ಮಾರುತಿ ಸುಜುಕಿ ಸ್ವಿಫ್ಟ್ ಮತ್ತಷ್ಟು ದುಬಾರಿ- ವರ್ಷದಲ್ಲಿ ನಾಲ್ಕನೇ ಬಾರಿಗೆ ದರ ಏರಿಕೆ!

ಆಟೋ ಬಿಡಿಭಾಗಗಳ ವೆಚ್ಚ ಹೆಚ್ಚುತ್ತಿರುವ ಪರಿಣಾಮ ಹೊಸ ವಾಹನ ಬೆಲೆಯಲ್ಲಿ ನಿರಂತರವಾಗಿ ಏರಿಕೆಯಾಗುತ್ತಿದ್ದು, ಕಾರು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿರುವ ಮಾರುತಿ ಸುಜುಕಿ ಕಂಪನಿಯು ಕೂಡಾ ತನ್ನ ಪ್ರಮುಖ ಕಾರು ಮಾದರಿಗಳ ಬೆಲೆ ಹೆಚ್ಚಿಸಿದೆ.

ಮಾರುತಿ ಸುಜುಕಿ ಸ್ವಿಫ್ಟ್ ಮತ್ತಷ್ಟು ದುಬಾರಿ- ವರ್ಷದಲ್ಲಿ ನಾಲ್ಕನೇ ಬಾರಿಗೆ ದರ ಏರಿಕೆ!

ಕೋವಿಡ್‌ಗೂ ಮುನ್ನ ಪ್ರತಿ ಆರು ತಿಂಗಳಿಗೆ ಒಂದು ಬಾರಿ ವಾಹನಗಳ ದರ ಪರಿಷ್ಕರಣೆ ಮಾಡುತ್ತಿದ್ದ ಆಟೋ ಕಂಪನಿಗಳು ಇದೀಗ ಬಿಡಿಭಾಗಗಳ ಕೊರತೆ ಮತ್ತು ಹೆಚ್ಚುತ್ತಿರುವ ವೆಚ್ಚಗಳನ್ನು ನಿರ್ವಹಿಸಲು ನಿರಂತರವಾಗಿ ಬೆಲೆ ಪರಿಷ್ಕರಣೆ ಮಾಡುತ್ತಿದ್ದು, ನಿರಂತರ ಬೆಲೆ ಏರಿಕೆ ಪರಿಣಾಮ ವಾಹನ ಮಾಲೀಕತ್ವವು ದಿನದಿಂದ ದಿನಕ್ಕೆ ದುಬಾರಿಯಾಗಿ ಪರಿಣಮಿಸುತ್ತಿದೆ.

ಮಾರುತಿ ಸುಜುಕಿ ಸ್ವಿಫ್ಟ್ ಮತ್ತಷ್ಟು ದುಬಾರಿ- ವರ್ಷದಲ್ಲಿ ನಾಲ್ಕನೇ ಬಾರಿಗೆ ದರ ಏರಿಕೆ!

ಪ್ರತಿ ಮೂರು ತಿಂಗಳಿಗೆ ಒಂದು ಬಾರಿ ಬಹುತೇಕ ವಾಹನ ತಯಾರಕ ಕಂಪನಿಗಳು ತಮ್ಮ ವಾಹನಗಳ ಮೂಲ ಬೆಲೆಯಲ್ಲಿ ಶೇ. 1.50ರಿಂದ ಶೇ.2 ರಷ್ಟು ಬೆಲೆ ಹೆಚ್ಚಿಸುತ್ತಿದ್ದು, ಕಳೆದ ಕೆಲ ತಿಂಗಳಿನಲ್ಲಿ ಬಜೆಟ್ ಕಾರುಗಳ ಬೆಲೆಯಲ್ಲಿ ಸರಾಸರಿಯಾಗಿಯಾಗಿ ರೂ. 80 ಸಾವಿರದಿಂದ ರೂ.1.20 ಲಕ್ಷದಷ್ಟು ಬೆಲೆ ಹೆಚ್ಚಳವಾಗಿವೆ.

ಮಾರುತಿ ಸುಜುಕಿ ಸ್ವಿಫ್ಟ್ ಮತ್ತಷ್ಟು ದುಬಾರಿ- ವರ್ಷದಲ್ಲಿ ನಾಲ್ಕನೇ ಬಾರಿಗೆ ದರ ಏರಿಕೆ!

ಮಧ್ಯಮ ಗಾತ್ರದ ಕಾರುಗಳ ಬೆಲೆಯಲ್ಲಿ ರೂ. 80 ಸಾವಿರದಿಂದ ರೂ. 1.50 ಲಕ್ಷದವರೆಗೆ ಬೆಲೆ ಹೆಚ್ಚಳವಾಗಿದ್ದು, ವಿದೇಶಿ ಮಾರುಕಟ್ಟೆಗಳಿಂದ ಆಮದುಗೊಳ್ಳುವ ಎಲೆಕ್ಟ್ರಾನಿಕ್ ಸೆಮಿ ಕಂಡಕ್ಟರ್‌ಗಳ ಬೆಲೆ ಹೆಚ್ಚಳವಾಗುತ್ತಿರುವ ಪರಿಣಾಮ ಹೊಸ ವಾಹನ ಖರೀದಿಯು ಮತ್ತಷ್ಟು ಹೊರೆಯಾಗುತ್ತಿದೆ.

ಮಾರುತಿ ಸುಜುಕಿ ಸ್ವಿಫ್ಟ್ ಮತ್ತಷ್ಟು ದುಬಾರಿ- ವರ್ಷದಲ್ಲಿ ನಾಲ್ಕನೇ ಬಾರಿಗೆ ದರ ಏರಿಕೆ!

ಬಿಡಿಭಾಗಗಳ ಬೆಲೆ ಹೆಚ್ಚಳ ಪರಿಣಾಮ ಕಳೆದ ಜನವರಿ, ಏಪ್ರಿಲ್‌ ಮತ್ತು ಜೂನ್‌ನಲ್ಲಿ ಬೆಲೆ ಏರಿಕೆ ಮಾಡಿದ್ದ ಮಾರುತಿ ಸುಜುಕಿಯು ಇದೀಗ ಮತ್ತೊಮ್ಮೆ ದರ ಹೆಚ್ಚಿಸಿದ್ದು, ಸ್ವಿಫ್ಟ್ ಕಾರಿನ ಬೆಲೆಯು ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ರೂ. 1 ಸಾವಿರದಿಂದ ರೂ. 15 ಸಾವಿರದಷ್ಟು ದರ ಏರಿಕೆಯಾಗಿದೆ.

ಮಾರುತಿ ಸುಜುಕಿ ಸ್ವಿಫ್ಟ್ ಮತ್ತಷ್ಟು ದುಬಾರಿ- ವರ್ಷದಲ್ಲಿ ನಾಲ್ಕನೇ ಬಾರಿಗೆ ದರ ಏರಿಕೆ!

ಸ್ವಿಫ್ಟ್ ಕಾರಿನ ಜೆಡ್ಎಕ್ಸ್ಐ ಪ್ಲಸ್ ಆಟೋಮ್ಯಾಟಿಕ್ ಡ್ಯುಯಲ್ ಟೋನ್ ಮಾದರಿಯ ಬೆಲೆಯಲ್ಲಿ ಗರಿಷ್ಠ ಏರಿಕೆ ಮಾಡಲಾಗಿದ್ದು, ಹೊಸ ದರವನ್ನು ಜುಲೈ 27ರಿಂದಲೇ ಅನ್ವಯವಾಗುವಂತೆ ಜಾರಿಗೊಳಿಸಲಾಗಿದೆ.

ಮಾರುತಿ ಸುಜುಕಿ ಸ್ವಿಫ್ಟ್ ಮತ್ತಷ್ಟು ದುಬಾರಿ- ವರ್ಷದಲ್ಲಿ ನಾಲ್ಕನೇ ಬಾರಿಗೆ ದರ ಏರಿಕೆ!

ಇನ್ನು 2021ರ ಸ್ವಿಫ್ಟ್ ಕಾರು ಉನ್ನತೀಕರಿಸಿದ ಎಂಜಿನ್ ಸೇರಿದಂತೆ ಪ್ರಮುಖ ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದು, ಕಾರು ಮಾದರಿಯು ಎಲ್ಎಕ್ಸ್ಐ, ವಿಎಕ್ಸ್ಐ, ಜೆಡ್ಎಕ್ಸ್ಐ ಮತ್ತು ಜೆಡ್ಎಕ್ಸ್ಐ ಪ್ಲಸ್ ಎನ್ನುವ ಪ್ರಮುಖ ನಾಲ್ಕು ವೆರಿಯೆಂಟ್ ಪಡೆದುಕೊಂಡಿದೆ.

ಮಾರುತಿ ಸುಜುಕಿ ಸ್ವಿಫ್ಟ್ ಮತ್ತಷ್ಟು ದುಬಾರಿ- ವರ್ಷದಲ್ಲಿ ನಾಲ್ಕನೇ ಬಾರಿಗೆ ದರ ಏರಿಕೆ!

ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.81 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 8.42 ಲಕ್ಷ ಬೆಲೆ ಹೊಂದಿದ್ದು, ಹ್ಯಾಚ್‌ಬ್ಯಾಕ್ ಕಾರುಗಳ ಮಾರಾಟದಲ್ಲಿ ಕಳೆದ ಒಂದು ದಶಕದಿಂದಲೂ ನಂ.1 ಸ್ಥಾನ ಕಾಯ್ದುಕೊಂಡು ಬಂದಿರುವ ಸ್ವಿಫ್ಟ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ನಿರಂತರವಾಗಿ ಹಲವಾರು ಬದಲಾವಣೆಗಳೊಂದಿಗೆ ಬೇಡಿಕೆಯಲ್ಲಿ ಮುಂಚೂಣಿ ಸಾಧಿಸುತ್ತಿದೆ.

ಮಾರುತಿ ಸುಜುಕಿ ಸ್ವಿಫ್ಟ್ ಮತ್ತಷ್ಟು ದುಬಾರಿ- ವರ್ಷದಲ್ಲಿ ನಾಲ್ಕನೇ ಬಾರಿಗೆ ದರ ಏರಿಕೆ!

2021ರ ಸ್ವಿಫ್ಟ್ ಕಾರಿನ ಮತ್ತೊಂದು ಪ್ರಮುಖ ಬದಲಾವಣೆಯೆಂದರೆ ಅದು ಹೊಸದಾಗಿ ಜೋಡಣೆ ಮಾಡಲಾಗಿರುವ 1.2-ಲೀಟರ್ ಡ್ಯುಯಲ್‌ಜೆಟ್ ಪೆಟ್ರೋಲ್ ಎಂಜಿನ್ ಮಾದರಿಯು ಹೊಸ ಕಾರಿನ ಪ್ರಮುಖ ಆಕರ್ಷಣೆಯಾಗಲಿದ್ದು, ಈ ಹಿಂದಿನ 83-ಬಿಎಚ್‌ಪಿ ಪ್ರೇರಿತ 1.2-ಲೀಟರ್ ಕೆ12 ಪೆಟ್ರೋಲ್ ಮಾದರಿಗಿಂತಲೂ ಉತ್ತಮ ಕಾರ್ಯಕ್ಷಮತೆ ಮತ್ತು ಹೆಚ್ಚು ಇಂಧನ ದಕ್ಷತೆ ಹೊಂದಿರುವ ಡ್ಯುಯಲ್‌ಜೆಟ್ ಎಂಜಿನ್ ಮಾದರಿಯು ಸ್ವಿಫ್ಟ್ ಕಾರಿನ ಆಯ್ಕೆಯನ್ನು ಮತ್ತಷ್ಟು ಹೆಚ್ಚಿಸಲಿದೆ.

ಮಾರುತಿ ಸುಜುಕಿ ಸ್ವಿಫ್ಟ್ ಮತ್ತಷ್ಟು ದುಬಾರಿ- ವರ್ಷದಲ್ಲಿ ನಾಲ್ಕನೇ ಬಾರಿಗೆ ದರ ಏರಿಕೆ!

ಮಾರುತಿ ಸುಜುಕಿಯ ಅಭಿವೃದ್ದಿಪಡಿಸಿರುವ 1.2-ಲೀಟರ್ ಡ್ಯುಯಲ್‌ಜೆಟ್ ಪೆಟ್ರೋಲ್ ಎಂಜಿನ್ ಅನ್ನು ಬಲೆನೊ ಮತ್ತು ಡಿಜೈರ್ ನಂತರ ಸ್ವಿಫ್ಟ್ ಮಾದರಿಯಲ್ಲಿ ಜೋಡಣೆ ಮಾಡಿದ್ದು, ಹೊಸ ಎಂಜಿನ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಎಎಂಟಿ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 90-ಬಿಎಚ್‌ಪಿ, 113-ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

Article Published On: Wednesday, July 28, 2021, 11:03 [IST]
English summary
Maruti Suzuki Swift Prices Hiked. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+