ಕರೋನಾ ಭೀತಿಯ ನಡುವೆಯೂ ಏಪ್ರಿಲ್ ತಿಂಗಳಿನಲ್ಲಿ ಭರ್ಜರಿಯಾಗಿ ಮಾರಾಟವಾಯ್ತು ಮಾರುತಿ ಎಸ್-ಪ್ರೆಸ್ಸೊ

ಎಂಟ್ರಿ ಲೆವೆಲ್ ಮೈಕ್ರೊ ಎಸ್‌ಯುವಿಯಾದ ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಭಾರತೀಯ ಮಾರುಕಟ್ಟೆಯಲ್ಲಿ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಒಂದಾಗಿದೆ. ಈ ಮಾರುತಿ ಎಸ್-ಪ್ರೆಸ್ಸೊ ಕಾರು ಕಡಿಮೆ ಅವಧಿಯಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಹೆಚ್ಚಿನ ಜನಪ್ರಿಯತೆಯನ್ನು ಗಳಿಸಿದೆ.

ಕರೋನಾ ಭೀತಿಯ ನಡುವೆಯೂ ಏಪ್ರಿಲ್ ತಿಂಗಳಿನಲ್ಲಿ ಭರ್ಜರಿಯಾಗಿ ಮಾರಾಟವಾಯ್ತು ಮಾರುತಿ ಎಸ್-ಪ್ರೆಸ್ಸೊ

2021ರ ಏಪ್ರಿಲ್ ತಿಂಗಳಿನಲ್ಲಿ ಮಾರುತಿ ಸುಜುಕಿ ಎಸ್-ಪ್ರೆಸ್ಸೊದ 7,737 ಯುನಿಟ್ ಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇದೇ ವರ್ಷದ ಮಾರ್ಚ್ ತಿಂಗಳಿನಲ್ಲಿ ಎಸ್-ಪ್ರೆಸ್ಸೋದ 7,252 ಯುನಿಟ್‌ಗಳು ಮಾರಾಟವಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ 6.7 ರಷ್ಟು ಬೆಳವಣಿಗೆಯನು ಕಂಡಿದೆ. ಕೊರೋನಾ ಆತಂಕ ಮತ್ತು ದೇಶದ ಹಲವು ಕಡೆಗಳಲ್ಲಿ ಲಾಕ್ ಡೌನ್ ಕೂಡ ಜಾರಿಯಲಿತ್ತು. ಇದರ ನಡುವೆ ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಉತ್ತಮವಾಗಿ ಮಾರಾಟವಾಗಿದೆ.

ಕರೋನಾ ಭೀತಿಯ ನಡುವೆಯೂ ಏಪ್ರಿಲ್ ತಿಂಗಳಿನಲ್ಲಿ ಭರ್ಜರಿಯಾಗಿ ಮಾರಾಟವಾಯ್ತು ಮಾರುತಿ ಎಸ್-ಪ್ರೆಸ್ಸೊ

ಎಂಟ್ರಿ ಲೆವೆಲ್ ಈ ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಕಾರಿನ ಆರಂಭಿಕ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.3.78 ಲಕ್ಷಗಳಾಗಿದೆ. ಮಾರುತಿ ಸುಜುಕಿ ಕಂಪನಿಯು ಸಾಮಾನ್ಯ ಜನರಿಗಾಗಿ ಕೈಗೆಟಕುವ ದರದಲ್ಲಿ ಈ ಮಿನಿ ಎಸ್‍‍ಯುವಿಯನ್ನು ಬಿಡುಗಡೆಗೊಳಿಸಿತ್ತು. ಭಾರತೀಯ ಮಾರುಕಟ್ಟೆಯಲ್ಲಿ ಮಾರುತಿ ಎಸ್-ಪ್ರೆಸ್ಸೊ ಕಾರಿಗೆ ಉತ್ತಮ ಬೇಡಿಕೆಯನ್ನು ಪಡೆದುಕೊಂಡಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಕರೋನಾ ಭೀತಿಯ ನಡುವೆಯೂ ಏಪ್ರಿಲ್ ತಿಂಗಳಿನಲ್ಲಿ ಭರ್ಜರಿಯಾಗಿ ಮಾರಾಟವಾಯ್ತು ಮಾರುತಿ ಎಸ್-ಪ್ರೆಸ್ಸೊ

ಎಸ್-ಪ್ರೆಸ್ಸೊ ಮಿನಿ ಎಸ್‍ಯುವಿ 998 ಸಿಸಿ ಪೆಟ್ರೋಲ್ ಎಂಜಿನ್‌ ಅನ್ನು ಹೊಂದಿದ್ದು, ಇದು ‌67 ಬಿಎಚ್‌ಪಿ ಪವರ್ ಮತ್ತು 90 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಆರಂಭಿಕ ಕಾರು ಮಾದರಿಯಲ್ಲಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು ಹೈ ಎಂಡ್ ಮಾದರಿಯಲ್ಲಿ 5-ಸ್ಪೀಡ್ ಆಟೋ ಗೇರ್ ಶಿಫ್ಟ್(ಎಜಿಎಸ್) ಆಯ್ಕೆಯನ್ನು ನೀಡಲಾಗಿದೆ.

ಕರೋನಾ ಭೀತಿಯ ನಡುವೆಯೂ ಏಪ್ರಿಲ್ ತಿಂಗಳಿನಲ್ಲಿ ಭರ್ಜರಿಯಾಗಿ ಮಾರಾಟವಾಯ್ತು ಮಾರುತಿ ಎಸ್-ಪ್ರೆಸ್ಸೊ

ಮಾರುತಿ ಎಸ್-ಪ್ರೆಸ್ಸೊ ಮೈಕ್ರೋ ಎಸ್‌ಯುವಿ ವಿನ್ಯಾಸದೊಂದಿಗೆ ಆಕರ್ಷಕ ಗ್ರೌಂಡ್ ಕ್ಲಿಯೆರೆನ್ಸ್, 14-ಇಂಚಿನ ಸ್ಟೀಲ್ ವೀಲ್ಹ್, ಸ್ಲಿಕ್ ಫ್ರಂಟ್ ಗ್ರಿಲ್, ಕ್ರೋಮ್ ಇನ್ಸರ್ಟ್, ಹೆಡ್‌ಲ್ಯಾಂಪ್, ವಿಸ್ತರಿತ ಸೆಂಟರ್ ಏರ್ ಇನ್‌ಟೆಕ್, ಸಿ ಶೇಫ್ ಟೈಲ್‌ಗೆಟ್ ಸೌಲಭ್ಯವು ಕಾರಿನ ಅಂದಕ್ಕೆ ಮತ್ತಷ್ಟು ಮೆರಗು ನೀಡುತ್ತವೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಕರೋನಾ ಭೀತಿಯ ನಡುವೆಯೂ ಏಪ್ರಿಲ್ ತಿಂಗಳಿನಲ್ಲಿ ಭರ್ಜರಿಯಾಗಿ ಮಾರಾಟವಾಯ್ತು ಮಾರುತಿ ಎಸ್-ಪ್ರೆಸ್ಸೊ

ಎಸ್-ಪ್ರೆಸ್ಸೊ ಕಾರಿನ ಇಂಟಿರಿಯರ್ ನಲ್ಲಿ ಹಲವು ಪ್ರೀಮಿಯಂ ಫೀಚರ್ಸ್‌ಗಳಿದ್ದು, ಬಾಡಿ ಕಲರ್ ಡ್ಯಾಶ್‌ಬೋರ್ಡ್, ಸೆಂಟರ್ ಕನ್ಸೊಲ್‌ನಲ್ಲಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಟ್ಯಾಕೊ ಮೀಟರ್, ಇನ್‌ಸ್ಟ್ರುಮೆಂಟ್ ಡಿಸ್‌ಪ್ಲೇ, ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಸ್ಮಾರ್ಟ್‌ಪ್ಲೇ ಸ್ಟುಡಿಯೋ ಸಿಸ್ಟಂ,ಆ್ಯಪಲ್ ಕಾರ್ ಪ್ಲೇ/ಆಂಡ್ರಾಯ್ಡ್ ಆಟೋ, ಆರೇಂಜ್ ಕಲರ್ ಆಕ್ಸೆಂಟ್ ಸೌಲಭ್ಯವಿದೆ.

ಕರೋನಾ ಭೀತಿಯ ನಡುವೆಯೂ ಏಪ್ರಿಲ್ ತಿಂಗಳಿನಲ್ಲಿ ಭರ್ಜರಿಯಾಗಿ ಮಾರಾಟವಾಯ್ತು ಮಾರುತಿ ಎಸ್-ಪ್ರೆಸ್ಸೊ

ಇದರಲ್ಲಿ ಕೀ ಲೆಸ್ ಎಂಟ್ರಿ, ಬ್ಲೂ‌ಥೂತ್ ಕನೆಕ್ಟಿವಿಟಿ, ಪವರ್ ವಿಂಡೋ, ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಸ್ಪೀಡ್ ವಾರ್ನಿಂಗ್ ಸಿಸ್ಟಂ, ರೇರ್ ಪಾರ್ಕಿಂಗ್ ಸೆನ್ಸಾರ್ ಸೇರಿದಂತೆ ಹಲವು ಫೀಚರ್ಸ್‌ಗಳನ್ನು ನೀಡಲಾಗಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಕರೋನಾ ಭೀತಿಯ ನಡುವೆಯೂ ಏಪ್ರಿಲ್ ತಿಂಗಳಿನಲ್ಲಿ ಭರ್ಜರಿಯಾಗಿ ಮಾರಾಟವಾಯ್ತು ಮಾರುತಿ ಎಸ್-ಪ್ರೆಸ್ಸೊ

ಮಾರುತಿ ಎಸ್-ಪ್ರೆಸ್ಸೊ ಕಾರು ಸದ್ಯ ಪ್ರಮುಖ ಆರು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ ವಿವಿಧ ವೆರಿಯೆಂಟ್ ಆಯ್ಕೆ ಮಾಡಬಹುದಾಗಿದೆ.

ಕರೋನಾ ಭೀತಿಯ ನಡುವೆಯೂ ಏಪ್ರಿಲ್ ತಿಂಗಳಿನಲ್ಲಿ ಭರ್ಜರಿಯಾಗಿ ಮಾರಾಟವಾಯ್ತು ಮಾರುತಿ ಎಸ್-ಪ್ರೆಸ್ಸೊ

ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಗ್ರಾಹಗರನ್ನು ಸೆಳೆಯುಯಲ್ಲಿ ಉತ್ತಮವಾಗಿ ಯಶಸ್ವಿಯಾಗಿದೆ. ಒಟ್ಟಿನಲ್ಲಿ ಕೊರೋನಾ ಆತಂಕ ನಡುವೆಯು ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಕಾರು ಉತ್ತಮವಾಗಿ ಮಾರಾಟವಾಗಿದೆ.

Most Read Articles

Kannada
English summary
Over 7,000 Units Of Maruti Suzuki S-Presso Sold In April 2021. Read In Kannada.
Story first published: Saturday, May 22, 2021, 19:24 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X