2025ರ ವೇಳೆಗೆ ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಕಂಪನಿಯ ಎಲೆಕ್ಟ್ರಿಕ್ ಕಾರು

ಜಪಾನ್ ಮೂಲದ ಕಾರು ತಯಾರಕ ಕಂಪನಿಯಾದ ಸುಜುಕಿ ಮೋಟಾರ್ ಕಾರ್ಪ್ ಶೀಘ್ರದಲ್ಲಿಯೇ ಭಾರತದಲ್ಲಿ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಗೆ ಪ್ರವೇಶಿಸಲಿದೆ. ವರದಿಗಳ ಪ್ರಕಾರ ಕಂಪನಿಯು ತನ್ನ ಎಲೆಕ್ಟ್ರಿಕ್ ಕಾರನ್ನು 2025 ರ ವೇಳೆಗೆ ಬಿಡುಗಡೆಗೊಳಿಸಲಿದೆ.

2025ರ ವೇಳೆಗೆ ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಕಂಪನಿಯ ಎಲೆಕ್ಟ್ರಿಕ್ ಕಾರು

ಕಂಪನಿಯು ತನ್ನ ಮೊದಲ ಎಲೆಕ್ಟ್ರಿಕ್ ಕಾರ್ ಅನ್ನು ದೇಶದಲ್ಲಿ ಬಿಡುಗಡೆಗೊಳಿಸಲು ಸಿದ್ಧತೆ ನಡೆಸಿದೆ. ಶೀಘ್ರದಲ್ಲೇ ಈ ಎಲೆಕ್ಟ್ರಿಕ್ ಕಾರು ಬಿಡುಗಡೆಯಾಗಲಿದೆ. ಸುಜುಕಿ ಮೋಟಾರ್ ಕಾರ್ಪ್ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಮಾರುತಿ ಕಂಪನಿಯ ಸಹಭಾಗಿತ್ವದಲ್ಲಿ ನಾಲ್ಕು ಚಕ್ರ ವಾಹನಗಳ ವ್ಯವಹಾರ ನಡೆಸುತ್ತಿದೆ.

2025ರ ವೇಳೆಗೆ ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಕಂಪನಿಯ ಎಲೆಕ್ಟ್ರಿಕ್ ಕಾರು

ಕಂಪನಿಯು ಭಾರತೀಯ ಗ್ರಾಹಕರಿಗಾಗಿ ಎಲೆಕ್ಟ್ರಿಕ್ ಕಾಂಪ್ಯಾಕ್ಟ್ ಕಾರ್ ಅನ್ನು ಬಿಡುಗಡೆಗೊಳಿಸಲು ಚಿಂತನೆ ನಡೆಸುತ್ತಿದೆ ಎಂದು ವರದಿಯಾಗಿದೆ. ಈ ವರದಿಯಲ್ಲಿ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲವಾದರೂ, ಈ ಎಲೆಕ್ಟ್ರಿಕ್ ಕಾರಿನ ಬೆಲೆ ರೂ. 10 ಲಕ್ಷದಿಂದ ರೂ. 11 ಲಕ್ಷಗಳಾಗಬಹುದು ಎಂದು ಹೇಳಲಾಗಿದೆ.

2025ರ ವೇಳೆಗೆ ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಕಂಪನಿಯ ಎಲೆಕ್ಟ್ರಿಕ್ ಕಾರು

ಇದರ ಜೊತೆಗೆ ಸುಮಾರು 13,626 ಡಾಲರ್ ಬೆಲೆಯ ಎಲೆಕ್ಟ್ರಿಕ್ ವಾಹನಗಳ ಮೇಲಿನ ಸರ್ಕಾರದ ಸಬ್ಸಿಡಿಗಳೂ ಸೇರಿವೆ. ಈ ವರದಿಗಳ ಪ್ರಕಾರ ಈ ಕಾರಿನ ಮೂಲಕ ಜಪಾನಿನ ಕಾರು ತಯಾರಕ ಕಂಪನಿಯು ಕಾಂಪ್ಯಾಕ್ಟ್ ಕಾರು ವಿಭಾಗದಲ್ಲಿ ಎಲೆಕ್ಟ್ರಿಕ್ ಕಾರುಗಳ ಬೆಳವಣಿಗೆಗೆ ಮಾರುತಿ ಕಂಪನಿಗೆ ನೆರವಾಗಲಿದೆ.

2025ರ ವೇಳೆಗೆ ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಕಂಪನಿಯ ಎಲೆಕ್ಟ್ರಿಕ್ ಕಾರು

ಮಾರುತಿ ಸುಜುಕಿ ಇಂಡಿಯಾ ಭಾರತದ ಅತಿದೊಡ್ಡ ಕಾರು ತಯಾರಕ ಕಂಪನಿಯಾಗಿದೆ. ಇದು ಮಾತ್ರವಲ್ಲದೇ ಏಷ್ಯಾದ ಮಾರುಕಟ್ಟೆಗಳಲ್ಲಿ ಮಾರುತಿ ಸುಜುಕಿ ಕಂಪನಿಯು ಪ್ರಮುಖ ಭದ್ರಕೋಟೆಯನ್ನು ಹೊಂದಿದೆ.

2025ರ ವೇಳೆಗೆ ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಕಂಪನಿಯ ಎಲೆಕ್ಟ್ರಿಕ್ ಕಾರು

ಮಾರುತಿ ಸುಜುಕಿ ಕಂಪನಿಯು ಭಾರತದಲ್ಲಿ ಆಲ್ಟೊ, ವ್ಯಾಗನ್ಆರ್, ಬಲೆನೊ ಹಾಗೂ ಸ್ವಿಫ್ಟ್‌ನಂತಹ ಸಣ್ಣ ಹಾಗೂ ಕಾಂಪ್ಯಾಕ್ಟ್ ಕಾರುಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟ ಮಾಡುತ್ತದೆ. ಕಂಪನಿಯ ಹೊಸ ಎಲೆಕ್ಟ್ರಿಕ್ ಕಾರ್ ಅನ್ನು ಮೊದಲು ಭಾರತದಲ್ಲಿ ಬಿಡುಗಡೆಗೊಳಿಸಲಾಗುವುದು ಎಂದು ವರದಿಯಲ್ಲಿ ತಿಳಿಸಲಾಗಿದೆ.

2025ರ ವೇಳೆಗೆ ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಕಂಪನಿಯ ಎಲೆಕ್ಟ್ರಿಕ್ ಕಾರು

ನಂತರ ಈ ಎಲೆಕ್ಟ್ರಿಕ್ ಕಾರ್ ಅನ್ನು ಸುಜುಕಿ ಕಂಪನಿಯ ತವರಾದ ಜಪಾನ್ ಹಾಗೂ ಯುರೋಪಿನಂತಹ ಇತರ ಮಾರುಕಟ್ಟೆಗಳಲ್ಲಿ ಬಿಡುಗಡೆಗೊಳಿಸಲಾಗುವುದು. ಮಾರುತಿ ಸುಜುಕಿ ಕಂಪನಿಯು ತನ್ನ ಜನಪ್ರಿಯ ವ್ಯಾಗನ್ಆರ್ ಕಾರಿನ ಎಲೆಕ್ಟ್ರಿಕ್ ಆವೃತ್ತಿಯನ್ನು ಭಾರತದ ರಸ್ತೆಗಳಲ್ಲಿ ಹಲವು ದಿನಗಳಿಂದ ಪರೀಕ್ಷಿಸುತ್ತಿದೆ.

2025ರ ವೇಳೆಗೆ ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಕಂಪನಿಯ ಎಲೆಕ್ಟ್ರಿಕ್ ಕಾರು

ಕಂಪನಿಯು ಸದ್ಯಕ್ಕೆ ಈ ಕಾರಿನ ಬಿಡುಗಡೆಯ ಬಗ್ಗೆ ಯಾವುದೇ ಅಧಿಕೃತ ದೃಢೀಕರಣವನ್ನು ನೀಡಿಲ್ಲ. ಮಾರುತಿ ಸುಜುಕಿ ಕಂಪನಿಯು ಇನ್ನೂ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಿಲ್ಲ. ಆದರೆ ಮಾರುತಿ ಸುಜುಕಿ ಕಂಪನಿಯ ಪ್ರತಿಸ್ಪರ್ಧಿ ಕಂಪನಿಗಳು ಈಗಾಗಲೇ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಿವೆ.

2025ರ ವೇಳೆಗೆ ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಕಂಪನಿಯ ಎಲೆಕ್ಟ್ರಿಕ್ ಕಾರು

ಮಾರುತಿ ಸುಜುಕಿ ಕಂಪನಿಯು ಈಗ ಎಲೆಕ್ಟ್ರಿಕ್ ಕಾರುಗಳಿಗಿಂತ ಹೆಚ್ಚಾಗಿ ಸಿಎನ್‌ಜಿ ತಂತ್ರಜ್ಞಾನದತ್ತ ಹೆಚ್ಚು ಗಮನ ಹರಿಸುತ್ತಿದೆ. ಭಾರತದ ಕಾರು ಮಾರುಕಟ್ಟೆಯು ವಿಶ್ವದ ಐದನೇ ಅತಿದೊಡ್ಡ ಕಾರು ಮಾರುಕಟ್ಟೆಯಾಗಿದೆ. ಆದರೂ ಎಲೆಕ್ಟ್ರಿಕ್ ಕಾರುಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿಲ್ಲ.

Most Read Articles

Kannada
English summary
Maruti Suzuki to launch electric car in India by 2025. Read in Kannada.
Story first published: Wednesday, July 21, 2021, 9:57 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X