ಸಿಎನ್‌ಜಿ ಕಾರು ಮಾದರಿಗಳ ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ದಾಖಲೆ

ಮಾರುತಿ ಸುಜುಕಿ ಕಂಪನಿಯು ಸದ್ಯ ಕಾರುಗಳ ಮಾರಾಟದಲ್ಲಿ ಅಗ್ರಸ್ಥಾನದಲ್ಲಿದ್ದು, ಹೊಸ ಎಮಿಷನ್ ಜಾರಿ ನಂತರ ಡೀಸೆಲ್ ಕಾರುಗಳ ಮಾರಾಟವನ್ನು ಸ್ಥಗಿತಗೊಳಿಸಿ ಪೆಟ್ರೋಲ್ ಮತ್ತು ಸಿಎನ್‌ಜಿ ಆವೃತ್ತಿಗಳನ್ನು ಮಾತ್ರವೇ ಮಾರಾಟ ಮಾಡುತ್ತಿದೆ.

ಸಿಎನ್‌ಜಿ ಕಾರುಗಳ ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ದಾಖಲೆ

ಜನಪ್ರಿಯ ಕಾರು ಮಾದರಿಗಳಾದ ಆಲ್ಟೊ, ವ್ಯಾಗನ್‌ಆರ್, ಸೆಲೆರಿಯೊ, ಎಸ್ ಪ್ರೆಸ್ಸೊ, ಇಕೋ ಮತ್ತು ಎರ್ಟಿಗಾ ಮಾದರಿಯಲ್ಲಿ ಸಿಎನ್‌ಜಿ ಮಾದರಿಗಳನ್ನು ಮಾರಾಟ ಮಾಡುತ್ತಿರುವ ಮಾರುತಿ ಸುಜುಕಿ ಕಂಪನಿಯು ಮೊದಲ ಬಾರಿಗೆ ಸಿಎನ್‌ಸಿ ಕಾರುಗಳ ಮಾರಾಟದಲ್ಲಿ ದೊಡ್ಡ ಮಟ್ಟದ ಬೇಡಿಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದು, 2020-21ರ ಅವಧಿಯ ಒಟ್ಟು ಕಾರು ಮಾರಾಟ ಪ್ರಮಾಣದಲ್ಲಿ ಸಿಎನ್‌ಜಿ ಕಾರುಗಳನ್ನು ಮಾರಾಟವು ಶೇ.16.4ರಷ್ಟು ಮುನ್ನಡೆ ಸಾಧಿಸಿದೆ.

ಸಿಎನ್‌ಜಿ ಕಾರುಗಳ ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ದಾಖಲೆ

2020ರ ಅವಧಿಯಲ್ಲಿ ಮಾರಾಟವಾದ 8,63,874 ಯುನಿಟ್‌ನಲ್ಲಿ 1,57,954 ಕಾರುಗಳು ಸಿಎನ್‌ಜಿ ಕಾರು ಮಾದರಿಗಳಾಗಿದ್ದು, ಮಾರುತಿ ಸಿಎನ್‌ಜಿ ಕಾರುಗಳ ಮಾರಾಟದಲ್ಲಿ ವ್ಯಾಗನ್ಆರ್ ಮಾದರಿಯು ಅಗ್ರಸ್ಥಾನದಲ್ಲಿದೆ.

ಸಿಎನ್‌ಜಿ ಕಾರುಗಳ ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ದಾಖಲೆ

ವ್ಯಾಗನ್ಆರ್ ನಂತರ ಸೆಲೆರಿಯೊ, ಆಲ್ಟೊ, ಎಸ್‌ಪ್ರೆಸ್ಸೊ, ಇಕೋ, ಎರ್ಟಿಗಾ ಕಾರುಗಳ ಉತ್ತಮ ಬೇಡಿಕೆ ಪಡೆದುಕೊಂಡಿದ್ದು, ಶೀಘ್ರದಲ್ಲೇ ಮತ್ತಷ್ಟು ಕಾರು ಮಾದರಿಗಳಲ್ಲಿ ಸಿಎನ್‌ಜಿ ಮಾದರಿಯನ್ನು ಜೋಡಣೆ ಮಾಡುವ ಯೋಜನೆಯಲ್ಲಿದೆ.

ಸಿಎನ್‌ಜಿ ಕಾರುಗಳ ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ದಾಖಲೆ

ಮಾಲಿನ್ಯ ತಗ್ಗಿಸುವ ಉದ್ದೇಶದಿಂದಾಗಿ ಸಾಮಾನ್ಯ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳ ಮಾರಾಟವನ್ನು ತಗ್ಗಿಸಲಾಗುತ್ತಿದ್ದು, ಪರಿಸರಕ್ಕೆ ಪೂರಕರವಾದ ಸಿಎನ್‌ಜಿ, ಹೈಬ್ರಿಡ್ ಮತ್ತು ಎಲೆಕ್ಟ್ರಿಕ್ ಕಾರುಗಳನ್ನು ಹೆಚ್ಚು ಅಭಿವೃದ್ದಿಗೊಳಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಹಂತಹಂತವಾಗಿ ಎಲ್ಲಾ ಕಾರು ಮಾದರಿಗಳಲ್ಲೂ ಅಧಿಕ ಮೈಲೇಜ್ ಪ್ರೇರಿತ ಸಿಎನ್‌ಜಿ ಆಯ್ಕೆಯನ್ನು ನೀಡುತ್ತಿರುವ ಮಾರುತಿ ಸುಜುಕಿಯು ಸದ್ಯಕ್ಕೆ ಪೆಟ್ರೋಲ್ ಮತ್ತು ಸಿಎನ್‌‌ಜಿ ಕಾರುಗಳನ್ನು ಮಾತ್ರ ಮಾರಾಟ ಮಾಡುತ್ತಿದೆ.

ಸಿಎನ್‌ಜಿ ಕಾರುಗಳ ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ದಾಖಲೆ

2030ರ ವೇಳೆಗೆ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳನ್ನು ತಗ್ಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಹಲವಾರು ಕಠಿಣ ಕ್ರಮಗಳನ್ನು ಪ್ರಕಟಿಸುತ್ತಿದ್ದು, ಪರಿಸರ ಸ್ನೇಹಿ ಹೈಬ್ರಿಡ್, ಸಿಎನ್‌ಜಿ ಮತ್ತು ಎಲೆಕ್ಟ್ರಿಕ್ ಕಾರುಗಳನ್ನು ಬಳಕೆ ಮಾಡುವಂತೆ ಹೊಸ ಯೋಜನೆಗಳನ್ನು ಜಾರಿಗೆ ತಂದಿದೆ.

ಸಿಎನ್‌ಜಿ ಕಾರುಗಳ ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ದಾಖಲೆ

ದುಬಾರಿ ಇಂಧನ ದರ ಮತ್ತು ಹೆಚ್ಚುತ್ತಿರುವ ಮಾಲಿನ್ಯ ಪ್ರಮಾಣವನ್ನು ಪರಿಣಾಮಕಾರಿಯಾಗಿ ತಗ್ಗಿಸುವ ನಿಟ್ಟಿನಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳಿಗೆ ಜಾರಿಗೆ ತಂದಿದ್ದು, ವಿವಿಧ ರಾಜ್ಯ ಸರ್ಕಾರಗಳು ಸಿಎನ್‌ಜಿ ಹೆಚ್ಚಿನ ಬಳಕೆಯೊಂದಿಗೆ ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಹೆಚ್ಚಿಸಲು ಹೊಸ ಇವಿ ವಾಹನ ನೀತಿಯನ್ನು ಅಳವಡಿಸಿಕೊಂಡಿವೆ.

ಸಿಎನ್‌ಜಿ ಕಾರುಗಳ ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ದಾಖಲೆ

ಹೊಸ ಇವಿ ವಾಹನ ನೀತಿ ಮೂಲಕ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುವ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗುತ್ತಿದ್ದು, ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಒತ್ತು ನೀಡಲು ಮತ್ತಷ್ಟು ಹೊಸ ಕ್ರಮ ಪ್ರಕಟಿಸಲಾಗುತ್ತಿದೆ. ಜೊತೆಗೆ ಸಿಎನ್‌ಜಿ ವಾಹನ ಮಾರಾಟವು ಕೂಡಾ ಪ್ರಸ್ತುತ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿರುವುದು ಉತ್ತಮ ಬೆಳವಣಿಯಾಗಿದ್ದು, ಭವಿಷ್ಯದ ವಾಹನ ಮಾರಾಟದಲ್ಲಿ ಮಾರುತಿ ಸುಜುಕಿಯು ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆ.

ಸಿಎನ್‌ಜಿ ಕಾರುಗಳ ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ದಾಖಲೆ

ಇನ್ನು ಮಾರುತಿ ಸುಜುಕಿಯು ಹೊಸ ಸಿಎನ್‌ಜಿ ಕಾರುಗಳನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆಲ್ಟೊ ಮಾದರಿಯನ್ನು ರೂ.4.89 ಲಕ್ಷಕ್ಕೆ, ಸೆಲೆರಿಯೊ ಮಾದರಿಯನ್ನು ರೂ.5.72 ಲಕ್ಷಕ್ಕೆ, ವ್ಯಾಗನ್‌ಆರ್ ಮಾದರಿಯನ್ನು ರೂ.5.45 ಲಕ್ಷಕ್ಕೆ, ಇಕೋ ವಾಹನವನ್ನು ರೂ.5.18 ಲಕ್ಷಕ್ಕೆ, ಎಸ್‌ಪ್ರೆಸ್ಸೊ ಮಾದರಿಯನ್ನು ರೂ.4.89 ಲಕ್ಷಕ್ಕೆ ಮತ್ತು ಎರ್ಟಿಗಾ ಮಾದರಿಯನ್ನು 8.87 ಲಕ್ಷಕ್ಕೆ ಮಾರಾಟ ಮಾಡುತ್ತಿದೆ.

Most Read Articles

Kannada
English summary
Maruti Suzuki Records Highest Ever S-CNG Sales. Read in kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X