ಹೊಸ ಎಂಜಿನ್ ಪ್ರೇರಿತ 2021ರ ಮಾರುತಿ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಬಿಡುಗಡೆ

ಮಾರುತಿ ಸುಜುಕಿ ಕಂಪನಿಯು ತನ್ನ ಜನಪ್ರಿಯ ಹ್ಯಾಚ್‌ಬ್ಯಾಕ್ ಕಾರು ಮಾದರಿಯಾದ ಸ್ವಿಫ್ಟ್ 2021ರ ಆವೃತ್ತಿಯನ್ನು ಬಿಡುಗಡೆ ಮಾಡಿದ್ದು, ಹೊಸ ಕಾರು ಉನ್ನತೀಕರಿಸಿದ ಎಂಜಿನ್ ಸೇರಿದಂತೆ ಪ್ರಮುಖ ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದೆ.

ಹೊಸ ಎಂಜಿನ್ ಪ್ರೇರಿತ 2021ರ ಮಾರುತಿ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಬಿಡುಗಡೆ

ಹ್ಯಾಚ್‌ಬ್ಯಾಕ್ ಕಾರುಗಳ ಮಾರಾಟದಲ್ಲಿ ಕಳೆದ ಒಂದು ದಶಕದಿಂದಲೂ ನಂ.1 ಸ್ಥಾನ ಕಾಯ್ದುಕೊಂಡು ಬಂದಿರುವ ಸ್ವಿಫ್ಟ್ ಕಾರು ಮಾದರಿಯು ಗ್ರಾಹಕರ ಬೇಡಿಕೆಯೆಂತೆ ನಿರಂತರವಾಗಿ ಹಲವಾರು ಬದಲಾವಣೆಗಳೊಂದಿಗೆ ಬೇಡಿಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಮಾರುತಿ ಸುಜುಕಿ ಕಂಪನಿಯು ಇದೀಗ ಹೊಸ ಕಾರಿನಲ್ಲಿ ಇದೀಗ ಪ್ರಮುಖ ಬದಲಾಣೆಗಳೊಂದಿಗೆ 2021ರ ಮಾದರಿಯನ್ನು ಮಾರುಕಟ್ಟೆಗೆ ಪರಿಚಯಿಸಿದೆ.

ಹೊಸ ಎಂಜಿನ್ ಪ್ರೇರಿತ 2021ರ ಮಾರುತಿ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಬಿಡುಗಡೆ

ಹೊಸ ಎಮಿಷನ್ ಜಾರಿ ನಂತರ ಪೆಟ್ರೋಲ್ ಎಂಜಿನ್‌ನಲ್ಲಿ ಮಾತ್ರ ಮಾರಾಟಗೊಳ್ಳುತ್ತಿರುವ ಸ್ವಿಫ್ಟ್ ಕಾರು ಮಾದರಿಯು ಕೇವಲ ಪೆಟ್ರೋಲ್ ಮಾದರಿಯ ಮಾರಾಟದಲ್ಲೂ ಸಾಕಷ್ಟು ಬೇಡಿಕೆ ಪಡೆದುಕೊಂಡಿದ್ದು, 2021ರ ಮಾದರಿಯು ಕೆಲವು ಬದಲಾವಣೆಗಳೊಂದಿಗೆ ಖರೀದಿಗೆ ಲಭ್ಯವಿದೆ.

ಹೊಸ ಎಂಜಿನ್ ಪ್ರೇರಿತ 2021ರ ಮಾರುತಿ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಬಿಡುಗಡೆ

2021ರ ಸ್ಪಿಫ್ಟ್ ಕಾರು ಮಾದರಿಯು ಎಲ್ಎಕ್ಸ್ಐ, ವಿಎಕ್ಸ್ಐ, ಜೆಡ್ಎಕ್ಸ್ಐ ಮತ್ತು ಜೆಡ್ಎಕ್ಸ್ಐ ಪ್ಲಸ್ ಎನ್ನುವ ಪ್ರಮುಖ ನಾಲ್ಕು ವೆರಿಯೆಂಟ್ ಪಡೆದುಕೊಂಡಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.73 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 8.41 ಲಕ್ಷ ಬೆಲೆ ಹೊಂದಿದೆ.

ವೆರಿಯೆಂಟ್ ಮ್ಯಾನುವಲ್ ಆಟೋಮ್ಯಾಟಿಕ್
ಎಲ್ಎಕ್ಸ್ಐ ರೂ. 5.73 ಲಕ್ಷ -
ವಿಎಕ್ಸ್ಐ ರೂ. 6.36 ಲಕ್ಷ ರೂ. 6.86 ಲಕ್ಷ
ಜೆಡ್ಎಕ್ಸ್ಐ ರೂ. 6.99 ಲಕ್ಷ ರೂ. 7.49 ಲಕ್ಷ
ಜೆಡ್ಎಕ್ಸ್ಐ ಪ್ಲಸ್ ರೂ. 7.77 ಲಕ್ಷ ರೂ. 8.27 ಲಕ್ಷ
ಜೆಡ್ಎಕ್ಸ್ಐ ಪ್ಲಸ್ ಡ್ಯುಯಲ್ ಟೋನ್ ರೂ. 7.91 ಲಕ್ಷ ರೂ. 8.41 ಲಕ್ಷ
ಹೊಸ ಎಂಜಿನ್ ಪ್ರೇರಿತ 2021ರ ಮಾರುತಿ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಬಿಡುಗಡೆ

ಹಳೆಯ ಮಾದರಿಗಿಂತಲೂ ಬಲಿಷ್ಠ ಎಂಜಿನ್ ಆಯ್ಕೆಯೊಂದಿಗೆ ಕಾರಿನ ವಿನ್ಯಾಸದಲ್ಲಿ ಪ್ರಮುಖ ಬದಲಾವಣೆಗಳನ್ನು ಪಡೆದುಕೊಂಡಿರುವ ಹೊಸ ಕಾರು 2020ರ ಆವೃತ್ತಿಗಿಂತ ರೂ. 15 ಸಾವಿರದಿಂದ ರೂ. 24 ಸಾವಿರದಷ್ಟು ದುಬಾರಿಯಾಗಿದ್ದು, ಮುಂಭಾಗದಲ್ಲಿ ಕ್ರೋಮ್ ಆಕ್ಸೆಂಟ್ ಹೊಂದಿರುವ ಆಕರ್ಷಕ ಕ್ರಾಸ್ ಮೆಶ್ ಗ್ರಿಲ್ ಮತ್ತು ಗ್ರಿಲ್ ಸುತ್ತಲು ನೀಡಲಾಗಿರುವ ಕಪ್ಪು ಪಟ್ಟಿಯು ಕಾರಿನ ಹೊಸ ಲುಕ್ ನೀಡಿದೆ.

ಹೊಸ ಎಂಜಿನ್ ಪ್ರೇರಿತ 2021ರ ಮಾರುತಿ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಬಿಡುಗಡೆ

ಗ್ರಿಲ್ ಡಿಸೈನ್ ಹೊರತುಪಡಿಸಿ ಹೊಸ ಕಾರಿನ ಹೊರಭಾಗದ ವಿನ್ಯಾಸಗಳನ್ನು ಈ ಹಿಂದಿನ ಮಾದರಿಯಂತೆಯೇ ಮುಂದುವರಿಸಲಾಗಿದ್ದು, ಒಳಭಾಗದ ತಾಂತ್ರಿಕ ಅಂಶಗಳಲ್ಲಿ ಕೆಲವು ಬದಲಾವಣೆಗಳನ್ನು ಪರಿಚಯಿಸಲಾಗಿದೆ.

ಹೊಸ ಎಂಜಿನ್ ಪ್ರೇರಿತ 2021ರ ಮಾರುತಿ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಬಿಡುಗಡೆ

ಹೊಸ ಸ್ವಿಫ್ಟ್ ಮಾದರಿಯ ವಿಎಕ್ಸ್ಐ ವೆರಿಯೆಂಟ್‌ನಲ್ಲಿ ಈ ಬಾರಿ ಟಚ್ ಸ್ಕ್ರೀನ್ ಹೊಂದಿರುವ ಹೊಸ ಆಡಿಯೋ ಹೆಡ್ ಯುನಿಟ್ ನೀಡಲಾಗಿದ್ದು, ಟಾಪ್ ಎಂಡ್ ಮಾದರಿಯಲ್ಲಿ ಕ್ರೂಸ್ ಕಂಟ್ರೋಲ್, ವಿವಿಧ ಬಣ್ಣಗಳನ್ನು ಮಲ್ಟಿ ಇನ್ಪಾರ್ಮೆಷನ್ ಡಿಸ್‌ಪ್ಲೇ ಮತ್ತು ಆಟೋ ಫ್ಲೋಡಿಂಗ್ ಹೊಂದಿರುವ ರಿಯಲ್ ವ್ಯೂ ಮಿರರ್ ನೀಡಲಾಗಿದೆ.

ಹೊಸ ಎಂಜಿನ್ ಪ್ರೇರಿತ 2021ರ ಮಾರುತಿ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಬಿಡುಗಡೆ

ಇನ್ನುಳಿದಂತೆ ಹಳೆಯ ಮಾದರಿಯಲ್ಲಿರುವಂತೆ ಎಲ್ಇಡಿ ಹೆಡ್‌ಲ್ಯಾಂಪ್ಸ್, 7.0-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಕೀ ಲೆಸ್ ಎಂಟ್ರಿ, ಆಟೋ ಕ್ಲೈಮೆಟ್ ಕಂಟ್ರೋಲ್, ಲೈವ್ ಟ್ರಾಫಿಕ್ ಅಪ್‌ಡೆಟ್ ನೀಡುವ ಸ್ಮಾರ್ಟ್ ಸ್ಟುಡಿಯೋ ಆ್ಯಪ್ ಕನೆಕ್ಟ್ ಸೌಲಭ್ಯಗಳಿದ್ದು, ಟಾಪ್ ಎಂಡ್ ಮಾದರಿಯಲ್ಲಿ ಈ ಬಾರಿ ಮೂರು ಹೊಸ ಡ್ಯುಯಲ್ ಟೋನ್ ಬಣ್ಣಗಳ ಆಯ್ಕೆ ನೀಡಲಾಗಿದೆ.

ಹೊಸ ಎಂಜಿನ್ ಪ್ರೇರಿತ 2021ರ ಮಾರುತಿ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಬಿಡುಗಡೆ

ಎಂಜಿನ್ ಮತ್ತು ಪರ್ಫಾಮೆನ್ಸ್

2021ರ ಸ್ವಿಫ್ಟ್ ಕಾರಿನ ಪ್ರಮುಖ ಬದಲಾವಣೆಯೆಂದರೆ ಅದು ಹೊಸದಾಗಿ ಜೋಡಣೆ ಮಾಡಲಾಗಿರುವ 1.2-ಲೀಟರ್ ಡ್ಯುಯಲ್‌ಜೆಟ್ ಪೆಟ್ರೋಲ್ ಎಂಜಿನ್ ಮಾದರಿಯು ಹೊಸ ಕಾರಿನ ಪ್ರಮುಖ ಆಕರ್ಷಣೆಯಾಗಲಿದ್ದು, ಈ ಹಿಂದಿನ 83-ಬಿಎಚ್‌ಪಿ ಪ್ರೇರಿತ 1.2-ಲೀಟರ್ ಕೆ12 ಪೆಟ್ರೋಲ್ ಮಾದರಿಗಿಂತಲೂ ಉತ್ತಮ ಕಾರ್ಯಕ್ಷಮತೆ ಮತ್ತು ಹೆಚ್ಚು ಇಂಧನ ದಕ್ಷತೆ ಹೊಂದಿರುವ ಡ್ಯುಯಲ್‌ಜೆಟ್ ಎಂಜಿನ್ ಮಾದರಿಯು ಸ್ವಿಫ್ಟ್ ಕಾರಿನ ಆಯ್ಕೆಯನ್ನು ಮತ್ತಷ್ಟು ಹೆಚ್ಚಿಸಲಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಹೊಸ ಎಂಜಿನ್ ಪ್ರೇರಿತ 2021ರ ಮಾರುತಿ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಬಿಡುಗಡೆ

ಮಾರುತಿ ಸುಜುಕಿಯು ಹೊಸ 1.2-ಲೀಟರ್ ಡ್ಯುಯಲ್‌ಜೆಟ್ ಪೆಟ್ರೋಲ್ ಎಂಜಿನ್ ಅನ್ನು ಬಲೆನೊ ಮತ್ತು ಡಿಜೈರ್ ನಂತರ ಸ್ವಿಫ್ಟ್ ಮಾದರಿಯಲ್ಲಿ ಜೋಡಣೆ ಮಾಡಿದ್ದು, ಹೊಸ ಎಂಜಿನ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಎಎಂಟಿ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 90-ಬಿಎಚ್‌ಪಿ, 113-ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಹೊಸ ಎಂಜಿನ್ ಪ್ರೇರಿತ 2021ರ ಮಾರುತಿ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಬಿಡುಗಡೆ

ಈ ಮೂಲಕ ಹೊಸ ಸ್ವಿಫ್ಟ್ ಮಾದರಿಯು ಪ್ರತಿ ಲೀಟರ್ ಪೆಟ್ರೋಲ್‌ಗೆ ಮ್ಯಾನುವಲ್ ಮಾದರಿಯು 23.20 ಕಿ.ಮೀ ಮತ್ತು ಆಟೋಮ್ಯಾಟಿಕ್ ಆವೃತ್ತಿಯು 23.76 ಕಿ.ಮೀ ಮೈಲೇಜ್ ನೀಡಲಿದ್ದು, ಕೆ12 ಮಾದರಿಯು ಪ್ರತಿ ಲೀಟರ್ ಪೆಟ್ರೋಲ್‌ಗೆ ಗರಿಷ್ಠ 21.21 ಕಿ.ಮೀ ಮೈಲೇಜ್ ಹೊಂದಿತ್ತು.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಹೊಸ ಎಂಜಿನ್ ಪ್ರೇರಿತ 2021ರ ಮಾರುತಿ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಬಿಡುಗಡೆ

ಇದೀಗ ಹೊಸ ಎಂಜಿನ್ ಮೂಲಕ ಉತ್ತಮ ಪರ್ಫಾಮೆನ್ಸ್‌ನೊಂದಿಗೆ ಅತ್ಯಧಿಕ ಮೈಲೇಜ್ ಪಡೆದುಕೊಂಡಿರುವ ಹೊಸ ಸ್ವಿಫ್ಟ್ ಕಾರು ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಹ್ಯುಂಡೈ ಗ್ರಾಂಡ್ ಐ10 ನಿಯೋಸ್, ಫೋರ್ಡ ಫಿಗೊ ಕಾರು ಮಾದರಿಗಳಿಗೆ ಮತ್ತಷ್ಟು ಪೈಟೋಟಿ ನೀಡಲಿದೆ.

More from DriveSpark

Article Published On: Wednesday, February 24, 2021, 13:22 [IST]
English summary
Maruti Suzuki Swift Facelift Launched In India. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+