ಕೋವಿಡ್ ಸಂಕಷ್ಟ: ಕಾರು ಉತ್ಪಾದನೆ ಸ್ಥಗಿತಗೊಳಿಸಿ ಆಕ್ಸಿಜನ್ ಉತ್ಪಾದನೆ ಆರಂಭಿಸಿದ ಮಾರುತಿ ಸುಜುಕಿ
ದೇಶಾದ್ಯಂತ ಕೋವಿಡ್ 2ನೇ ಅಲೆ ಹೆಚ್ಚಿರುವುದರಿಂದ ವಿವಿಧ ರಾಜ್ಯಗಳಲ್ಲಿ ಹಲವು ಕಠಿಣ ಕ್ರಮಗಳೊಂದಿಗೆ ಭಾಗಶಃ ಲಾಕ್ಡೌನ್, ಕರ್ಫ್ಯೂ ವಿಧಿಸಲಾಗುತ್ತಿದ್ದು, ವೈಸರ್ ಭೀತಿ ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹರಸಾಹಸಪಡುತ್ತಿವೆ.

ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ವಿವಿಧ ರಾಜ್ಯಗಳು ಸೋಂಕು ಹರಡುವಿಕೆಯನ್ನು ತಗ್ಗಿಸಲು ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಸೋಂಕು ಹೆಚ್ಚಿರುವ ನಗರಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಹೆಚ್ಚುತ್ತಿರುವ ಕರೋನಾ ವೈರಸ್ ತಡೆಗಾಗಿ ಕೇಂದ್ರ ಸರ್ಕಾರದ ಸಲಹೆ ಮೇರೆಗೆ ವಿವಿಧ ರಾಜ್ಯ ಸರ್ಕಾರಗಳು ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೆ ತಂದಿದ್ದು, ಕೊರೋನಾ ನಿಯಂತ್ರಣಕ್ಕೆ ಟಫ್ ರೂಲ್ಸ್ ಅನುಸರಿಸಲಾಗುತ್ತಿದೆ.

ವೈರಸ್ ಹರಡುವಿಕೆಯನ್ನು ತಡೆಯಲು ಮಾಸ್ಕ್, ಹ್ಯಾಂಡ್ ಸ್ಯಾನಿಟೈಜ್ ಮತ್ತು ಫೇಸ್-ಶೀಲ್ಡ್‌ಗಳ ಬಳಕೆಯು ಹೆಚ್ಚಿಸಲಾಗುತ್ತಿದ್ದರೂ ಸೋಂಕಿತರಿಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡಲು ವೈದ್ಯಕೀಯ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ.

ಅದರಲ್ಲೂ ತೀವ್ರ ಉಸಿರಾಟದಿಂದ ಬಳಲುತ್ತಿರುವ ಕೋವಿಡ್ ಸೋಂಕಿತರಿಗೆ ಅಗತ್ಯವಾಗಿರುವ ಆಕ್ಸಿಜನ್ ಕೊರತೆಯು ಸಾವಿನ ಸಂಖ್ಯೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗುತ್ತಿದ್ದು, ಆಕ್ಸಿಜನ್ ಉತ್ಪಾದನಾ ಕಂಪನಿಗಳಿಗೆ ಉತ್ಪಾದನಾ ಸಾಮಾರ್ಥ್ಯಕ್ಕಿಂತ ಹತ್ತು ಪಟ್ಟು ಬೇಡಿಕೆ ಬರುತ್ತಿದೆ.

ಹೀಗಾಗಿ ಆಕ್ಸಿಜನ್ ಪೂರೈಕೆ ಮಾಡಲು ಪರದಾಡುತ್ತಿರುವ ಆಕ್ಸಿಜನ್ ಕಂಪನಿಗಳು ಸಾಮಾರ್ಥ್ಯ ಮೀರಿ ಉತ್ಪಾದನಾ ಪ್ರಮಾಣವನ್ನು ಹೆಚ್ಚಿಸಿದ್ದು, ಕೆಲವು ಆಕ್ಸಿಜನ್ ಉತ್ಪಾದನಾ ವಿವಿಧ ಕಂಪನಿಗಳ ಜೊತೆಗೂಡಿ ತಾತ್ಕಾಲಿಕ ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ತೆರೆಯುತ್ತಿವೆ. ಇದೀಗ ದೇಶದ ಅಗ್ರಗಣ್ಯ ಕಾರು ಉತ್ಪಾದನಾ ಕಂಪನಿಯಾಗಿರುವ ಮಾರುತಿ ಸುಜುಕಿ ಕೂಡಾ ಹೊಸ ಒಪ್ಪಂದಕ್ಕೆ ಸಹಿ ಹಾಕಿದ್ದು, ಹರಿಯಾಣದಲ್ಲಿರುವ ತನ್ನ ಅತಿ ದೊಡ್ಡ ಕಾರು ಉತ್ಪಾದನಾ ಘಟಕದಲ್ಲಿ ತಾತ್ಕಾಲಿಕ ಆಕ್ಸಿಜನ್ ಉತ್ಪಾದನಾ ಘಟಕ ತೆರೆಯಲು ಅವಕಾಶ ನೀಡಿದೆ.

ಮುಂದಿನ ಕೆಲ ದಿನಗಳ ತನಕ ಕಾರು ಉತ್ಪಾದನೆಯ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವ ಮಾರುತಿ ಸುಜುಕಿ ಕಂಪನಿಯು ಗರಿಷ್ಠ ಪ್ರಮಾಣದ ಮೆಡಿಕಲ್ ಆಕ್ಸಿಜನ್ ಉತ್ಪಾದನಾ ಮಾಡಲು ನಿರ್ಧರಿಸಿದ್ದು, ದೆಹಲಿ ಮತ್ತು ಇತರೆ ಅಗತ್ಯ ರಾಜ್ಯಗಳಿಗೆ ಆಕ್ಸಿಜನ್ ಸರಬರಾಜು ಮಾಡಲಿದೆ.

ದೆಹಲಿಯಲ್ಲಿ ಇತರೆ ರಾಜ್ಯಗಳಿಂತಲೂ ಅತಿ ಹೆಚ್ಚು ಆಕ್ಸಿಜನ್ ಕೊರತೆ ಉಂಟಾಗಿದ್ದು, ಸೋಂಕಿತರಿಗೆ ಸರಿಯಾದ ಸಮಮಕ್ಕೆ ಆಕ್ಸಿಜನ್ ಪೂರೈಕೆ ಮಾಡಲು ಸಾಧ್ಯವಾಗದೆ ದಿನಂಪ್ರತಿ ಸಾವಿರಾರು ಸೋಂಕಿತರು ಪ್ರಾಣಕಳೆದುಕೊಳ್ಳುತ್ತಿದ್ದಾರೆ.
MOST READ: 14 ದಿನಗಳ ಕಾಲ ಟೈಟ್ ಕರ್ಫ್ಯೂ: ವಾಹನಗಳ ಸಂಚಾರಕ್ಕೆ ಏನೆಲ್ಲಾ ರೂಲ್ಸ್?

ಇಂತಹ ಸಂಕಷ್ಟದ ಸಮಯದಲ್ಲಿ ಸರ್ಕಾರದ ಮನವಿ ಮೇರೆಗೆ ವಿವಿಧ ಆಟೋ ಉತ್ಪಾದನಾ ಕಂಪನಿಗಳು ತುರ್ತು ಸಂದರ್ಭದಲ್ಲಿ ವೈದ್ಯಕೀಯ ಸೇವೆಗಳಿಗೆ ಕೈಜೋಡಿಸಿದ್ದು, ಆಕ್ಸಿಜನ್ ಉತ್ಪಾದನೆ ಮತ್ತು ವೆಂಟಿಲೆಟರ್ ಉತ್ಪಾದನೆಗಾಗಿ ವಾಹನ ಉತ್ಪಾದನಾ ಘಟಕಗಳನ್ನೇ ಬಳಕೆ ಮಾಡಿಕೊಳ್ಳಲಾಗುತ್ತಿದೆ.

ಮಾರುತಿ ಸುಜುಕಿ ಮಾತ್ರವಲ್ಲದೆ ಎಂಜಿ ಮೋಟಾರ್ ಕಂಪನಿಯು ಕೂಡಾ ವಡೋದರದಲ್ಲಿರುವ ತನ್ನ ಕಾರು ಉತ್ಪಾದನಾ ಘಟಕದಲ್ಲೇ ತಾತ್ಕಾಲಿಕ ಆಕ್ಸಿಜನ್ ಉತ್ಪಾದನಾ ಘಟಕ ತೆರೆಯಲು ಅವಕಾಶ ನೀಡಿದೆ.
MOST READ: ಕೋವಿಡ್ ಭೀತಿ: ಕಾರು ಉತ್ಪಾದನೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿದ ಎಂಜಿ ಮೋಟಾರ್

ಗುಜರಾತ್ ಮೂಲದ ದೇವನಂದನ್ ಗ್ಯಾಸ್ ಪ್ರೈ.ಲಿ ಕಂಪನಿಯು ಎಂಜಿ ಮೋಟಾರ್ ಜೊತೆಗೂಡಿ ಗರಿಷ್ಠ ಮಟ್ಟದ ಮೆಡಿಕಲ್ ಆಕ್ಸಿಜನ್ ಉತ್ಪಾದನೆ ಮಾಡುತ್ತಿದ್ದು, ಕೋವಿಡ್ ವಿರುದ್ದದ ಹೋರಾಟದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಸಹಾಯ ಮಾಡಲು ಕಂಪನಿಯು ಬದ್ದವಾಗಿದೆ ಎಂದಿದ್ದಾರೆ.


Click it and Unblock the Notifications