ಶೀಘ್ರದಲ್ಲೇ ಭಾರತಕ್ಕೆ ಬರಲಿದೆ ಎರಡನೇ ಹಂತದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಐಷಾರಾಮಿ ಕಾರು ತಯಾರಕ ಕಂಪನಿಯಾದ ಮರ್ಸಿಡಿಸ್ ಬೆಂಝ್ ತನ್ನ ಮೊದಲ ಪ್ರೀಮಿಯಂ ಎಲೆಕ್ಟ್ರಿಕ್ ಎಸ್‍ಯುವಿಯಾದ ಇಕ್ಯೂಸಿ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಕಳೆದ ವರ್ಷ ಬಿಡುಗಡೆಗೊಳಿಸಿತ್ತು. ಈ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಗೆ ಭಾರತೀಯ ಮಾರುಕಟ್ಟೆಯಲ್ಲಿ ಭರ್ಜರಿ ಬೇಡಿಕೆಯನ್ನು ಪಡೆದುಕೊಂಡಿದೆ.

ಶೀಘ್ರದಲ್ಲೇ ಭಾರತಕ್ಕೆ ಬರಲಿದೆ ಎರಡನೇ ಹಂತದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಈ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯನ್ನು ಭಾರತದ ದೆಹಲಿ, ಮುಂಬೈ, ಪುಣೆ, ಬೆಂಗಳೂರು, ಚೆನ್ನೈ ಮತ್ತು ಹೈದರಾಬಾದ್ ಎಂಬ 6 ನಗರಗಳಲ್ಲಿ ಮಾರಾಟ ಮಾಡಲಾಯಿತು. ಆದರೆ ಇತರ ನಗರಗಳ ಗ್ರಾಹಕರು ಸಹ ಅದನ್ನು ಖರೀದಿಸಲು ಆನ್‌ಲೈನ್‌ನಲ್ಲಿ ವಾಹನವನ್ನು ಕಾಯ್ದಿರಿಸಬಹುದಾಗಿದೆ. ಕಂಪನಿಯು ದೇಶಕ್ಕೆ ಬಂದ ಮೊದಲ ಬ್ಯಾಚ್ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯ ಎಲ್ಲಾ ಯುನಿಟ್ ಗಳನ್ನು ಈಗಾಗಲೇ ಮಾರಾಟಗೊಳಿಸಿವೆ.

ಶೀಘ್ರದಲ್ಲೇ ಭಾರತಕ್ಕೆ ಬರಲಿದೆ ಎರಡನೇ ಹಂತದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಇನ್ನು ಎರಡನೇ ಬ್ಯಾಚ್ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯ ಈ ವರ್ಷದ ಸೆಪ್ಟೆಂಬರ್ ತಿಂಗಳಿನಲ್ಲಿ ಭಾರತಕ್ಕೆ ಬರಲಿದೆ. ಜಾಗ್ವಾರ್ ಐ-ಪೇಸ್ ಮತ್ತು ಮುಂಬರುವ ಆಡಿ ಇ-ಟ್ರಾನ್ ಎಲೆಕ್ಟ್ರಿಕ್ ಎಸ್‍ಯುವಿಗಳಿಗೆ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಪೈಪೋಟಿ ನೀಡುತ್ತದೆ.

ಶೀಘ್ರದಲ್ಲೇ ಭಾರತಕ್ಕೆ ಬರಲಿದೆ ಎರಡನೇ ಹಂತದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಈ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯ ಸ್ಟೈಲಿಂಗ್ ತುಂಬಾ ವಿಭಿನ್ನವಾಗಿದೆ. ಈ ಹೊಸ ಎಲೆಕ್ಟ್ರಿಕ್ ಎಸ್‍ಯುವಿಯ ಮುಂಭಾಗದಲ್ಲಿ ಮಲ್ಟಿ-ಸ್ಲ್ಯಾಟ್ ಗ್ರಿಲ್ ದೊಡ್ಡದಾಗಿದೆ ಮತ್ತು ಯು-ಆಕಾರದ ಕ್ರೋಮ್ ಸುತ್ತುವರೆದಿರುವ ಎಲ್ಇಡಿ ಹೆಡ್ ಲ್ಯಾಂಪ್ ಮತ್ತು ಎಲ್ಇಡಿ ಡೇಟೈಮ್ ರನ್ನಿಂಗ್ ಲ್ಯಾಂಪ್ ಗಳನ್ನು ಹೊಂದಿವೆ.

ಶೀಘ್ರದಲ್ಲೇ ಭಾರತಕ್ಕೆ ಬರಲಿದೆ ಎರಡನೇ ಹಂತದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಇನ್ನು ಈ ಎಲೆಕ್ಟ್ರಿಕ್ ಎಸ್‍ಯುವಿಯ ಕ್ಯಾಬಿನ್ ನಲ್ಲಿ ಡ್ಯುಯಲ್ 10.3-ಇಂಚಿನ ಡಿಸ್ ಪ್ಲೇಯನ್ನು ಅಳವಡಿಸಲಾಗಿದೆ. ಇನ್ನು ಮಲ್ಟಿ-ಫಂಕ್ಷನಲ್ ಸ್ಟೀಯರಿಂಗ್ ವ್ಹೀಲ್ ಮತ್ತು ಟ್ರ್ಯಾಕ್‌ಪ್ಯಾಡ್‌ನೊಂದಿಗೆ ಸಿಗ್ನೇಚರ್ ಸೆಂಟರ್ ಕನ್ಸೋಲ್ ನೊಂದಿಗೆ ಎಂಬಿಎಕ್ಸ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಕೂಡ ಹೊಂದಿದೆ.

ಶೀಘ್ರದಲ್ಲೇ ಭಾರತಕ್ಕೆ ಬರಲಿದೆ ಎರಡನೇ ಹಂತದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಈ ಹೊಸ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯಲ್ಲಿ ಎರಡು ಎಲೆಕ್ಟ್ರಿಕ್ ಮೋಟಾರ್ ಅನ್ನು ಹೊಂದಿದೆ. ಒಂದು ಮೋಟಾರ್ ಈ ಎಲೆಕ್ಟ್ರಿಕ್ ಎಸ್‍ಯುವಿಯು ಮುಂಭಾಗದ ಆಕ್ಸಲ್ ಅನ್ನು ಚಾಲನೆ ಮಾಡುತ್ತದೆ ಮತ್ತು ಇನ್ನೊಂದು ಮೋಟಾರ್ ಹಿಂಭಾಗದ ಫ್ಹೋರ್ ವ್ಹೀಲ್ ಡ್ರೈವ್ ಸಿಸ್ಟಂ ಅನ್ನು ಹೊಂದಿದೆ.

ಶೀಘ್ರದಲ್ಲೇ ಭಾರತಕ್ಕೆ ಬರಲಿದೆ ಎರಡನೇ ಹಂತದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಈ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯಲ್ಲಿ 80 ಕಿ.ವ್ಯಾಟ್ ಲಿಥಿಯಂ-ಐಯಾನ್ ಬ್ಯಾಟರಿ ಪ್ಯಾಕನ್ನು ಅಳವಡಿಸಲಾಗಿದೆ. ಈ ಬ್ಯಾಟರಿಯನ್ನು ಪೂರ್ತಿಯಾಗಿ ಚಾರ್ಜ್ ಮಾಡಿದರೆ 471 ಕಿ.ಮೀಗಳವರೆಗೆ ಚಲಿಸುತ್ತದೆ.

ಶೀಘ್ರದಲ್ಲೇ ಭಾರತಕ್ಕೆ ಬರಲಿದೆ ಎರಡನೇ ಹಂತದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಈ ಸಂಯೋಜಿತ ಎಲೆಕ್ಟ್ರಿಕ್ ಮೋಟಾರ್ 405 ಬಿಹೆಚ್‍ಪಿ ಪವರ್ ಮತ್ತು 765 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮಥ್ಯವನ್ನು ಹೊಂದಿದೆ. ಜರ್ಮನ್ ಐಷಾರಾಮಿ ಕಾರು ತಯಾರಕರು ಇಕ್ಯೂಸಿಯನ್ನು ಅಭಿವೃದ್ಧಿಪಡಿಸುವಾಗ ಸಾಕಷ್ಟು ಚಿಂತನೆ ನಡೆಸಿದ್ದಾರೆ. ಅಲ್ಲದೇ ಇದು ಮರ್ಸಿಡಿಸ್ ಬೆಂಝ್ ಕಂಪನಿಯ ಮೊದಲ ಆಲ್-ಎಲೆಕ್ಟ್ರಿಕ್ ಸರಣಿ ಉತ್ಪಾದನಾ ಮಾದರಿಯಾಗಿದೆ.

ಶೀಘ್ರದಲ್ಲೇ ಭಾರತಕ್ಕೆ ಬರಲಿದೆ ಎರಡನೇ ಹಂತದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಈ ಮರ್ಸಿಡಿಸ್ ಬೆಂಝ್ ಇಕ್ಯೂಸಿ 400 ಎಸ್‍ಯುವಿ ಸುಮಾರು 500-ಲೀಟರ್ ಗಳಷ್ಟು ಬೂಟ್ ಸ್ಪೇಸ್ ಅನ್ನು ಪಡೆಯುತ್ತದೆ ಮತ್ತು ಹೆಚ್ಚಿನ ಸಾಮಗ್ರಿಗಳು ಇದ್ದಾಗ ಅಥವಾ ಹೆಚ್ಚಿನ ಸ್ಪೇಸ್ ಬೇಕದಾಗ ಮಧ್ಯದ ಸಾಲಿನ ಸೀಟುಗಳನ್ನು ಮಾಡಚಬಹುದು. ಬೂಟ್ ಲಿಡ್ ಎಲೆಕ್ಟ್ರಿಕ್ ಆಗಿದೆ.

Most Read Articles

Kannada
English summary
Mercedes-Benz EQC Next Batch To Arrive In September. Read In Kannada.
Story first published: Friday, July 16, 2021, 20:19 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X