ನ್ಯೂ ಜನರೇಷನ್ ಸೆಲೆರಿಯೊ ಕಾರಿನ ಮೊದಲ ಟಿವಿಸಿ ಬಿಡುಗಡೆ ಮಾಡಿದ ಮಾರುತಿ ಸುಜುಕಿ

ಮಾರುತಿ ಸುಜುಕಿ(Maruti Suzuki) ಕಂಪನಿಯು ತನ್ನ ಬಹುನೀರಿಕ್ಷಿತ ಹೊಸ ತಲೆಮಾರಿನ ಸೆಲೆರಿಯೊ ಹ್ಯಾಚ್‌ಬ್ಯಾಕ್ ಬಿಡುಗಡೆ ಮಾಡಿದ್ದು, ಹೊಸ ಕಾರು ವಿತರಣೆ ಆರಂಭದೊಂದಿಗೆ ಕಂಪನಿಯು ಮೊದಲ ಟಿವಿ ಜಾಹೀರಾತು ಪ್ರಕಟಿಸಿದೆ.

ನ್ಯೂ ಜನರೇಷನ್ ಸೆಲೆರಿಯೊ ಕಾರಿನ ಮೊದಲ ಟಿವಿಸಿ ಬಿಡುಗಡೆ ಮಾಡಿದ ಮಾರುತಿ ಸುಜುಕಿ

ನ್ಯೂ ಜನರೇಷನ್ ಸೆಲೆರಿಯೊ ಟಿವಿಸಿ ಮೂಲಕ ಕಾರಿನ ಹೊಸ ಬದಲಾವಣೆಗಳ ಕುರಿತಾದ ಮಾಹಿತಿಗಳನ್ನು ಹಂಚಿಕೊಂಡಿದ್ದು, ಯುವ ಗ್ರಾಹಕರನ್ನು ಸೆಳೆಯುವ ಹಲವು ಹೊಸ ಫೀಚರ್ಸ್‌ಗಳನ್ನು ಸೇರ್ಪಡೆಗೊಳಿಸಿದೆ. ನ್ಯೂ ಜನರೇಷನ್ ಮಾದರಿಯು ಈ ಹಿಂದಿನ ಮಾದರಿಗಿಂತಲೂ ಹಲವಾರು ಹೊಸ ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದು, ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಪಡೆದುಕೊಂಡಿದೆ.

ನ್ಯೂ ಜನರೇಷನ್ ಸೆಲೆರಿಯೊ ಕಾರಿನ ಮೊದಲ ಟಿವಿಸಿ ಬಿಡುಗಡೆ ಮಾಡಿದ ಮಾರುತಿ ಸುಜುಕಿ

ಎರಡನೇ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಯಾಗಿರುವ ಸೆಲೆರಿಯೊ ಹ್ಯಾಚ್‌ಬ್ಯಾಕ್ ಮಾದರಿಯು ಎಲ್ಎಕ್ಸ್ಐ, ವಿಎಕ್ಸ್ಐ, ಜೆಡ್ಎಕ್ಸ್ಐ ಮತ್ತು ಜೆಡ್ಎಕ್ಸ್ಐ ಪ್ಲಸ್ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 6.94 ಲಕ್ಷ ಬೆಲೆ ಹೊಂದಿದೆ.

ನ್ಯೂ ಜನರೇಷನ್ ಸೆಲೆರಿಯೊ ಕಾರಿನ ಮೊದಲ ಟಿವಿಸಿ ಬಿಡುಗಡೆ ಮಾಡಿದ ಮಾರುತಿ ಸುಜುಕಿ

ಹೊಸ ಕಾರು ಪೆಟ್ರೋಲ್ ಮಾದರಿಗಳಲ್ಲಿಯೇ ಅತಿ ಮೈಲೇಜ್ ನೀಡುವ ಮಾದರಿಯಾಗಿ ಗುರುತಿಸಿಕೊಂಡಿದ್ದು, ಸುಧಾರಿತ ತಂತ್ರಜ್ಞಾನಗಳೊಂದಿಗೆ ಹ್ಯಾಚ್‌ಬ್ಯಾಕ್ ಮಾದರಿಗಳಲ್ಲಿಯೇ ಹೆಚ್ಚಿನ ಇಂಧನ ದಕ್ಷತೆ ಹೊಂದಿದೆ.

ನ್ಯೂ ಜನರೇಷನ್ ಸೆಲೆರಿಯೊ ಕಾರಿನ ಮೊದಲ ಟಿವಿಸಿ ಬಿಡುಗಡೆ ಮಾಡಿದ ಮಾರುತಿ ಸುಜುಕಿ

ಹೊಸ ಕಾರಿನಲ್ಲಿ ಮಾರುತಿ ಸುಜುಕಿ ಕಂಪನಿಯು ಕೆ10ಸಿ ಡ್ಯುಯಲ್ ಜೆಟ್ 1.0-ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್‌ ಜೋಡಣೆ ಮಾಡಿದ್ದು, ಇದು ಅತ್ಯುತ್ತಮ ಇಂಧನ ದಕ್ಷತೆ ಹೊಂದಿರುವುದು ಹೆಚ್ಚಿನ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಸೆಲೆರಿಯೊ ಕಾರಿನ ಆರಂಭಿಕ ಮಾದರಿಯಾದ ಎಲ್ಎಕ್ಸ್ಐ ಆವೃತ್ತಿಯಲ್ಲಿ 5-ಸ್ಪೀಡ್ ಮ್ಯಾನುವಲ್ ಹೊರತು ಉಳಿದೆಲ್ಲಾ ಮಾದರಿಗಳಲ್ಲೂ ಮಾರುತಿ ಸುಜುಕಿ ಕಂಪನಿಯು 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆ ನೀಡಿದ್ದು, ಮ್ಯಾನುವಲ್ ಮಾದರಿಯು ಪ್ರತಿ ಲೀಟರ್‌ಗೆ 24.97 ಕಿ.ಮೀ ಮೈಲೇಜ್ ನೀಡಿದ್ದಲ್ಲಿ ಟಾಪ್ ಎಂಡ್ ಮಾದರಿಯಾಗಿರುವ ಜೆಡ್ಎಕ್ಸ್ಐ ಎಎಂಟಿ ಮಾದರಿಯು ಪ್ರತಿ ಲೀಟರ್‌ಗೆ ಗರಿಷ್ಠ 26 ಕಿ.ಮೀ ಮೈಲೇಜ್ ನೀಡುತ್ತದೆ.

ನ್ಯೂ ಜನರೇಷನ್ ಸೆಲೆರಿಯೊ ಕಾರಿನ ಮೊದಲ ಟಿವಿಸಿ ಬಿಡುಗಡೆ ಮಾಡಿದ ಮಾರುತಿ ಸುಜುಕಿ

ಇಂಧನ ದಕ್ಷತೆಯನ್ನು ಹೆಚ್ಚಲು ಮಾರುತಿ ಸುಜುಕಿಯು ಸ್ಮಾರ್ಟ್ ಸ್ಟಾರ್ಟ್/ಸ್ಟಾಪ್ ಸಿಸ್ಟಂ ಜೋಡಿಸಿದ್ದು, ಟ್ರಾಫಿಕ್ ದಟ್ಟಣೆಯಲ್ಲಿ ಇಂಧನ ದಹಿಸುವಿಕೆಯನ್ನು ನಿಯಮಿತಗೊಳಿಸಿ ಮೈಲೇಜ್ ಮೇಲೆ ಪರಿಣಾಮ ಬೀರದಂತೆ ತಡೆಯಲು ಹೊಸ ತಂತ್ರಜ್ಞಾನವು ಸಾಕಷ್ಟು ಸಹಕಾರಿಯಾಗಿದೆ.

ನ್ಯೂ ಜನರೇಷನ್ ಸೆಲೆರಿಯೊ ಕಾರಿನ ಮೊದಲ ಟಿವಿಸಿ ಬಿಡುಗಡೆ ಮಾಡಿದ ಮಾರುತಿ ಸುಜುಕಿ

ಹೊಸ ಕಾರು ಈ ಬಾರಿ ವ್ಯಾಗನ್ಆರ್, ಸ್ವಿಫ್ಟ್ ಮತ್ತು ಬಲೆನೊ ಮಾದರಿಗಳ ಉತ್ಪಾದನೆಗಾಗಿ ಬಳಕೆ ಮಾಡಲಾಗುತ್ತಿರುವ ಹಾರ್ಟ್ಟೆಕ್ ಪ್ಲ್ಯಾಟ್‌ಫಾರ್ಮ್ ಆಧರಿಸಿ ಅಭಿವೃದ್ದಿಗೊಂಡಿದ್ದು, ಹೊಸ ಪ್ಲ್ಯಾಟ್‌ಫಾರ್ಮ್ ನಿಂದಾಗಿ ಸೆಲೆರಿಯೊ ಕಾರು ಈ ಹಿಂದಿನ ಮಾದರಿಗಿಂತಲೂ ತುಸು ಹೆಚ್ಚುವರಿ ಸ್ಥಳಾವಕಾಶ ಹೊಂದಿದೆ.

ನ್ಯೂ ಜನರೇಷನ್ ಸೆಲೆರಿಯೊ ಕಾರಿನ ಮೊದಲ ಟಿವಿಸಿ ಬಿಡುಗಡೆ ಮಾಡಿದ ಮಾರುತಿ ಸುಜುಕಿ

ಹೊಸ ಕಾರು 3,695 ಎಂಎಂ ಉದ್ದ, 1,655 ಎಂಎಂ ಅಗಲ, 1,555 ಎಂಎಂ ಎತ್ತರ ಮತ್ತು 2,435 ಎಂಎಂ ವ್ಹೀಲ್ ಬೆಸ್ ಹೊಂದಿದ್ದು, ಹಳೆಯ ಮಾದರಿಗಿಂತ ಹೊಸ ಕಾರು 55 ಎಂಎಂ ಅಗಲ ಮತ್ತು 10 ಎಂಎಂ ವ್ಹೀಲ್ ಬೆಸ್ ಮತ್ತು 5 ಎಂಎಂ ಹೆಚ್ಚುವರಿ ಎತ್ತರದೊಂದಿಗೆ 170 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದೆ.

ನ್ಯೂ ಜನರೇಷನ್ ಸೆಲೆರಿಯೊ ಕಾರಿನ ಮೊದಲ ಟಿವಿಸಿ ಬಿಡುಗಡೆ ಮಾಡಿದ ಮಾರುತಿ ಸುಜುಕಿ

ಹೊಸ ಕಾರು ಒಟ್ಟು ಏಳು ವೆರಿಯೆಂಟ್‌‌ಗಳೊಂದಿಗೆ ಆರ್ಕ್ಟಿಕ್ ವೈಟ್, ಸಿಲ್ಕಿ ಸಿಲ್ವರ್, ಗ್ಲಿಸ್ಟೆನಿಂಗ್ ಗ್ರೇ, ಸಾಲಿಡ್ ಫೈರ್ ರೆಡ್, ಸ್ಪೀಡಿ ಬ್ಲೂ ಮತ್ತು ಕೆಫೀನ್ ಬ್ರೌನ್ ಎಂಬ ಸಿಂಗಲ್ ಟೋನ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿರಲಿದ್ದು, ಆಕರ್ಷಕವಾದ ಗ್ರಿಲ್, ರಿಫ್ರೆಶ್‌ ಫ್ರಂಟ್ ಫಾಸಿಯಾದೊಂದಿಗೆ ಪರಿಷ್ಕೃತ ಬಂಪರ್, ವೃತ್ತಾಕಾರವಾದ ಹೆಡ್‌ಲ್ಯಾಂಪ್‌ಗಳು, ಕ್ರೋಮ್ ಸ್ಟ್ರಿಪ್ ಮೂಲಕ ಸಂಪರ್ಕ ಹೊಂದುವ ಸಿಗ್ನೇಚರ್ ಲೋಗೋ ಪಡೆದುಕೊಂಡಿದೆ.

ನ್ಯೂ ಜನರೇಷನ್ ಸೆಲೆರಿಯೊ ಕಾರಿನ ಮೊದಲ ಟಿವಿಸಿ ಬಿಡುಗಡೆ ಮಾಡಿದ ಮಾರುತಿ ಸುಜುಕಿ

ಸೆಲೆರಿಯೊ ಕಾರಿನಲ್ಲಿ ಮಾರುತಿ ಸುಜುಕಿ ಕಂಪನಿಯು ಲೋ ಟ್ರಿಮ್‌ಗಳಿಗಾಗಿ ಸಾಧಾರಣ ಅಲಾಯ್ ವ್ಹೀಲ್ ಗಳನ್ನು ಜೋಡಿಸಿದ್ದು, ಉನ್ನತ ರೂಪಾಂತರಗಳಿಗಾಗಿ ಬ್ಲ್ಯಾಕ್ ಬಣ್ಣದ 15-ಇಂಚಿನ ಅಲಾಯ್ ವ್ಹೀಲ್ ಜೋಡಣೆಯೊಂದಿಗೆ ಅತ್ಯುತ್ತಮ ಫೀಚರ್ಸ್ ಒಳಗೊಂಡ ಇಂಟಿರಿಯರ್ ನೀಡಿದೆ.

ನ್ಯೂ ಜನರೇಷನ್ ಸೆಲೆರಿಯೊ ಕಾರಿನ ಮೊದಲ ಟಿವಿಸಿ ಬಿಡುಗಡೆ ಮಾಡಿದ ಮಾರುತಿ ಸುಜುಕಿ

ಸೆಲೆರಿಯೊ ಹ್ಯಾಚ್‌ಬ್ಯಾಕ್ ಮಾದರಿಗಾಗಿ ಮಾರುತಿ ಸುಜುಕಿ ಕಂಪನಿಯು ಮೊದಲ ಬಾರಿಗೆ ಸ್ಮಾರ್ಟ್‌ಪ್ಲೇ ಸ್ಟುಡಿಯೋ ಇನ್ಫೋಟೈನ್‌ಮೆಂಟ್ ಸಿಸ್ಟಂ ಒಳಗೊಂಡಿರುವ 7.0-ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ನೀಡಲಾಗಿದ್ದು, ಆಪಲ್ ಕಾರ್ ಪ್ಲೇ ಮತ್ತು ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ ಫೀಚರ್ಸ್ ಸಹ ಒಳಗೊಂಡಿರುತ್ತದೆ.

ನ್ಯೂ ಜನರೇಷನ್ ಸೆಲೆರಿಯೊ ಕಾರಿನ ಮೊದಲ ಟಿವಿಸಿ ಬಿಡುಗಡೆ ಮಾಡಿದ ಮಾರುತಿ ಸುಜುಕಿ

ಜೊತೆಗೆ ಹೊಸ ಕಾರಿನಲ್ಲಿ ಆಲ್ ಬ್ಲ್ಯಾಕ್ ಥೀಮ್ ಹೊಂದಿರುವ ಒಳಾಂಗಣ ಸೌಲಭ್ಯದೊಂದಿಗೆ ಫ್ಲಕ್ಸ್ ಅಲ್ಯುನಿಯಂ ಆಕ್ಸೆಂಟ್ ಜೊತೆಗೆ ಸ್ಟ್ರೀರಿಂಗ್ ವ್ಹೀಲ್, ಎಸಿ ವೆಂಟ್ಸ್, ಸೆಂಟರ್ ಕನ್ಸೊಲ್, ಸ್ಟಾರ್ಟ್/ಸ್ಟಾಪ್ ಬಟನ್, ಎಲೆಕ್ಟ್ರಿಕ್ ಮೂಲಕ ಹೊಂದಾಣಿಕೆ ಮಾಡಬಹುದಾದ ರಿಯಲ್ ವ್ಯೂ ಮಿರರ್, ಕೀ ಲೆಸ್ ಎಂಟ್ರಿ ಜೊತೆಗೆ ಮ್ಯಾನುವಲ್ ಎಸಿ ಕಂಟ್ರೋಲ್ ಯನಿಟ್ ಹೊಂದಿದೆ.

ನ್ಯೂ ಜನರೇಷನ್ ಸೆಲೆರಿಯೊ ಕಾರಿನ ಮೊದಲ ಟಿವಿಸಿ ಬಿಡುಗಡೆ ಮಾಡಿದ ಮಾರುತಿ ಸುಜುಕಿ

ಸುರಕ್ಷತೆಗಾಗಿ ಹೊಸ ಕಾರಿನಲ್ಲಿ ಮಾರುತಿ ಸುಜುಕಿ ಕಂಪನಿಯು ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಬ್ರೇಕ್ ಅಸಿಸ್ಟ್, ರಿಯರ್ ಪಾರ್ಕಿಂಗ್ ಸೆನ್ಸಾರ್ ಜೊತೆಗೆ ಹಿಲ್ ಹೋಲ್ಡ್ ಅಸಿಸ್ಟ್ ಸೌಲಭ್ಯಗಳನ್ನು ನೀಡಲಾಗಿದ್ದು, ಆಸಕ್ತ ಗ್ರಾಹಕರು ಹೊಸ ಕಾರಿನಲ್ಲಿಇನ್ನು ಹೆಚ್ಚಿನ ಮಟ್ಟದ ತಾಂತ್ರಿಕ ಅಂಶಗಳಿಗಾಗಿ ಆಕ್ಸೆಸರಿಸ್ ಪ್ಯಾಕೇಜ್ ಅಳವಡಿಸಿಕೊಳ್ಳಬಹುದಾಗಿದೆ.

Article Published On: Saturday, November 13, 2021, 12:40 [IST]
English summary
Maruti suzuki releases new tvc of the new gen celerio details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+