2021ರ ಸ್ವಿಫ್ಟ್ ಕಾರಿನ ಹೊಸ ಟಿವಿ ಜಾಹೀರಾತು ಬಿಡುಗಡೆ ಮಾಡಿದ ಮಾರುತಿ ಸುಜುಕಿ

ಮಾರುತಿ ಸುಜುಕಿ ಕಂಪನಿಯು ತನ್ನ ಜನಪ್ರಿಯ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಕಾರಿನ 2021ರ ಆವೃತ್ತಿಯನ್ನು ಬಿಡುಗಡೆ ಮಾಡಿದ್ದು, ಹೊಸ ಕಾರು ಬಿಡುಗಡೆಯಾದ ಬೆನ್ನಲ್ಲೇ ಪರ್ಫಾಮೆನ್ಸ್ ಕುರಿತಾದ ಟಿವಿ ಜಾಹೀರಾತು ಸಹ ಪ್ರಕಟಗೊಂಡಿದೆ.

2021ರ ಸ್ವಿಫ್ಟ್ ಕಾರಿನ ಹೊಸ ಟಿವಿ ಜಾಹೀರಾತು ಬಿಡುಗಡೆ ಮಾಡಿದ ಮಾರುತಿ ಸುಜುಕಿ

2021ರ ಸ್ವಿಫ್ಟ್ ಕಾರು ಉನ್ನತೀಕರಿಸಿದ ಎಂಜಿನ್ ಸೇರಿದಂತೆ ಪ್ರಮುಖ ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದು, ಕಾರು ಮಾದರಿಯು ಎಲ್ಎಕ್ಸ್ಐ, ವಿಎಕ್ಸ್ಐ, ಜೆಡ್ಎಕ್ಸ್ಐ ಮತ್ತು ಜೆಡ್ಎಕ್ಸ್ಐ ಪ್ಲಸ್ ಎನ್ನುವ ಪ್ರಮುಖ ನಾಲ್ಕು ವೆರಿಯೆಂಟ್ ಪಡೆದುಕೊಂಡಿದೆ.ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.73 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 8.41 ಲಕ್ಷ ಬೆಲೆ ಹೊಂದಿದ್ದು, ಹ್ಯಾಚ್‌ಬ್ಯಾಕ್ ಕಾರುಗಳ ಮಾರಾಟದಲ್ಲಿ ಕಳೆದ ಒಂದು ದಶಕದಿಂದಲೂ ನಂ.1 ಸ್ಥಾನ ಕಾಯ್ದುಕೊಂಡು ಬಂದಿರುವ ಸ್ವಿಫ್ಟ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ನಿರಂತರವಾಗಿ ಹಲವಾರು ಬದಲಾವಣೆಗಳೊಂದಿಗೆ ಬೇಡಿಕೆಯಲ್ಲಿ ಮುಂಚೂಣಿ ಸಾಧಿಸುತ್ತಿದೆ.

2021ರ ಸ್ವಿಫ್ಟ್ ಕಾರಿನ ಹೊಸ ಟಿವಿ ಜಾಹೀರಾತು ಬಿಡುಗಡೆ ಮಾಡಿದ ಮಾರುತಿ ಸುಜುಕಿ

ಬಲಿಷ್ಠ ಎಂಜಿನ್ ಆಯ್ಕೆಯೊಂದಿಗೆ ವಿನ್ಯಾಸದಲ್ಲಿ ಪ್ರಮುಖ ಬದಲಾವಣೆಗಳನ್ನು ಪಡೆದುಕೊಂಡಿರುವ ಹೊಸ ಸ್ವಿಫ್ಟ್ ಕಾರು 2020ರ ಆವೃತ್ತಿಗಿಂತ ತುಸು ದುಬಾರಿಯಾಗಿದ್ದರೂ ಹಲವಾರು ಹೊಸ ಬದಲಾವಣೆಗಳೊಂದಿಗೆ ಹ್ಯಾಚ್‌ಬ್ಯಾಕ್ ಕಾರು ಮಾರಾಟದಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಹೊಸ ಸ್ವಿಫ್ಟ್‌ನ ಕಾರಿನ ಮುಂಭಾಗದಲ್ಲಿ ಕ್ರೋಮ್ ಆಕ್ಸೆಂಟ್ ಹೊಂದಿರುವ ಆಕರ್ಷಕ ಕ್ರಾಸ್ ಮೆಶ್ ಗ್ರಿಲ್ ಮತ್ತು ಗ್ರಿಲ್ ಸುತ್ತಲು ನೀಡಲಾಗಿರುವ ಕಪ್ಪು ಪಟ್ಟಿಯು ಕಾರಿನ ಹೊಸ ಲುಕ್ ನೀಡಲಿದ್ದು, ಗ್ರಿಲ್ ಡಿಸೈನ್ ಹೊರತುಪಡಿಸಿ ಹೊಸ ಕಾರಿನ ಹೊರಭಾಗದ ವಿನ್ಯಾಸಗಳಲ್ಲಿ ಈ ಹಿಂದಿನ ಮಾದರಿಯಂತೆಯೇ ಮುಂದುವರಿಸಲಾಗಿದೆ.

2021ರ ಸ್ವಿಫ್ಟ್ ಕಾರಿನ ಹೊಸ ಟಿವಿ ಜಾಹೀರಾತು ಬಿಡುಗಡೆ ಮಾಡಿದ ಮಾರುತಿ ಸುಜುಕಿ

ಹೊಸ ಸ್ವಿಫ್ಟ್ ಮಾದರಿಯ ವಿಎಕ್ಸ್ಐ ವೆರಿಯೆಂಟ್‌ನಲ್ಲಿ ಈ ಬಾರಿ ಟಚ್ ಸ್ಕ್ರೀನ್ ಹೊಂದಿರುವ ಹೊಸ ಆಡಿಯೋ ಹೆಡ್ ಯುನಿಟ್ ನೀಡಲಾಗಿದ್ದು, ಟಾಪ್ ಎಂಡ್ ಮಾದರಿಯಲ್ಲಿ ಕ್ರೂಸ್ ಕಂಟ್ರೋಲ್, ವಿವಿಧ ಬಣ್ಣಗಳನ್ನು ಮಲ್ಟಿ ಇನ್ಪಾರ್ಮೆಷನ್ ಡಿಸ್‌ಪ್ಲೇ ಮತ್ತು ಆಟೋ ಫ್ಲೋಡಿಂಗ್ ಹೊಂದಿರುವ ರಿಯಲ್ ವ್ಯೂ ಮಿರರ್ ನೀಡಲಾಗಿದೆ.

2021ರ ಸ್ವಿಫ್ಟ್ ಕಾರಿನ ಹೊಸ ಟಿವಿ ಜಾಹೀರಾತು ಬಿಡುಗಡೆ ಮಾಡಿದ ಮಾರುತಿ ಸುಜುಕಿ

ಇನ್ನುಳಿದಂತೆ ಹಳೆಯ ಮಾದರಿಯಲ್ಲಿರುವಂತೆ ಎಲ್ಇಡಿ ಹೆಡ್‌ಲ್ಯಾಂಪ್ಸ್, 7.0-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಕೀ ಲೆಸ್ ಎಂಟ್ರಿ, ಆಟೋ ಕ್ಲೈಮೆಟ್ ಕಂಟ್ರೋಲ್, ಲೈವ್ ಟ್ರಾಫಿಕ್ ಅಪ್‌ಡೆಟ್ ನೀಡುವ ಸ್ಮಾರ್ಟ್ ಸ್ಟುಡಿಯೋ ಆ್ಯಪ್ ಕನೆಕ್ಟ್ ಸೌಲಭ್ಯಗಳಿದ್ದು, ಟಾಪ್ ಎಂಡ್ ಮಾದರಿಯಲ್ಲಿ ಈ ಬಾರಿ ಮೂರು ಹೊಸ ಡ್ಯುಯಲ್ ಟೋನ್ ಬಣ್ಣಗಳ ಆಯ್ಕೆ ನೀಡಲಾಗಿದೆ.

2021ರ ಸ್ವಿಫ್ಟ್ ಕಾರಿನ ಹೊಸ ಟಿವಿ ಜಾಹೀರಾತು ಬಿಡುಗಡೆ ಮಾಡಿದ ಮಾರುತಿ ಸುಜುಕಿ

2021ರ ಸ್ವಿಫ್ಟ್ ಕಾರಿನ ಮತ್ತೊಂದು ಪ್ರಮುಖ ಬದಲಾವಣೆಯೆಂದರೆ ಅದು ಹೊಸದಾಗಿ ಜೋಡಣೆ ಮಾಡಲಾಗಿರುವ 1.2-ಲೀಟರ್ ಡ್ಯುಯಲ್‌ಜೆಟ್ ಪೆಟ್ರೋಲ್ ಎಂಜಿನ್ ಮಾದರಿಯು ಹೊಸ ಕಾರಿನ ಪ್ರಮುಖ ಆಕರ್ಷಣೆಯಾಗಲಿದ್ದು, ಈ ಹಿಂದಿನ 83-ಬಿಎಚ್‌ಪಿ ಪ್ರೇರಿತ 1.2-ಲೀಟರ್ ಕೆ12 ಪೆಟ್ರೋಲ್ ಮಾದರಿಗಿಂತಲೂ ಉತ್ತಮ ಕಾರ್ಯಕ್ಷಮತೆ ಮತ್ತು ಹೆಚ್ಚು ಇಂಧನ ದಕ್ಷತೆ ಹೊಂದಿರುವ ಡ್ಯುಯಲ್‌ಜೆಟ್ ಎಂಜಿನ್ ಮಾದರಿಯು ಸ್ವಿಫ್ಟ್ ಕಾರಿನ ಆಯ್ಕೆಯನ್ನು ಮತ್ತಷ್ಟು ಹೆಚ್ಚಿಸಲಿದೆ.

MOST READ: ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

2021ರ ಸ್ವಿಫ್ಟ್ ಕಾರಿನ ಹೊಸ ಟಿವಿ ಜಾಹೀರಾತು ಬಿಡುಗಡೆ ಮಾಡಿದ ಮಾರುತಿ ಸುಜುಕಿ

ಮಾರುತಿ ಸುಜುಕಿಯ ಅಭಿವೃದ್ದಿಪಡಿಸಿರುವ 1.2-ಲೀಟರ್ ಡ್ಯುಯಲ್‌ಜೆಟ್ ಪೆಟ್ರೋಲ್ ಎಂಜಿನ್ ಅನ್ನು ಬಲೆನೊ ಮತ್ತು ಡಿಜೈರ್ ನಂತರ ಸ್ವಿಫ್ಟ್ ಮಾದರಿಯಲ್ಲಿ ಜೋಡಣೆ ಮಾಡಿದ್ದು, ಹೊಸ ಎಂಜಿನ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಎಎಂಟಿ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 90-ಬಿಎಚ್‌ಪಿ, 113-ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

2021ರ ಸ್ವಿಫ್ಟ್ ಕಾರಿನ ಹೊಸ ಟಿವಿ ಜಾಹೀರಾತು ಬಿಡುಗಡೆ ಮಾಡಿದ ಮಾರುತಿ ಸುಜುಕಿ

ಈ ಮೂಲಕ ಹೊಸ ಸ್ವಿಫ್ಟ್ ಮಾದರಿಯು ಪ್ರತಿ ಲೀಟರ್ ಪೆಟ್ರೋಲ್‌ಗೆ ಮ್ಯಾನುವಲ್ ಮಾದರಿಯು 23.20 ಕಿ.ಮೀ ಮತ್ತು ಆಟೋಮ್ಯಾಟಿಕ್ ಆವೃತ್ತಿಯು 23.76 ಕಿ.ಮೀ ಮೈಲೇಜ್ ನೀಡಲಿದ್ದು, ಕೆ12 ಮಾದರಿಯು ಪ್ರತಿ ಲೀಟರ್ ಪೆಟ್ರೋಲ್‌ಗೆ ಗರಿಷ್ಠ 21.21 ಕಿ.ಮೀ ಮೈಲೇಜ್ ಹೊಂದಿತ್ತು.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

2021ರ ಸ್ವಿಫ್ಟ್ ಕಾರಿನ ಹೊಸ ಟಿವಿ ಜಾಹೀರಾತು ಬಿಡುಗಡೆ ಮಾಡಿದ ಮಾರುತಿ ಸುಜುಕಿ

ಅತ್ಯುತ್ತಮ ಪರ್ಫಾಮೆನ್ಸ್‌ನೊಂದಿಗೆ ಅತ್ಯಧಿಕ ಮೈಲೇಜ್ ಪಡೆದುಕೊಂಡಿರುವ ಹೊಸ ಸ್ವಿಫ್ಟ್ ಕಾರು ಇದೀಗ ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಹ್ಯುಂಡೈ ಗ್ರಾಂಡ್ ಐ10 ನಿಯೋಸ್, ಫೋರ್ಡ ಫಿಗೊ ಕಾರು ಮಾದರಿಗಳಿಗೆ ಮತ್ತಷ್ಟು ಪೈಟೋಟಿ ನೀಡಲಿದ್ದು, ಹೊಸ ಕಾರಿನಲ್ಲಿ ಹೊಸದಾಗಿ ನೀಡಿರುವ ಡ್ಯುಯಲ್ ಆವೃತ್ತಿಗಳು ಸಹ ಗ್ರಾಹಕರ ಪ್ರಮುಖ ಆಕರ್ಷಣೆಯಾಗಲಿವೆ.

Most Read Articles

Kannada
English summary
Maruti Suzuki Revealed 2021 Swift Facelift New TVC. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X