ಬಲೆನೊ ಆಧಾರಿತ ಹೊಸ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಲಿದೆ ಮಾರುತಿ ಸುಜುಕಿ

ಭಾರತದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ತನ್ನ ಸರಣಿಯಲ್ಲಿ ವೈವಿಧ್ಯಮಯ ಮಾದರಿಗಳನ್ನು ಹೊಂದಿದೆ. ವಿಶೇಷವೆಂದರೆ ಮಾರುತಿ ಸುಜುಕಿ ಕಂಪನಿಯ ಬಹುತೇಕ ಎಲ್ಲಾ ಮಾದರಿಗಳು ದೇಶಿಯ ಮಾರುಕಟ್ಟೆಯಲ್ಲಿ ಜನಪ್ರಿಯವಾಗಿವೆ.

ಬಲೆನೊ ಆಧಾರಿತ ಹೊಸ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಲಿದೆ ಮಾರುತಿ ಸುಜುಕಿ

ದೇಶಿಯ ಮಾರುಕಟ್ಟೆಯಲ್ಲಿ ಕಾಂಪ್ಯಾಕ್ಟ್ ಎಸ್‍ಯುವಿ ವಿಭಾಗವು ಹೆಚ್ಚು ಪೈಪೋಟಿಯಿಂದ ಕೂಡಿದೆ. ಭಾರತದಲ್ಲಿ ಕಾಂಪ್ಯಾಕ್ಟ್ ವಿಭಾಗದ ಮಾದರಿಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಇದರಿಂದ ಹಲವು ಕಾರು ತಯಾರಕ ಕಾಂಪ್ಯಾಕ್ಟ್ ಎಸ್‍ಯುವಿಗಳನ್ನು ಹೆಚ್ಚಾಗಿ ಬಿಡುಗಡೆಗೊಳಿಸುತ್ತಿದ್ದಾರೆ. ಬ್ರೆಝಾ ಮಾದರಿ ಬಿಡುಗಡೆಗೊಳಿಸುವ ಮೂಲಕ ಮಾರುತಿ ಸುಜುಕಿ ಕಂಪನಿಯು ಕಾಂಪ್ಯಾಕ್ಟ್ ವಿಭಾಗಕ್ಕೆ ಕಾಲಿಟ್ಟಿತ್ತು.

ಬಲೆನೊ ಆಧಾರಿತ ಹೊಸ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಲಿದೆ ಮಾರುತಿ ಸುಜುಕಿ

ಕಾಂಪ್ಯಾಕ್ಟ್ ಎಸ್‍ಯುವಿಗಳು ಸೀಟ್ ಎತ್ತರವಿರುತ್ತದೆ, ಇದು ಲಾಂಗ್ ರೈಡ್ ನಲ್ಲಿ ಸುಖಕರ ಪ್ರಯಾಣಕ್ಕೆ ಹೆಚ್ಚು ಸಹಕಾರಿಯಾಗಿರುತ್ತದೆ. ಅಲ್ಲದೇ ಎಲ್ಲಾ ವಯೋಮಾನದವರಿಗೆ ಸುಲಭವಾಗಿ ಈ ಎಸ್‍ಯುವಿಯ ಒಳಗೆ ಪ್ರವೇಶಿಸಬಹುದು. ಈ ಎಲ್ಲಾ ಕಾರಣಗಳಿಂದ ಗ್ರಾಹಕರು ಹೆಚ್ಚಾಗಿ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಇಷ್ಟಪಡುತ್ತಾರೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಬಲೆನೊ ಆಧಾರಿತ ಹೊಸ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಲಿದೆ ಮಾರುತಿ ಸುಜುಕಿ

ಇದೀಗ ಮಾರುತಿ ಸುಜುಕಿ ಕಂಪನಿಯು ಮತ್ತೊಂದು ಹೊಸ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಲಿದೆ. ವರದಿಗಳ ಪ್ರಕಾರ, ಮಾರುತಿ ಸುಜುಕಿ ಕಂಪನಿಯು ಬಲೆನೊ ಆಧಾರಿತ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಲಾಗುತ್ತದೆ.

ಬಲೆನೊ ಆಧಾರಿತ ಹೊಸ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಲಿದೆ ಮಾರುತಿ ಸುಜುಕಿ

ಬಲೆನೊ ಕಾರನ್ನು ಆಧರಿಸಿರುವ ಹೊಸ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಹಿಯರ್‌ಟೆಕ್ಟ್ ಪ್ಲಾಟ್‌ಫಾರ್ಮ್ ಅನ್ನು ಬಳಿಸಿ ತಯಾರಿಸಲಾಗುತ್ತದೆ. ಈ ಕಾಂಪ್ಯಾಕ್ಟ್ ಎಸ್‍ಯುವಿಯಲ್ಲಿ 1.2-ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಬಹುದು.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಬಲೆನೊ ಆಧಾರಿತ ಹೊಸ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಲಿದೆ ಮಾರುತಿ ಸುಜುಕಿ

ಈ ಎಂಜಿನ್ 88 ಬಿಹೆಚ್‍ಪಿ ಪವರ್ ಮತ್ತು 113 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಈ ಎಂಜಿನ್ ಅನ್ನು ಸ್ಪೀಡ್ ಮ್ಯಾನ್ಯುವಲ್ ಟ್ರಾನ್ಸ್‌ಮಿಷನ್ ನೊಂದಿಗೆ ಜೋಡಿಸಲಾಗುತ್ತದೆ. ಸಿವಿಟಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಕೂಡ ನೀಡಬಹುದು.

ಬಲೆನೊ ಆಧಾರಿತ ಹೊಸ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಲಿದೆ ಮಾರುತಿ ಸುಜುಕಿ

ಹೊಸ ಕಾಂಪ್ಯಾಕ್ಟ್ ಎಸ್‍ಯುವಿಯು ಸ್ವಲ್ಪ ಕೂಪ್ ಅಥವಾ ಮಿನಿ ಕ್ರಾಸ್ಒವರ್ ನಂತೆ ವಿನ್ಯಾಸಗೊಳಿಸಬಹುದು. ಇದನ್ನು ಬಲೆನೊ ಪ್ಲಾಟ್‌ಫಾರ್ಮ್ ಮೂಲವನ್ನೇ ಆಧಾರಿಸಿ ತಯಾರಿಸಲಾಗುತ್ತದೆ.

MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಬಲೆನೊ ಆಧಾರಿತ ಹೊಸ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಲಿದೆ ಮಾರುತಿ ಸುಜುಕಿ

ಹೊಸ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಬಲೆನೊ ಕಾರಿನ ಸೋದರ ಎಂದು ಕೂಡ ಕರೆಯಬಹುದು. ಮಾರುತಿ ಸುಜುಕಿ ಕಂಪನಿಯು ತಮ್ಮ ಪೋರ್ಟ್ಫೋಲಿಯೊವನ್ನು ತ್ವರಿತವಾಗಿ ವಿಸ್ತರಿಸಲು ಮುಂದಾಗಿದೆ.

ಬಲೆನೊ ಆಧಾರಿತ ಹೊಸ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಲಿದೆ ಮಾರುತಿ ಸುಜುಕಿ

ದೇಶಿಯ ಮಾರುಕಟ್ಟೆಯಲ್ಲಿ ಇತರ ಕಾರು ತಯಾರಕರು ಕೂಡ ಉತ್ತಮ ಪೈಪೋಟಿಯನ್ನು ನೀಡುತ್ತಿದೆ. ಇದರಿಂದ ಭಾರತದ ಅತಿ ದೊಡ್ಡ ಕಾರು ಉತ್ಪಾದಕ ಕಂಪನಿಯ ಸ್ಥಾನವನ್ನು ಉಳಿಸಿಕೊಳ್ಳಲು ಮಾರುತಿ ಸುಜುಕಿ ಹೊಸ ಮಾರುಕಟ್ಟೆ ತಂತ್ರಗಳನ್ನು ಅನುಸರಿಸುತ್ತಿದೆ.

ಬಲೆನೊ ಆಧಾರಿತ ಹೊಸ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಲಿದೆ ಮಾರುತಿ ಸುಜುಕಿ

ಬಲೆನೊ ಹ್ಯಾಚ್‌ಬ್ಯಾಕ್‌ ಮಾರುತಿ ಸುಜುಕಿ ಕಾರುಗಳ ಸರಣಿಯಲ್ಲಿ ಅತ್ಯಂತ ಯಶಸ್ವಿ ಮಾದರಿಗಳಲ್ಲಿ ಒಂದಾಗಿದೆ. ಮಾರುತಿ ಸುಜುಕಿ ಕಂಪನಿಯು 2015ರಲ್ಲಿ ಮೊದಲ ಬಾರಿಗೆ ಬಲೆನೊ ಕಾರನ್ನು ಬಿಡುಗಡೆಗೊಳಿಸಿತ್ತು. ಇದು ಪ್ರೀಮಿಯಂ ಹ್ಯಾಚ್‌ಬ್ಯಾಕ್ ವಿಭಾಗದಲ್ಲಿ ಹೆಚ್ಚು ಮಾರಾಟವಾದ ಕಾರುಗಳಲ್ಲಿ ಒಂದಾಗಿದೆ. ಇದೇ ಬಲೆನೊ ಆಧಾರಿಸಿ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ತಯಾರಿಸಲು ಸಜ್ಜಾಗುತ್ತಿದೆ.

ಬಲೆನೊ ಆಧಾರಿತ ಹೊಸ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಲಿದೆ ಮಾರುತಿ ಸುಜುಕಿ

ಒಟ್ಟಾರೆ ಮಾರುತಿ ಸುಜುಕಿ ಅತಿ ಹೆಚ್ಚು ಪೈಪೋಟಿ ಹೊಂದಿರುವ ಕಾಂಪ್ಯಾಕ್ಟ್ ಎಸ್‍ಯುವಿ ವಿಭಾಗದಲ್ಲಿ ಹೊಸ ಮಾದರಿಯನ್ನು ಬಿಡುಗಡೆಗೊಳಿಸಲು ಮುಂದಾಗಿರುವುದು ಉತ್ತಮ ಹೆಚ್ಚೆ ಎಂದು ಹೇಳಬಹುದು. ಬ್ರೆಝಾ ಎಸ್‍ಯುವಿಯ ಜೊತೆ ಈ ಹೊಸ ಮಾದರಿಯು ಸೇರಿ ಮಾರಾಟದಲ್ಲಿ ಒಟ್ಟಾರೆ ಬೆಳವಣಿಗೆಯಲ್ಲಿ ಹೆಚ್ಚು ಸಹಕಾರಿಯಾಗಿರುತ್ತದೆ.

Most Read Articles

Kannada
English summary
Maruti Suzuki To Launch A New “Baleno-based” Compact-Suv. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X