Just In
Don't Miss!
- Finance
UMANG APP: ಇಪಿಎಫ್ಗೆ ಸಂಬಂಧಿಸಿದ ಆ್ಯಪ್, ವೈಶಿಷ್ಟ್ಯಗಳೇನು ತಿಳಿಯಿರಿ
- News
ಕೊರೊನಾ ಸೋಂಕು ಹೆಚ್ಚಳ: ವಿಧಾನಸೌಧಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ
- Movies
ಜಾಕಿ ಚಾನ್ ತಮ್ಮ ಮಗನಿಗೆ ಸಾವಿರಾರು ಕೋಟಿ ಆಸ್ತಿಯನ್ನು ಕೊಡುತ್ತಿಲ್ಲವೇಕೆ?
- Lifestyle
ಭಾನುವಾರದ ಭವಿಷ್ಯ: ಈ ದಿನ ಯಾವ ರಾಶಿಯವರಿಗೆ ಅದೃಷ್ಟದ ದಿನ
- Sports
ಹೈದರಾಬಾದ್ ಸೋಲಿಸಿ ಅಗ್ರ ಸ್ಥಾನಕ್ಕೇರಿದ ಮುಂಬೈ ಇಂಡಿಯನ್ಸ್
- Education
Ninasam Diploma Admission 2020-21: ಮೇ ತಿಂಗಳಲ್ಲಿ ನೀನಾಸಂ ಡಿಪ್ಲೋಮಾ ಪ್ರವೇಶಾತಿ ಆರಂಭ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಕಾರು ಖರೀದಿಯನ್ನು ಸುಲಭವಾಗಿಸಲು ಕರ್ನಾಟಕ ಬ್ಯಾಂಕ್‌ನೊಂದಿಗೆ ಒಪ್ಪಂದ ಮಾಡಿಕೊಂಡ ಮಾರುತಿ ಸುಜುಕಿ
ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ ಕಂಪನಿಯು ತನ್ನ ಗ್ರಾಹಕರಿಗೆ ಕಾರು ಸಾಲದ ಮೇಲೆ ಆಕರ್ಷಕ ಕೊಡುಗೆಗಳನ್ನು ನೀಡಲು ಕರ್ನಾಟಕ ಬ್ಯಾಂಕ್‌ನೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಕರ್ನಾಟಕ ಬ್ಯಾಂಕ್ ತನ್ನ 858 ಶಾಖೆಗಳ ಮೂಲಕ ಮಾರುತಿ ಸುಜುಕಿ ವಾಹನಗಳಿಗೆ ಸಾಲ ನೀಡಲಿದೆ.

ಮಾರುತಿ ಸುಜುಕಿ ಕಂಪನಿಯ ಪ್ರಕಾರ, ಅರೆನಾ ಹಾಗೂ ನೆಕ್ಸಾ ಮಾರಾಟಗಾರರ ಮೂಲಕ ಖರೀದಿಸುವ ಕಾರಿನ ಆನ್-ರೋಡ್ ಬೆಲೆಯ 85%ನಷ್ಟು ಸಾಲ ನೀಡಲಾಗುತ್ತದೆ. ಕಾರುಗಳ ಮೇಲೆ ಗರಿಷ್ಠ 84 ತಿಂಗಳವರೆಗೆ ಸಾಲ ನೀಡಲಾಗುತ್ತದೆ.

ಈ ಒಪ್ಪಂದದ ಕುರಿತು ಮಾತನಾಡಿದ ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್‌ನ ಕಾರ್ಯನಿರ್ವಾಹಕ ನಿರ್ದೇಶಕ ಶಶಾಂಕ್ ಶ್ರೀವಾಸ್ತವರವರು, ಈ ಸಹಭಾಗಿತ್ವದಿಂದಾಗಿ ಗ್ರಾಹಕರಿಗೆ ಮಾರುತಿ ಕಾರುಗಳನ್ನು ಖರೀದಿಸಲು ಸುಲಭವಾಗಲಿದೆ.
MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಕಾರಿನ ಮಾಲೀಕತ್ವವನ್ನು ಸುಲಭಗೊಳಿಸಲು ಕಂಪನಿಯು ಹಲವಾರು ಯೋಜನೆಗಳನ್ನು ಆರಂಭಿಸಿದೆ. ಕಂಪನಿಯು ತನ್ನ ಗ್ರಾಹಕರಿಗಾಗಿ ಸುಲಭ ಇಎಂಐ ಹಾಗೂ ಹಣಕಾಸು ಆಯ್ಕೆಗಳನ್ನು ನೀಡುತ್ತಿದೆ ಎಂದು ಹೇಳಿದರು.

2020-21ರ ಆರ್ಥಿಕ ವರ್ಷದಲ್ಲಿ ಕಂಪನಿಯು ಬ್ಯಾಂಕುಗಳ ಸಹಭಾಗಿತ್ವದೊಂದಿಗೆ 9.7 ಲಕ್ಷ ವಾಹನಗಳನ್ನು ಹಣಕಾಸು ಯೋಜನೆಯ ಮೂಲಕ ಮಾರಾಟ ಮಾಡಿದೆ ಎಂದು ಅವರು ಮಾಹಿತಿ ನೀಡಿದರು.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಈಗ ಕಂಪನಿಯು ಕರ್ನಾಟಕದ ಗ್ರಾಹಕರಿಗಾಗಿ ಹಣಕಾಸು ಯೋಜನೆಯನ್ನು ಪರಿಚಯಿಸಿದೆ. ಇದು ಮಾರುತಿ ಕಾರುಗಳನ್ನು ಖರೀದಿಸಲು ಸುಲಭವಾಗಿದೆ. ಮಾರುತಿ ಸುಜುಕಿ ಕಂಪನಿಯು ಏಪ್ರಿಲ್ 1ರಿಂದ ತನ್ನ ಕಾರುಗಳ ಬೆಲೆಯನ್ನು ಏರಿಕೆ ಮಾಡಿದೆ.

ಈ ವರ್ಷ ಕಂಪನಿಯು ಎರಡನೇ ಬಾರಿಗೆ ಬೆಲೆ ಏರಿಕೆ ಮಾಡುತ್ತಿದೆ. ಮಾದರಿ ಹಾಗೂ ರೂಪಾಂತರಗಳಿಗೆ ಅನುಗುಣವಾಗಿ ಬೆಲೆ ಏರಿಕೆ ಮಾಡಲಾಗುವುದು ಎಂದು ಕಂಪನಿ ತಿಳಿಸಿದೆ. ಉತ್ಪಾದನಾ ವೆಚ್ಚವು ನಿರಂತರವಾಗಿ ಏರಿಕೆಯಾಗುತ್ತಿರುವುದರಿಂದ ಬೆಲೆ ಹೆಚ್ಚಿಸಲಾಗುತ್ತಿದೆ ಎಂದು ಕಂಪನಿ ತಿಳಿಸಿದೆ.
MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಜನವರಿ ತಿಂಗಳಿನಲ್ಲಿ ಮಾರುತಿ ಸುಜುಕಿ ಕಂಪನಿಯು ತನ್ನ ಕಾರುಗಳ ಬೆಲೆಯನ್ನು ರೂ.35,000ಗಳಷ್ಟು ಹೆಚ್ಚಿಸಿತು. ಮಹೀಂದ್ರಾ ಅಂಡ್ ಮಹೀಂದ್ರಾ ಹಾಗೂ ಟಾಟಾ ಮೋಟಾರ್ಸ್ ಕಂಪನಿಗಳು ಸಹ ತಮ್ಮ ಕಾರುಗಳ ಬೆಲೆಯನ್ನು ಹೆಚ್ಚಿಸಿವೆ.

ಇಂಡಿಯಾ ರೇಟಿಂಗ್ಸ್ ಅಂಡ್ ರಿಸರ್ಚ್ ವರದಿಯ ಪ್ರಕಾರ ವಾಹನಗಳ ಬೆಲೆ ಹೆಚ್ಚಳ ಹಾಗೂ ಇಂಧನ ಬೆಲೆ ಹೆಚ್ಚಳದ ಹೊರತಾಗಿಯೂ ಪ್ರಯಾಣಿಕರ ವಾಹನ ಹಾಗೂ ದ್ವಿಚಕ್ರ ವಾಹನಗಳಿಗೆ ಬೇಡಿಕೆ ಕಡಿಮೆಯಾಗಿಲ್ಲ ಎಂದು ಹೇಳಲಾಗಿದೆ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಕರೋನಾ ವೈರಸ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಜನರು ಸಾರ್ವಜನಿಕ ಸಾರಿಗೆಗಳಿಗಿಂತ ವೈಯಕ್ತಿಕ ಸಾರಿಗೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ವಾಹನಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ.

2020ರ ಫೆಬ್ರವರಿ ತಿಂಗಳಿಗಿಂತ 2021ರ ಫೆಬ್ರವರಿ ತಿಂಗಳಿನಲ್ಲಿ ಪ್ರಯಾಣಿಕರ ವಾಹನಗಳ ಮಾರಾಟವು 18%ನಷ್ಟು ಹೆಚ್ಚಾಗಿದೆ. ಇದೇ ವೇಳೆ ದ್ವಿಚಕ್ರ ವಾಹನ ಮಾರಾಟವು 2021ರ ಫೆಬ್ರವರಿ ತಿಂಗಳಿನಲ್ಲಿ 10%ನಷ್ಟು ಬೆಳವಣಿಗೆಯನ್ನು ದಾಖಲಿಸಿದೆ.