ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಮಾರುತಿ ಸ್ವಿಫ್ಟ್ ಸಿಎನ್‌ಜಿ ಕಾರು

ಪ್ರಸ್ತುತ ತಲೆಮಾರಿನ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಅನ್ನು ಭಾರತದಲ್ಲಿ 2017ರ ಆರಂಭದಲ್ಲಿ ಮಾರುತಿ ಸುಜುಕಿ ಕಂಪನಿಯು ಪರಿಚಯಿಸಿತು. ಈ ಮಾರುತಿ ಸುಜುಕಿ ಸ್ವಿಫ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಹುಬೇಡಿಕೆಯೊಂದಿಗೆ ಮಾರಾಟವಾಗುತ್ತಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಮಾರುತಿ ಸ್ವಿಫ್ಟ್ ಸಿಎನ್‌ಜಿ ಕಾರು

ಎಷ್ಟೇ ಅತ್ಯಾಧುನಿಕ ಕಾರುಗಳು ಬಿಡುಗಡೆಯಾದರೂ ಮಾರುತಿ ಸ್ವಿಫ್ಟ್ ಕಳೆದ 15 ವರ್ಷದಿಂದ ಭಾರತೀಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಒಂದಾಗಿದೆ. ದೇಶಿಯ ಮಾರುಕಟ್ಟೆಯಲ್ಲಿ ಬಹುಬೇಡಿಕೆಯೊಂದಿಗೆ ದಾಖಲೆಯ ಮಟ್ಟದಲ್ಲಿ ಜನಪ್ರಿಯ ಸ್ವಿಫ್ಟ್ ಕಾರು ಮಾರಾಟವಾಗುತ್ತಿದೆ. ಅಲ್ಲದೇ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿಯು ಕೂಡ ಉತ್ತಮವಾಗಿ ಮಾರಾಟವಾಗುತ್ತಿದೆ. ಇನ್ನು ಸಿಫ್ಟ್ ಸೆಡಾನ್ ಡಿಜೈರ್ ಸಹ ಸಹ ಪ್ರತಿ ತಿಂಗಳು ಸೆಡಾನ್ ಮಾರಾಟ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಮಾರುತಿ ಸ್ವಿಫ್ಟ್ ಸಿಎನ್‌ಜಿ ಕಾರು

ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿಯು ತನ್ನ ಸಿಎನ್‌ಜಿ ಸರಣಿಯನ್ನು ವಿಸ್ತರಿಸುವುದಾಗಿ ಈಗಾಗಲೇ ಖಚಿತಪಡಿಸಿದೆ. ಏಕೆಂದರೆ ಇದು ತಕ್ಷಣದ ಪರ್ಯಾಯ ಮಾರ್ಗವಾಗಿದೆ. ಇಂಧನ ಬೆಲೆಯಲ್ಲಿ ಭಾರಿ ಏರಿಕೆ ಖಂಡಿತವಾಗಿರುವುದರಿಂದ ಇದು ಕಾರಿನ ಮಾರಾಟದ ಮೇಲೆಯು ಪರಿಣಾಮವನ್ನು ಬೀರುತ್ತಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಮಾರುತಿ ಸ್ವಿಫ್ಟ್ ಸಿಎನ್‌ಜಿ ಕಾರು

ಇದರಿಂದ ಇಂಡೋ-ಜಪಾನೀಸ್ ತಯಾರಕರು ಶೀಘ್ರದಲ್ಲೇ ದೇಶೀಯ ಮಾರುಕಟ್ಟೆಗಾಗಿ ಎಸ್-ಸಿಎನ್‌ಜಿ ಸ್ಪೆಕ್ ಸ್ವಿಫ್ಟ್ ಅನ್ನು ಪರಿಚಯಿಸುವ ನಿರೀಕ್ಷೆಯಿದೆ. ಈ ಸ್ವಿಫ್ಟ್ ಸಿಎನ್‌ಜಿ ಕಾರನ್ನು ಎಂಟ್ರಿ ಲೆವೆಲ್ ಎಲ್‌ಎಕ್ಸ್‌ಐ ರೂಪಾಂತರದಲ್ಲಿ ಮಾತ್ರ ನೀಡಬಹುದು.

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಮಾರುತಿ ಸ್ವಿಫ್ಟ್ ಸಿಎನ್‌ಜಿ ಕಾರು

ಈ ಮೂಲಕ ಸ್ವಿಫ್ಟ್ ಸಿಎನ್‌ಜಿ ಕಾರಿನ ಮಾರಾಟವನ್ನು ಹೆಚ್ಚಿಸಲು ಪ್ರಯತ್ನಿಸುತ್ತಿದೆ. ಸ್ವಿಫ್ಟ್ ಸಿಎನ್‌ಜಿ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಪರಿಚಯಿಸಬಹುದು ಎಂದು ನಿರೀಕ್ಷಿಸುತ್ತೇವೆ. ಮುಂದಿನ ದಿನಗಳಲ್ಲಿ ಸ್ವಿಫ್ಟ್ ಸಿಎನ್‌ಜಿ ಕಾರಿನ ಬಗ್ಗೆ ಹೆಚ್ಚಿನ ಮಾಹಿತಿಗಳು ಬಹಿರಂಗವಾಗಬಹುದು.

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಮಾರುತಿ ಸ್ವಿಫ್ಟ್ ಸಿಎನ್‌ಜಿ ಕಾರು

ಪ್ರಸ್ತುತ ಭಾರತದಲ್ಲಿ ಮಾರಾಟವಾಗುತ್ತಿರುವ ಸ್ವಿಫ್ಟ್ ಫೇಸ್‌ಲಿಫ್ಟ್‌ ಕಾರಿನಲ್ಲಿ 1.2-ಲೀಟರ್ ಡ್ಯುಯಲ್ ಜೆಟ್ 12 ಎನ್ ಪೆಟ್ರೋಲ್ ಎಂಜಿನ್ ಅಳವಡಿಸಲಾಗಿದೆ. ಈ ಎಂಜಿನ್ 89 ಬಿಹೆಚ್‌ಪಿ ಪವರ್ ಮತ್ತು 113 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಮಾರುತಿ ಸ್ವಿಫ್ಟ್ ಸಿಎನ್‌ಜಿ ಕಾರು

ಈ ಸ್ವಿಫ್ಟ್ ಕಾರಿನಲ್ಲಿ ಆಲ್-ಎಲ್ಇಡಿ ಲೈಟಿಂಗ್ ಸಿಸ್ಟಂ(ಹೆಡ್‌ಲೈಟ್‌ಗಳು, ಡಿಆರ್‌ಎಲ್‌ಗಳು, ಟೈಲ್‌ಲೈಟ್‌ಗಳು) ಅನ್ನು ಹೊಂದಿದೆ. ಇನ್ನು 7 ಇಂಚಿನ ಟಚ್‌ಸ್ಕ್ರೀನ್ ಹೊಂದಿರುವ ಸ್ಮಾರ್ಟ್‌ಪ್ಲೇ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಅಳವಡಿಸಲಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಮಾರುತಿ ಸ್ವಿಫ್ಟ್ ಸಿಎನ್‌ಜಿ ಕಾರು

ಈ ಸಿಸ್ಟಂ ನಲ್ಲಿ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇ ಕನೆಕ್ಟಿವಿಟಿಯನ್ನು ಕೂಡ ಹೊಂದಿದೆ. ಮಲ್ಟಿ-ಕಲರ್ ಎಂಐಡಿ, ಫ್ಲಾಟ್ ಸಂಯೋಜಿತ ಕಂಟ್ರೋಲ್ ಗಳು, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ, ಆಟೋಮ್ಯಾಟಿಕ್ ಹೆಡ್‌ಲ್ಯಾಂಪ್‌ಗಳು ಇತ್ಯಾದಿಗಳೊಂದಿಗೆ ಬಾಟಮ್ ಸ್ಟೀಯರಿಂಗ್ ವ್ಹೀಲ್ ಅನ್ನು ಪಡೆಯುತ್ತದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಮಾರುತಿ ಸ್ವಿಫ್ಟ್ ಸಿಎನ್‌ಜಿ ಕಾರು

ಈ ಸ್ವಿಫ್ಟ್ ಕಾರಿನ ಮುಂಭಾಗದಲ್ಲಿ ಕ್ರೋಮ್ ಆಕ್ಸೆಂಟ್ ಹೊಂದಿರುವ ಆಕರ್ಷಕ ಕ್ರಾಸ್ ಮೆಶ್ ಗ್ರಿಲ್ ಮತ್ತು ಗ್ರಿಲ್ ಸುತ್ತಲು ನೀಡಲಾಗಿರುವ ಕಪ್ಪು ಪಟ್ಟಿಯು ಕಾರಿನ ಹೊಸ ಲುಕ್ ಅನ್ನು ಹೆಚ್ಚಿಸಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಮಾರುತಿ ಸ್ವಿಫ್ಟ್ ಸಿಎನ್‌ಜಿ ಕಾರು

ಮಾರುತಿ ಸ್ವಿಫ್ಟ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಗ್ರಾಂಡ್ ಐ10 ನಿಯೋಸ್, ಫೋರ್ಡ ಫಿಗೊ ಕಾರುಗಳಿಗೆ ಪೈಪೋಟಿಯನ್ನು ನೀಡುತ್ತಿದೆ. ಸ್ವಿಫ್ಟ್ ಕಾರು ಮಾರುತಿ ಸುಜುಕಿ ಕಂಪನಿಗೆ ಮಾರಾಟದಲ್ಲಿ ಹೆಚ್ಚಿನ ಕೊಡುಗೆಯನ್ನು ನೀಡುತ್ತಿದೆ.

Most Read Articles

Kannada
English summary
Maruti Swift CNG Launch Expected Soon Read In Kannada.
Story first published: Monday, July 19, 2021, 15:38 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X