ಭಾರತದಲ್ಲಿ ನ್ಯೂ ಜನರೇಷನ್ ಎಸ್-ಕ್ರಾಸ್ ಎಸ್‌ಯುವಿ ಬಿಡುಗಡೆ ಮಾಡಲಿದೆ ಮಾರುತಿ ಸುಜುಕಿ

ಮಾರುತಿ ಸುಜುಕಿ ತನ್ನ ಪ್ರಮುಖ ಕಾರು ಮಾದರಿಗಳನ್ನು ನ್ಯೂ ಜನರೇಷನ್ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆ ಮಾಡುತ್ತಿದ್ದು, ಮಧ್ಯಮ ಕ್ರಮಾಂಕದ ಎಸ್‌ಯುವಿ ಆವೃತ್ತಿಯಾದ ಎಸ್-ಕ್ರಾಸ್ ಮಾದರಿಯು ಶೀಘ್ರದಲ್ಲೇ ಹೊಸ ತಲೆಮಾರಿನ ಆವೃತ್ತಿಯೊಂದಿಗೆ ಬಿಡುಗಡೆಯಾಗುವ ಸಿದ್ದತೆಯಲ್ಲಿದೆ.

ಭಾರತದಲ್ಲಿ ನ್ಯೂ ಜನರೇಷನ್ ಎಸ್-ಕ್ರಾಸ್ ಎಸ್‌ಯುವಿ ಬಿಡುಗಡೆ ಮಾಡಲಿದೆ ಮಾರುತಿ ಸುಜುಕಿ

ಪ್ರಸ್ತುತ ಮಾರುಕಟ್ಟೆಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಹಲವಾರು ಮಾದರಿಗಳ ಮಾರಾಟವನ್ನು ಹೊಂದಿರುವ ಮಾರುತಿ ಸುಜುಕಿಯು ಟಾಪ್ 10 ಕಾರುಗಳ ಮಾರಾಟ ಪಟ್ಟಿಯಲ್ಲಿ ಒಟ್ಟು 6 ಕಾರು ಮಾದರಿಗಳ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದು, ಮುಂದಿನ 2 ವರ್ಷಗಳ ಅವಧಿಗಾಗಿ ಮತ್ತಷ್ಟು ಹೊಸ ಕಾರು ಉತ್ಪನ್ನಗಳನ್ನು ಬಿಡುಗಡೆಗಾಗಿ ಸಿದ್ದತೆ ನಡೆಸುತ್ತಿದೆ. ಮಾಹಿತಿಗಳ ಪ್ರಕಾರ ಮಾರುತಿ ಕಂಪನಿಯು ಮುಂದಿನ ಎರಡು ವರ್ಷದಲ್ಲಿ ಮೂರು ಹೊಸ ಕಾರುಗಳನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ.

ಭಾರತದಲ್ಲಿ ನ್ಯೂ ಜನರೇಷನ್ ಎಸ್-ಕ್ರಾಸ್ ಎಸ್‌ಯುವಿ ಬಿಡುಗಡೆ ಮಾಡಲಿದೆ ಮಾರುತಿ ಸುಜುಕಿ

ಹೊಸ ಎಸ್‌ಯುವಿ ಕಾರುಗಳ ಪಟ್ಟಿಯಲ್ಲಿ ಮೆಡ್ ಇನ್ ಇಂಡಿಯಾ ಜಿಮ್ನಿ, ಎರಡನೇ ತಲೆಮಾರಿನ ವಿಟಾರಾ ಬ್ರೆಝಾ ಕಂಪ್ಯಾಕ್ಟ್ ಎಸ್‌ಯುವಿ, ವಿಟಾರಾ ಫುಲ್ ಸೈಜ್ ಎಸ್‌ಯುವಿ, ಹೊಸ ತಲೆಮಾರಿನ ಎಸ್ ಕ್ರಾಸ್, ಒಂದು ಹೊಸ ಕ್ರಾಸ್ ಓವರ್ ಎಸ್‌ಯುವಿ, ಹೊಚ್ಚ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ.

ಭಾರತದಲ್ಲಿ ನ್ಯೂ ಜನರೇಷನ್ ಎಸ್-ಕ್ರಾಸ್ ಎಸ್‌ಯುವಿ ಬಿಡುಗಡೆ ಮಾಡಲಿದೆ ಮಾರುತಿ ಸುಜುಕಿ

ಮಾರುತಿ ಸುಜುಕಿಯು ಪ್ರಸ್ತುತ ಮಾರುಕಟ್ಟೆಯಲ್ಲಿನ ಎಸ್-ಕ್ರಾಸ್ ಹೊಸ ತಲೆಮಾರಿನ ಆವೃತ್ತಿಯೊಂದಿಗೆ ಭಾರೀ ಬೇಡಿಕೆಯಲ್ಲಿರುವ ಕಿಯಾ ಸೆಲ್ಟೊಸ್ ಮತ್ತು ಹ್ಯುಂಡೈ ಕ್ರೆಟಾ ಕಾರಿಗೆ ಪೈಪೋಟಿಯಾಗಿ ಭಾರೀ ಬದಲಾವಣೆಯೊಂದಿಗೆ ಬಿಡುಗಡೆ ಮಾಡುತ್ತಿದೆ.

ಭಾರತದಲ್ಲಿ ನ್ಯೂ ಜನರೇಷನ್ ಎಸ್-ಕ್ರಾಸ್ ಎಸ್‌ಯುವಿ ಬಿಡುಗಡೆ ಮಾಡಲಿದೆ ಮಾರುತಿ ಸುಜುಕಿ

ಹೊಸ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಕಾರು ಮಾರಾಟದಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿರುವ ಹೊಸ ಎಸ್ ಕ್ರಾಸ್ ಮಾದರಿಯು ಈ ವರ್ಷದ ಕೊನೆಯಲ್ಲಿ ಇಲ್ಲವೇ 2022ರ ಆರಂಭದಲ್ಲಿ ಬಿಡುಗಡೆಯಾಗಲಿದ್ದು, ಹೊಸ ಎಂಜಿನ್ ಆಯ್ಕೆ ಪಡೆದುಕೊಳ್ಳುವ ಸಾಧ್ಯತೆಗಳಿವೆ. ಇನ್ನು ಬಿಸ್-6 ಎಮಿಷನ್ ಜಾರಿ ನಂತರ ಹೊಸ ಕಾರುಗಳ ಮಾರಾಟದಲ್ಲಿ ಭಾರೀ ಬದಲಾವಣೆ ಪರಿಚಯಿಸಿರುವ ಮಾರುತಿ ಸುಜುಕಿಯು ಬಜೆಟ್ ಕಾರುಗಳ ಮಾದರಿಗಳ ಜೊತೆಗೆ ಪ್ರೀಮಿಯಂ ಕಾರುಗಳ ಮಾರಾಟದಲ್ಲೂ ಮೇಲೂ ಹೆಚ್ಚಿನ ಒತ್ತು ನೀಡುತ್ತಿದೆ.

ಭಾರತದಲ್ಲಿ ನ್ಯೂ ಜನರೇಷನ್ ಎಸ್-ಕ್ರಾಸ್ ಎಸ್‌ಯುವಿ ಬಿಡುಗಡೆ ಮಾಡಲಿದೆ ಮಾರುತಿ ಸುಜುಕಿ

ಹೊಸ ಎಮಿಷನ್ ಜಾರಿ ನಂತರ ಡೀಸೆಲ್ ಕಾರುಗಳ ಮಾರಾಟವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿರುವ ಮಾರುತಿ ಸುಜುಕಿ ಕಂಪನಿಯು ಪೆಟ್ರೋಲ್, ಪೆಟ್ರೋಲ್ ಸ್ಮಾರ್ಟ್ ಹೈಬ್ರಿಡ್ ಮತ್ತು ಸಿಎನ್‌ಜಿ ಕಾರುಗಳ ಮೇಲೆ ಹೆಚ್ಚು ಒತ್ತು ನೀಡುತ್ತಿದ್ದು, ಹೊಸ ಕಾರುಗಳು ಡೀಸೆಲ್ ಮಾದರಿಗಿಂತಲೂ ಹೆಚ್ಚಿನ ಬೇಡಿಕೆ ಪಡೆದುಕೊಳ್ಳುತ್ತಿವೆ.

ಭಾರತದಲ್ಲಿ ನ್ಯೂ ಜನರೇಷನ್ ಎಸ್-ಕ್ರಾಸ್ ಎಸ್‌ಯುವಿ ಬಿಡುಗಡೆ ಮಾಡಲಿದೆ ಮಾರುತಿ ಸುಜುಕಿ

ಹೊಸ ಕಾರು ವಿಟಾರಾ ಬ್ರೆಝಾ ಕಾರುಗಳಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್‌ನೊಂದಿಗೆ ಹೊಸ ಎಂಜಿನ್ ಆಯ್ಕೆ ಪಡೆದುಕೊಳ್ಳಲಿದ್ದು, ಹೊಸ ಕಾರು ಕಿಯಾ ಸೆಲ್ಟೊಸ್ ಮತ್ತು ಹ್ಯುಂಡೈ ಕ್ರೆಟಾ ಕಾರು ಮಾದರಿಗಳಿಗೆ ಭರ್ಜರಿ ಪೈಟೋಟಿ ನೀಡಲಿದೆ.

ಭಾರತದಲ್ಲಿ ನ್ಯೂ ಜನರೇಷನ್ ಎಸ್-ಕ್ರಾಸ್ ಎಸ್‌ಯುವಿ ಬಿಡುಗಡೆ ಮಾಡಲಿದೆ ಮಾರುತಿ ಸುಜುಕಿ

ಸದ್ಯ ಮಾರುಕಟ್ಟೆಯಲ್ಲಿರುವ ಎಸ್-ಕ್ರಾಸ್ ಕಾರು ಮಾದರಿಯು ಮೊದಲ ಬಾರಿಗೆ ಪೆಟ್ರೋಲ್ ಎಂಜಿನ್‌ನೊಂದಿಗೆ ಮಾರಾಟಗೊಳ್ಳುತ್ತಿದ್ದು, ಮಾರುತಿ ಸುಜುಕಿಯು ಬಿಎಸ್-6 ಎಮಿಷನ್ ನಿಯಮ ಅನುಸಾರವಾಗಿ ಹೊಸ ಎಂಜಿನ್ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಿದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಭಾರತದಲ್ಲಿ ನ್ಯೂ ಜನರೇಷನ್ ಎಸ್-ಕ್ರಾಸ್ ಎಸ್‌ಯುವಿ ಬಿಡುಗಡೆ ಮಾಡಲಿದೆ ಮಾರುತಿ ಸುಜುಕಿ

ಬಿಎಸ್-6 ಎಂಜಿನ್ ಹೊಂದಿರುವ ಎಸ್-ಕ್ರಾಸ್ ಪೆಟ್ರೋಲ್ ಮಾದರಿಯು ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನ ಪ್ರೇರಣೆಯ 1.5-ಲೀಟರ್ ಕೆ15ಬಿ ಎಂಜಿನ್ ಹೊಂದಿದ್ದು, 5-ಸ್ಪೀಡ್ ಮ್ಯಾನುವಲ್ ಮತ್ತು 4-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಪಡೆದುಕೊಂಡಿದೆ.

ಭಾರತದಲ್ಲಿ ನ್ಯೂ ಜನರೇಷನ್ ಎಸ್-ಕ್ರಾಸ್ ಎಸ್‌ಯುವಿ ಬಿಡುಗಡೆ ಮಾಡಲಿದೆ ಮಾರುತಿ ಸುಜುಕಿ

ಈ ಮೂಲಕ ಹೊಸ ಎಂಜಿನ್ ಮಾದರಿಯು ಮೈಲೇಜ್ ವಿಚಾರದಲ್ಲೂ ಗ್ರಾಹಕರನ್ನು ಸೆಳೆಯುತ್ತಿದ್ದು, ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನದೊಂದಿಗೆ ಮ್ಯಾನುವಲ್ ಮಾದರಿಯು ಪ್ರತಿ ಲೀಟರ್‌ ಪೆಟ್ರೋಲ್ ಗರಿಷ್ಠ 18.55ಕಿ.ಮೀ ಮತ್ತು ಆಟೋಮ್ಯಾಟಿಕ್ ಆವೃತ್ತಿಯು ಪ್ರತಿ ಲೀಟರ್‌ಗೆ 18.43 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಭಾರತದಲ್ಲಿ ನ್ಯೂ ಜನರೇಷನ್ ಎಸ್-ಕ್ರಾಸ್ ಎಸ್‌ಯುವಿ ಬಿಡುಗಡೆ ಮಾಡಲಿದೆ ಮಾರುತಿ ಸುಜುಕಿ

ಎಸ್-ಕ್ರಾಸ್ ಕಾರಿನಲ್ಲಿ ಈ ಹಿಂದೆ ನೀಡಲಾಗುತ್ತಿದ್ದ 1.3-ಲೀಟರ್ ಡೀಸೆಲ್ ಮಾದರಿಯು ಪ್ರತಿ ಲೀಟರ್‌ಗೆ 25.01 ಕಿ.ಮೀ ಮೈಲಜ್ ಹೊಂದಿತ್ತು. ಆದರೆ ಬಿಎಸ್-6 ವೈಶಿಷ್ಟ್ಯತೆಗಳನ್ನು ಅಳವಡಿಸಿಕೊಳ್ಳಲು ಸಾಧ್ಯವಿಲ್ಲದ ಹಿನ್ನಲೆಯಲ್ಲಿ ಪೆಟ್ರೋಲ್ ಮಾದರಿಗಳ ಮೇಲೆ ಹೆಚ್ಚು ಗಮನಹರಿಸಲಾಗಿದೆ.

Article Published On: Wednesday, January 6, 2021, 8:45 [IST]
English summary
Maruti Suzuki Will Launch Next-Gen S-Cross Soon. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+