ಜನವರಿ ತಿಂಗಳ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಮಾರುತಿ ಸುಜುಕಿ ವಿಟಾರಾ ಬ್ರೆಝಾ
ಭಾರತದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಕಂಪನಿಯು 2021ರ ಜನವರಿ ತಿಂಗಳ ಮಾರಾಟದ ವರದಿಯನ್ನು ಬಹಿರಂಗಪಡಿಸಿದೆ. ಮಾರುತಿ ಸುಜುಕಿ ಕಂಪನಿಯು ಕಳೆದ ತಿಂಗಳ ಮಾರಾಟ ಪಟ್ಟಿಯಲ್ಲಿ ಪ್ರಾಬಲ್ಯ ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

2021ರ ಜನವರಿ ತಿಂಗಳಿನ ಅತಿ ಹೆಚ್ಚು ಮಾರಾಟವಾದ ಟಾಪ್-10 ಪಟ್ಟಿಯಲ್ಲಿ ವಿಟಾರಾ ಬ್ರೆಝಾ ಸ್ಥಾನವನ್ನು ಪಡೆದುಕೊಂಡಿದೆ. ಕಳೆದ ತಿಂಗಳಿನಲ್ಲಿ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಮಾದರಿಯ 10,623 ಯುನಿಟ್‌ಗಳನ್ನು ಮಾರಾಟವಾಗಿವೆ. ಕಳೆದ 2020ರ ಜನವರಿ ತಿಂಗಳಿನಲ್ಲಿ ಮಾರುತಿ ಸುಜುಕಿ ವಿಟಾರಾ ಬ್ರೆಝಾ 10,134 ಯುನಿಟ್‌ಗಳು ಮಾರಾಟವಾಗಿತ್ತು. ಇದನ್ನು ಕಳೆದ ತಿಂಗಳಿಗೆ ಹೋಲಿಸಿದರೆ ಮಾರಾಟದಲ್ಲಿ ಶೇ.4.82 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

ಆದರೆ ತಿಂಗಳಿನಲ್ಲಿ -ಮಾಸಿಕ ಆಧಾರದ ಮೇಲೆ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಮಾದರಿಯು ಕಳೆದ ತಿಂಗಳ ಮಾರಾಟದಲ್ಲಿ ಶೇ.13.28 ರಷ್ಟು ಕುಸಿತವನ್ನು ಕಂಡಿದೆ. 2020ರ ಡಿಸೆಂಬರ್ ತಿಂಗಳಲ್ಲಿ ವಿಟಾರಾ ಬ್ರೆಝಾ ಮಾದರಿಯ 12,251 ಯುನಿಟ್‌ಗಳು ಮಾರಾಟವಾಗಿತ್ತು.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಕಳೆದ ವರ್ಷದ ಜನವರಿ ತಿಂಗಳಿನಲ್ಲಿ ವಿಟಾರಾ ಬ್ರೆಝಾ ಮಾದರಿಯು ಕೇವಲ 1.3-ಲೀಟರ್ ಡೀಸೆಲ್ ಎಂಜಿನ್‌ನೊಂದಿಗೆ ಲಭ್ಯವಿತ್ತು. ಇನ್ನು 1.5-ಲೀಟರ್ ಪೆಟ್ರೋಲ್ ಎಂಜಿನ್ ಪಡೆಯುವ ಫೇಸ್‌ಲಿಫ್ಟ್ ಆವೃತ್ತಿಯು ಫೆಬ್ರವರಿ 2020ರಲ್ಲಿ ಪಚಯಿಸಿದ್ದರು.

ಆದರೆ ಬಿಎಸ್-6 ಮಾಲಿನ್ಯ ನಿಯಮ ಜಾರಿಯಾಗುವಾಗ 1.3-ಲೀಟರ್ ಡೀಸೆಲ್ ಎಂಜಿನ್ ಅನ್ನು ಸ್ಥಗಿತಗೊಳಿಸಲಾಗಿತ್ತು. ಡೀಸೆಲ್ ವಾಹನವು ಸ್ಥಗಿತಗೊಂಡ ನಂತರವೂ ಖರೀದಿದಾರರಲ್ಲಿ ಭಾರಿ ಜನಪ್ರಿಯತೆಯನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ.
MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಪ್ರಸ್ತುತ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಮಾದರಿಯಲ್ಲಿ 1.5-ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದ್ದು, ಈ ಎಂಜಿನ್ 105 ಬಿಹೆಚ್‍ಪಿ ಪವರ್ ಮತ್ತು 138 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಮಾರುತಿ ಸುಜುಕಿ ವಿಟಾರಾ ಬ್ರೆಝಾ ಎಸ್‍ಯುವಿಯ ಬೆಲೆಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ.31 ಲಕ್ಷದಿಂದ ರೂ.11.40 ಲಕ್ಷಗಳಾಗಿದೆ. ಇನ್ನು ಮಾರುತಿ ಸುಜುಕಿ ವಿಟಾರಾ ಬ್ರೆಝಾ ಭಾರತೀಯ ಮಾರುಕಟ್ಟೆಯಲ್ಲಿ ಕಿಯಾ ಸೊನೆಟ್, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್ ಮತ್ತು ನಿಸ್ಸಾನ್ ಮ್ಯಾಗ್ನೈಟ್ ಕಾರುಗಳಿಗೆ ಪೈಪೋಟಿ ನೀಡುತ್ತದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಮಾರುತಿ ಸುಜುಕಿ ಕಂಫನಿಯು ಟೊಯೊಟಾದೊಂದಿಗೆ ಜಂಟಿಯಾಗಿ ಮುಂದಿನ ತಲೆಮಾರಿ ವಿಟಾರಾ ಬ್ರೆಝಾ ಮಾದರಿಯನ್ನು ಅಭಿವೃದ್ಧಿಪಡಿಸುವುದರಲ್ಲಿ ನಿರತರಾಗಿದ್ದಾರೆ. ಹೊಸ ತಲೆಮಾರಿನ ವಿಟಾರಾ ಬ್ರೆಝಾ ಮಾದರಿಯು 2022ರಲ್ಲಿ ಭಾರತದಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ.

ಪ್ರಸ್ತುತ ಮಾದರಿಯ ಅದೇ 1.5-ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಹೊಸ ತಲೆಮಾರಿನ ಮಾದರಿಯಲ್ಲಿಯು ಅಳವಡಿಸಬಹುದು. ಮಾರುತಿ ಸುಜುಕಿ ಕೂಡ ತನ್ನ 1.5-ಲೀಟರ್ ಡೀಸೆಲ್ ಎಂಜಿನ್ ಅನ್ನು ಶೀಘ್ರದಲ್ಲೇ ಮರಳಿ ತರಲು ಯೋಜಿಸುತ್ತಿದೆ.


Click it and Unblock the Notifications








