ಭಾರತದಲ್ಲಿ ಜಿಮ್ನಿ ಎಸ್‍ಯುವಿಯನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ ಮಾರುತಿ ಸುಜುಕಿ
ದೇಶದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ ಭಾರತೀಯ ಮಾರುಕಟ್ಟೆಯಲ್ಲಿ ಮಾರುಕಟ್ಟೆಯಲ್ಲಿ ಜಿಮ್ನಿ ಆಫ್-ರೋಡರ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಮಾರುತಿ ಸುಜುಕಿ ಜಿಮ್ನಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಆಫ್-ರೋಡ್ ಎಸ್‍ಯುವಿಯಾಗಿದೆ.

ಈ ಜಿಮ್ನಿ ಎಸ್‍ಯುವಿಯನ್ನು ಮಾರುತಿ ಸುಜುಕಿ ಕಂಪನಿಯು 2020ರ ಆಟೋ ಎಕ್ಸ್ ಪೋದಲ್ಲಿ ಪ್ರದರ್ಶಿಸಲಾಗಿತ್ತು. ಚಾನೆಲ್ ವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮಾರುತಿ ಸುಜುಕಿ ಇಂಡಿಯಾದ ಸೇಲ್ಸ್ ಮತ್ತು ಮಾರ್ಕೆಟ್ ವಿಭಾಗದ ಕಾರ್ಯನಿರ್ವಾಹಕ ನಿರ್ದೇಶಕ ಶಶಾಂಕ್ ಶ್ರೀವಾಸ್ತವ ಅವರು ಮಾತನಾಡಿ, ಜಿಮ್ನಿ ಎಸ್‍ಯುವಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ ಎಂಬ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.

ಮಾತನ್ನು ಮುಂದುವರಿಸಿ ಅವರು, ಈ ವರ್ಷದ ಆರಂಭದಲ್ಲಿ, ಹಲವು ದೇಶಗಳಿಗೆ 3-ಡೋರಿನ ಜಿಮ್ನಿ ಎಸ್‍ಯುವಿಯನ್ನು ರಫ್ತು ಮಾಡಲು ಭಾರತದಲ್ಲಿ ಉತ್ಪಾದನೆಯನ್ನು ಆರಂಭಿಸಿದೆ. 2020ರ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶಿಸಲಾದ ಮಾರುತಿ ಜಿಮ್ನಿ ಎಸ್‌ಯುವಿಗೆ ಸಂದರ್ಶಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಪ್ರಸ್ತುತ, ಕಂಪನಿಯು ನಿರೀಕ್ಷಿತ ಗ್ರಾಹಕರಿಂದ ಪ್ರತಿಕ್ರಿಯೆಯನ್ನು ಸಂಗ್ರಹಿಸುತ್ತಿದೆ, ಇದು ಜಿಮ್ನಿಯನ್ನು ಭಾರತೀಯ ಮಾರುಕಟ್ಟೆಗೆ ಹೆಚ್ಚು ಕಾರ್ಯಸಾಧ್ಯವಾಗಿಸಲು ಸಹಾಯ ಮಾಡುತ್ತದೆ. ಆಫ್-ರೋಡ್ ಎಸ್‌ಯುವಿ ಕೆಲವು ಭಾರತ-ನಿರ್ದಿಷ್ಟ ಕಾಸ್ಮೆಟಿಕ್ ಬದಲಾವಣೆಗಳನ್ನು ಮತ್ತು ಪ್ರತಿಕ್ರಿಯೆಗಳ ಆಧಾರದ ಮೇಲೆ ವೈಶಿಷ್ಟ್ಯ ನವೀಕರಣಗಳನ್ನು ಪಡೆಯಬಹುದು.

ಈ ಎಸ್‍ಯುವಿಯ ಅಧಿಕೃತ ಬಿಡುಗಡೆಯ ಮಾಹಿತಿಯು ಇನ್ನೂ ಬಹಿರಂಗಗೊಳ್ಳದಿದ್ದರೂ, ಮಾರುತಿ ಜಿಮ್ನಿ ಮುಂದಿನ ವರ್ಷದ ಆರಂಭದಲ್ಲಿ ಬರಲಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಇಂಡೋ-ಜಪಾನೀಸ್ ಕಾರು ತಯಾರಕರು ಭಾರತದಲ್ಲಿ ಜಿಮ್ನಿಯ 5-ಬಾಗಿಲಿನ ಆವೃತ್ತಿಯನ್ನು ತರಬಹುದು.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಈ ಹೊಸ ಮಾರುತಿ ಸುಜುಕಿ ಜಿಮ್ನಿ ಎಸ್‌ಯುವಿಯು ಒಟ್ಟಾರೆ 3,850 ಎಂಎಂ ಉದ್ದ, 1,645 ಎಂಎಂ ಅಗಲ ಮತ್ತು 1,730 ಎಂಎಂ ಎತ್ತರವನ್ನು ಹೊಂದಿದೆ.ಇನ್ನು ಈ ಎಸ್‍ಯುವಿ 2,550 ಎಂಎಂ ವ್ಹೀಲ್‌ಬೇಸ್ ಅನ್ನು ಹೊಂದಿದೆ. ಸಾಮಾನ್ಯ 3-ಡೋರಿನ ರೂಪಾಂತರಕ್ಕೆ ಹೋಲಿಸಿದರೆ, ಒಟ್ಟಾರೆ ಉದ್ದವು 300 ಎಂಎಂ ಮತ್ತು ವ್ಹೀಲ್‌ಬೇಸ್ ಉದ್ದವು 300 ಎಂಎಂ ನಷ್ಟು ಹೆಚ್ಚಿದೆ.

ಇನ್ನು ಜಿಮ್ನಿ 5-ಡೋರ್ ಎಸ್‍ಯುವಿಯು ರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಎಂದು ವರದಿಗಳಾಗಿದೆ. ಈ ಜಿಮ್ನಿ ಮೈಲ್ಡ್ ಹೈಬ್ರಿಡ್ ಸಿಸ್ಟಂ ಹೊಂದಿರುವ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಪಡೆಯುವ ನಿರೀಕ್ಷೆಯಿದೆ. ಹೊಸ ಮಾದರಿಯು ಜಿಮ್ನಿ ಸಿಯೆರಾವನ್ನು ಆಧರಿಸಿದೆ.
MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್ಯುವಿ

ಇನ್ನು ಜಿಮ್ನಿ ಎಸ್‍ಯುವಿಯಲ್ಲಿ 1.5-ಲೀಟರ್ ನಾಲ್ಕು ಸಿಲಿಂಡರ್ ಕೆ-ಸೀರಿಸ್ ಇನ್-ಲೈನ್ ಡಿಒಹೆಚ್ಸಿ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಲಿದೆ. ಈ ಎಂಜಿನ್ 6,000 ಆರ್‌ಪಿಎಂನಲ್ಲಿ 101 ಬಿಹೆಚ್‌ಪಿ ಪವರ್ ಮತ್ತು 4,000 ಆರ್‌ಪಿಎಂನಲ್ಲಿ 130 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ.

ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನ್ಯುವಲ್ ಟ್ರಾನ್ಸ್‌ಮಿಷನ್‌ನೊಂದಿಗೆ ಸ್ಟ್ಯಾಂಡರ್ಡ್‌ನಂತೆ ಜೋಡಿಸಲಾಗಿದ್ದು, ನಾಲ್ಕು-ಸ್ಪೀಡ್ ಟಾರ್ಕ್ ಕರ್ನವಾಟರ್ ಯುನಿಟ್ ಆಯ್ಕೆಯನ್ನು ನೀಡಲಾಗಿದೆ. ಇನ್ನು ಜಿಮ್ನಿ ಆಫ್-ರೋಡ್ ಎಸ್‍ಯುವಿಯಲ್ಲಿ 15 ಇಂಚಿನ ವ್ಹೀಲ್ ಅನ್ನು ಹೊಂದಿರುತ್ತದೆ.

5-ಡೋರ್ ಜಿಮ್ನಿ ಎಸ್‍ಯುವಿಯ ವ್ಹೀಲ್‌ಬೇಸ್ ಮಹೀಂದ್ರಾ ಥಾರ್‌ಗಿಂತ 100 ಎಂಎಂ ಉದ್ದವಿರುತ್ತದೆ, ಒಟ್ಟಾರೆ ಜಿಮ್ನಿ ಆಫ್-ರೋಡ್ ಎಸ್‍ಯುವಿಯು ಫ್ಹೋರ್ ವ್ಹೀಲ್ ಡ್ರೈವ್ ಸಿಸ್ಟಂ, ಅಗ್ರೇಸಿವ್ ಲುಕ್ ಮತ್ತು ಸಾಟಿಯಿಲ್ಲದ ಆಫ್-ರೋಡ್ ಸಾಮರ್ಥ್ಯವನ್ನು ಕೂಡ ಹೊಂದಿರುತ್ತದೆ.

ಉತ್ತಮ ಆಫ್-ರೋಡ್ ಸಾಮರ್ಥ್ಯವನ್ನು ಹೊಂದಿರುವ ಜಿಮ್ನಿ ಭಾರತದಲ್ಲಿ ಬಿಡುಗಡೆಗೊಂಡರೆ ಥಾರ್ ಎಸ್‍ಯುವಿಗೆ ಪ್ರಬಲ ಎದುರಾಳಿ ಆಗಿರುತ್ತದೆ. 2020ರ ಆಟೋ ಎಕ್ಸ್‌ಪೋ ಸಂದರ್ಭದಲ್ಲಿ ಮಾರುತಿ ಸುಜುಕಿ ಭಾರತದಲ್ಲಿ ಜಿಮ್ನಿಯನ್ನು ಪ್ರದರ್ಶಿಸಿದಾಗ ಆಫ್-ರೋಡ್ ವಾಹನ ಪ್ರಿಯರಿಗೆ ಹೆಚ್ಚಿನ ಕುತೂಹಲ ಹುಟ್ಟು ಹಾಕಿತು.


Click it and Unblock the Notifications