Just In
Don't Miss!
- Lifestyle
ಭಾನುವಾರದ ದಿನ ಭವಿಷ್ಯ: ಈ ದಿನ ನಿಮ್ಮ ರಾಶಿಫಲ ಹೇಗಿದೆ ನೋಡಿ
- Sports
ಐಪಿಎಲ್ನಲ್ಲಿ ಕೆಟ್ಟ ದಾಖಲೆ ಬರೆದ ಕೂಲ್ ಕ್ಯಾಪ್ಟನ್ ಎಂಎಸ್ ಧೋನಿ
- Finance
ಶಾಲೆಯನ್ನ ಅರ್ಧಕ್ಕೆ ತೊರೆದು, 8,000 ರೂ. ವೇತನ ಪಡೆಯುತ್ತಿದ್ದ ನಿಖಿಲ್ ಕಾಮತ್ ಶತಕೋಟ್ಯಧಿಪತಿ ಆಗಿದ್ದೇಗೆ?
- News
ನೈಟ್ ಕರ್ಫ್ಯೂ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪೊಲೀಸರ ಬಿಗಿ ರೂಲ್ಸ್
- Education
Bank Of Baroda Recruitment 2021: 512 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ಅಜಯ್ ದೇವಗನ್-ಅಮಿತಾಭ್ ಸಿನಿಮಾದ ಚಿತ್ರೀಕರಣಕ್ಕೆ ಕೊರೊನಾ ಅಡ್ಡಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೊಸ ತಂತ್ರಜ್ಞಾನಗಳೊಂದಿಗೆ ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಸೆಲೆರಿಯೊ
ದೇಶದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ತನ್ನ 2021ರ ಸೆಲೆರಿಯೊ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಪರಿಚಯಿಸಲು ಸಜ್ಜಾಗುತ್ತಿದೆ. ಈ 2021ರ ಮಾರುತಿ ಸುಜುಕಿ ಸೆಲೆರಿಯೊ ಕಾರು ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ.

ಹೊಸ ತಲೆಮಾರಿನ ಮಾರುತಿ ಸುಜುಕಿ ಸೆಲೆರಿಯೊ ಭಾರತದಲ್ಲಿ ಹಲವು ಬಾರಿ ರೋಡ್ ಟೆಸ್ಟ್ ನಡೆಸಿದೆ. ವರದಿಗಳ ಪ್ರಕಾರ, ಹೊಸ ಸೆಲೆರಿಯೊ ಹ್ಯಾಚ್‌ಬ್ಯಾಕ್ ಮಾದರಿಯು ಮೇ ತಿಂಗಳಲ್ಲಿ ಭಾರತದಲ್ಲಿ ಬಿಡುಗಡೆಯಾಗಲಿದೆ. ಆದರೆ ಮಾರುತಿ ಸುಜುಕಿ ಕಂಪನಿಯು ಈ ಹೊಸ ಸೆಲೆರಿಯೊ ಕಾರಿನ ಬಿಡುಗಡೆಯ ದಿನಾಂಕದ ಬಗ್ಗೆ ಅಧಿಕೃತ ಮಾಹಿತಿಯನ್ನು ಬಹಿರಂಗಪಡಿಸಿಲ್ಲ. ಆದರೆ 2021ರ ಸೆಲೆರಿಯೊ ಒಂದು ಪ್ರಮುಖ ಬದಲಾವಣೆಯೆಂದರೆ ಹೊಸ ಹರ್ಟೆಕ್ಟ್ ಪ್ಲಾಟ್‌ಫಾರ್ಮ್ ನಡಿಯಲ್ಲಿ ಇದನ್ನು ಅಭಿವೃದ್ದಿಪಡಿಸಲಾಗುತ್ತದೆ.

ಇನ್ನು 2021ರ ಮಾರುತಿ ಸುಜುಕಿ ಸೆಲೆರಿಯೊ ಕಾರಿನ ಎಂಜಿನ್ ಅನ್ನು ಬದಲಾಯಿಸಲಾಗಿದೆ. ಇದರಲ್ಲಿ ಹೊಸ ಪವರ್ ಫುಲ್ 1.2ಎಲ್, 4-ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 83 ಬಿಹೆಚ್ಪಿ ಪವರ್ ಅನ್ನು ಉತ್ಪಾದಿಸುತ್ತದೆ.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಇದರೊಂದಿಗೆ 1.0ಎಲ್, 3-ಸಿಲಿಂಡರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಸಹ ನೀಡಬಹುದು. ಈ ಎಂಜಿನ್ 68 ಬಿಹೆಚ್ಪಿ ಪವರ್ ಉತ್ಪಾದಿಸುತ್ತದೆ. ಇನ್ನು ಈ ಎಂಜಿನ್ ಗಳೊಂದಿಗೆ 5-ಸ್ಪೀಡ್ ಮ್ಯಾನುವಲ್ ಮತ್ತು ಎಎಂಟಿ ಗೇರ್‌ಬಾಕ್ಸ್ ಆಯ್ಕೆಯನ್ನು ನೀಡಲಾಗುತ್ತದೆ.

2021ರ ಸೆಲೆರಿಯೊ ಹ್ಯಾಚ್‌ಬ್ಯಾಕ್ 7.0-ಇಂಚಿನ ಸ್ಮಾರ್ಟ್‌ಪ್ಲೇ ಸ್ಟುಡಿಯೋ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಪಡೆಯುತ್ತದೆ. ಈ ಸಿಸ್ಟಂ ಆಪಲ್ ಕಾರ್ ಪ್ಲೇ ಮತ್ತು ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ ಫೀಚರ್ ಅನ್ನು ಒಳಗೊಂಡಿರಬಹುದು.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಇನ್ನು ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಬದಲಾಯಿಸಲಾಗುವುದಿಲ್ಲ. ಆದರೆ ಡ್ಯಾಶ್‌ಬೋರ್ಡ್, ಸ್ಟೀಯರಿಂಗ್ ವೀಲ್ ಮತ್ತು ಸೆಂಟರ್ ಕನ್ಸೋಲ್ ಅನ್ನು ಪರಿಷ್ಕರಿಸಲಾಗುತ್ತದೆ. 2021ರ ಮಾರುತಿ ಸೆಲೆರಿಯೊ ಕಾರಿನಲ್ಲಿ ಆಟೋಮ್ಯಾಟಿಕ್ ಕ್ಲೈಮೇಂಟ್ ಕಂಟ್ರೋಲ್, ಸ್ಟೀಯರಿಂಗ್ ಮೌಂಟಡ್ ಕಂಟ್ರೋಲ್ ಮತ್ತು ಹೆಚ್ಚಿನ ಫೀಚರ್ ಗಳನ್ನು ಹೊಂದಿರಬಹುದು.

ಈ ಹ್ಯಾಚ್‌ಬ್ಯಾಕ್ ಸ್ಟ್ಯಾಂಡರ್ಡ್ ಸೀಟ್‌ಬೆಲ್ಟ್ ಅಲರ್ಟ್, ಎಲೆಕ್ಟ್ರಾನಿಕ್ ಬ್ರೇಕ್-ಫೋರ್ಸ್ ಡೆಲವೆರಿಯೊಂದಿಗೆ ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಂ, ರೇರ್ ಪಾರ್ಕಿಂಗ್ ಸೆನ್ಸರ್‌ಗಳು ಮತ್ತು ರಿವರ್ಸ್ ಕ್ಯಾಮೆರಾ ಜೊತೆಗೆ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್ ಅನ್ನು ಕೂಡ ಹೊಂದಿರುತ್ತದೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಈ ಮಾರುತಿ ಸುಜುಕಿ ಸೆಲೆರಿಯೊ ಹೊಸದಾಗಿ ವಿನ್ಯಾಸಗೊಳಿಸಿದೆ. ಮುಂಭಾಗದಲ್ಲಿ ಸಣ್ಣ ಗ್ರಿಲ್ ಮತ್ತು ಏರ್ ಡ್ಯಾಮ್, ಹ್ಯಾಲೊಜೆನ್ ಹೆಡ್‌ಲ್ಯಾಂಪ್‌ಗಳು, ಹೊಸ ಡೋರ್ ಹ್ಯಾಂಡಲ್‌ಗಳು, ನವೀಕರಿಸಿದ ಬಂಪರ್ ಮತ್ತು ಟ್ವೀಕ್ಡ್ ಟೈಲ್‌ಲ್ಯಾಂಪ್‌ಗಳನ್ನು ಒಳಗೊಂಡಿರುತ್ತದೆ.

ಮಾರುತಿ ಸುಜುಕಿ ಸೆಲೆರಿಯೊ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕಾರುಗಳಲ್ಲಿ ಒಂದಾಗಿದೆ. ಹೊಸ ತಲೆಮಾರಿನ ಮಾರುತಿ ಸುಜುಕಿ ಸೆಲೆರಿಯೊ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಟಾಟಾ ಟಿಯಾಗೋ, ಹ್ಯುಂಡೈ ಸ್ಯಾಂಟ್ರೊ ಮತ್ತು ರೆನಾಲ್ಟ್ ಕ್ವಿಡ್ ಕಾರುಗಳಿಗೆ ಪೈಪೋಟಿ ನೀಡುತ್ತದೆ.