Just In
- 31 min ago
ಮಕ್ಕಳಿಗಾಗಿ 60-70 ಕಿ.ಮೀ ಮೈಲೇಜ್ ನೀಡುವ ಮಿನಿ ಎಲೆಕ್ಟ್ರಿಕ್ ಜೀಪ್ ತಯಾರಿಸಿದ ತಂದೆ
- 1 hr ago
ಮಿನಿ ಎಂಪಿವಿ ಕಾರು ಮಾರಾಟದಲ್ಲಿ ರೆನಾಲ್ಟ್ ಟ್ರೈಬರ್ ಹೊಸ ಮೈಲಿಗಲ್ಲು
- 3 hrs ago
ಎಕ್ಸ್ಯುವಿ700 ಬಿಡುಗಡೆಯ ನಂತರ ತಾತ್ಕಾಲಿಕವಾಗಿ ಮಾರಾಟದಿಂದ ಸ್ಥಗಿತವಾಗಲಿದೆ ಎಕ್ಸ್ಯುವಿ500
- 3 hrs ago
ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಬಹುನಿರೀಕ್ಷಿತ ರಾಯಲ್ ಎನ್ಫೀಲ್ಡ್ ಹಂಟರ್ ಬೈಕ್
Don't Miss!
- News
ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ವ್ಯಕ್ತಿಚಿತ್ರ
- Sports
ಐಪಿಎಲ್ : ಈ ದಾಖಲೆ ಮಾಡಿದ್ದು ಕೊಹ್ಲಿ ಬಿಟ್ರೆ ಸಂಜು ಸ್ಯಾಮ್ಸನ್
- Lifestyle
ಅಧ್ಯಯನ: ಸ್ಥೂಲಕಾಯದವರ ಸ್ಮರಣಾ ಶಕ್ತಿ ಕಾಪಾಡುತ್ತೆ ಬೆಣ್ಣೆಹಣ್ಣು
- Finance
ಏಪ್ರಿಲ್ 13ರ ಬಿಟ್ಕಾಯಿನ್ ರೇಟ್ ಎಷ್ಟಿದೆ?
- Movies
ಸಾಮಾಜಿಕ ಜಾಲತಾಣಕ್ಕೆ ಅದ್ಧೂರಿಯಾಗಿ ಎಂಟ್ರಿ ಕೊಟ್ಟ ಕನಸುಗಾರ
- Education
WCL Recruitment 2021: 44 ಮೆಡಿಕಲ್ ಸ್ಪೆಷಲಿಸ್ಟ್ ಮತ್ತು ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ವಿಟಾರಾ ಬ್ರೆಝಾ
ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟ ವಿಭಾಗದಲ್ಲಿ ತನ್ನದೆ ಜನಪ್ರಿಯತೆಯೊಂದಿಗೆ ಭಾರೀ ಪ್ರಮಾಣದ ಮಾರಾಟ ಸಂಖ್ಯೆ ಹೊಂದಿರುವ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಆವೃತ್ತಿಯು ಫೆಬ್ರುವರಿ ಅವಧಿಯಲ್ಲಿನ ಮಾರಾಟದಲ್ಲಿ ಶೇ.70 ರಷ್ಟು ಬೆಳವಣಿಗೆ ಸಾಧಿಸಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಬಹುತೇಕ ಕಾರು ಕಂಪನಿಗಳ ವಿವಿಧ ಆವೃತ್ತಿಗಳು ಖರೀದಿಗೆ ಲಭ್ಯವಿದ್ದರೂ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಕಾರು ಮಾದರಿಯು ಬಹುಬೇಡಿಕೆಯ ಕಾರು ಮಾದರಿಯಾಗಿ ಹೊರಹೊಮ್ಮಿದ್ದು, ವಿಟಾರಾ ಬ್ರೆಝಾ ಕಾರು ಮಾರುಕಟ್ಟೆಗೆ ಪ್ರವೇಶಿಸಿ ಐದು ವರ್ಷಗಳನ್ನು ಪೂರೈಸಿದರೂ ಕೂಡಾ ಬೇಡಿಕೆಯಲ್ಲಿ ಮಾತ್ರ ಅಗ್ರಸ್ಥಾನ ಕಾಯ್ದುಕೊಂಡಿದೆ.

ಕಳೆದ ತಿಂಗಳ ಮಾರುತಿ ಸುಜುಕಿ ಕಾರುಗಳ ಮಾರಾಟ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ವಿಟಾರಾ ಬ್ರೆಝಾ ಆವೃತ್ತಿಯು 11,585 ಯುನಿಟ್ ಮಾರಾಟಗೊಂಡಿದ್ದು, ಕಳೆದ ವರ್ಷದ ಫೆಬ್ರವರಿಯಲ್ಲಿ ಕಾರು ಮಾರಾಟ ಮಾರಾಟಕ್ಕಿಂತಲೂ ಶೇ.70 ಹೆಚ್ಚು ಬೇಡಿಕೆ ಪಡೆದುಕೊಂಡಿದೆ.

ಹೊಸ ಕಾರಿನಲ್ಲಿ ಕಳೆದ ವರ್ಷದ ಡೀಸೆಲ್ ಎಂಜಿನ್ ಸ್ಥಗಿತಗೊಳಿಸಿದ ಸಂದರ್ಭದಲ್ಲಿ ಮಾರಾಟ ಪ್ರಮಾಣವು ತುಸು ತಗ್ಗಿದರೂ ಕೂಡಾ ಮಾರಾಟ ಪ್ರಮಾಣವು ಮತ್ತೆ ಚೇತರಿಸಿಕೊಂಡಿದ್ದು, ಕಳೆದ ಕೆಲ ದಿನಗಳ ಹಿಂದಷ್ಟೇ ಹೊಸ ಕಾರು ಒಟ್ಟು 6 ಲಕ್ಷ ಯುನಿಟ್ ಮಾರಾಟ ಗುರಿತಲುಪಿತು.

2016ರ ಮಾರ್ಚ್‌ನಲ್ಲಿ ಬಿಡುಗಡೆಗೊಂಡಿದ್ದ ವಿಟಾರಾ ಬ್ರೆಝಾ ಆವೃತ್ತಿಯು 60 ತಿಂಗಳ ಅವಧಿಯಲ್ಲಿ 6 ಲಕ್ಷ ಯುನಿಟ್ ಮಾರಾಟವಾಗಿದ್ದು, ಪ್ರತಿ ತಿಂಗಳು ಸರಾಸರಿ 10 ಸಾವಿರ ಯುನಿಟ್ ಮಾರಾಟಗೊಳ್ಳುವ ಮೂಲಕ 6 ಲಕ್ಷ ಯುನಿಟ್ ಮಾರಾಟ ಗುರಿತಲುಪಿದೆ. ಸದ್ಯ ಬಿಎಸ್-6 ಎಮಿಷನ್ ಪ್ರಕಾರ ತನ್ನ ಪ್ರಮುಖ ಕಾರುಗಳ ಮಾರಾಟದಲ್ಲಿ ಹಲವಾರು ಮಹತ್ವದ ಬದಲಾವಣೆಗಳನ್ನು ಪರಿಚಯಿಸಿರುವ ಮಾರುತಿ ಸುಜುಕಿಯು ಬ್ರೆಝಾ ಕಂಪ್ಯಾಕ್ಟ್ ಎಸ್‌ಯುವಿ ಕಾರಿನಲ್ಲಿ ಡೀಸೆಲ್ ಎಂಜಿನ್ ಸ್ಥಗಿತಗೊಳಿಸಿ ಹೊಸ ಪೆಟ್ರೋಲ್ ಮಾದರಿಯನ್ನು ಪರಿಚಯಿಸಿರುವುದು ಪ್ರಮುಖ ಆಕರ್ಷಣೆಯಾಗಿದೆ.

ಹೊಸ ಎಮಿಷನ್ ನಿಯಮದಿಂದಾಗಿ ಹಲವು ಕಾರು ಕಂಪನಿಗಳು ವಿವಿಧ ಮಾದರಿಯ ಕಾರುಗಳಲ್ಲಿ ಡೀಸೆಲ್ ಎಂಜಿನ್ ಸ್ಥಗಿತಗೊಳಿಸಿದ್ದು, ಮಾರುತಿ ಸುಜುಕಿ ಕೂಡಾ ಬ್ರೆಝಾ ಕಾರಿನಲ್ಲಿ ಡೀಸೆಲ್ ಎಂಜಿನ್ ಸ್ಥಗಿತಗೊಳಿಸಿ ಪೆಟ್ರೋಲ್ ಎಂಜಿನ್‌ನಲ್ಲಿ ಮಾತ್ರವೇ ಮಾರಾಟ ಮಾಡುತ್ತಿದೆ.

ಈ ಹಿಂದೆ ನೀಡಲಾಗುತ್ತಿದ್ದ 1.3-ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದ ಮಾರುತಿ ಸುಜುಕಿ ನಿರ್ಮಾಣದ ಬಹುತೇಕ ಕಾರುಗಳು ಇದೀಗ ಸ್ಥಗಿತಗೊಂಡಿದ್ದು, ಡೀಸೆಲ್ ಆಯ್ಕೆಯ ಬದಲಾಗಿ ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಸಿಎನ್‌ಜಿ ಕಾರುಗಳ ಆಯ್ಕೆಯನ್ನು ಹೆಚ್ಚಿಸಲಾಗುತ್ತಿದೆ.
MOST READ: ಗ್ರಾಹಕರ ದೂರು ಹಿನ್ನೆಲೆ...ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಸಬ್ಸಿಡಿ ರದ್ದು

ಹೊಸ ವಿಟಾರಾ ಬ್ರೆಝಾದಲ್ಲಿ ಬಳಕೆ ಮಾಡಿರುವ 1.5-ಲೀಟರ್ ಕೆ15ಬಿ ಪೆಟ್ರೋಲ್ ಎಂಜಿನ್ ಮಾದರಿಯು ಸ್ಮಾರ್ಟ್ ಹೈಬ್ರಿಡ್ ತಂತ್ರಜ್ಞಾನದೊಂದಿಗೆ ಉತ್ತಮ ಇಂಧನ ದಕ್ಷತೆ ಹೊಂದಿದೆ. ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನವನ್ನು ಈಗಾಗಲೇ ವಿಟಾರಾ ಬ್ರೆಝಾ ಪೆಟ್ರೋಲ್ ಆಟೋಮ್ಯಾಟಿಕ್ ಆವೃತ್ತಿಯಲ್ಲಿ ಜೋಡಿಸಲಾಗಿದ್ದು, ಮುಂಬರುವ ದಿನಗಳಲ್ಲಿ ಪೆಟ್ರೋಲ್ ಮ್ಯಾನುವಲ್ ಮಾದರಿಯಲ್ಲೂ ಹೊಸ ತಂತ್ರಜ್ಞಾನ ಜೋಡಣೆ ಮಾಡಲಿದೆ.

ಇನ್ನು ಹೊಸ ವಿಟಾರಾ ಬ್ರೆಝಾ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.7.39 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 11.29 ಲಕ್ಷ ಬೆಲೆ ಪಡೆದುಕೊಂಡಿದ್ದು, ಮುಂಬರುವ ಕೆಲವೇ ತಿಂಗಳಿನಲ್ಲಿ ಹೊಸ ಕಾರಿನ ನ್ಯೂ ಜನರೇಷನ್ ಮಾದರಿಯನ್ನು ಬಿಡುಗಡೆ ಮಾಡುವ ಸಿದ್ದತೆ ನಡೆಸಲಾಗಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಪ್ರಸ್ತುತ ಮಾರುಕಟ್ಟೆಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಹಲವಾರು ಮಾದರಿಗಳ ಮಾರಾಟವನ್ನು ಹೊಂದಿರುವ ಮಾರುತಿ ಸುಜುಕಿಯು ಟಾಪ್ 10 ಕಾರುಗಳ ಮಾರಾಟ ಪಟ್ಟಿಯಲ್ಲಿ ಒಟ್ಟು 6 ಕಾರು ಮಾದರಿಗಳ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದು, ಮುಂದಿನ 3 ವರ್ಷಗಳ ಅವಧಿಗಾಗಿ ಮತ್ತಷ್ಟು ಹೊಸ ಕಾರು ಉತ್ಪನ್ನಗಳನ್ನು ಬಿಡುಗಡೆಗಾಗಿ ಸಿದ್ದತೆ ನಡೆಸುತ್ತಿದೆ. ಮಾಹಿತಿಗಳ ಪ್ರಕಾರ ಮಾರುತಿ ಕಂಪನಿಯು 2021ರ ಆರಂಭದಿಂದ 2023ರ ಅಂತ್ಯದೊಳಗೆ ಆರು ಹೊಸ ಕಾರುಗಳನ್ನು ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದೆ.