Just In
- 2 hrs ago
ಕೊನೆಯ ಆಸೆಯೆಂತೆ ರಾಜಕುಮಾರ ಪ್ರಿನ್ಸ್ ಫಿಲಿಪ್ ಅಂತಿಮ ಯಾತ್ರೆಗೆ ಸಿದ್ದವಾಗಿದೆ ಮಾಡಿಫೈ ಲ್ಯಾಂಡ್ ರೋವರ್
- 4 hrs ago
ಜಪಾನ್ನಲ್ಲಿ ಬಿಡುಗಡೆಯಾಯ್ತು ಮೇಡ್ ಇನ್ ಇಂಡಿಯಾ 2021ರ ಸುಜುಕಿ ಜಿಕ್ಸರ್ 250 ಬೈಕ್
- 5 hrs ago
ಆಕರ್ಷಕ ಬೆಲೆಯಲ್ಲಿ ದೇಶದ ಮೊದಲ ಹೈಬ್ರಿಡ್ ಟ್ರ್ಯಾಕ್ಟರ್ ಬಿಡುಗಡೆ
- 5 hrs ago
ಬೆಲೆ ಏರಿಕೆ ಪಡೆದುಕೊಂಡ ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಬೈಕ್
Don't Miss!
- News
ಬೆಂಗಳೂರಿನಲ್ಲಿ ಭೀತಿ: ಕೊರೊನಾ ಹೆಚ್ಚು ರೆಮ್ಡೆಸಿವಿರ್ ಔಷಧಿ ಕಡಿಮೆ!
- Sports
ಐಪಿಎಲ್ ಇತಿಹಾಸದಲ್ಲಿ ಅಪರೂಪದ ದಾಖಲೆ ಬರೆದ ಆರ್ಸಿಬಿ!
- Finance
ಚಿನ್ನ, ಬೆಳ್ಳಿ ಸ್ವಲ್ಪ ಕುಸಿತ: ಏಪ್ರಿಲ್ 14ರಂದು ಎಲ್ಲೆಡೆ ಬೆಲೆ ಎಷ್ಟಿದೆ?
- Movies
40, 50, 60ರ ಸೀಕ್ರೆಟ್ ಬಿಚ್ಚಿಟ್ಟ ಕ್ರೇಜಿಸ್ಟಾರ್ ರವಿಚಂದ್ರನ್
- Education
SSLC Exams 2021: ಸಿಬಿಎಸ್ಇ ಪರೀಕ್ಷೆ ರದ್ದು ಬೆನ್ನಲ್ಲೇ ಎಸ್ಎಸ್ಎಲ್ಸಿ ಪರೀಕ್ಷೆ ಊಹಾಪೋಹ: ಸುರೇಶ್ ಕುಮಾರ್ ಸ್ಪಷ್ಟನ
- Lifestyle
ನಿಮ್ಮ ಮಗು 10ವರ್ಷ ತಲುಪುವಾಗ ಕಲಿಸಬೇಕಾದ ಜೀವನ ಕೌಶಲ್ಯಗಳಿವು
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಇದೇ ತಿಂಗಳು 16ರಂದು ಬಿಡುಗಡೆಯಾಗಲಿದೆ 2021ರ ಮರ್ಸಿಡಿಸ್ ಬೆಂಝ್ ಇ-ಕ್ಲಾಸ್ ಸೆಡಾನ್
ಜರ್ಮನ್ ಐಷಾರಾಮಿ ಕಾರು ತಯಾರಕ ಕಂಪನಿಯಾಗಿರುವ ಮರ್ಸಿಡಿಸ್ ಬೆಂಝ್ ತನ್ನ ಹೊಸ ಜನಪ್ರಿಯ ಸಿ-ಕ್ಲಾಸ್ ಕಾರಿನ 2021ರ ಆವೃತ್ತಿಯನ್ನು ಜಾಗತಿಕವಾಗಿ ಅನಾವರಣಗೊಳಿಸಿದ್ದು, ಹೊಸ ಆವೃತ್ತಿಯಲ್ಲಿ ಭಾರತದಲ್ಲಿ ಇದೇ ತಿಂಗಳು 16ರಂದು ಬಿಡುಗಡೆಯಾಗಲಿದೆ.

2021ರ ಮರ್ಸಿಡಿಸ್ ಬೆಂಝ್ ಸಿ-ಕ್ಲಾಸ್ ಅನ್ನು ಸೆಡಾನ್ ಮತ್ತು ಎಸ್ಟೇಟ್ ಬಾಡಿ ವಿನ್ಯಾಸಗಳಲ್ಲಿ ಅನಾವರಣಗೊಂಡಿದ್ದು, ಭಾರತದಲ್ಲಿ ಬಿಡುಗಡೆಯಾಗಿರುವ ಹೊಸ ಆವೃತ್ತಿಯ ಸೆಡಾನ್ ಮಾದರಿಯಲ್ಲಿ ಮಾತ್ರ ಬಿಡುಗಡೆಗೊಳಿಸಲಾಗುತ್ತದೆ. ಹೊಸ ಸಿ-ಕ್ಲಾಸ್ ಕಾರಿನ ವಿನ್ಯಾಸದ ಬಗ್ಗೆ ಹೇಳುವುದಾದರೆ, ಇತರೆ ಮಾದರಿಗಳಾದ ಎ-ಕ್ಲಾಸ್ ಮತ್ತು ಇ-ಕ್ಲಾಸ್‌ಗೆ ಅನುಗುಣವಾಗಿ ಪ್ರಮುಖ ತಾಂತ್ರಿಕ ಅಂಶಗಳನ್ನು ಪಡೆದುಕೊಳ್ಳಲಿದ್ದು, ಹೊಸ ಫ್ರಂಟ್ ಗ್ರಿಲ್, ಹೊಸ ಬಾನೆಟ್ ವಿನ್ಯಾಸ, ಮರುವಿನ್ಯಾಸಗೊಳಿಸಲಾದ ಲೈಟ್ ಕ್ಲಸ್ಟರ್‌ಗಳು ಮತ್ತು ಎರಡೂ ತುದಿಗಳಲ್ಲಿ ಕಡಿಮೆ ಓವರ್‌ಹ್ಯಾಂಗ್‌ಗಳನ್ನು ಒಳಗೊಂಡಿದೆ.

ಹೊಸ ಆವೃತ್ತಿಯ ಒಟ್ಟಾರೆ ಸಿಲೊಟ್ ಸಿ-ಕ್ಲಾಸ್‌ನ ಹಳೆಯ ಮಾದರಿಯಂತೆಯೇ ಉಳಿದಿದ್ದರೂ ಎರಡೂ ಸೆಡಾನ್‌ನಲ್ಲಿನ ವೀಲ್‌ಬೇಸ್ ಅನ್ನು ಹಳೆಯ ಮಾದರಿಗಿಂತಲೂ 25-ಎಂಎಂ ನಷ್ಟು ಹೆಚ್ಚಿಸಲಾಗಿದೆ. ಈ ಮೂಲಕ ಹಿಂದಿನ ಮಾದರಿಗಿಂತಲೂ 30 ಲೀಟರ್ ಬೂಟ್-ಸ್ಪೇಸ್ ಹೆಚ್ಚಳದೊಂದಿಗೆ ಒಟ್ಟಾರೆ ಉದ್ದವು ಈಗ 65 ಎಂಎಂ ಆಗಿರಲಿದೆ.

2021 ಸಿ-ಕ್ಲಾಸ್‌ನ ಒಳಭಾಗದಲ್ಲಿ ಹಲವಾರು ಹೊಸ ಬದಲಾವಣೆಗಳನ್ನು ಪಡೆದುಕೊಂಡಿದ್ದು, ಬ್ರಾಂಡ್‌ನ ಪ್ರಮುಖ ಎಸ್-ಕ್ಲಾಸ್‌ನಿಂದಲೂ ಸ್ಫೂರ್ತಿ ಪಡೆದಿದೆ. ಹೀಗಾಗಿ ಸೆಂಟರ್ ಕನ್ಸೋಲ್‌ನಲ್ಲಿ ಹೊಸದಾಗಿ ಲಂಬವಾಗಿ ಜೋಡಿಸಲಾದ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಪ್ರಮುಖ ಆಕರ್ಷಣೆಯಾಗಿದೆ.

ಮರ್ಸಿಡಿಸ್ ಕಂಪನಿಯು ಹೊಸ ಕಾರಿನಲ್ಲಿ ಗ್ರಾಹಕರ ಬೇಡಿಕೆಯೆಂತೆ ಇನ್ಫೋಟೈನ್‌ಮೆಂಟ್ ಸಿಸ್ಟಂ ಸೌಲಭ್ಯವನ್ನು ಎರಡು ವಿಭಿನ್ನ ಗಾತ್ರಗಳಲ್ಲಿ ಜೋಡಣೆ ಮಾಡಿದ್ದು, ಆರಂಭಿಕ ಮಾದರಿಗಳಲ್ಲಿ 10.25-ಇಂಚಿನ ಯುನಿಟ್ ಅನ್ನು ಸ್ಟ್ಯಾಂಡರ್ಡ್ ಆಗಿ ಮತ್ತು ಟಾಪ್ ಎಂಡ್ ಮಾದರಿಗಳಲ್ಲಿ 11.9-ಇಂಚಿನ ಯುನಿಟ್ ಅನ್ನು ಅಪ್‌ಗ್ರೇಡ್ ಮಾಡಿಕೊಳ್ಳಬಹುದಾಗಿದೆ.

ಹಾಗೆಯೇ ಇನ್ಫೋಟೈನ್‌ಮೆಂಟ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇನಂತಹ ವೈರ್‌ಲೆಸ್ ಸ್ಮಾರ್ಟ್‌ಫೋನ್ ಕನೆಕ್ಟಿವಿಟಿಯನ್ನು ಹೊಂದಿದ್ದು, ಬ್ರಾಂಡ್‌ನ ಇತ್ತೀಚಿನ ಎಂಬಿಯುಎಕ್ಸ್ ಕನೆಕ್ಟಿವಿಟಿ ತಂತ್ರಜ್ಞಾನವನ್ನು ಹೊಸ ಕಾರಿಗೆ ಮತ್ತಷ್ಟು ಭದ್ರತೆ ಜೊತೆಗೆ ಕಾರಿನ ಚಾಲನೆಯನ್ನು ಸರಳಗೊಳಿಸುತ್ತದೆ.

ಮರ್ಸಿಡಿಸ್ ಕಂಪನಿಯು 2021ರ ಸಿ-ಕ್ಲಾಸ್ ಮಾದರಿಯಲ್ಲಿ 1.5-ಲೀಟರ್ ಎಂಜಿನ್ ಅನ್ನು ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸುತ್ತಿದ್ದು, ಇದರಲ್ಲಿ ಲೋವರ್-ಸ್ಪೆಕ್ ಎಂಜಿನ್ (ಸಿ 180) 169 ಬಿಹೆಚ್‌ಪಿ ಮತ್ತು 263 ಎನ್ಎಂ ಗರಿಷ್ಠ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಟಾಪ್ ಎಂಡ್‌ನಲ್ಲಿರುವ (ಸಿ 200) 203 ಬಿಹೆಚ್‌ಪಿ ಮತ್ತು 300 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಲಿದ್ದು, ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಸಿ-ಕ್ಲಾಸ್ ಟಾಪ್ ಎಂಡ್ ಮಾದರಿಯು ಕೇವಲ 7.1 ಸೆಕೆಂಡುಗಳ 0-100 ಕಿ,ಮೀ ವೇಗವನ್ನು ಪಡೆದುಕೊಳ್ಳುತ್ತದೆ.

1.5-ಲೀಟರ್ ಪೆಟ್ರೋಲ್ ಎಂಜಿನ್ ಹೊರತಾಗಿ ಕಂಪನಿಯು ಹೊಸ ಕಾರಿನಲ್ಲಿ ಸಿ300 ರೂಪಾಂತರದಲ್ಲಿ 2.0-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ನೀಡುತ್ತಿದ್ದು, ಈ ಎಂಜಿನ್ 259 ಬಿಹೆಚ್‍ಪಿ ಮತ್ತು 400 ಎನ್ಎಂ ಟಾರ್ಕ್ ಅನ್ನ್ನು ಉತ್ಪಾದಿಸುತ್ತದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

2021ರ ಮರ್ಸಿಡಿಸ್ ಬೆಂಝ್ ಸಿ-ಕ್ಲಾಸ್ ಕಾರಿನಲ್ಲಿರುವ ಹೊಸ ಫೀಚರ್ಸ್‌ಗಳು, ತಂತ್ರಜ್ಞಾನ ಮತ್ತು ವಿನ್ಯಾಸದೊಂದಿಗೆ ಐಷಾರಾಮಿ ಕಾರುಗಳ ವಿಭಾಗದಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳಲಿದ್ದು, ಹೊಸ ಸಿ-ಕ್ಲಾಸ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಬಿಎಂಡಬ್ಲ್ಯು 3 ಸೀರಿಸ್, ಆಡಿ ಎ4 ಮತ್ತು ಜಾಗ್ವಾರ್ ಎಕ್ಸ್‌ಇ ಕಾರುಗಳಿಗೆ ಪೈಪೋಟಿ ನೀಡುತ್ತದೆ.