ವಿಟಾರಾ ಬ್ರೆಝಾ ಕಾರು ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ದಾಖಲೆ

ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟದಲ್ಲಿ ಭರ್ಜರಿ ಯಶಸ್ಸು ಕಂಡಿರುವ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಆವೃತ್ತಿಯು ಅತಿ ಕಡಿಮೆ ಅವಧಿಯಲ್ಲಿ ದಾಖಲೆ ಪ್ರಮಾಣದಲ್ಲಿ ಬೇಡಿಕೆ ಪಡೆದುಕೊಂಡಿದ್ದು, ಬಿಡುಗಡೆಯಾದ 60 ತಿಂಗಳ ಅವಧಿಯಲ್ಲಿ 6 ಲಕ್ಷ ಯುನಿಟ್ ಮಾರಾಟವಾಗಿವೆ.

ವಿಟಾರಾ ಬ್ರೆಝಾ ಕಾರು ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ದಾಖಲೆ

ಅತಿ ಕಡಿಮೆ ಅವಧಿಯಲ್ಲಿ ಹೆಚ್ಚು ಮಾರಾಟವಾದ ಕಾರುಗಳ ಪೈಕಿ ಮಾರುತಿ ಸುಜುಕಿ ಬ್ರೆಝಾ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಕೂಡಾ ಒಂದಾಗಿದ್ದು, ಬಿಡುಗಡೆಯಾದ ಐದು ವರ್ಷಗಳ ಅವಧಿಯಲ್ಲಿ ದಾಖಲೆ ಪ್ರಮಾಣದಲ್ಲಿ ಮಾರಾಟಗೊಳ್ಳುವ ಮೂಲಕ ಅಗ್ರಸ್ಥಾನಕ್ಕೇರಿದೆ. 2016ರ ಮಾರ್ಚ್ 8ರಂದು ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದ್ದ ವಿಟಾರಾ ಬ್ರೆಝಾ ಕಾರು ಕಂಪ್ಯಾಕ್ಟ್ ಎಸ್‌ಯುವಿ ವೈಶಿಷ್ಟ್ಯತೆಯೊಂದಿಗೆ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದು, ಪ್ರತಿ ತಿಂಗಳು ಸರಾಸರಿ 10 ಸಾವಿರ ಯುನಿಟ್ ಮಾರಾಟಗೊಳ್ಳುವ ಮೂಲಕ 6 ಲಕ್ಷ ಯುನಿಟ್ ಮಾರಾಟ ಗುರಿತಲುಪಿದೆ.

ವಿಟಾರಾ ಬ್ರೆಝಾ ಕಾರು ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ದಾಖಲೆ

ಸದ್ಯ ಬಿಎಸ್-6 ಎಮಿಷನ್ ಪ್ರಕಾರ ತನ್ನ ಪ್ರಮುಖ ಕಾರುಗಳ ಮಾರಾಟದಲ್ಲಿ ಹಲವಾರು ಮಹತ್ವದ ಬದಲಾವಣೆಗಳನ್ನು ಪರಿಚಯಿಸಿರುವ ಮಾರುತಿ ಸುಜುಕಿಯು ಬ್ರೆಝಾ ಕಂಪ್ಯಾಕ್ಟ್ ಎಸ್‌ಯುವಿ ಕಾರಿನಲ್ಲಿ ಡೀಸೆಲ್ ಎಂಜಿನ್ ಸ್ಥಗಿತಗೊಳಿಸಿ ಹೊಸ ಪೆಟ್ರೋಲ್ ಮಾದರಿಯನ್ನು ಪರಿಚಯಿಸಿರುವುದು ಪ್ರಮುಖ ಆಕರ್ಷಣೆಯಾಗಿದೆ.

ವಿಟಾರಾ ಬ್ರೆಝಾ ಕಾರು ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ದಾಖಲೆ

ಹೊಸ ಎಮಿಷನ್ ನಿಯಮದಿಂದಾಗಿ ಹಲವು ಕಾರು ಕಂಪನಿಗಳು ವಿವಿಧ ಮಾದರಿಯ ಕಾರುಗಳಲ್ಲಿ ಡೀಸೆಲ್ ಎಂಜಿನ್ ಸ್ಥಗಿತಗೊಳಿಸಿದ್ದು, ಮಾರುತಿ ಸುಜುಕಿ ಕೂಡಾ ಬ್ರೆಝಾ ಕಾರಿನಲ್ಲಿ ಡೀಸೆಲ್ ಎಂಜಿನ್ ಸ್ಥಗಿತಗೊಳಿಸಿ ಪೆಟ್ರೋಲ್ ಎಂಜಿನ್‌ನಲ್ಲಿ ಮಾತ್ರವೇ ಮಾರಾಟ ಮಾಡುತ್ತಿದೆ.

ವಿಟಾರಾ ಬ್ರೆಝಾ ಕಾರು ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ದಾಖಲೆ

ಈ ಹಿಂದೆ ನೀಡಲಾಗುತ್ತಿದ್ದ 1.3-ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದ ಮಾರುತಿ ಸುಜುಕಿ ನಿರ್ಮಾಣದ ಬಹುತೇಕ ಕಾರುಗಳು ಇದೀಗ ಸ್ಥಗಿತಗೊಂಡಿದ್ದು, ಡೀಸೆಲ್ ಆಯ್ಕೆಯ ಬದಲಾಗಿ ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಸಿಎನ್‌ಜಿ ಕಾರುಗಳ ಆಯ್ಕೆಯನ್ನು ಹೆಚ್ಚಿಸಲಾಗುತ್ತಿದೆ. ಹೊಸ ವಿಟಾರಾ ಬ್ರೆಝಾದಲ್ಲಿ ಬಳಕೆ ಮಾಡಿರುವ 1.5-ಲೀಟರ್ ಕೆ15ಬಿ ಪೆಟ್ರೋಲ್ ಎಂಜಿನ್‌ ಮಾದರಿಯು ಸ್ಮಾರ್ಟ್ ಹೈಬ್ರಿಡ್ ತಂತ್ರಜ್ಞಾನದೊಂದಿಗೆ ಉತ್ತಮ ಇಂಧನ ದಕ್ಷತೆ ಹೊಂದಿದೆ.

ವಿಟಾರಾ ಬ್ರೆಝಾ ಕಾರು ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ದಾಖಲೆ

ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನವನ್ನು ಈಗಾಗಲೇ ವಿಟಾರಾ ಬ್ರೆಝಾ ಪೆಟ್ರೋಲ್ ಆಟೋಮ್ಯಾಟಿಕ್ ಆವೃತ್ತಿಯಲ್ಲಿ ಜೋಡಿಸಲಾಗಿದ್ದು, ಮುಂಬರುವ ದಿನಗಳಲ್ಲಿ ಪೆಟ್ರೋಲ್ ಮ್ಯಾನುವಲ್ ಮಾದರಿಯಲ್ಲೂ ಹೊಸ ತಂತ್ರಜ್ಞಾನ ಜೋಡಣೆ ಮಾಡಲಿದೆ.

ವಿಟಾರಾ ಬ್ರೆಝಾ ಕಾರು ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ದಾಖಲೆ

ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನ ಜೋಡಣೆಯ ನಂತರ ಪೆಟ್ರೋಲ್ ಮ್ಯಾನುವಲ್ ಆವೃತ್ತಿಯ ಮೈಲೇಜ್ ಪ್ರಮಾಣದಲ್ಲಿ 18.76ಕಿ.ಮೀ ಹೆಚ್ಚಳವಾಗಲಿದ್ದು, 12ವಿ SHVS ಹೈಬ್ರಿಡ್ ಸಿಸ್ಟಂ ಜೊತೆ 1.76 ಕೆವಿ ಎಲೆಕ್ಟ್ರಿಕ್ ಮೋಟಾರ್ ಪಡೆದುಕೊಳ್ಳಲಿದೆ.

MOST READ: ಗ್ರಾಹಕರ ದೂರು ಹಿನ್ನೆಲೆ...ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಸಬ್ಸಿಡಿ ರದ್ದು

ವಿಟಾರಾ ಬ್ರೆಝಾ ಕಾರು ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ದಾಖಲೆ

ಇನ್ನು ಹೊಸ ವಿಟಾರಾ ಬ್ರೆಝಾ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.7.39 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 11.29 ಲಕ್ಷ ಬೆಲೆ ಪಡೆದುಕೊಂಡಿದ್ದು, ಮುಂಬರುವ ಕೆಲವೇ ತಿಂಗಳಿನಲ್ಲಿ ಹೊಸ ಕಾರಿನ ನ್ಯೂ ಜನರೇಷನ್ ಮಾದರಿಯನ್ನು ಬಿಡುಗಡೆ ಮಾಡುವ ಸಿದ್ದತೆ ನಡೆಸಲಾಗಿದೆ.

ವಿಟಾರಾ ಬ್ರೆಝಾ ಕಾರು ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ದಾಖಲೆ

ಪ್ರಸ್ತುತ ಮಾರುಕಟ್ಟೆಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಹಲವಾರು ಮಾದರಿಗಳ ಮಾರಾಟವನ್ನು ಹೊಂದಿರುವ ಮಾರುತಿ ಸುಜುಕಿಯು ಟಾಪ್ 10 ಕಾರುಗಳ ಮಾರಾಟ ಪಟ್ಟಿಯಲ್ಲಿ ಒಟ್ಟು 6 ಕಾರು ಮಾದರಿಗಳ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದು, ಮುಂದಿನ 3 ವರ್ಷಗಳ ಅವಧಿಗಾಗಿ ಮತ್ತಷ್ಟು ಹೊಸ ಕಾರು ಉತ್ಪನ್ನಗಳನ್ನು ಬಿಡುಗಡೆಗಾಗಿ ಸಿದ್ದತೆ ನಡೆಸುತ್ತಿದೆ. ಮಾಹಿತಿಗಳ ಪ್ರಕಾರ ಮಾರುತಿ ಕಂಪನಿಯು 2021ರ ಆರಂಭದಿಂದ 2023ರ ಅಂತ್ಯದೊಳಗೆ ಆರು ಹೊಸ ಕಾರುಗಳನ್ನು ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ವಿಟಾರಾ ಬ್ರೆಝಾ ಕಾರು ಮಾರಾಟದಲ್ಲಿ ಮಾರುತಿ ಸುಜುಕಿ ಹೊಸ ದಾಖಲೆ

ಹೊಸ ಎಸ್‌ಯುವಿ ಕಾರುಗಳ ಪಟ್ಟಿಯಲ್ಲಿ ಮೆಡ್ ಇನ್ ಇಂಡಿಯಾ ಜಿಮ್ನಿ, ಎರಡನೇ ತಲೆಮಾರಿನ ವಿಟಾರಾ ಬ್ರೆಝಾ ಕಂಪ್ಯಾಕ್ಟ್ ಎಸ್‌ಯುವಿ, ವಿಟಾರಾ ಫುಲ್ ಸೈಜ್ ಎಸ್‌ಯುವಿ ಸೇರಿದಂತೆ ತಲಾ ಒಂದೊಂದು ಕ್ರಾಸ್ ಓವರ್ ಎಸ್‌ಯುವಿ, ಹೊಚ್ಚ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮತ್ತು ಎಂಪಿವಿ ಕಾರು ಮಾದರಿಯು ಬಿಡುಗಡೆಯ ಪಟ್ಟಿಯಲ್ಲಿವೆ.

More from DriveSpark

Article Published On: Thursday, March 4, 2021, 19:43 [IST]
English summary
Maruti Suzuki Vitara Brezza Sales Cross 6 Lakh Units Mark In 5 Years. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+