ಜನವರಿ ತಿಂಗಳಿನಲ್ಲಿ ಮಾರುತಿ ಎಕ್ಸ್‌ಎಲ್6 ಕಾರು ಮಾರಾಟದಲ್ಲಿ ಶೇ.305ರಷ್ಟು ಹೆಚ್ಚಳ
ಭಾರತದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಕಂಪನಿಯು 2021ರ ಜನವರಿ ತಿಂಗಳ ಮಾರಾಟದ ವರದಿಯನ್ನು ಇತ್ತೀಚೆಗೆ ಬಹಿರಂಗಪಡಿಸಿದೆ. ಮಾರುತಿ ಸುಜುಕಿ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟದಲ್ಲಿ ಪ್ರಾಬಲ್ಯವನ್ನು ಮುಂದುವರೆಸಿದೆ.

2021ರ ಜನವರಿ ತಿಂಗಳಲ್ಲಿ ವಿಶೇಷವಾಗಿ ಎಂಪಿವಿ ವಿಭಾಗದ ಮಾರಾಟದಲ್ಲಿಯು ಮಾರುತಿ ಸುಜುಕಿ ಉತ್ತಮ ಬೆಳವಣಿಗೆಯನ್ನು ಸಾಧಿಸಿದೆ. ಕಳೆದ ತಿಂಗಳು ಮಾರುತಿ ಮಾರುತಿ ಸುಜುಕಿಯ ಪ್ರೀಮಿಯಂ ಎಂಪಿವಿ ಎಕ್ಸ್‌ಎಲ್6 ಮಾದರಿಯ 3,119 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. ಕಳೆದ ವರ್ಷದ ಜನವರಿಯೊಂದಿಗೆ ಹೋಲಿಸಿದರೆ, ಮಾರುತಿ ಸುಜುಕಿ ಎಕ್ಸ್‌ಎಲ್6 ಎಂಪಿವಿಯು ವರ್ಷದಿಂದ ವರ್ಷಕ್ಕೆ ಶೇ.305.06 ರಷ್ಟು ಭಾರೀ ಬೆಳವಣಿಗೆಯನ್ನು ಕಂಡಿದೆ.

2020ರ ಡಿಸೆಂಬರ್ ತಿಂಗಳಲ್ಲಿ ಮಾರುತಿ ಎಕ್ಸ್‌ಎಲ್6 ಮಾದರಿಯ 3,088 ಯುನಿಟ್‌ಗಳು ಮಾರಾಟವಾಗಿತ್ತು, ಇದನ್ನು 2021ರ ಜನವರಿ ತಿಂಗಳಿಗೆ ಹೋಲಿಸಿದರೆ ಕೇವಲ ಶೇ.1 ರಷ್ಟು ತಿಂಗಳಿಗೊಮ್ಮೆ ಬೆಳವಣಿಗೆಯನ್ನು ಸಾಧಿಸಲು ಮಾತ್ರ ಸಾಧ್ಯವಾಗಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಇನ್ನು ಮಾರುತಿ ಸುಜುಕಿ ಕಂಪನಿಯು ಇನ್ ಪುಟ್ ವೆಚ್ಚವನ್ನು ಸರಿದೂಗಿಸಲು ಕಳೆದ ತಿಂಗಳು ತನ್ನ ಸರಣಿಯಲ್ಲಿರುವ ಕಾರುಗಳ ಬೆಲೆಯನ್ನು ಏರಿಸಿದ್ದರು, ಆದರೆ ಎಕ್ಸ್‌ಎಲ್6 ಎಂಪಿವಿಯ ಆಟೋಮ್ಯಾಟಿಕ್ ರೂಪಾಂತರಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ,

ಇದು ಕೂಡ ಮಾರುತಿ ಸುಜುಕಿ ಎಕ್ಸ್‌ಎಲ್6 ಕಾರಿನ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಲು ನೆರವಾಗಿದೆ. ಮಾರುತಿ ಸುಜುಕಿ ಎಕ್ಸ್‌ಎಲ್6 ಕಾರು ಭಾರತೀಯ ಮಾರುಕಟ್ಟೆಯಲ್ಲಿ ಭರ್ಜರಿ ಬೇಡಿಕೆಯನ್ನು ಪಡೆದುಕೊಂಡಿದೆ.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಮಾರುತಿ ಸುಜುಕಿ ಎಕ್ಸ್‌ಎಲ್6 ಕಾರಿನ ಬಗ್ಗೆ ಹೇಳುವುದಾದರೆ, ಇದರಲ್ಲಿ 1.5-ಲೀಟರ್ ಇನ್-ಲೈಮ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 105 ಬಿಹೆಚ್‍ಪಿ ಪವರ್ ಮತ್ತು 138 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಮತ್ತು 4-ಸ್ಪೀಡ್ ಟಾರ್ಕ್ ಕರ್ನವಾಟರ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ನೀಡಿದೆ. ಮೈಲ್ಡ್-ಹೈಬ್ರಿಡ್ ಸಿಸ್ಟಂ ಮತ್ತು ಐಡಲ್ ಸ್ಟಾರ್ಟ್-ಸ್ಟಾಪ್ ಕಾರ್ಯಗಳು ಎಂಪಿವಿಯಲ್ಲಿ ಸ್ಯಾಂಡರ್ಡ್ ಆಗಿ ಲಭ್ಯವಿದೆ.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಟೊಯೊಟಾ

ಮಾರುತಿ ಸುಜುಕಿ ಎಕ್ಸ್‌ಎಲ್6 ಮಾದರಿಯು 6 ಸೀಟರ್ ಆಗಿದೆ. ಎರಡನೇ ಸಾಲಿನಲ್ಲಿ ಕ್ಯಾಪ್ಟನ್ ಸೀಟಗಳನ್ನು ನೀಡಲಾಗಿದೆ. ಇನ್ನು ಈ ಕಾರಿನಲ್ಲಿ 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿದೆ. ಇದು ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿಯನ್ನು ಹೊಂದಿದೆ.

ಇನ್ನು ಈ ಕಾರಿನಲ್ಲಿ ಆಟೋಮ್ಯಾಟಿಕ್ ಕ್ಲೈಮೆಂಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್, ಕೀ ಲೆಸ್ ಎಂಟ್ರಿ, ಪುಶ್-ಬಟನ್ ಸ್ಟ್ರಾರ್ಟ್/ಆಫ್, ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಡಿಆರ್‌ಎಲ್‌ಗಳು ಮತ್ತು ಟೈಲ್‌ಲೈಟ್‌ಗಳು ಮತ್ತು 15-ಇಂಚಿನ ಅಲಾಯ್ ವ್ಹೀಲ್ ಗಳನ್ನು ಹೊಂದಿವೆ.


Click it and Unblock the Notifications








