ಬಿಡುಗಡೆಗೊಂಡ ಕೇವಲ ಎರಡು ವಾರಗಳಲ್ಲಿ ಮರ್ಸಿಡಿಸ್ ಬೆಂಝ್ ಜಿಎಲ್ಎ ಬೆಲೆ ಹೆಚ್ಚಳ
ಮರ್ಸಿಡಿಸ್ ಬೆಂಝ್ ಇಂಡಿಯಾ ಕಂಪನಿಯು ತನ್ನ ಜನಪ್ರಿಯ ಆರಂಭಿಕ ಕಾರು ಆವೃತ್ತಿಯಾದ ಜಿಎಲ್ಎ ಮತ್ತು ಜಿಎಲ್ಎ 35 ಕಾರುಗಳ 2021ರ ಆವೃತ್ತಿಗಳನ್ನು ಕಳೆದ ತಿಂಗಳು 25ರಂದು ಬಿಡುಗಡೆ ಮಾಡಿದ್ದು, ಹೊಸ ಆವೃತ್ತಿಗಳು ಬಿಡುಗಡೆಯಾದ ಕೇವಲ ಎರಡು ವಾರಗಳಲ್ಲಿ ಬೆಲೆ ಹೆಚ್ಚಳ ಪಡೆದುಕೊಂಡಿವೆ.

ಜಿಎಲ್ಎ ಮತ್ತು ಎಎಂಜಿ ಜಿಎಲ್ಎ 35 ಕಾರುಗಳ ಹೊಸ ಮಾದರಿಗಳನ್ನು ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ ಮರ್ಸಿಡಿಸ್ ಬೆಂಝ್ ಕಂಪನಿಯು ಕಳೆದ ಮೇ 25ರಂದು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.41.10 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯನ್ನು ರೂ. 57.30 ಲಕ್ಷಕ್ಕೆ ಬಿಡುಗಡೆ ಮಾಡಿತ್ತು. ಆದರೆ ಇದೀಗ ಹೊಸ ಕಾರಿನ ಬೆಲೆಯಲ್ಲಿ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಹೊಸ ಕಾರಿನ ಬೆಲೆಯಲ್ಲಿ ಕನಿಷ್ಠ ರೂ. 1.50 ಲಕ್ಷ ಹೆಚ್ಚಳ ಮಾಡಲಾಗಿದೆ.

ಹೊಸ ಕಾರು ಪ್ರೊಗ್ರೆಸ್ಸಿವ್ ಲೈನ್, ಜಿಎಲ್ಎ 200ಡಿ ಪ್ರೊಗ್ರೆಸ್ಸಿವ್ ಲೈನ್, 4ಮ್ಯಾಟಿಕ್ ಎಎಂಜಿ ಲೈನ್ ಮತ್ತು ಎಎಂಜಿ ಜಿಎಲ್ಎ 35 4ಮ್ಯಾಟಿಕ್ ಎನ್ನುವ ನಾಲ್ಕು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಬೆಲೆ ಏರಿಕೆಯ ನಂತರ ಕಾರಿನ ಬೆಲೆಯು ಆರಂಭಿಕವಾಗಿ ರೂ. 43.60 ಲಕ್ಷದಿಂ ಟಾಪ್ ಮಾದರಿಯ ಬೆಲೆಯನ್ನು ರೂ.58.78 ಲಕ್ಷಕ್ಕೆ ನಿಗದಿಪಡಿಸಿದೆ.

ಹೊಸ ಕಾರುಗಳನ್ನು ಈ ಹಿಂದೆ ಸಂಪೂರ್ಣವಾಗಿ ವಿದೇಶಿ ಮಾರುಕಟ್ಟೆಗಳಿಂದಲೇ ಆಮದು ಮಾಡಿಕೊಳ್ಳುತ್ತಿದ್ದ ಮರ್ಸಿಡಿಸ್ ಬೆಂಝ್ ಕಂಪನಿಯು ಇದೀಗ ಭಾರತದಲ್ಲೇ ಪ್ರಮುಖ ಕಾರುಗಳ ಅಸೆಂಬ್ಲಿ ಪ್ರಕ್ರಿಯೆ ಕೈಗೊಂಡಿದ್ದು, 2021ರ ಜಿಎಲ್ಎ ಮಾದರಿಯು ಸಹ ಭಾರತದಲ್ಲಿ ನಿರ್ಮಾಣಗೊಂಡ ಮೂರನೇ ಕಾರು ಮಾದರಿಯಾಗಿದೆ.

ಹೊಸ ಕಾರು ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ಹಲವು ಹೊಸ ಫೀಚರ್ಸ್ ಮತ್ತು ಉನ್ನತೀಕರಿಸಲಾದ ಕ್ಯಾಬಿನ್ ಸ್ಪೆಸ್ ಸೌಲಭ್ಯದೊಂದಿಗೆ ಗ್ರಾಹಕರನ್ನು ಸೆಳೆಯಲಿದ್ದು, ಹೊಸ ಆವೃತ್ತಿಯು ಈ ಹಿಂದಿನ ಮಾದರಿಗಿಂತ 30 ಎಂಎಂ ಹೆಚ್ಚುವರಿ ಉದ್ದಳತೆ ಮತ್ತು 104 ಎಂಎಂ ಕಡಿಮೆ ಎತ್ತರ ಹೊಂದಿದೆ.

ಹಾಗೆಯೇ ಹೊಸ ಕಾರಿನಲ್ಲಿ ನವೀಕರಿಸಲಾದ ಗ್ರಿಲ್ ವಿನ್ಯಾಸ, ಮರುವಿನ್ಯಾಸಗೊಳಿಸಲಾದ ಬಂಪರ್, ದೊಡ್ಡ ಗಾತ್ರದ 19-ಇಂಚಿನ ಅಲಾಯ್ ವೀಲ್ಹ್, ಆಕ್ರಮಣಕಾರಿಯಾಗಿರುವ ಟ್ವಿನ್ ಎಕ್ಸಾಸ್ಟ್, ಆಕರ್ಷಕವಾಗಿರುವ ಎಎಂಜಿ ಬ್ಯಾಡ್ಜ್ ಸೇರಿದಂತೆ ಹಲವಾರು ಉನ್ನತೀಕರಿಸಿದ ಐಷಾರಾಮಿ ಫೀಚರ್ಸ್ ಪಡೆದುಕೊಂಡಿದೆ.

ಎಂಜಿನ್ ಮತ್ತು ಪರ್ಫಾಮೆನ್ಸ್
ಜಿಎಲ್ಎ ಮತ್ತು ಎಎಂಜಿ ಜಿಎಲ್ಎ 35 ಮಾದರಿಗಳಲ್ಲಿ 1.3-ಲೀಟರ್ ಟರ್ಬೊ ಪೆಟ್ರೋಲ್, 2.0-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.0-ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆ ಹೊಂದಿದ್ದು, 1.3-ಲೀಟರ್ ಪೆಟ್ರೋಲ್ ಮಾದರಿಯು 7-ಸ್ಪೀಡ್ ಡ್ಯುಯಲ್ ಕ್ಲಚ್ ಟ್ರಾನ್ಸ್‌ಮಿಷನ್‌ನೊಂದಿಗೆ 161-ಬಿಎಚ್‌ಪಿ ಮತ್ತು 250-ಎನ್ಎಂ ಟಾರ್ಕ್ ಉತ್ಪಾದಿಸುವ ಮೂಲಕ 8.7 ಸೆಕೆಂಡುಗಳಲ್ಲಿ ಸೊನ್ನೆಯಿಂದ 100 ಕಿ.ಮೀ ಸ್ಪಿಡ್ ಪಡೆದುಕೊಳ್ಳಬಲ್ಲದು.
MOST READ: ಲಾಕ್‌ಡೌನ್ ಹಿನ್ನಲೆ ವಾಹನ ದಾಖಲೆಗಳ ಮಾನ್ಯತಾ ಅವಧಿ ಕುರಿತು ಸಾರಿಗೆ ಇಲಾಖೆಯಿಂದ ಹೊಸ ಆದೇಶ

2.0-ಲೀಟರ್ ಟರ್ಬೊ ಡೀಸೆಲ್ ಮಾದರಿಯು 8-ಸ್ಪೀಡ್ ಡ್ಯುಯಲ್ ಕ್ಲಚ್ ಟ್ರಾನ್ಸ್‌ಮಿಷನ್‌ನೊಂದಿಗೆ 189-ಬಿಎಚ್‌ಪಿ ಮತ್ತು 400-ಎನ್ಎಂ ಟಾರ್ಕ್ ಉತ್ಪಾದಿಸುವ ಮೂಲಕ 7.3 ಸೆಕೆಂಡುಗಳಲ್ಲಿ ಸೊನ್ನೆಯಿಂದ 100 ಕಿ.ಮೀ ಸ್ಪಿಡ್ ಪಡೆದುಕೊಳ್ಳಬಲ್ಲದು.

200ಡಿ ಎಎಂಜಿ ಆವೃತ್ತಿಗಳಲ್ಲಿ ಮರ್ಸಿಡಿಸ್ ಬೆಂಝ್ ಕಂಪನಿಯು ಆಲ್ ವೀಲ್ಹ್ ಡ್ರೈವ್ ಸಿಸ್ಟಂ ಸೌಲಭ್ಯವನ್ನು ಸ್ಟ್ಯಾಂಡರ್ಡ್ ಆಗಿ ಜೋಡಣೆ ಮಾಡುತ್ತಿದ್ದು, ಟಾಪ್ ಎಂಡ್ ಮಾದರಿಯಲ್ಲಿ ನೀಡಲಾಗಿರುವ 2.0-ಲೀಟರ್ ಟರ್ಬೊ ಪೆಟ್ರೋಲ್ ಮಾದರಿಯು 8-ಸ್ಪೀಡ್ ಡ್ಯುಯಲ್ ಕ್ಲಚ್ ಟ್ರಾನ್ಸ್‌ಮಿಷನ್‌ನೊಂದಿಗೆ 304-ಬಿಎಚ್‌ಪಿ ಮತ್ತು 400-ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.
MOST READ: ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಿಕ್ ವಾಹನ ಖರೀದಿಸುವ ಮುನ್ನ ತಿಳಿದಿರಬೇಕಾದ ಪ್ರಮುಖ ಅಂಶಗಳಿವು

ಇನ್ನುಳಿದಂತೆ ಮರ್ಸಿಡಿಸ್ ಕಂಪನಿಯು ಹೊಸ ಕಾರಿನಲ್ಲಿ 'ಮಿ ಕನೆಕ್ಟ್' ಕಾರ್ ಕೆನೆಕ್ಟ್ ಟೆಕ್ನಾಲಜಿ ಮೂಲಕ ಗರಿಷ್ಠ ಸೇಫ್ಟಿ ಫೀಚರ್ಸ್‌ಗಳನ್ನು ಹೆಚ್ಚಿಸಿದ್ದು, ವಾಯ್ಸ್ ಅಸಿಸ್ಟ್ ಮತ್ತು ಗೂಗಲ್ ಹೋಂ ಸೌಲಭ್ಯಗಳು ಕಾರು ಪ್ರಯಾಣವನ್ನು ಮತ್ತಷ್ಟು ಸುಲಭ ಮತ್ತು ಸುರಕ್ಷಿತಗೊಳಿಸುತ್ತವೆ.


Click it and Unblock the Notifications








