ಹೊಸ ಬಣ್ಣದ ಆಯ್ಕೆಯನ್ನು ಪಡೆಯಲಿದೆ ಮಾರುತಿ ಸುಜುಕಿ ಇಗ್ನಿಸ್

ದೇಶದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ತನ್ನ ಇಗ್ನಿಸ್ ಫೇಸ್‌ಲಿಫ್ಟ್ ಕಾರನ್ನು ಕಳೆದ ವರ್ಷ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತ್ತು. ಮಾರುತಿ ಸುಜುಕಿ ಕಂಫನಿಯು ಇಗ್ನಿಸ್ ಕಾರನ್ನು ಭಾರತದಲ್ಲಿ ನೆಕ್ಸಾ ಪ್ರೀಮಿಯಂ ಡೀಲರ್ ಗಳ ಮೂಲಕ ಮಾರಾಟ ಮಾಡಲಾಗುತ್ತದೆ.

ಹೊಸ ಬಣ್ಣದ ಆಯ್ಕೆಯನ್ನು ಪಡೆಯಲಿದೆ ಮಾರುತಿ ಸುಜುಕಿ ಇಗ್ನಿಸ್

ಮಾರುತಿ ಇಗ್ನಿಸ್ ಕಾರನ್ನು ಮೊದಲ ಬಾರಿಗೆ 2017ರಲ್ಲಿ ಬಿಡುಗಡೆಗೊಳಿಸಲಾಯಿತು. ಬಿಡುಗಡೆಯಾದ ಆರಂಭದಲ್ಲಿ ಇಗ್ನಿಸ್ ಕಾರು ಬಲೆನೊ ಹ್ಯಾಚ್‌ಬ್ಯಾಕ್‌ನಷ್ಟು ದೊಡ್ಡ ಯಶಸ್ಸನ್ನು ಸಾಧಿಸಲು ಸಾಧ್ಯವಾಗಲಿಲ್ಲ. ಆದರೆ ನಂತರದ ದಿನಗಳಲ್ಲಿ ಇಗ್ನಿಸ್ ಫೇಸ್‌ಲಿಫ್ಟ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯನ್ನು ಪಡೆದುಕೊಂಡಿತು. ಈ ಇಗ್ನಿಸ್ ಕಾರು ಹೊಸ ಬಣ್ಣದ ಆಯ್ಕೆಯನ್ನು ಪಡೆಯಲಿದೆ.

ಹೊಸ ಬಣ್ಣದ ಆಯ್ಕೆಯನ್ನು ಪಡೆಯಲಿದೆ ಮಾರುತಿ ಸುಜುಕಿ ಇಗ್ನಿಸ್

ಸದ್ಯ ಭಾರತೀಯ ಮಾರುಕಟ್ಟೆಯಲ್ಲಿ ಮಾರುತಿ ಇಗ್ನಿಸ್ ಕಾರು ಸಿಲ್ಕಿ ಸಿಲ್ವರ್, ಗ್ಲಿಸ್ಟನಿಂಗ್ ಗ್ರೇ, ಪರ್ಲ್ ವೈಟ್, ಲ್ಯೂಸೆಂಟ್ ಆರೆಂಜ್, ಲ್ಯೂಸೆಂಟ್ ಆರೆಂಜ್ ವಿಥ್ ಬ್ಲ್ಯಾಕ್ ರೂಫ್, ಟರ್ಕಿಷ್ ಬ್ಲೂ, ನೆಕ್ಸಾ ಬ್ಲೂ, ಬ್ಲ್ಯಾಕ್ ರೂಫ್ ನೊಂದಿಗೆ ನೆಕ್ಸಾ ಬ್ಲೂ, ಮತ್ತು ಸಿಲ್ವರ್ ರೂಫ್ ನೊಂದಿಗೆ ನೆಕ್ಸಾ ಬ್ಲೂ ಬಣ್ಣಗಳ ಆಯ್ಜೆಯಲ್ಲಿ ಲಭ್ಯವಿದೆ. ಇದರೊಂದಿಗೆ ಬ್ಲ್ಯಾಕ್ ಬಣ್ಣದ ಆಯ್ಕೆಯು ಪಡೆಯಲಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಹೊಸ ಬಣ್ಣದ ಆಯ್ಕೆಯನ್ನು ಪಡೆಯಲಿದೆ ಮಾರುತಿ ಸುಜುಕಿ ಇಗ್ನಿಸ್

ತಿಂಗಳಿಗೊಮ್ಮೆ ಮಾರುತಿ ಇಗ್ನಿಸ್ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸುತ್ತಿದೆ. ಮಾರುತಿ ಸುಜುಕಿ ಕಂಪನಿಯು ಇಗ್ನಿಸ್ ಹ್ಯಾಚ್‌ಬ್ಯಾಕ್‌ ಕಾರಿನ ಜೆಟ್ಟಾ ಮ್ಯಾನುವಲ್ ಹಾಗೂ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮಾದರಿಗಳನ್ನು ಸ್ಮಾರ್ಟ್‌ಪ್ಲೇ ಇನ್ಫೋಟೇನ್‌ಮೆಂಟ್ ಸಿಸ್ಟಂನೊಂದಿಗೆ ಕಳೆದ ವರ್ಷದ ಕೊನೆಯಲ್ಲಿ ಬಿಡುಗಡೆಗೊಳಿಸಿತು.

ಹೊಸ ಬಣ್ಣದ ಆಯ್ಕೆಯನ್ನು ಪಡೆಯಲಿದೆ ಮಾರುತಿ ಸುಜುಕಿ ಇಗ್ನಿಸ್

ಇಗ್ನಿಸ್ ಕಾರನ್ನು ಸಿಗ್ಮಾ, ಡೆಲ್ಟಾ, ಜೆಟ್ಟಾ ಮತ್ತು ಆಲ್ಫಾ ಎಂಬ ನಾಲ್ಕು ರೂಪಾಂತರಗಳಲ್ಲಿ ಮಾರಾಟ ಮಾಡಲಾತ್ತದೆ. ಇಗ್ನಿಸ್ ನೆಕ್ಸಾ ಶೋರೂಂನಿಂದ ಮಾರಾಟವಾದ ಮೊದಲ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಹೊಂದಿರುವ ಕಾರು ಇದಾಗಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಹೊಸ ಬಣ್ಣದ ಆಯ್ಕೆಯನ್ನು ಪಡೆಯಲಿದೆ ಮಾರುತಿ ಸುಜುಕಿ ಇಗ್ನಿಸ್

ಮಾರುತಿ ಸುಜುಕಿ ಇಗ್ನಿಸ್ ಫೇಸ್‌ಲಿಫ್ಟ್ ಕಾರಿನಲ್ಲಿ 1.2-ಲೀಟರಿನ ಕೆ 12 ಬಿ ಬಿಎಸ್-6 ಪೆಟ್ರೋಲ್ ಎಂಜಿನ್ ಹೊಂದಿದೆ. ಈ ಎಂಜಿನ್ 83 ಬಿಹೆಚ್ ಪಿ ಪವರ್ ಮತ್ತು 113 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಹೊಸ ಬಣ್ಣದ ಆಯ್ಕೆಯನ್ನು ಪಡೆಯಲಿದೆ ಮಾರುತಿ ಸುಜುಕಿ ಇಗ್ನಿಸ್

ಈ ಮಾರುತಿ ಸುಜುಕಿ ಇಗ್ನಿಸ್ ಫೇಸ್‌ಲಿಫ್ಟ್ ಕಾರಿನಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಎಬಿಎಸ್-ಇಬಿಡಿ, ಡ್ಯುಯಲ್ ಏರ್‌ಬ್ಯಾಗ್ ಹಾಗೂ ಡ್ರೈವರ್ ಸೇಫ್ಟಿ ಅಲರ್ಟ್ ಗಳನ್ನು ನೀಡಲಾಗಿದೆ. ಫೇಸ್‌ಲಿಫ್ಟ್ ಕಾರಿನಲ್ಲಿ ಲೈವ್ ಟ್ರಾಫಿಕ್, ವಾಯ್ಸ್ ರೆಕಗ್ನಿಷನ್, ವೆಹಿಕಲ್ ಇನ್ಫಾರ್ಮೆಷನ್ ಅಲರ್ಟ್ ನಂತಹ ನೂತನ ಫೀಚರ್ ಗಳನ್ನು ನೀಡಲಾಗಿದೆ.

MOST READ: ಜನವರಿ ತಿಂಗಳಿನಲ್ಲಿ ಮಾರುತಿ ಎಕ್ಸ್‌ಎಲ್6 ಕಾರು ಮಾರಾಟದಲ್ಲಿ ಶೇ.305ರಷ್ಟು ಹೆಚ್ಚಳ

ಹೊಸ ಬಣ್ಣದ ಆಯ್ಕೆಯನ್ನು ಪಡೆಯಲಿದೆ ಮಾರುತಿ ಸುಜುಕಿ ಇಗ್ನಿಸ್

ಬಜೆಟ್ ಆಧಾರಿತ ಹ್ಯಾಚ್‍‍ಬ್ಯಾಕ್‍‍ಗಳಿಂದಾಗಿ ಮಾರುತಿ ಸುಜುಕಿ ಕಂಪನಿಯು ಹೆಚ್ಚು ಹೆಸರುವಾಸಿಯಾಗಿದೆ. ಮಾರುತಿ ಸುಜುಕಿ ಇಗ್ನಿಸ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಕಂಪನಿಯ ಹ್ಯಾಚ್‍‍ಬ್ಯಾಕ್‍ಗಳಿಗೆ ಪೈಪೋಟಿ ನೀಡುತ್ತದೆ. ಮಾರುತಿ ಹೊಸ ಬಣ್ಣದ ಆಯ್ಜೆಯನ್ನು ಪಡೆಯೊಂದರೊಂದಿಗೆ ಹೆಚ್ಚಿನ ಗ್ರಾಹಕರನ್ನು ಸೆಳೆಯಬಹುದು.

Most Read Articles

Kannada
English summary
Maruti Suzuki Likely To Launch Ignis In Black Colour. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X