ಜೂನ್ ತಿಂಗಳಿನಲ್ಲಿ 1.47 ಲಕ್ಷ ಕಾರುಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

ದೇಶದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ 2021ರ ಜೂನ್ ತಿಂಗಳ ಮಾರಾಟ ವರದಿಯನ್ನು ಪ್ರಕಟಿಸಿದೆ. ಈ ವರದಿಯ ಪ್ರಕಾರ, ಮಾರುತಿ ಸುಜುಕಿ ಕಂಪನಿಯು ಕಳೆದ ತಿಂಗಳು ಒಟ್ಟು 147,368 ಯುನಿಟ್‌ಗನ್ನು ಮಾರಾಟಗೊಳಿಸಿವೆ.

ಜೂನ್ ತಿಂಗಳಿನಲ್ಲಿ 1.47 ಲಕ್ಷ ಕಾರುಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

ಮಾರುತಿ ಸುಜುಕಿ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ 130,348 ಯುನಿಟ್‌ಗಳನ್ನು ಮಾರಾಟಗೊಳಿಸಿದೆ. ಇನ್ನು 17,020 ಯುನಿಟ್‌ಗಳನ್ನ ರಫ್ತು ಮಾಡಿದ್ದಾರೆ. ಈ ವರ್ಷದ ಮೇ ತಿಂಗಳಿನಲ್ಲಿ ಮಾರುತಿ ಸುಜುಕಿ ಕಂಪನಿಯು 46,555 ಯುನಿಟ್‌ಗಳನ್ನು ಮಾರಾಟಗೊಳಿಸಿದ್ದರು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಉತ್ತಮ ಬೆಳವಣಿಗೆಯನ್ನು ಸಾಧಿಸಿದೆ. ಮೇ ತಿಂಗಳಲ್ಲಿ ಹಲವಾರು ರಾಜ್ಯಗಳಲ್ಲಿ ಲಾಕ್‌ಡೌನ್ ಜಾರಿಯಲ್ಲಿತ್ತು. ಜೂನ್‌ನಲ್ಲಿ ಮಾತ್ರ ಶೋ ರೂಂಗಳು ತೆರೆದುಕೊಳ್ಳಲು ಪ್ರಾರಂಭವಾಗಿತ್ತು.

ಜೂನ್ ತಿಂಗಳಿನಲ್ಲಿ 1.47 ಲಕ್ಷ ಕಾರುಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

2020ರ ಜೂನ್ ತಿಂಗಳಿನಲ್ಲಿ ಮಾರುತಿಯು ಒಟ್ಟು ಮಾರಾಟವು 57,428 ಯುನಿಟ್‌ಗಳನ್ನು ಮಾರಾಟವಾಗಿವೆ. ಕಳೆದ ತಿಂಗಳು ಹೋಲಿಸಿದರೆ ಕಂಪನಿಯು ಶೇ.156 ಕ್ಕಿಂತ ಹೆಚ್ಚಿನ ಬೆಳವಣಿಗೆಯನ್ನು ಕಂಡಿದೆ,

ಜೂನ್ ತಿಂಗಳಿನಲ್ಲಿ 1.47 ಲಕ್ಷ ಕಾರುಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

ಮಾರುತಿಯ ಮಿನಿ ಮತ್ತು ಸಬ್ ಕಾಂಪ್ಯಾಕ್ಟ್ ವಿಭಾಗದ ಕಾರುಗಳಾದ ಆಲ್ಟೋ, ಎಸ್-ಪ್ರೆಸ್ಸೊ, ವ್ಯಾಗನ್ಆರ್, ಸ್ವಿಫ್ಟ್, ಸೆಲೆರಿಯೊ, ಇಗ್ನಿಸ್, ಬಲೆನೊ, ಮತ್ತು ಡಿಜೈರ್ ಒಟ್ಟಾರೆಯಾಗಿ 86,288 ಯುನಿಟ್‌ಗಳನ್ನು ಹೊಂದಿವೆ.

ಜೂನ್ ತಿಂಗಳಿನಲ್ಲಿ 1.47 ಲಕ್ಷ ಕಾರುಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

ಮಾರುತಿ ಸುಜುಕಿ ಕಂಪನಿಯ ಯುಟಿಲಿಟಿ ವೆಹಿಕಲ್ ವಿಭಾಗದ, ವಿಟಾರಾ ಬ್ರೆಝಾ, ಎರ್ಟಿಗಾ, ಎಕ್ಸ್‌ಎಲ್ 6, ಜಿಪ್ಸಿ ಮತ್ತು ಎಸ್-ಕ್ರಾಸ್ ಮಾದರಿಗಳ 28,172 ಯುನಿಟ್‌ಗಳನ್ನು ಮಾರಾಟ ಮಾಡಿವೆ. ದೇಶಿಯ ಮಾರುಕಟ್ಟೆಯಲ್ಲಿ ಕಾರುಗಳ ಮಾರಾಟದಲ್ಲಿ ಕಳೆದ ತಿಂಗಳು ಚೇತರಿಕೆಯನ್ನು ಕಂಡಿದೆ.

ಜೂನ್ ತಿಂಗಳಿನಲ್ಲಿ 1.47 ಲಕ್ಷ ಕಾರುಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

ಹೊಸ ಮಾಲಿನ್ಯ ನಿಯಮ ಅನುಸಾರವಾಗಿ ಡೀಸೆಲ್ ಎಂಜಿನ್ ಮಾರಾಟವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿ ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಸಿಎನ್‌ಜಿ ಕಾರು ಮಾದರಿಗಳನ್ನು ಮಾತ್ರ ಮಾರಾಟ ಮಾಡುತ್ತಿರುವ ಮಾರುತಿ ಸುಜುಕಿ ಇದೀಗ ಮತ್ತೆ ಹೊಸ ಡೀಸೆಲ್ ಎಂಜಿನ್‌ನೊಂದಿಗೆ ತನ್ನ ಕಾರುಗಳನ್ನು ಪರಿಚಯಿಸಲಿದೆ ಎಂದು ವರದಿಗಳಾಗಿದೆ.

ಜೂನ್ ತಿಂಗಳಿನಲ್ಲಿ 1.47 ಲಕ್ಷ ಕಾರುಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

ಕಾರುಗಳ ಲೀಸ್ ಪ್ರಕ್ರಿಯೆಯಲ್ಲಿ ಮಾರುತಿ ಸುಜುಕಿ ಮುಂಚೂಣಿಯಲ್ಲಿದೆ. ಹೊಸ ಕಾರ್ ಲೀಸ್ ಯೋಜನೆ ಅಡಿ ಮಾರುತಿ ಸುಜುಕಿ ಕಂಪನಿಯು ವಿವಿಧ ಕಾರುಗಳ ಮೇಲೆ ನಿಗದಿತ ಅವಧಿಗೆ ಇಂತಿಷ್ಟು ಪ್ರಮಾಣದ ದರ ನಿಗದಿ ಮಾಡಿದ್ದು, ಕಾರು ಮಾದರಿಗಳು ಮತ್ತು ಲೀಸ್ ಅವಧಿಯ ಮೇಲೆ ದರವನ್ನು ನಿಗದಿ ಮಾಡಲಾಗುತ್ತದೆ.

ಜೂನ್ ತಿಂಗಳಿನಲ್ಲಿ 1.47 ಲಕ್ಷ ಕಾರುಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

ಇದು ಇಳಿಕೆಯಾಗಿರುವ ಹೊಸ ವಾಹನಗಳ ಮಾರಾಟ ಪ್ರಮಾಣವನ್ನು ಸುಧಾರಿಸಲು ನೇರವಾಗುತ್ತಿದ್ದು, ಮಾರುತಿ ಸುಜುಕಿ ಸೇರಿದಂತೆ ಹಲವು ಕಂಪನಿಗಳು ಲೀಸ್ ಆಯ್ಕೆಗೆ ಚಾಲನೆ ನೀಡಿವೆ. ದೆಹಲಿ, ಮುಂಬೈ, ಬೆಂಗಳೂರು, ಹೈದ್ರಾಬಾದ್, ಪುಣೆಯಲ್ಲಿ ಈಗಾಗಲೇ ಲೀಸ್ ಕಾರುಗಳ ಆಯ್ಕೆಗೆ ಚಾಲನೆ ನೀಡಿರುವ ಮಾರುತಿ ಸುಜುಕಿಯು ಇದೀಗ ಮಂಗಳೂರು, ಮೈಸೂರು, ಇಂಧೋರ್ ಮತ್ತು ಜೈಪುರ್‌ಗೂ ವಿಸ್ತರಣೆ ಮಾಡಿದೆ.

ಜೂನ್ ತಿಂಗಳಿನಲ್ಲಿ 1.47 ಲಕ್ಷ ಕಾರುಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ

ಮಾರುತಿ ಸುಜುಕಿ ಕಂಪನಿಯು ತನ್ನ ಬಹುನಿರೀಕ್ಷಿತ ನ್ಯೂ ಜನರೇಷನ್ ಸೆಲೆರಿಯೊ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಪರಿಚಯಿಸಲು ಸಜ್ಜಾಗಿತಿದೆ. ಈ ಹೊಸ ಮಾರುತಿ ಸುಜುಕಿ ಸೆಲೆರಿಯೊ ಕಾರು ಪ್ರಮುಖ ಬದಲಾವಣೆಗಳೊಂದಿಗೆ ಭಾರತೀಯ ಮಾರುಕಟ್ಟೆಯನ್ನು ಶೀಘ್ರದಲ್ಲೇ ಪ್ರವೇಶಿಸಲಿದೆ.

Most Read Articles

Kannada
English summary
Maruti Suzuki's Total Sales Reach 147,368 Units. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X