ಫೆಬ್ರವರಿ ತಿಂಗಳಿನಲ್ಲಿ 12 ಸಾವಿರಕ್ಕೂ ಹೆಚ್ಚು ಎಂಪಿವಿಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

ಭಾರತದ ಅತಿದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ (ಎಂಎಸ್ಐಎಲ್) ಕಂಪನಿಯು ಕಳೆದ ತಿಂಗಳ ಮಾರಾಟದಲ್ಲಿ ಸಣ್ಣ ಮಟ್ಟದ ಬೆಳವಣಿಗೆಯನ್ನು ಸಾಧಿಸಿದೆ. ಆದರೆ ಮಾರುತಿ ಕಂಪನಿಯ ಸರಣಿಯಲ್ಲಿರುವ ಎಂಪಿವಿ ಮಾದರಿಗಳ ಮಾರಾಟದಲ್ಲಿ ಗಮನಾರ್ಹ ಕುಸಿತವನ್ನು ಕಂಡಿದೆ.

ಫೆಬ್ರವರಿ ತಿಂಗಳಿನಲ್ಲಿ 12 ಸಾವಿರಕ್ಕೂ ಹೆಚ್ಚು ಎಂಪಿವಿಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

2021ರ ಫೆಬ್ರವರಿ ತಿಂಗಳಿನಲ್ಲಿ ಎರ್ಟಿಗಾದ ಒಟ್ಟು 9,774 ಯುನಿಟ್‌ಗಳನ್ನು ಮಾರಾಟ ಮಾಡಿದೆ. ಇನ್ನು ಎಕ್ಸ್‌ಎಲ್6 ಮಾದರಿಯ 3,020 ಯುನಿಟ್‌ಗಳನ್ನು ಮಾರಾಟ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. 2020ರಲ್ಲಿ ಮಾರುತಿ ಸುಜುಕಿ ಕಂಪನಿಯು ಎರ್ಟಿಗಾದ 11,782 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.17.4 ರಷ್ಟು ಕುಸಿತವನ್ನು ಕಂಡಿದೆ. ಆದರೆ 2021ರ ಜನವರಿ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.2.19 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

ಫೆಬ್ರವರಿ ತಿಂಗಳಿನಲ್ಲಿ 12 ಸಾವಿರಕ್ಕೂ ಹೆಚ್ಚು ಎಂಪಿವಿಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

ಇನ್ನು 2020ರ ಫೆಬ್ರವರಿಯಲ್ಲಿ ಎಕ್ಸ್‌ಎಲ್6 ಎಂಪಿವಿಯ 3,886 ಯುನಿಟ್‌ಗಳು ಮಾರಾಟವಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.28.29 ರಷ್ಟು ಕುಸಿತವನ್ನು ಕಂಡಿದೆ. ಇನ್ನು 2021ರ ಜನವರಿ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಕಳೆದ ತಿಂಗಳು ಶೇ.3.17 ರಷ್ಟು ಕುಸಿತವನ್ನು ಕಂಡಿದೆ.

MOST READ: ಜನವರಿ ತಿಂಗಳಿನಲ್ಲಿ ಮಾರುತಿ ಎಕ್ಸ್‌ಎಲ್6 ಕಾರು ಮಾರಾಟದಲ್ಲಿ ಶೇ.305ರಷ್ಟು ಹೆಚ್ಚಳ

ಫೆಬ್ರವರಿ ತಿಂಗಳಿನಲ್ಲಿ 12 ಸಾವಿರಕ್ಕೂ ಹೆಚ್ಚು ಎಂಪಿವಿಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

ಇದರಲ್ಲಿ ಮೊದಲಿಗೆ ಮಾರುತಿ ಸುಜುಕಿ ಎರ್ಟಿಗಾ ಎಂಪಿವಿ ಮಾದರಿಯ ಬಗ್ಗೆ ಹೇಳುವುದಾದರೆ, ಇದರಲ್ಲಿ ಏಕೈಕ 1.5-ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ, ಈ ಎಂಜಿನ್ 105 ಬಿಹೆಚ್‍ಪಿ ಪವರ್ ಮತ್ತು 138 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಫೆಬ್ರವರಿ ತಿಂಗಳಿನಲ್ಲಿ 12 ಸಾವಿರಕ್ಕೂ ಹೆಚ್ಚು ಎಂಪಿವಿಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

ಈ ಎಂಜಿನ್ ನೊಂದಿಗೆ ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಜೊತೆಗೆ 4-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ನೀಡಲಾಗಿದೆ. ಮಾರುತಿ ಸುಜುಕಿ ಎರ್ಟಿಗಾ ಕಾರಿನಲ್ಲಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಎಲ್‌ಇಡಿ ಟೈಲ್ ಲ್ಯಾಂಪ್‌ಗಳು, 15 ಇಂಚಿನ ವ್ಹೀಲ್ ಗಳು, ಆಂಡ್ರಾಯ್ಡ್ ಆಟೋ ಮತ್ತು ಕಾರ್‌ಪ್ಲೇಯೊಂದಿಗೆ 7 ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಒಳಗೊಂಡಿದೆ.

MOST READ: ಕರೋನಾ ವೈರಸ್ ಬಗ್ಗೆ ಜನ ಜಾಗೃತಿ ಮೂಡಿಸಲು ಉಬರ್ ಜೊತೆಗೆ ಕೈಜೋಡಿಸಿದ ಪೊಲೀಸ್ ಇಲಾಖೆ

ಫೆಬ್ರವರಿ ತಿಂಗಳಿನಲ್ಲಿ 12 ಸಾವಿರಕ್ಕೂ ಹೆಚ್ಚು ಎಂಪಿವಿಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

ಇದರೊಂದಿಗೆ ಪುಶ್-ಬಟನ್ ಸ್ಟಾರ್ಟ್-ಸ್ಟಾಪ್, ಹಿಂಭಾಗದ ಎಸಿಯೊಂದಿಗೆ ಆಟೋ ಕ್ಲೈಮೇಟ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಕಪ್ ಹೋಲ್ಡರ್ಸ್ ಮತ್ತು ಸ್ಪೀಕರ್ ಆಡಿಯೊ ಸಿಸ್ಟಂ ಅನ್ನು ಅಳವಡಿಸಲಾಗಿದೆ.

ಫೆಬ್ರವರಿ ತಿಂಗಳಿನಲ್ಲಿ 12 ಸಾವಿರಕ್ಕೂ ಹೆಚ್ಚು ಎಂಪಿವಿಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

ಇನ್ನು ಮಾರುತಿ ಸುಜುಕಿ ಎರ್ಟಿಗಾ ಎಂಪಿವಿಯಲ್ಲಿ ಸುರಕ್ಷತೆಗಾಗಿ, ಎಂಪಿವಿ ಇಬಿಡಿ, ರಿಯರ್ ಪಾರ್ಕಿಂಗ್ ಸೆನ್ಸರ್‌ಗಳು, ಇಎಸ್‌ಪಿ, ಹಿಲ್ ಹೋಲ್ಡ್ ಕಂಟ್ರೋಲ್, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ, ಡ್ಯುಯಲ್ ಫ್ರಂಟಲ್ ಏರ್‌ಬ್ಯಾಗ್ ಮತ್ತು ಐಎಸ್‌ಒಫಿಕ್ಸ್ ಚೈಲ್ಡ್ ಸೀಟ್ ಆಂಕಾರೇಜ್‌ಗಳೊಂದಿಗೆ ಎಬಿಎಸ್ ಅನ್ನು ಪಡೆಯುತ್ತದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಫೆಬ್ರವರಿ ತಿಂಗಳಿನಲ್ಲಿ 12 ಸಾವಿರಕ್ಕೂ ಹೆಚ್ಚು ಎಂಪಿವಿಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

ಇನ್ನು ಮಾರುತಿ ಸುಜುಕಿ ಕಂಪನಿಯ ಎಕ್ಸ್‌ಎಲ್6 ಎಂಪಿವಿಯ ಬಗ್ಗೆ ಹೇಳುವುದಾದರೆ, ಇದರಲ್ಲಿ 1.5-ಲೀಟರ್ ಇನ್-ಲೈಮ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 105 ಬಿಹೆಚ್‍ಪಿ ಪವರ್ ಮತ್ತು 138 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಫೆಬ್ರವರಿ ತಿಂಗಳಿನಲ್ಲಿ 12 ಸಾವಿರಕ್ಕೂ ಹೆಚ್ಚು ಎಂಪಿವಿಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಮತ್ತು 4-ಸ್ಪೀಡ್ ಟಾರ್ಕ್ ಕರ್ನವಾಟರ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ನೀಡಿದೆ. ಮೈಲ್ಡ್-ಹೈಬ್ರಿಡ್ ಸಿಸ್ಟಂ ಮತ್ತು ಐಡಲ್ ಸ್ಟಾರ್ಟ್-ಸ್ಟಾಪ್ ಕಾರ್ಯಗಳು ಎಂಪಿವಿಯಲ್ಲಿ ಸ್ಯಾಂಡರ್ಡ್ ಆಗಿ ಲಭ್ಯವಿದೆ.

ಫೆಬ್ರವರಿ ತಿಂಗಳಿನಲ್ಲಿ 12 ಸಾವಿರಕ್ಕೂ ಹೆಚ್ಚು ಎಂಪಿವಿಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

ಮಾರುತಿ ಸುಜುಕಿ ಕಂಪನಿಯ ತನ್ನ ಸರಣಿಯಲ್ಲಿರುವ ಎಲ್ಲಾ ಡೀಸೆಲ್ ಕಾರುಗಳನ್ನು ಸ್ಥಗಿತಗೊಳಿಸಿತ್ತು. ಆದರೆ ಎಂಪಿವಿ ವಿಭಾಗದ ಎರ್ಟಿಗಾ ಮತ್ತು ಎಕ್ಸ್‌ಎಲ್6 ಮಾದರಿಗಳ ಮಾರಾಟದಲ್ಲಿ ಕುಸಿತ ಕಂಡಿರುವ ಕಾರಣದಿಂದ ಮುಂದಿನ ಎರಡು ವರ್ಷಗಳಲ್ಲಿ ಈ ಎರಡು ಮಾದರಿಗಳನ್ನು ಡೀಸೆಲ್ ಎಂಜಿನ್ ಆಯ್ಕೆಗಳಲ್ಲಿ ಬಿಡುಗಡೆಗೊಳಿಸಬಹುದು.

Most Read Articles

Kannada
English summary
Maruti Suzuki Sold Over 12,000 MPVs In February 2021. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X