Just In
- 2 hrs ago
ಹೊಸ ರೂಪದೊಂದಿಗೆ ರಸ್ತೆಗಿಳಿಯಲಿವೆ ತೆರೆಮರೆಗೆ ಸರಿದ ಜಟಕಾ ಬಂಡಿ
- 4 hrs ago
ಫೆಬ್ರವರಿ ತಿಂಗಳಿನಲ್ಲಿ 12 ಸಾವಿರಕ್ಕೂ ಹೆಚ್ಚು ಎಂಪಿವಿಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ
- 4 hrs ago
ಸಿಎನ್ಜಿ ವರ್ಷನ್ನಲ್ಲೂ ಬಿಡುಗಡೆಯಾಗಲಿದೆ ಸ್ಕೋಡಾ ರ್ಯಾಪಿಡ್ ಸೆಡಾನ್
- 4 hrs ago
ಸ್ಕ್ರ್ಯಾಪೇಜ್ ನೀತಿ ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಸಿಹಿಸುದ್ದಿ ನೀಡಿದ ಕೇಂದ್ರ ಸರ್ಕಾರ
Don't Miss!
- News
ಪೆಟ್ರೋಲ್, ಡೀಸೆಲ್ ದರ ಏರಿಕೆ: ಕೇಂದ್ರಕ್ಕೆ ಬಿಸಿ ಮುಟ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ
- Movies
ಬಿಗ್ಬಾಸ್: ಪ್ರಶಾಂತ್ ಸಂಬರ್ಗಿ ಮೇಲೆ ಉರಿದು ಬಿದ್ದ ಮನೆ ಸದಸ್ಯರು
- Education
UAS Dharwad Recruitment 2021: ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಮಾ.10ಕ್ಕೆ ನೇರ ಸಂದರ್ಶನ
- Sports
ಐಎಸ್ಎಲ್: ಫೈನಲ್ಗಾಗಿ ನಾರ್ಥ್ ಈಸ್ಟ್, ಬಾಗನ್ ನಡುವೆ ಫೈನಲ್ ಫೈಟ್
- Lifestyle
ಮಾ.11ಕ್ಕೆ ಕುಂಭ ರಾಶಿಗೆ ಬುಧನ ಪ್ರವೇಶ: ನಿಮ್ಮ ಬದುಕಿನಲ್ಲಿ ಆಗಲಿದೆ ಈ ಬದಲಾವಣೆ
- Finance
ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್ನ ಮಾ. 08ರ ಮಾರುಕಟ್ಟೆ ದರ ಇಲ್ಲಿದೆ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
5 ವರ್ಷಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಕಾರುಗಳನ್ನು ಮಾರಾಟ ಮಾಡಿದ ನೆಕ್ಸಾ ಡೀಲರ್ ಶಿಪ್
ನೆಕ್ಸಾ ಪ್ರೀಮಿಯಂ ಡೀಲರ್ ಶಿಪ್ 5 ವರ್ಷಗಳಲ್ಲಿ 10.30 ಲಕ್ಷ ಕಾರುಗಳನ್ನು ಮಾರಾಟ ಮಾಡಿದೆ ಎಂದು ಮಾರುತಿ ಸುಜುಕಿ ಕಂಪನಿ ತಿಳಿಸಿದೆ. ಮಾರುತಿ ಸುಜುಕಿ ಕಂಪನಿಯು ಸದ್ಯಕ್ಕೆ ನೆಕ್ಸಾ ಡೀಲರ್ ಶಿಪ್ ಮೂಲಕ ಎಸ್-ಕ್ರಾಸ್, ಇಗ್ನಿಸ್, ಬಲೆನೊ, ಸಿಯಾಜ್ ಹಾಗೂ ಎಕ್ಸ್‌ಎಲ್ 6 ಕಾರುಗಳನ್ನು ಮಾರಾಟ ಮಾಡುತ್ತಿದೆ.

ಮಾರುತಿ ಸುಜುಕಿ ಕಂಪನಿಯು ತನ್ನ ಪ್ರೀಮಿಯಂ ಕಾರುಗಳನ್ನು ಭಾರತದಲ್ಲಿ ಮಾರಾಟ ಮಾಡಲು 2015ರಲ್ಲಿ ಮಾರುತಿ ನೆಕ್ಸಾ ಡೀಲರ್ ಶಿಪ್'ಗಳನ್ನು ಆರಂಭಿಸಿತು. ನಗರ ಪ್ರದೇಶಗಳಲ್ಲಿ ನೆಕ್ಸಾ ಡೀಲರ್ ಶಿಪ್'ಗಳಿಂದ ಹೆಚ್ಚಿನ ಕಾರುಗಳನ್ನು ಮಾರಾಟ ಮಾಡಲಾಗಿದೆ ಎಂದು ಮಾರುತಿ ಸುಜುಕಿ ಕಂಪನಿಯು ನಡೆಸಿದ ಸಮೀಕ್ಷೆಯಲ್ಲಿ ಕಂಡು ಬಂದಿದೆ.

ನೆಕ್ಸಾದ ಡೀಲರ್ ಶಿಪ್'ಗಳಲ್ಲಿ ಗ್ರಾಹಕರಿಗೆ ವಿಶ್ವ ದರ್ಜೆಯ ಖರೀದಿ ಅನುಭವವನ್ನು ನೀಡಲಾಗುತ್ತದೆ ಎಂದು ಕಂಪನಿ ತಿಳಿಸಿದೆ. ಈ ಹಿನ್ನೆಲೆಯಲ್ಲಿ ನೆಕ್ಸಾ ಶೋರೂಂನ ವಿನ್ಯಾಸವನ್ನು ವಿಶಿಷ್ಟವಾಗಿ ವಿನ್ಯಾಸಗೊಳಿಸಲಾಗಿದೆ.
MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಆರಂಭದಲ್ಲಿ ಮಾರುತಿ ಎಸ್-ಕ್ರಾಸ್ ಕಾರ್ ಅನ್ನು ಮಾತ್ರ ನೆಕ್ಸಾ ಡೀಲರ್ ಶಿಪ್'ಗಳಲ್ಲಿ ಮಾರಾಟ ಮಾಡಲಾಗುತ್ತಿತ್ತು. ನಂತರ ಕಂಪನಿಯ ಇತರ ಮಾದರಿಯ ಕಾರುಗಳನ್ನು ಸಹ ಈ ಡೀಲರ್ ಶಿಪ್'ಗಳಲ್ಲಿ ಮಾರಾಟ ಮಾಡಲಾಯಿತು.

ಕಂಪನಿಯು ಸದ್ಯಕ್ಕೆ ಭಾರತದ 200 ನಗರಗಳಲ್ಲಿ 370 ನೆಕ್ಸಾ ಡೀಲರ್ ಶಿಪ್'ಗಳನ್ನು ಹೊಂದಿದೆ. ಮಾರುತಿ ಸುಜುಕಿ ಕಂಪನಿಯು ಕಳೆದ ತಿಂಗಳು 1,39,002 ಯುನಿಟ್ ಕಾರುಗಳನ್ನು ಮಾರಾಟ ಮಾಡಿದೆ. 2020ರ ಜನವರಿ ತಿಂಗಳಿಗೆ ಹೋಲಿಸಿದರೆ ಈ ಪ್ರಮಾಣವು 0.06%ನಷ್ಟು ಕಡಿಮೆಯಾಗಿದೆ.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಮಾರುತಿ ಸುಜುಕಿ ಕಂಪನಿಯು 2020ರ ಜನವರಿ ತಿಂಗಳಿನಲ್ಲಿ 139,444 ಯುನಿಟ್ ಕಾರುಗಳನ್ನು ಮಾರಾಟ ಮಾಡಿತ್ತು. ಕಂಪನಿಯ ಹೆಚ್ಚು ಮಾರಾಟವಾಗುವ ಹ್ಯಾಚ್‌ಬ್ಯಾಕ್ ಕಾರುಗಳಾದ ಆಲ್ಟೊ ಹಾಗೂ ಎಸ್-ಪ್ರೆಸ್ಸೊಗಳ ಮಾರಾಟ ಪ್ರಮಾಣವು ಸಹ ಜನವರಿಯಲ್ಲಿ ಕಡಿಮೆಯಾಗಿದೆ.

ಮಾಹಿತಿಯ ಪ್ರಕಾರ, ಕಂಪನಿಯು ಈ ವರ್ಷ ಹೊಸ ತಲೆಮಾರಿನ ಸ್ವಿಫ್ಟ್, ಸೆಲೆರಿಯೊ, ವಿಟಾರಾ ಬ್ರೆಝಾ, ವ್ಯಾಗನ್ಆರ್ ಕಾರುಗಳನ್ನು ಬಿಡುಗಡೆಗೊಳಿಸಲಿದೆ. ಕಂಪನಿಯು ಇತ್ತೀಚೆಗೆ ಭಾರತದಿಂದ ಜಿಮ್ನಿ ಎಸ್‌ಯುವಿಯನ್ನು ರಫ್ತು ಮಾಡಲು ಆರಂಭಿಸಿದೆ.
MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಕಂಪನಿಯು ಶೀಘ್ರದಲ್ಲೇ ಈ ಎಸ್‌ಯುವಿಯನ್ನು ಭಾರತದಲ್ಲಿಯೂ ಬಿಡುಗಡೆಗೊಳಿಸುವ ಸಾಧ್ಯತೆಗಳಿವೆ. ಮಾರುತಿ ಸುಜುಕಿ ಕಂಪನಿಯು ತನ್ನ ಗ್ರಾಹಕರಿಗೆ ಕಾರು ಖರೀದಿಯ ಅನುಭವವನ್ನು ಹೆಚ್ಚಿಸುತ್ತಿದೆ.

ಈ ಹಿನ್ನೆಲೆಯಲ್ಲಿ ಕಂಪನಿಯು ಮಾರುತಿ ನೆಕ್ಸಾ ಗ್ರಾಹಕರಿಗಾಗಿ ಸ್ಮಾರ್ಟ್ ಫೈನಾನ್ಸ್ ಆಯ್ಕೆಯನ್ನು ಬಿಡುಗಡೆಗೊಳಿಸಿದೆ. ಈಗ ಕಂಪನಿಯು ತನ್ನ ಅರೆನಾ ಡೀಲರ್'ಗಳಮೂಲಕ ಮಾರಾಟವಾಗುವ ಕಾರುಗಳನ್ನು ಸ್ಮಾರ್ಟ್ ಹಣಕಾಸು ಯೋಜನೆಯ ಮೂಲಕ ಮಾರಾಟ ಮಾಡಲಿದೆ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

30 ನಗರಗಳಲ್ಲಿ ಅರೆನಾ ಗ್ರಾಹಕರಿಗೆ ಸ್ಮಾರ್ಟ್ ಹಣಕಾಸು ಯೋಜನೆಯು ಲಭ್ಯವಾಗಿದೆ. ಮಾರುತಿ ಸ್ಮಾರ್ಟ್ ಹಣಕಾಸು ಯೋಜನೆಯಡಿ ಕಾರುಗಳ ಖರೀದಿಗೆ ಸುಲಭವಾದ ಇಎಂಐ ಆಯ್ಕೆಗಳನ್ನು ನೀಡಲಾಗುತ್ತದೆ.

ಗ್ರಾಹಕರ ಅನುಕೂಲಕ್ಕೆ ತಕ್ಕಂತೆ ಇಎಂಐ ಪಾವತಿಸುವ ಆಯ್ಕೆಯನ್ನು ನೀಡಲಾಗುತ್ತದೆ. ಗ್ರಾಹಕರಿಗೆ ಹಣಕಾಸು ಆಯ್ಕೆಗಳನ್ನು ಒದಗಿಸಲು ಮಾರುತಿ ಸುಜುಕಿ ಕಂಪನಿಯು 12 ಬ್ಯಾಂಕುಗಳೊಂದಿಗೆ ಪಾಲುದಾರಿಕೆ ಮಾಡಿಕೊಂಡಿದೆ.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಮಾರುತಿ ಸುಜುಕಿ ಕಂಪನಿಯು ಜನವರಿ ತಿಂಗಳಿನಿಂದ ಕಾರುಗಳ ಬೆಲೆಯನ್ನು ಹೆಚ್ಚಿಸಿದೆ. ಉತ್ಪಾದನಾ ವೆಚ್ಚ ಹೆಚ್ಚಾದ ಕಾರಣಕ್ಕೆ ಕಂಪನಿಯು ತನ್ನ ಕಾರುಗಳ ಬೆಲೆಯನ್ನು ಹೆಚ್ಚಿಸಿದೆ.