ಭಾರತದಲ್ಲಿ 25 ಲಕ್ಷ ಮಾರಾಟದ ಗಡಿ ತಲುಪಿ ಹೊಸ ಮೈಲಿಗಲ್ಲು ಸಾಧಿಸಿದ Maruti Swift

ಭಾರತೀಯ ಮಾರುಕಟ್ಟೆಯಲ್ಲಿ ಎಷ್ಟೇ ಅತ್ಯಾಧುನಿಕ ಕಾರುಗಳು ಬಿಡುಗಡೆಯಾದರೂ ಮಾರುತಿ ಸ್ವಿಫ್ಟ್(Maruti Swift) ಕಳೆದ 15 ವರ್ಷದಿಂದ ದೇಶಿಯ ಅತಿ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಒಂದಾಗಿದೆ. ದೇಶಿಯ ಮಾರುಕಟ್ಟೆಯಲ್ಲಿ ಬಹುಬೇಡಿಕೆಯೊಂದಿಗೆ ದಾಖಲೆಯ ಮಟ್ಟದಲ್ಲಿ ಜನಪ್ರಿಯ ಸ್ವಿಫ್ಟ್ ಕಾರು ಮಾರಾಟವಾಗುತ್ತಿದೆ.

ಭಾರತದಲ್ಲಿ 25 ಲಕ್ಷ ಮಾರಾಟದ ಗಡಿ ತಲುಪಿ ಹೊಸ ಮೈಲಿಗಲ್ಲು ಸಾಧಿಸಿದ Maruti Swift

2005ರಲ್ಲಿ ಬಿಡುಗಡೆಯಾದ ಮಾರುತಿ ಸುಜುಕಿ ಸ್ವಿಫ್ಟ್ ದೇಶದಲ್ಲಿ 2.5 ಮಿಲಿಯನ್(25 ಲಕ್ಷ) ಯುನಿಟ್ ಗಳ ಒಟ್ಟು ಮಾರಾಟವನ್ನು ಗಳಿಸಿ ಹೊಸ ಮೈಲಿಗಲ್ಲನ್ನು ಸಾಧಿಸಿದೆ. ಅದರ 16 ವರ್ಷಗಳ ಅಸ್ತಿತ್ವದಲ್ಲಿ, ಹ್ಯಾಚ್‌ಬ್ಯಾಕ್ ಯಾವಾಗಲೂ ಅದರ ಆಧುನಿಕ ಸ್ಟೈಲಿಂಗ್, ದಕ್ಷ ಪವರ್‌ಟ್ರೇನ್‌ಗಳು, ಮೈಲೇಕ್ ಮತ್ತು ಅದರ ಸಾಮರ್ಥ್ಯಕ್ಕಾಗಿ ಹೆಚ್ಚು ಜನಪ್ರಿಯತೆಯನ್ನು ಗಳಿಸಿದೆ. ಈ ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್‌ನ ಕಾರ್ಯನಿರ್ವಾಹಕ ನಿರ್ದೇಶಕರು (ಮಾರ್ಕೆಟಿಂಗ್ ಮತ್ತು ಸೇಲ್ಸ್) ಶ್ರೀ ಶಶಾಂಕ್ ಶ್ರೀವಾಸ್ತವ ಅವರು, 2020-2021ರ ಆರ್ಥಿಕ ವರ್ಷದಲ್ಲಿ ಸ್ವಿಫ್ಟ್ ಭಾರತದ ಅತಿ ಹೆಚ್ಚು ಮಾರಾಟವಾದ ಕಾರು ಎಂದು ಹೇಳಿದರು.

ಭಾರತದಲ್ಲಿ 25 ಲಕ್ಷ ಮಾರಾಟದ ಗಡಿ ತಲುಪಿ ಹೊಸ ಮೈಲಿಗಲ್ಲು ಸಾಧಿಸಿದ Maruti Swift

ಮಾತನ್ನು ಮುಂದುವರಿಸಿ, ಎಲ್ಲಾ ಮೂರು ತಲೆಮಾರುಗಳಿಗೆ ICOTY ಪ್ರಶಸ್ತಿಗಳನ್ನು ಗೆದ್ದ ಏಕೈಕ ಕಾರು ಇದು. ಮಾರುತಿ ಸ್ವಿಫ್ಟ್‌ನ 52% ಕ್ಕಿಂತ ಹೆಚ್ಚು ಗ್ರಾಹಕರು 35 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದಾರೆ ಮತ್ತು ಯುವ ಖರೀದಿದಾರರಲ್ಲಿ ಅದರ ಜನಪ್ರಿಯತೆಯನ್ನು ತೋರಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಭಾರತದಲ್ಲಿ 25 ಲಕ್ಷ ಮಾರಾಟದ ಗಡಿ ತಲುಪಿ ಹೊಸ ಮೈಲಿಗಲ್ಲು ಸಾಧಿಸಿದ Maruti Swift

ಪ್ರಸ್ತುತ, ಮಾರುತಿ ಸ್ವಿಫ್ಟ್ ಕಾರಿನ ಆರಂಬಿಕ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.5.84 ಲಕ್ಷಗಳಾಗಿದೆ, ಮಾಡೆಲ್ ಲೈನ್‌ಅಪ್ 9 ವೆರಿಯಂಟ್‌ಗಳಲ್ಲಿ 1.2 ಎಲ್ ಡ್ಯುಯಲ್‌ಜೆಟ್ ಪೆಟ್ರೋಲ್ ಇಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 89 ಬಿಹೆಚ್‌ಪಿ ಪವರ್ ಮತ್ತು 113 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ,

ಭಾರತದಲ್ಲಿ 25 ಲಕ್ಷ ಮಾರಾಟದ ಗಡಿ ತಲುಪಿ ಹೊಸ ಮೈಲಿಗಲ್ಲು ಸಾಧಿಸಿದ Maruti Swift

ಮೋಟಾರ್ ಅನ್ನು ಸ್ಟಾರ್ಟ್/ಸ್ಟಾಪ್ ಫಂಕ್ಷನ್ ಮೂಲಕ ಹೆಚ್ಚಿಸಲಾಗಿದ್ದು ಅದು ಇಂಧನ ಕ್ಷಮತೆಯನ್ನು ಹೆಚ್ಚಿಸುತ್ತದೆ. ಇದು ARAI- ಪ್ರಮಾಣೀಕೃತ ಮೈಲೇಜ್ ಅನ್ನು 23.20 ಕಿ.ಮೀ ಆಗಿದೆ. ಇನ್ನು ಈ ಎಂಜಿನ್ ನೊಂದಿಗೆ ಮ್ಯಾನುಯಲ್ ಗೇರ್ ಬಾಕ್ಸ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ.

ಭಾರತದಲ್ಲಿ 25 ಲಕ್ಷ ಮಾರಾಟದ ಗಡಿ ತಲುಪಿ ಹೊಸ ಮೈಲಿಗಲ್ಲು ಸಾಧಿಸಿದ Maruti Swift

ಈ ಮಾರುತಿ ಸ್ವಿಫ್ಟ್ ಕಾರಿನಲ್ಲಿ ಆಲ್-ಎಲ್ಇಡಿ ಲೈಟಿಂಗ್ ಸಿಸ್ಟಂ(ಹೆಡ್‌ಲೈಟ್‌ಗಳು, ಡಿಆರ್‌ಎಲ್‌ಗಳು, ಟೈಲ್‌ಲೈಟ್‌ಗಳು) ಅನ್ನು ಹೊಂದಿದೆ. ಇನ್ನು 7 ಇಂಚಿನ ಟಚ್‌ಸ್ಕ್ರೀನ್ ಹೊಂದಿರುವ ಸ್ಮಾರ್ಟ್‌ಪ್ಲೇ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಅಳವಡಿಸಲಾಗಿದೆ. ಈ ಸಿಸ್ಟಂ ನಲ್ಲಿ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇ ಕನೆಕ್ಟಿವಿಟಿಯನ್ನು ಕೂಡ ಒಳಗೊಂಡಿರುತ್ತದೆ.

ಭಾರತದಲ್ಲಿ 25 ಲಕ್ಷ ಮಾರಾಟದ ಗಡಿ ತಲುಪಿ ಹೊಸ ಮೈಲಿಗಲ್ಲು ಸಾಧಿಸಿದ Maruti Swift

ಇನ್ನು ಇದರೊಂದಿಗೆ ಮಲ್ಟಿ-ಕಲರ್ ಎಂಐಡಿ, ಫ್ಲಾಟ್ ಸಂಯೋಜಿತ ಕಂಟ್ರೋಲ್ ಗಳು, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ, ಆಟೋಮ್ಯಾಟಿಕ್ ಹೆಡ್‌ಲ್ಯಾಂಪ್‌ಗಳು ಇತ್ಯಾದಿಗಳೊಂದಿಗೆ ಬಾಟಮ್ ಸ್ಟೀಯರಿಂಗ್ ವ್ಹೀಲ್ ಅನ್ನು ಪಡೆಯುತ್ತದೆ. ಈ ಸ್ವಿಫ್ಟ್ ಕಾರಿನ ಮುಂಭಾಗದಲ್ಲಿ ಕ್ರೋಮ್ ಆಕ್ಸೆಂಟ್ ಹೊಂದಿರುವ ಆಕರ್ಷಕ ಕ್ರಾಸ್ ಮೆಶ್ ಗ್ರಿಲ್ ಮತ್ತು ಗ್ರಿಲ್ ಸುತ್ತಲು ನೀಡಲಾಗಿರುವ ಕಪ್ಪು ಪಟ್ಟಿಯು ಕಾರಿನ ಹೊಸ ಲುಕ್ ಅನ್ನು ಹೆಚ್ಚಿಸಿದೆ.

ಭಾರತದಲ್ಲಿ 25 ಲಕ್ಷ ಮಾರಾಟದ ಗಡಿ ತಲುಪಿ ಹೊಸ ಮೈಲಿಗಲ್ಲು ಸಾಧಿಸಿದ Maruti Swift

ಇನ್ನು ಭಾರತದಲ್ಲಿ ಮಾರುತಿ ಸುಜುಕಿ ಕಂಪನಿಯು ನ್ಯೂ ಜನರೇಷನ್ ಸ್ವಿಫ್ಟ್ ಕಾರನ್ನು ಅಭಿವೃದ್ದಿ ಪಡಿಸಲು ಪ್ರಾರಂಭಿಸಿದ್ದಾರೆ ಎಂದು ಕೂಡ ವರದಿಗಳಾಗಿದೆ. ಪ್ರಸ್ತುತ ಮಾದರಿಗೆ ಹೋಲಿಸಿದರೆ ಮುಂಬರುವ ನ್ಯೂ ಜನರೇಷನ್ ಮಾದರಿಯಲ್ಲಿ ಸಾಕಷ್ಟು ಬದಲಾವಣೆಗಳಿರುತ್ತವೆ. ನ್ಯೂ ಜನರೇಷನ್ ಸ್ವಿಫ್ಟ್ ಅನ್ನು ಹೊಸ ಪ್ಲಾಟ್‌ಫಾರ್ಮ್ ಅನ್ನು ಬಿಡುಗಡೆಯಾಗಲಿದೆ. ಇದು ಪ್ರಸ್ತುತಕ್ಕಿಂತ ಹಗುರವಾಗಿರುತ್ತದೆ ಮತ್ತು ಬಲವಾಗಿರುತ್ತದೆ.

ಭಾರತದಲ್ಲಿ 25 ಲಕ್ಷ ಮಾರಾಟದ ಗಡಿ ತಲುಪಿ ಹೊಸ ಮೈಲಿಗಲ್ಲು ಸಾಧಿಸಿದ Maruti Swift

ಈ ನ್ಯೂ ಜನರೇಷನ್ ಸ್ವಿಫ್ಟ್ ಕಾರನ್ನು (ವೈಇಡಿ ಕೋಡ್ ನೇಮ್) ಸ್ವಿಫ್ಟ್ ಹ್ಯಾಚ್‌ಬ್ಯಾಕ್‌ ಅನ್ನು ಹಿಯರ್‌ಟೆಕ್ಟ್ ಪ್ಲಾಟ್‌ಫಾರ್ಮ್ ಅಡಿಯಲ್ಲಿ ತಯಾರಿಸಬಹುದು ಎಂದು ಹೇಳಲಾಗುತ್ತಿದೆ. ಈ ಹೊಸ ಮಾರುತಿ ಸ್ವಿಫ್ಟ್ ಕಾರು ಪರಿಷ್ಕೃತ ಪ್ಲಾಟ್‌ಫಾರ್ಮ್ ಸ್ವಿಫ್ಟ್ ಹ್ಯಾಚ್‌ಬ್ಯಾಕ್‌ನ ಒಟ್ಟಾರೆ ಸ್ಥಿರತೆ, ಸುರಕ್ಷತೆ ಮತ್ತು ನಿರ್ವಹಣೆಯಲ್ಲಿ ಹೆಚ್ಚಿನ ಸುಧಾರಣೆಯನ್ನು ಕಾಣಬಹುದು. ನ್ಯೂ ಜನರೇಷನ್ ಮಾರುತಿ ಸ್ವಿಫ್ಟ್ ಕಾರು ಹೊಸ ಫೀಚರ್ಸ್ ಗಳನ್ನು ಮತ್ತು ತಂತ್ರಜ್ಙಾನಗಳನ್ನು ಪಡೆಯಲಿದೆ.

ಭಾರತದಲ್ಲಿ 25 ಲಕ್ಷ ಮಾರಾಟದ ಗಡಿ ತಲುಪಿ ಹೊಸ ಮೈಲಿಗಲ್ಲು ಸಾಧಿಸಿದ Maruti Swift

ಭಾರತದಲ್ಲಿ ಬಿಡುಗಡೆಯಾಗಲಿರುವ ನ್ಯೂ ಜನರೇಷನ್ ಸಿಫ್ಟ್ ಕಾರಿನಲ್ಲಿ 1.4-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಅನ್ನು ನೀಡಬಹುದು ಜಪಾನಿನ ಆಟೋಮೋಟಿವ್ ಮ್ಯಾಗಜೀನ್ ಬೆಸ್ಟ್ ಕಾರ್ ನ್ಯೂ ಜನರೇಷನ್ ಸ್ವಿಫ್ಟ್ ಕಾರಿನ 3ಡಿ ರೆಂಡರಿಂಗ್ ಚಿತ್ರವನ್ನು ಬಹಿರಂಗಪಡಿಸಲಾಗಿತ್ತು. 3ಡಿ ರೆಂಡರಿಂಗ್ ಚಿತ್ರದಲ್ಲಿ ನ್ಯೂ ಜನರೇಷನ್ ಸ್ವಿಫ್ಟ್ ತುಂಬಾ ದೊಡ್ಡದಾದ ಏರ್ ಡ್ಯಾಮ್, ಅಡ್ದಲಾಗಿರುವ ಫಾಗ್ ಲ್ಯಾಂಪ್ ಮತ್ತು ಮುಂಭಾಗದಲ್ಲಿ ತೆಳ್ಳನೆಯ ಎಲ್ಇಡಿ ಹೆಡ್‌ಲ್ಯಾಂಪ್‌ಗಳೊಂದಿಗೆ ಒಳಗೊಂಡಿದೆ. ಸೈಡ್ ಪ್ರೊಫೈಲ್‌ನಲ್ಲಿ ಶಾರ್ಪ್ ಲೈನ್ ಗಳನ್ನು ಹೊಂದಿವೆ.

ಭಾರತದಲ್ಲಿ 25 ಲಕ್ಷ ಮಾರಾಟದ ಗಡಿ ತಲುಪಿ ಹೊಸ ಮೈಲಿಗಲ್ಲು ಸಾಧಿಸಿದ Maruti Swift

ಇದಲ್ಲದೆ ಟಾರ್ಕ್-ಫಿಲ್ ಕಂಟ್ರೋಲ್ ಮತ್ತು ಎಲೆಕ್ಟ್ರಿಕ್ ಮೋಟರ್ ಐಡ್ಲಿಂಗ್‌ನಂತಹ ಹೊಸ ಫೀಚರ್ಸ್ ಗಳನ್ನು ಕೂಡ ಪಡೆಯಬಹುದು. ಜಾಗತಿಕವಾಗಿ ಅನಾವರಣಗೊಂಡ ಬಳಿಕ ನ್ಯೂ ಜನರೇಷನ್ ಸ್ವಿಫ್ಟ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ ಎಂದು ನಿರೀಕ್ಷಿಸುತ್ತೇವೆ. ಮುಂದಿನ ದಿನಗಳಲ್ಲಿ ಸ್ವಿಫ್ಟ್ ಸಿಎನ್‌ಜಿ ಕಾರಿನ ಬಗ್ಗೆ ಹೆಚ್ಚಿನ ಮಾಹಿತಿಗಳು ಬಹಿರಂಗವಾಗಬಹುದು.

ಭಾರತದಲ್ಲಿ 25 ಲಕ್ಷ ಮಾರಾಟದ ಗಡಿ ತಲುಪಿ ಹೊಸ ಮೈಲಿಗಲ್ಲು ಸಾಧಿಸಿದ Maruti Swift

ಮಾರುತಿ ಸ್ವಿಫ್ಟ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಗ್ರಾಂಡ್ ಐ10 ನಿಯೋಸ್, ಫೋರ್ಡ ಫಿಗೊ ಕಾರುಗಳಿಗೆ ಪೈಪೋಟಿಯನ್ನು ನೀಡುತ್ತಿದೆ. ಈ ಸ್ವಿಫ್ಟ್ ಕಾರು ಮಾರುತಿ ಸುಜುಕಿ ಕಂಪನಿಗೆ ಮಾರಾಟದಲ್ಲಿ ಹೆಚ್ಚಿನ ಕೊಡುಗೆಯನ್ನು ನೀಡುತ್ತಿದೆ. ಹಲವು ವರ್ಷಗಳಿಂದ ತನ್ನ ಜನಪ್ರಿಯತೆಯನ್ನು ಅದೇ ರೀತಿ ಉಳಿಸಿಕೊಂಡಿರುವ ಖ್ಯಾತಿಯನ್ನು ಸ್ವಿಫ್ಟ್ ಕಾರು ಹೊಂದಿದೆ.

Most Read Articles

Kannada
English summary
Maruti swift sales milestone completes 25 lakh units in india details
Story first published: Tuesday, September 14, 2021, 15:32 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X