23 ಲಕ್ಷ ಮಾರಾಟದ ಗಡಿ ತಲುಪಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ ಸ್ವಿಫ್ಟ್

ಎಷ್ಟೇ ಅತ್ಯಾಧುನಿಕ ಕಾರುಗಳು ಬಿಡುಗಡೆಯಾದರೂ ಮಾರುತಿ ಸ್ವೀಫ್ ಕಳೆದ 15 ವರ್ಷದಿಂದ ಭಾರತದಲ್ಲಿ ಹೆಚ್ಚು ಮಾರಾಟವಾಗುವ ಮಾದರಿಗಳಲ್ಲಿ ಒಂದಾಗಿದೆ. ಇದೀಗ ಈ ಜನಪ್ರಿಯ ಮಾರುತಿ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್ 23 ಲಕ್ಷ ಯುನಿಟ್ ಮಾರಾಟವಾಗಿ ಹೊಸ ಮೈಲಿಗಲ್ಲು ಸಾಧಿಸಿದೆ.

23 ಲಕ್ಷ ಮಾರಾಟದ ಗಡಿ ತಲುಪಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ ಸ್ವಿಫ್ಟ್

ಮಾರುತಿ ಸುಜುಕಿ ಸ್ವಿಫ್ಟ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಮೊದಲ ಬಾರಿಗೆ 2005ರಲ್ಲಿ ಬಿಡುಗಡೆಗೊಂಡಿತ್ತು. ಮಾರುತಿ ಸ್ವಿಫ್ಟ್ ದೀರ್ಘಕಾಲದಿಂದಲೇ ಭಾರತದಲ್ಲಿ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಒಂದಾಗಿದೆ. ಪ್ರಸ್ತುತ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಸ್ವಿಫ್ಟ್ ಕಾರು 2018ರ ಆಟೋ ಎಕ್ಸ್‌ಪೋದಲ್ಲಿ ಪರಿಚಯಿಸಲಾಯಿತು.

23 ಲಕ್ಷ ಮಾರಾಟದ ಗಡಿ ತಲುಪಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ ಸ್ವಿಫ್ಟ್

ಹೊಸ ಮೈಲಿಗಲ್ಲು ಸಾಧಿಸಿರುವುದರ ಕುರಿತು ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್‌ನ ಕಾರ್ಯನಿರ್ವಾಹಕ ನಿರ್ದೇಶಕ (ಮಾರ್ಕೆಟಿಂಗ್ ಮತ್ತು ಸೇಲ್ಸ್) ಶಶಾಂಕ್ ಶ್ರೀವಾಸ್ತವ ಅವರು ಮಾತನಾಡಿ, ಮಾರುತಿ ಸುಜುಕಿ ಸ್ವಿಫ್ಟ್ ಕಳೆದ 15 ವರ್ಷಗಳಿಂದ ದೇಶದಲ್ಲಿ ಹೆಚ್ಚು ಮಾರಾಟವಾದ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಗಿದ್ದು, ಇದು 2.3 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರನ್ನು ಹೊಂದಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

23 ಲಕ್ಷ ಮಾರಾಟದ ಗಡಿ ತಲುಪಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ ಸ್ವಿಫ್ಟ್

ಕರೋನಾ ಭೀತಿಯ ನಡುವೆ 2020ರ ವರ್ಷದಲ್ಲಿ ಸ್ವಿಫ್ಟ್ 160,700 ಯುನಿಟ್‌ಗಳು ಮಾರಾಟವಾಗಿವೆ. ಗ್ರಾಹಕರ ಬೆಂಬಲ ಮತ್ತು ಸ್ವಿಫ್ಟ್ ಕಾರಿನ ಮೇಲಿನ ನಂಬಿಕೆಗಾಗಿ ಧನ್ಯವಾದ ಹೇಳಲು ನಾವು ಈ ಅವಕಾಶವನ್ನು ಪಡೆದುಕೊಳ್ಳುತ್ತೇವೆ. ನಿರಂತರ ಗ್ರಾಹಕ ಬೆಂಬಲದೊಂದಿಗೆ ಸ್ವಿಫ್ಟ್ ಭವಿಷ್ಯದಲ್ಲಿ ಇನ್ನೂ ಹಲವು ಮೈಲಿಗಲ್ಲುಗಳನ್ನು ಯಶಸ್ವಿಯಾಗಿ ಸಾಧಿಸುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

23 ಲಕ್ಷ ಮಾರಾಟದ ಗಡಿ ತಲುಪಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ ಸ್ವಿಫ್ಟ್

ಇನ್ನು ಭಾರತದಲ್ಲಿ ಮಾರುತಿ ಸುಜುಕಿ ಈ ಹೊಸ ಸ್ವಿಫ್ಟ್ ಫೇಸ್‌ಲಿಫ್ಟ್ ಕಾರನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ಹೊಸ ಸ್ವಿಫ್ಟ್ ಫೇಸ್‌ಲಿಫ್ಟ್ ಕಾರನ್ನು ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಗೊಳಿಸುವ ನಿರೀಕ್ಷೆಗಳಿದೆ. ಜನಪ್ರಿಯ ಹ್ಯಾಚ್‌ಬ್ಯಾಕ್ ಸ್ವಿಫ್ ಕಾರನ್ನು ಮಿಡ್-ಲೈಫ್ ನವೀಕರಣವನ್ನು ಮಾಡಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ ಸ್ವಿಫ್ಟ್ ಕಾರಿಗೆ ಹೋಲಿಸಿದರೆ ಮುಂಭಾಗದಲ್ಲಿ ಕೆಲವು ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ.

MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

23 ಲಕ್ಷ ಮಾರಾಟದ ಗಡಿ ತಲುಪಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ ಸ್ವಿಫ್ಟ್

ಹೊಸ ರೇಡಿಯೇಟರ್ ಗ್ರಿಲ್ ವಿನ್ಯಾಸವನ್ನು ಹೊಂದಿದೆ ಮತ್ತು ಬ್ಲ್ಯಾಕ್ ರೂಫ್ ಮತ್ತು ಡ್ಯುಯಲ್ ಟೋನ್ ಬಣ್ಣಗಳ ಅಂಶಗಳನ್ನು ಹೊಂದಿರುತ್ತದೆ. ಗ್ಲೋಬಲ್-ಸ್ಪೆಕ್ ಕಾರಿನ ಆಧಾರದ ಮೇಲೆ, ಸ್ವಿಫ್ಟ್ ಡೈಮಂಡ್-ಸ್ಟಡ್-ಪ್ಯಾಟರ್ನ್ ಮೆಶ್ ಗ್ರಿಲ್ ಪಡೆಯುವ ಸಾಧ್ಯತೆಯಿದೆ.

23 ಲಕ್ಷ ಮಾರಾಟದ ಗಡಿ ತಲುಪಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ ಸ್ವಿಫ್ಟ್

ಚಿತ್ರಗಳಲ್ಲಿ 2021ರ ಮಾರುತಿ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್ ಡ್ಯುಯಲ್-ಟೋನ್ ಅಲಾಯ್ ವ್ಹೀಲ್‌ಗಳನ್ನು ಹೊಂದಿದೆ. ಉಳಿದಂತೆ ಯಾವುದೇ ಪ್ರಮುಖ ಬದಲಾವನೆಗಳನ್ನು ಕಂಡುಬಂದಿಲ್ಲ. ನವೀಕರಿಸಿದ ಸ್ವಿಫ್ಟ್‌ನ ಕ್ಯಾಬಿನ್ ಚಿತ್ರಗಳು ಬಹಿರಂಗವಾಗಿಲ್ಲ.

MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

23 ಲಕ್ಷ ಮಾರಾಟದ ಗಡಿ ತಲುಪಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ ಸ್ವಿಫ್ಟ್

ಜಾಗತಿಕ ಸ್ಪೆಕ್ ಕಾರಿನ ಆಧಾರದ ಮೇಲೆ, ಯಾವುದೇ ಪ್ರಮುಖ ಬದಲಾವಣೆಗಳನ್ನು ನಾವು ನಿರೀಕ್ಷಿಸುವುದಿಲ್ಲ. ಇದು ಫ್ಲಾಟ್-ಬಾಟಮ್ ಸ್ಟೀಯರಿಂಗ್ ವ್ಹೀಲ್ ಮತ್ತು ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋಗಳೊಂದಿಗೆ ಸ್ಮಾರ್ಟ್ ಸ್ಟುಡಿಯೋ 2.0 ಇನ್ಫೋಟೈನ್ಮೆಂಟ್ ಸಿಸ್ಟಂ ಅನ್ನು ಹೊಂದಿರುತ್ತದೆ.

23 ಲಕ್ಷ ಮಾರಾಟದ ಗಡಿ ತಲುಪಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ ಸ್ವಿಫ್ಟ್

2021ರ ಮಾರುತಿ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್ ಕಾರಿನಲ್ಲಿ ಲೀಟರ್ ಡ್ಯುಯಲ್ಜೆಟ್ ಪೆಟ್ರೋಲ್ ಎಂಜಿನ್ ಅನ್ನು ಅಳಡಿಸುವ ಸಾಧ್ಯತೆಗಳಿದೆ. ಈ ಎಂಜಿನ್ 89 ಬಿಹೆಚ್‌ಪಿ ಪವರ್ ಮತ್ತು 113 ಎನ್‌ಎಂ ಟಾರ್ಕ್ ಅನ್ನು ಸಾಮರ್ಥ್ಯ ಹೊಂದಿದೆ, ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಮತ್ತು ಸ್ಪೀಡ್ ಎಎಂಟಿ ಗೇರ್ ಬಾಕ್ಸ್ ಆಯ್ಕೆಯನ್ನು ನೀಡಬಹುದು ಎಂದು ನಿರೀಕ್ಷಿಸುತ್ತೇವೆ.

Most Read Articles

Kannada
English summary
Maruti Suzuki Swift Surpasses 23 Lakh Unit Sales Milestone. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X