೋದರಾ, ರಾಂಚಿ, ರಾಯ್‌ಪುರ್, ಕಾನ್ಪುರ್, ವಿಜಯವಾಡ ಮತ್ತು ಡೆಹ್ರಾಡೂನ್ ನಲ್ಲಿ ಲಭ್ಯವಿದ್ದು, ಶೀಘ್ರದಲ್ಲೇ ಟೈರ್ 2 ಮತ್ತು ಟೈರ್ 3 ನಗರಗಳಿಗೂ ಹೊಸ ಫೈನಾನ್ಸ್ ಸೇವೆಯು ಲಭ್ಯವಿರಲಿದೆ.