ಅಕ್ಟೋಬರ್ ತಿಂಗಳಿನಲ್ಲಿ 17 ಸಾವಿರಕ್ಕೂ ಹೆಚ್ಚು ಎಂಪಿವಿಗಳನ್ನು ಮಾರಾಟ ಮಾಡಿದ Maruti Suzuki
ಭಾರತದ ಅತಿದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ (ಎಂಎಸ್ಐಎಲ್) ಕಂಪನಿಯು ತನ್ನ 2021ರ ಅಕ್ಟೋಬರ್ ತಿಂಗಳಿನ ಮಾರಾಟ ವರದಿಯನ್ನು ಬಹಿರಂಗಪಡಿಸಿದೆ. ಮಾರುತಿ ಸುಜುಕಿ ಕಂಪನಿಯು ಕಳೆದ ತಿಂಗಳು ಒಟ್ಟು 17 ಸಾವಿರಕ್ಕೂ ಹೆಚ್ಚು ಯುನಿಟ್‌ಗಳನ್ನು ಮಾರಾಟ ಮಾಡುವಲ್ಲಿ ಯಶಸ್ವಿಯಾಗಿದೆ.

ಜಪಾನಿನ ಕಾರು ತಯಾರಕ ಕಂಪನಿಯು ಕಳೆದ ತಿಂಗಳು ಎಕ್ಸ್‌ಎಲ್6 ಮತ್ತು ಎರ್ಟಿಗಾದ 17,525 ಯುನಿಟ್‌ಗಳನ್ನು ಮಾರಾಟ ಮಾಡಿತು, ಇದರಲ್ಲಿ ಎರ್ಟಿಗಾದ 12,923 ಯುನಿಟ್‌ಗಳು ಮತ್ತು ಮಾರುತಿ ಎಕ್ಸ್‌ಎಲ್6 ಮಾದರಿಯ 4,602 ಯುನಿಟ್‌ಗಳು ಸೇರಿವೆ. ಮಾರುತಿ ಎಕ್ಸ್‌ಎಲ್6 ಮತ್ತು ಎರ್ಟಿಗಾ ಮಾದರಿಗಳು ತಮ್ಮ ಎಂಪಿವಿ ವಿಭಾಗದಲ್ಲಿ ಪ್ರಾಬಲ್ಯವನ್ನು ಮುಂದುವರೆಸಿದವು ಮಾತ್ರವಲ್ಲದೆ, ಮಾರುತಿ ಸುಜುಕಿಯು ದೇಶದ ಅತ್ಯುತ್ತಮ-ಮಾರಾಟದ ಕಾರು ತಯಾರಕರಾಗಿ ತನ್ನ ಸ್ಥಾನವನ್ನು ಉಳಿಸಿಕೊಳ್ಳಲು ಸಹಾಯ ಮಾಡಿತು.

ಮಾರುತಿ ಸುಜುಕಿ ಇಂಡಿಯಾ ಕಂಪನಿಯು ಎಕ್ಸ್‌ಎಲ್6 ಮತ್ತು ಎರ್ಟಿಗಾ ಎಂಪಿವಿಗಳನ್ನು ನವೀಕರಿಸಿ ಹೆಚ್ಚು ಪ್ರೀಮಿಯಂ ಮಾದರಿಗಳಾಗಿ ದೇಶಿಯ ಮಾರುಕಟ್ಟೆಯಲ್ಲಿ 2019ರಲ್ಲಿ ಪರಿಚಯಿಸಿತು. ಇದರಲ್ಲಿ ಎಕ್ಸ್‌ಎಲ್6 ಎಂಪಿವಿಯನ್ನು ಮಾರುತಿ ಸುಜುಕಿಯ ನೆಕ್ಸಾ ಡೀಲರುಗಳ ಮೂಲಕ ಮಾರಾಟ ಮಾಡಲಾಗುತ್ತದೆ.

ಎರ್ಟಿಗಾ ಎಂಪಿವಿಯು ಅರೆನಾ ಡೀಲರುಗಳ ಮೂಲಕ ಮಾರಾಟ ಮಾಡಲಾಗುತ್ತದೆ. ಸದ್ಯ ದೇಶಿಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಮಾರಾಟವಾಗುವ ಎಂಪಿವಿಗಳ ಪಟ್ಟಿಯಲ್ಲಿ ಎರ್ಟಿಗಾ ನಂ.1 ಸ್ಥಾನದಲ್ಲಿದೆ. ಇತ್ತೀಚೆಗೆ ಎಂಪಿವಿಗಳ ವಿಭಾಗದಲ್ಲಿ ಪೈಪೋಟಿ ಹೆಚ್ಚಾಗುತ್ತಿದೆ.

ಇದರಿಂದ ಮಾರುತಿ ಸುಜುಕಿ ಎರ್ಟಿಗಾದಲ್ಲಿ ಹಲವು ನವೀಕರಣಗಳನ್ನು ನಡೆಸುತ್ತಾ ಬಂದಿದೆ. ಇದೀಗ ಮಾರುತಿ ಸುಜುಕಿ ಕಂಪನಿಯು ಎರ್ಟಿಗಾ ಎಂಪಿವಿಯಲ್ಲಿ ಗಮನಾರ್ಹವಾದ ನವೀಕರಣವನ್ನು ನಡೆಸಲು ಸಜ್ಜಾಗಿದೆ. ಮುಂಬರುವ ತಿಂಗಳುಗಳಲ್ಲಿ ಎರ್ಟಿಗಾ ಮತ್ತು ಎಕ್ಸ್‌ಎಲ್6 ಎಂಪಿವಿಗಳು ಹೊಸ ನವೀಕರಣಗಳೊಂದಿಗೆ ದೇಶಿಯ ಮಾರುಕಟ್ಟೆಗೆ ಲಗ್ಗೆಯಿಡಲಿದೆ.

ಈ ಎರಡು ಎಂಪಿವಿಗಳು ಹೆಚ್ಚಿನ ಏರ್‌ಬ್ಯಾಗ್‌ಗಳು, ವೈರ್‌ಲೆಸ್ ಸ್ಮಾರ್ಟ್‌ಫೋನ್ ಚಾರ್ಜಿಂಗ್ ಸೌಲಭ್ಯ, ದೊಡ್ಡ ಟೈರ್ ಮತ್ತು ಇನ್ನಷ್ಟು ಹೆಚ್ಚುವರಿ ಫೀಚರ್ಸ್ ಗಳನ್ನು ಪಡೆಯಬಹುದು. ಇದರ ಬಗ್ಗೆ ಹೆಚ್ಚಿನ ಮಾಹಿತಿಗಳು ಮುಂದಿನ ದಿನಗಳಲ್ಲಿ ಬಹಿರಂಗವಾಗಬಹುದು.

ಸದ್ಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಮಾರುತಿ ಸುಜುಕಿ ಎರ್ಟಿಗಾ ಎಂಪಿವಿ ಮಾದರಿಯ ಬಗ್ಗೆ ಹೇಳುವುದಾದರೆ, ಇದರಲ್ಲಿ ಏಕೈಕ 1.5-ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ, ಈ ಎಂಜಿನ್ 105 ಬಿಹೆಚ್‍ಪಿ ಪವರ್ ಮತ್ತು 138 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತವ ಸಾಮರ್ಥ್ಯವನ್ನು ಹೊಂದಿದೆ,

ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಜೊತೆಗೆ 4-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ನೀಡಲಾಗಿದೆ. ಮಾರುತಿ ಸುಜುಕಿ ಎರ್ಟಿಗಾ ಕಾರಿನಲ್ಲಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಎಲ್‌ಇಡಿ ಟೈಲ್ ಲ್ಯಾಂಪ್‌ಗಳು, 15 ಇಂಚಿನ ವ್ಹೀಲ್ ಗಳು, ಆಂಡ್ರಾಯ್ಡ್ ಆಟೋ ಮತ್ತು ಕಾರ್‌ಪ್ಲೇಯೊಂದಿಗೆ 7 ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿದೆ ಇದರೊಂದಿಗೆ ಪುಶ್-ಬಟನ್ ಸ್ಟಾರ್ಟ್-ಸ್ಟಾಪ್,

ಹಿಂಭಾಗದ ಎಸಿಯೊಂದಿಗೆ ಆಟೋ ಕ್ಲೈಮೇಟ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಕಪ್ ಹೋಲ್ಡರ್ಸ್ ಮತ್ತು ಸ್ಪೀಕರ್ ಆಡಿಯೊ ಸಿಸ್ಟಂ ಅನ್ನು ಒಳಗೊಂಡಿದೆ. ಈ ಮಾರುತಿ ಎರ್ಟಿಗಾ ಎಂಪಿವಿಯಲ್ಲಿ ಸುರಕ್ಷತೆಗಾಗಿ, ಎಂಪಿವಿ ಇಬಿಡಿ, ರಿಯರ್ ಪಾರ್ಕಿಂಗ್ ಸೆನ್ಸರ್‌ಗಳು, ಇಎಸ್‌ಪಿ, ಹಿಲ್ ಹೋಲ್ಡ್ ಕಂಟ್ರೋಲ್, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ, ಡ್ಯುಯಲ್ ಫ್ರಂಟಲ್ ಏರ್‌ಬ್ಯಾಗ್ ಮತ್ತು ಐಎಸ್‌ಒಫಿಕ್ಸ್ ಚೈಲ್ಡ್ ಸೀಟ್ ಆಂಕಾರೇಜ್‌ಗಳೊಂದಿಗೆ ಎಬಿಎಸ್ ಅನ್ನು ಹೊಂದಿದೆ.

ಇನ್ನು ಮಾರುತಿ ಸುಜುಕಿ ಎಕ್ಸ್‌ಎಲ್6 ಎಂಪಿವಿಯ ಬಗ್ಗೆ ಹೇಳುವುದಾದರೆ, ಇದರಲ್ಲಿ 1.5-ಲೀಟರ್ ಇನ್-ಲೈಮ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 105 ಬಿಹೆಚ್‍ಪಿ ಪವರ್ ಮತ್ತು 138 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು ಇದರಲ್ಲಿ ಮಾರುತಿಯ ಸ್ಮಾರ್ಟ್‌ಪ್ಲೇ ಸ್ಟುಡಿಯೊದೊಂದಿಗೆ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಅನ್ನು ಸ್ಥಾಪಿಸಲಾಗಿದೆ. XL6 6 ಆಸನಗಳ MPV ಮತ್ತು ಎರಡನೇ ಸಾಲಿನ ಪ್ರಯಾಣಿಕರಿಗೆ ಆರ್ಮ್‌ರೆಸ್ಟ್‌ನೊಂದಿಗೆ ಕ್ಯಾಪ್ಟನ್ ಸೀಟ್‌ಗಳೊಂದಿಗೆ ಬರುತ್ತದೆ. ಎಲ್ಲಾ ಆಸನಗಳನ್ನು ಕಪ್ಪು ಚರ್ಮದ ಹೊದಿಕೆಯಿಂದ ಸುತ್ತಿರುವುದು ಪ್ರೀಮಿಯಂ ನೋಟವನ್ನು ನೀಡುತ್ತದೆ. ಇತರ ವೈಶಿಷ್ಟ್ಯಗಳು ಮಲ್ಟಿ-ಫಂಕ್ಷನ್ ಸ್ಟೀರಿಂಗ್ ವೀಲ್, ಆಟೋಮ್ಯಾಟಿಕ್ ಕ್ಲೈಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್, ಸ್ಮಾರ್ಟ್ ಹೈಬ್ರಿಡ್ ಸಿಸ್ಟಮ್ ಇತ್ಯಾದಿ.

ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಮತ್ತು 4-ಸ್ಪೀಡ್ ಟಾರ್ಕ್ ಕರ್ನವಾಟರ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ನೀಡಿದೆ. ಮೈಲ್ಡ್-ಹೈಬ್ರಿಡ್ ಸಿಸ್ಟಂ ಮತ್ತು ಐಡಲ್ ಸ್ಟಾರ್ಟ್-ಸ್ಟಾಪ್ ಕಾರ್ಯಗಳು ಎಂಪಿವಿಯಲ್ಲಿ ಸ್ಯಾಂಡರ್ಡ್ ಆಗಿ ಲಭ್ಯವಿದೆ.

ಮಾರುತಿ ಸುಜುಕಿ ಕಂಪನಿಯ ತನ್ನ ಸರಣಿಯಲ್ಲಿರುವ ಎಲ್ಲಾ ಡೀಸೆಲ್ ಕಾರುಗಳನ್ನು ಸ್ಥಗಿತಗೊಳಿಸಿತ್ತು. ಆದರೆ ಎಂಪಿವಿ ವಿಭಾಗದ ಎರ್ಟಿಗಾ ಮತ್ತು ಎಕ್ಸ್‌ಎಲ್6 ಮಾದರಿಗಳ ಮಾರಾಟದಲ್ಲಿ ಹೆಚ್ಚಿಸಲು ಮುಂದಿನ ಎರಡು ವರ್ಷಗಳಲ್ಲಿ ಈ ಎರಡು ಮಾದರಿಗಳನ್ನು ಡೀಸೆಲ್ ಎಂಜಿನ್ ಆಯ್ಕೆಗಳಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಗಳಿದೆ. ಇನ್ನು ಈ ಹಬ್ಬದ ಸೀಸನ್ ನಲ್ಲಿ ಹೆಚ್ಚಿನ ಎಂಪಿವಿಗಳು ಮಾರಾಟವಾಗುವ ಸಾಧ್ಯತೆಗಳಿದೆ,


Click it and Unblock the Notifications