ಭಾರತದಲ್ಲಿ ಇ-ಕ್ಲಾಸ್ ಲಾಂಗ್ ವೀಲ್ಹ್‌ಬೆಸ್ ಫೇಸ್‌ಲಿಫ್ಟ್ ಬಿಡುಗಡೆ ಮಾಡಿದ ಮರ್ಸಿಡಿಸ್ ಬೆಂಝ್
ಮರ್ಸಿಡಿಸ್ ಬೆಂಝ್ ಇಂಡಿಯಾ ಕಂಪನಿಯು 2021ರ ಇ-ಕ್ಲಾಸ್ ಸೆಡಾನ್ ಆವೃತ್ತಿಯನ್ನು ಲಾಂಗ್ ವೀಲ್ಹ್‌ಬೆಸ್ ವೈಶಿಷ್ಟ್ಯತೆಯೊಂದಿಗೆ ಬಿಡುಗಡೆ ಮಾಡಿದ್ದು, ಹೊಸ ಕಾರು ಹಲವಾರು ಹೊಸ ತಂತ್ರಜ್ಞಾನ ಸೌಲಭ್ಯದೊಂದಿಗೆ ಮಾರುಕಟ್ಟೆ ಪ್ರವೇಶಿಸಿದೆ.

ಐಷಾರಾಮಿ ಸೆಡಾನ್ ಕಾರಗಳ ಮಾರಾಟದಲ್ಲಿ ಎಸ್ ಕ್ಲಾಸ್ ನಂತರ ಹೆಚ್ಚಿನ ಬೇಡಿಕೆ ಹೊಂದಿರುವ ಇ-ಕ್ಲಾಸ್ ಮಾದರಿಯು 2021ರ ಆವೃತ್ತಿಯೊಂದಿಗೆ ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆ ಹಲವಾರು ಹೊಸ ಬದಲಾವಣೆಗಳನ್ನು ಪಡೆದುಕೊಂಡಿದ್ದು, ಹೊಸ ಕಾರು ಪ್ರಮುಖ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದೆ. ವೆರಿಯೆಂಟ್‌ಗಳಿಗೆ ಅನುಗುಣವಾಗಿ ಮೂರು ಎಂಜಿನ್ ಆಯ್ಕೆ ಹೊಂದಿರುವ ಇ-ಕ್ಸಾಸ್ ಕಾರಿನ ಬೆಲೆಯನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.63.60 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯ ಬೆಲೆಯನ್ನು ರೂ.80.90 ಲಕ್ಷಕ್ಕೆ ನಿಗದಿಪಡಿಸಿದೆ.

2021ರ ಇ-ಕ್ಲಾಸ್ ಕಾರು ಮಾದರಿಯು ಎಕ್ಸ್‌ಪ್ರೆಷನ್, ಎಕ್ಸ್‌ಕ್ಲೂಸಿವ್ ಮತ್ತು ಎಎಂಜಿ ಲೈನ್ ವೆರಿಯೆಂಟ್‌ಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದು, ಹೊಸ ಆವೃತ್ತಿಯಲ್ಲಿ ಮರುವಿನ್ಯಾಸಗೊಳಿಸಲಾದ ಫ್ರಂಟ್ ಗ್ರಿಲ್, ಹೊಸ ಬಾನೆಟ್ ವಿನ್ಯಾಸ, ಲೈಟ್ ಕ್ಲಸ್ಟರ್‌ಗಳು, 18-ಇಂಚಿನ ಅಲಾಯ್ ವೀಲ್ಹ್ ಮತ್ತು ಎರಡೂ ತುದಿಗಳಲ್ಲಿ ಕಡಿಮೆ ಓವರ್‌ಹ್ಯಾಂಗ್‌ಗಳನ್ನು ಒಳಗೊಂಡಿದೆ.

ಟಾಪ್ ಎಂಡ್ ಮಾದರಿಯಾದ ಎಎಂಜಿ ಲೈನ್‌ನಲ್ಲಿ ಉಳಿದ ಎರಡು ವೆರಿಯೆಂಟ್‌ಗಳಿಂತಲೂ ಹೆಚ್ಚಿನ ಮಟ್ಟದ ತಾಂತ್ರಿಕ ಅಂಶಗಳೊಂದಿಗೆ ಸ್ಪೋರ್ಟಿ ವಿನ್ಯಾಸವನ್ನು ನೀಡಲಾಗಿದ್ದು, ಪರ್ಫಾಮೆನ್ಸ್ ಉದ್ದೇಶಕ್ಕಾಗಿ ವಿಶೇಷವಾಗಿ ಸಿದ್ದವಾಗಿರುವ ಎಎಂಜಿ ಲೈನ್‌ನಲ್ಲಿ ಹಲವಾರು ವಿಶೇಷ ಬ್ಯಾಡ್ಜ್‌ಗಳನ್ನು ನೀಡಲಾಗಿದೆ.

ಹೊಸ ಕಾರಿನಲ್ಲಿ ಮರ್ಸಿಡಿಸ್ ಕಂಪನಿಯು ಹೊರಭಾಗದಲ್ಲಿ ಮರುವಿನ್ಯಾಸದಂತೆಯೇ ಒಳಭಾಗದಲ್ಲೂ ಸಾಕಷ್ಟು ಬದಲಾವಣೆ ಪರಿಚಯಿಸಿದ್ದು, ಎಂಬಿಯುಎಕ್ಸ್ 12.3-ಇಂಚಿನ ಇನ್ಪೋಟೈನ್ ಸಿಸ್ಟಂ, ಮಿ ಕಾರ್ ಕನೆಕ್ಟ್ ಟೆಕ್ನಾಲಜಿ ಸರ್ಪೋಟ್ ಮಾಡುವ ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್‌ಪ್ಲೇ, ಗೂಗಲ್ ಅಸಿಸ್ಟ್ ಅಲೆಕ್ಸಾ, ಮಲ್ಟಿ ಫಂಕ್ಷನಲ್ ಕಂಟ್ರೊಲ್ ಹೊಂದಿರುವ ಸ್ಟೀರಿಂಗ್ ವೀಲ್ಹ್ ನೀಡಲಾಗಿದೆ.

ಜೊತೆಗೆ ಹೊಸ ಕಾರಿನ ಹಿಂಬದಿಯ ಆಸನದಲ್ಲಿನ ಪ್ರಯಾಣಿಕರಿಗೆ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ವಾಯ್ಸ್ ಕಮಾಂಡ್, ಎರಡುಬದಿಯಲ್ಲೂ ವೈರ್‌ಲೆಸ್ ಚಾರ್ಜರ್, ಪನೊರಮಿಕ್ ಸನ್‌ರೂಫ್, ಸಾಫ್ಟ್ ಕ್ಲೋಸ್ ಡೋರ್, ಎಲ್ಇಡಿ ಹೆಡ್‌ಲ್ಯಾಂಪ್ ಮತ್ತು ಎಲ್ಇಡಿ ಟೈಲ್‌ಲೈಟ್ ಸೌಲಭ್ಯಗಳಿವೆ.

ಸುರಕ್ಷತೆಗಾಗಿ ಹೊಸ ಕಾರಿನಲ್ಲಿ ಮರ್ಸಿಡಿಸ್ ಬೆಂಝ್ ಕಂಪನಿಯು ಹಲವಾರು ಸೇಫ್ಟಿ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಿದ್ದು, ಟಾಪ್ ಎಂಡ್ ಮಾದರಿಯಲ್ಲಿ 7 ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಬ್ರೇಕ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಇಎಸ್‌ಪಿ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ಟೈರ್ ಪ್ರೆಷರ್ ಮಾನಿಟರ್ ಸಿಸ್ಟಂ, ಎರಡು ಬದಿಯಲ್ಲೂ ಪಾರ್ಕಿಂಗ್ ಸೆನ್ಸಾರ್ ಜೊತೆಗೆ 360 ಡಿಗ್ರಿ ವ್ಯೂ ಕ್ಯಾಮೆರಾ ಸೌಲಭ್ಯವಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಎಂಜಿನ್ ಮತ್ತು ಪರ್ಫಾಮೆನ್ಸ್
ಮರ್ಸಿಡಿಸ್ ಬೆಂಝ್ ಕಂಪನಿಯು ಹೊಸ ಕಾರಿನಲ್ಲಿ ಒಟ್ಟು ಮೂರು ಎಂಜಿನ್ ಆಯ್ಕೆ ನೀಡಿದ್ದು, ಎಕ್ಸ್‌ಪ್ರೆಷನ್ ವೆರಿಯೆಂಟ್‌ನಲ್ಲಿ 2.0-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್, ಎಕ್ಸ್‌ಕ್ಲೂಸಿವ್ ವೆರಿಯೆಂಟ್‌ನಲ್ಲಿ 2.0-ಲೀಟರ್ ಡೀಸೆಲ್ ಎಂಜಿನ್ ಮತ್ತು ಟಾಪ್ ವೆರಿಯೆಂಟ್ ಎಎಂಜಿ ಲೈನ್‌ನಲ್ಲಿ 3.0-ಲೀಟರ್ ಡೀಸೆಲ್ ಎಂಜಿನ್ ಜೋಡಿಸಲಾಗಿದೆ.

ಆರಂಭಿಕ 2.0-ಲೀಟರ್ ಟರ್ಬೊ ಪೆಟ್ರೋಲ್ ಮಾದರಿಯು 197-ಬಿಎಚ್‌ಪಿ, 2.0-ಲೀಟರ್ ಡೀಸೆಲ್ ಎಂಜಿನ್ ಮಾದರಿಯು 196-ಬಿಎಚ್‌ಪಿ ಮತ್ತು 3.0-ಲೀಟರ್ ಡೀಸೆಲ್ ಎಂಜಿನ್ ಮಾದರಿಯು 286-ಬಿಎಚ್‌ಪಿ ಉತ್ಪಾದನಾ ಗುಣಹೊಂದಿದ್ದು, ಹೊಸ ಕಾರಿನಲ್ಲಿ ಸ್ಟ್ಯಾಂಡರ್ಡ್ ಆಗಿ 9-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಜೋಡಿಸಲಾಗಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಈ ಮೂಲಕ ಹೊಸ ಕಾರು ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಬಿಎಂಡಬ್ಲ್ಯು 5 ಸೀರಿಸ್, ಆಡಿ ಎ6, ಜಾಗ್ವಾರ್ ಎಕ್ಸ್ಎಫ್ ಮತ್ತು ವೊಲ್ವೊ ಎಸ್90 ಸೆಡಾನ್ ಕಾರು ಮಾದರಿಗಳಿಗೆ ಉತ್ತಮ ಪೈಪೋಟಿ ನೀಡಲಿದ್ದು, ಶೀಘ್ರದಲ್ಲೇ ಹೊಸ ಕಾರಿನ ವಿತರಣೆಯು ಆರಂಭವಾಗಲಿದೆ.


Click it and Unblock the Notifications








