ಭಾರತದಲ್ಲಿ ಹೊಸ ಎಸ್‍ಯುವಿಗಳನ್ನು ಬಿಡುಗಡೆಗೊಳಿಸಲಿದೆ ಮಾರುತಿ ಸುಜುಕಿ

ದೇಶದ ಅತಿ ದೊಡ್ಡ ಕಾರು ಉತ್ಪಾದಕ ಕಂಪನಿಯಾದ ಮಾರುತಿ ಸುಜುಕಿ ಹೆಚ್ಚು ಹ್ಯಾಚ್‌ಬ್ಯಾಕ್ ಕಾರುಗಳಿಗೆ ಜನಪ್ರಿಯತೆಯನ್ನು ಗಳಿಸಿದೆ. ಆದರೆ ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಎಸ್‍ಯುವಿಗಳು ಹೆಚ್ಚು ಬೇಡಿಕೆಯನ್ನು ಪಡೆಯುತ್ತದೆ. ಎಸ್‍ಯುವಿ ವಿಭಾಗದಲ್ಲಿ ಹ್ಯುಂಡೈ ಪ್ರಾಬಲ್ಯವನ್ನು ಸಾಧಿಸುತ್ತಿದೆ.

ಭಾರತದಲ್ಲಿ ಹೊಸ ಎಸ್‍ಯುವಿಗಳನ್ನು ಬಿಡುಗಡೆಗೊಳಿಸಲಿದೆ ಮಾರುತಿ ಸುಜುಕಿ

ಮಾರುತಿ ಸುಜುಕಿ ತನ್ನ ಸರಣಿಯಲ್ಲಿ ವಿಟಾರಾ ಬ್ರೆಝಾ ಎಂಬ ಒಂದೇ ಎಸ್‍ಯುವಿ ಮಾದರಿಯನ್ನು ಹೊಂದಿದೆ. ಆದರೆ ಇತ್ತೀಚೆಗೆ ಎಸ್‍ಯುವಿಗಳ ಬೇಡಿಕೆ ಹೆಚ್ಚಳವಾಗಿರುವುದರಿಂದ ಮಾರುತಿ ಸುಜುಕಿ ಹೊಸ ಎಸ್‍ಯುವಿಗಳನ್ನು ಬಿಡುಗಡೆಗೊಳಿಸಲಿದೆ. ಇದರಲ್ಲಿ ನ್ಯೂ ಜನರೇಷನ್ ವಿಟಾರಾ ಬ್ರೆಝಾ, ಜಿಮ್ನಿ ಮತ್ತು ಮಿಡ್ ಸೈಜ್ ಎಸ್‍ಯುವಿ ಒಳಗೊಂಡಿದೆ. ಎಸ್-ಕ್ರಾಸ್ ಅನ್ನು ಬದಲಿಸಲು ಕಂಪನಿಯು ಬಲೆನೊ ಆಧಾರಿತ ಕ್ರಾಸ್ಒವರ್ ಅನ್ನು ಅಭಿವೃದ್ಧಿಪಡಿಸುತ್ತಿದೆ ಎಂದು ವದಂತಿಗಳಿವೆ. ಆದರೆ ಈ ಕುರಿತು ಕಂಪನಿಯು ಯಾವುದೇ ಅಧಿಕೃತ ಮಾಹಿತಿ ಬಹಿರಂಗಪಡಿಸಿಲ್ಲ. ಇನ್ನು ಮಾರುತಿ ಸುಜುಕಿ ಕಂಪನಿಯು ಬಿಡುಗಡೆಗೊಳಿಸಲಿರುವ ಎಸ್‍ಯುವಿಗಳ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಹೊಸ ಎಸ್‍ಯುವಿಗಳನ್ನು ಬಿಡುಗಡೆಗೊಳಿಸಲಿದೆ ಮಾರುತಿ ಸುಜುಕಿ

ನ್ಯೂ ಜನರೇಷನ್ ವಿಟಾರಾ ಬ್ರೆಝಾ

ಮಾರುತಿ ಸುಜುಕಿ ಎರಡನೇ ತಲೆಮಾರಿನ ವಿಟಾರಾ ಬ್ರೆಝಾ ಮಾದರಿಯನ್ನು ಅಭಿವೃದ್ಧಿ ಪಡಿಸುತ್ತಿದೆ. ಈ ಎಸ್‍ಯುವಿಯನ್ನು ಈ ವರ್ಷದ ಕೊನೆಯಲ್ಲಿ ಬಿಡುಗಡೆಗೊಳಿಸಬಹುದು ಎಂದು ವರದಿಗಳಾಗಿದೆ. ಈ ಹೊಸ ಎಸ್‍ಯುವಿಯನ್ನು ಭಾರತದಲ್ಲಿ ಹಾರ್ಟಿಕ್ಟ್ ಪ್ಲಾಟ್‌ಫಾರ್ಮ್‌ನ ಸುಧಾರಿತ ಆವೃತ್ತಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಭಾರತದಲ್ಲಿ ಹೊಸ ಎಸ್‍ಯುವಿಗಳನ್ನು ಬಿಡುಗಡೆಗೊಳಿಸಲಿದೆ ಮಾರುತಿ ಸುಜುಕಿ

ಹೊಸ ವಿಟಾರಾ ಬ್ರೆಝಾ ಆಧುನಿಕ ಕನೆಕ್ಟಿವಿಟಿ ಫೀಚರ್ಸ್ ಗಳನ್ನು ಒಳಗೊಂಡಿದೆ. ಹೊಸ ನ್ಯೂ ಜನರೇಷನ್ ವಿಟಾರಾ ಬ್ರೆಝಾ ಎಸ್‍ಯುವಿಯಲ್ಲಿ 1.5ಎಲ್ ಕೆ 15ಬಿ ಪೆಟ್ರೋಲ್ ಪೆಟ್ರೋಲ್ ಎಂಜಿನ್‌ನೊಂದಿಗೆ ಬರಲಿದೆ. ಈ ಎಸ್‍ಯುವಿಯಲ್ಲಿ ಮೈಲ್ಡ್ ಹೈಬ್ರಿಡ್ ಸಿಸ್ಟಂ ಅನ್ನು ಒಳಗೊಂಡಿರುತ್ತದೆ.

ಭಾರತದಲ್ಲಿ ಹೊಸ ಎಸ್‍ಯುವಿಗಳನ್ನು ಬಿಡುಗಡೆಗೊಳಿಸಲಿದೆ ಮಾರುತಿ ಸುಜುಕಿ

ಮೈಲೇಜ್ ಅನ್ನು ಹೆಚ್ಚಿಸಲು ಇದು ದೊಡ್ಡ ಬ್ಯಾಟರಿ ಮತ್ತು ಹೆಚ್ಚು ಶಕ್ತಿಶಾಲಿ ಎಲೆಕ್ಟ್ರಿಕ್ ಮೋಟರ್ ಅನ್ನು ಹೊಂದಿರುತ್ತದೆ ಎಂದು ನಿರೀಕ್ಷಿಸುತ್ತೇವೆ. ಇನ್ನು ಈ ಎಸ್‍ಯುವಿಯಲ್ಲಿ ಸನ್‌ರೂಫ್, ವೈರ್‌ಲೆಸ್ ಚಾರ್ಜರ್, ದೊಡ್ಡ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ, ಏರ್‌ಬ್ಯಾಗ್‌ಗಳು ಮತ್ತು ಇತ್ಯಾದಿ ಫೀಚರ್ ಗಳನ್ನು ಹೊಂದಿರುತ್ತದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಭಾರತದಲ್ಲಿ ಹೊಸ ಎಸ್‍ಯುವಿಗಳನ್ನು ಬಿಡುಗಡೆಗೊಳಿಸಲಿದೆ ಮಾರುತಿ ಸುಜುಕಿ

ಮಾರುತಿ ಸುಜುಕಿ ಜಿಮ್ನಿ

ಜಿಮ್ನಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಆಫ್-ರೋಡ್ ಎಸ್‍ಯುವಿಯಾಗಿದೆ. ಇನ್ನು ಜಿಮ್ನಿ 5-ಡೋರ್ ಎಸ್‍ಯುವಿಯು ರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಎಂದು ವರದಿಗಳಾಗಿದೆ. ಈ ಜಿಮ್ನಿ ಮೈಲ್ಡ್ ಹೈಬ್ರಿಡ್ ಸಿಸ್ಟಂ ಹೊಂದಿರುವ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಪಡೆಯುವ ನಿರೀಕ್ಷೆಯಿದೆ. ಹೊಸ ಮಾದರಿಯು ಜಿಮ್ನಿ ಸಿಯೆರಾವನ್ನು ಆಧರಿಸಿದೆ.

ಭಾರತದಲ್ಲಿ ಹೊಸ ಎಸ್‍ಯುವಿಗಳನ್ನು ಬಿಡುಗಡೆಗೊಳಿಸಲಿದೆ ಮಾರುತಿ ಸುಜುಕಿ

ಈ ಜಿಮ್ನಿ ಎಸ್‍ಯುವಿಯಲ್ಲಿ 1.5-ಲೀಟರ್ ನಾಲ್ಕು ಸಿಲಿಂಡರ್ ಕೆ-ಸೀರಿಸ್ ಇನ್-ಲೈನ್ ಡಿಒಹೆಚ್ಸಿ ಪೆಟ್ರೋಲ್ ಎಂಜಿನ್‌ ಹೊಂದಿರಲಿದೆ. ಈ ಎಂಜಿನ್ 6,000 ಆರ್‌ಪಿಎಂನಲ್ಲಿ 101 ಬಿಹೆಚ್‌ಪಿ ಪವರ್ ಮತ್ತು 4,000 ಆರ್‌ಪಿಎಂನಲ್ಲಿ 130 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ.

MOST READ: ಫೆಬ್ರವರಿ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಡೀಸೆಲ್ ಕಾರುಗಳಿವು

ಭಾರತದಲ್ಲಿ ಹೊಸ ಎಸ್‍ಯುವಿಗಳನ್ನು ಬಿಡುಗಡೆಗೊಳಿಸಲಿದೆ ಮಾರುತಿ ಸುಜುಕಿ

ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನ್ಯುವಲ್ ಟ್ರಾನ್ಸ್‌ಮಿಷನ್‌ನೊಂದಿಗೆ ಸ್ಟ್ಯಾಂಡರ್ಡ್‌ನಂತೆ ಜೋಡಿಸಲಾಗಿದ್ದು, ನಾಲ್ಕು-ಸ್ಪೀಡ್ ಟಾರ್ಕ್ ಕರ್ನವಾಟರ್ ಯುನಿಟ್ ಆಯ್ಕೆಯಾಗಿ ನೀಡಲಾಗುತ್ತದೆ. ಈ ಜಿಮ್ನಿ ಮಾದರಿಯು ಈ ಎಂಜಿನ್‌ನ ಟರ್ಬೋಚಾರ್ಜ್ಡ್ ಆವೃತ್ತಿಯನ್ನು ಪಡೆಯಬಹುದು ಆದೆರೆ ಇನ್ನೂ ಅಧಿಕೃತ ಘೋಷಣೆ ಮಾಡಿಲ್ಲ.

ಭಾರತದಲ್ಲಿ ಹೊಸ ಎಸ್‍ಯುವಿಗಳನ್ನು ಬಿಡುಗಡೆಗೊಳಿಸಲಿದೆ ಮಾರುತಿ ಸುಜುಕಿ

ಮಾರುತಿ-ಟೊಯೊಟಾ ಮಿಡ್ ಸೈಜ್ ಎಸ್‍ಯುವಿ

ಮಾರುತಿ ಸುಜುಕಿ ಮತ್ತು ಟೊಯೊಟಾ ಕಂಪನಿಗಳು ಜಂಟಿಯಾಗಿ ಹೊಸ ಮಿಡ್ ಸೈಜ್ ಎಸ್‍ಯುವಿಯನ್ನು ಅಭಿವೃದ್ಧಿ ಪಡಿಸುತ್ತಿದೆ. ಇದು ಹ್ಯುಂಡ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೋಸ್ ಮತ್ತು ಮುಂಬರುವ ವಿಡಬ್ಲ್ಯೂ ಟೈಗನ್, ಸ್ಕೋಡಾ ಕುಶಾಕ್ ಮತ್ತು ಎಂಜಿ ಆಸ್ಟರ್ ಎಸ್‍ಯುವಿಗಳಿಗೆ ಪೈಪೊಟಿ ನೀಡುತ್ತದೆ.

ಭಾರತದಲ್ಲಿ ಹೊಸ ಎಸ್‍ಯುವಿಗಳನ್ನು ಬಿಡುಗಡೆಗೊಳಿಸಲಿದೆ ಮಾರುತಿ ಸುಜುಕಿ

ಈ ಹೊಸ ಎಸ್‍ಯುವಿಯು ಟೊಯೊಟಾದ ಹೊಸ ಡಿಎನ್‌ಜಿಎ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ ಎಂದು ವರದಿಯಾಗಿದೆ, ಇದು ಟೊಯೊಟಾ ರೈಜ್ ಮತ್ತು ಡೈಹತ್ಸು ರಾಕಿಗೆ ಸಹ ಆಧಾರವಾಗಿದೆ. ಈ ಹೊಸ ಮಾದರಿಯನ್ನು ಟೊಯೊಟಾದ ಉತ್ಪಾದನಾ ಘಟಕದಲ್ಲಿ ಉತ್ಪಾದಿಸಲಾಗುತ್ತದೆ.

Most Read Articles

Kannada
English summary
Maruti Suzuki To Launch 3 New SUVs. Read In Kannada.
Story first published: Monday, May 24, 2021, 15:34 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X