Just In
- 10 hrs ago
ಹೊಸ ಫೀಚರ್ಸ್ಗಳನ್ನು ಪಡೆಯಲಿದೆ ನ್ಯೂ ಜನರೇಷನ್ ಫೋಕ್ಸ್ವ್ಯಾಗನ್ ಪೊಲೊ
- 12 hrs ago
ಫೋರ್ಡ್ ಮುಸ್ಟಾಂಗ್ ಕಾರಿನಂತೆ ಮಾಡಿಫೈಗೊಂಡ ಬಲೆನೊ ಸೆಡಾನ್ ಕಾರು
- 14 hrs ago
ವಾರದ ಸುದ್ದಿ: ಸಿಟ್ರನ್ ಕಾರು ಬಿಡುಗಡೆ, ಹೊಸ ವಾಹನ ಬೆಲೆ ಹೆಚ್ಚಳ, ಅಲ್ಕಾಜರ್ ಅನಾವರಣ, ಯುಗಾದಿ ಆಫರ್ ಘೋಷಣೆ!
- 24 hrs ago
ಎಕ್ಸ್ಯುವಿ700 ಎಸ್ಯುವಿ ಕಾರಿನ ಮತ್ತಷ್ಟು ಹೊಸ ಮಾಹಿತಿ ಹಂಚಿಕೊಂಡ ಮಹೀಂದ್ರಾ
Don't Miss!
- Sports
ದಿನೇಶ್ ಕಾರ್ತಿಕ್ ನನಗೆ ಸಂಪೂರ್ಣ ಬೆಂಬಲವನ್ನು ನೀಡುತ್ತಿದ್ದಾರೆ: ಇಯಾನ್ ಮಾರ್ಗನ್
- News
ನಾರ್ವೆ ಪ್ರಧಾನಿಗೆ ವಿಧಿಸಿದ 1.71 ಲಕ್ಷ ರೂ. ದಂಡದ ಹಿಂದಿನ ಕುತೂಹಲಕಾರಿ ಕಾರಣ?
- Movies
ಸೋನು ಸೂದ್ಗೆ ವಿಶೇಷ ಗೌರವ ನೀಡಿದ ಪಂಜಾಬ್ ಸರ್ಕಾರ
- Finance
ಟಾಪ್ 10ರಲ್ಲಿ 4 ಕಂಪನಿಗಳ ಮೌಲ್ಯ 1.14 ಲಕ್ಷ ಕೋಟಿ ರುಗೇರಿಕೆ
- Lifestyle
ವಾರ ಭವಿಷ್ಯ:ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- Education
Bank Of Baroda Recruitment 2021: 512 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಭಾರತದಲ್ಲಿ ಇಕ್ಯೂಸಿ 400 ಎಲೆಕ್ಟ್ರಿಕ್ ಎಸ್ಯುವಿ ಕಾರಿನ ಬೆಲೆ ಹೆಚ್ಚಳ ಮಾಡಿದ ಮರ್ಸಿಡಿಸ್ ಬೆಂಝ್
ದೇಶಿಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟವು ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಐಷಾರಾಮಿ ವಾಹನ ತಯಾರಿಕಾ ಕಂಪನಿಯಾದ ಮರ್ಸಿಡಿಸ್ ಬೆಂಝ್ ಕೂಡಾ ತನ್ನ ಎಲೆಕ್ಟ್ರಿಕ್ ಕಾರು ಮಾದರಿಯಾಗಿ ಇಕ್ಯೂಸಿ 400 ಎಲೆಕ್ಟ್ರಿಕ್ ಎಸ್ಯುವಿ ಮಾದರಿಯನ್ನು ಬಿಡುಗಡೆಗೊಳಿಸುವ ಮೂಲಕ ಉತ್ತಮ ಮಾರಾಟ ಸಂಖ್ಯೆಯನ್ನು ದಾಖಲಿಸಿದೆ.

2020ರ ಅಕ್ಟೋಬರ್ನಲ್ಲಿ ದೇಶಿಯ ಮಾರುಕಟ್ಟೆ ಪ್ರವೇಶಿಸಿದ್ದ ಇಕ್ಯೂಸಿ 400 ಎಲೆಕ್ಟ್ರಿಕ್ ಎಸ್ಯುವಿ ಮಾದರಿಯುನ್ನು ಮರ್ಸಿಡಿಸ್ ಕಂಪನಿಯು ಇದುವರೆಗೆ 50 ಯುನಿಟ್ಗಳನ್ನು ಮಾರಾಟ ಮಾಡಿದ್ದು, ಸಂಪೂರ್ಣವಾಗಿ ವಿದೇಶಿ ಮಾರುಕಟ್ಟೆಯಿಂದ ಆಮದುಗೊಳ್ಳುವ ಹೊಸ ಎಲೆಕ್ಟ್ರಿಕ್ ಕಾರು ದುಬಾರಿ ಬೆಲೆ ನಡುವೆಯೂ ಉತ್ತಮ ಬೇಡಿಕೆ ಪಡೆದುಕೊಂಡಿದೆ. ಮೊದಲ ಬ್ಯಾಚ್ನಲ್ಲಿದ್ದ 50 ಕಾರುಗಳ ಮಾರಾಟವನ್ನು ಪೂರ್ಣಗೊಳಿಸಿರುವ ಮರ್ಸಿಡಿಸ್ ಕಂಪನಿಯು 2ನೇ ಬ್ಯಾಚ್ ಆಮದು ಮಾಡಿಕೊಂಡು ವಿತರಣೆಗೆ ಸಿದ್ದವಾಗಿದ್ದು, 2ನೇ ಬ್ಯಾಚ್ ಆಗಮನಕ್ಕೂ ಮುನ್ನ ಹೊಸ ಕಾರಿನ ಬೆಲೆಯಲ್ಲಿ ಏರಿಕೆ ಮಾಡಿದೆ.

ಇಕ್ಯೂಸಿ 400 ಎಲೆಕ್ಟ್ರಿಕ್ ಎಸ್ಯುವಿ ಬಿಡುಗಡೆಯ ಸಂದರ್ಭದಲ್ಲೇ ನಿಗದಿತ 50 ಯುನಿಟ್ ಮಾರಾಟ ಪೂರ್ಣಗೊಂಡ ನಂತರ ಬೆಲೆ ಹೆಚ್ಚಳದ ಬಗ್ಗೆ ಮಾಹಿತಿ ನೀಡಿದ್ದ ಮರ್ಸಿಡಿಸ್ ಬೆಂಝ್ ಕಂಪನಿಯು ಇದೀಗ ಬೆಲೆ ಹೆಚ್ಚಳ ಮಾಡಿದ್ದು, ಹೊಸ ಕಾರಿನ ಬೆಲೆಯು ಹೆಚ್ಚುವರಿಯಾಗಿ ರೂ. 4.70 ಲಕ್ಷ ಬೆಲೆ ಪಡೆದುಕೊಂಡಿದೆ.

ಆರಂಭದಲ್ಲಿ ಇಕ್ಯೂಸಿ 400 ಎಲೆಕ್ಟ್ರಿಕ್ ಎಸ್ಯುವಿ ಕಾರು ಮಾದರಿಯನ್ನು ರೂ. 99.30 ಲಕ್ಷಕ್ಕೆ ಬಿಡುಗಡೆ ಮಾಡಿದ್ದ ಮರ್ಸಿಡಿಸ್ ಬೆಂಝ್ ಕಂಪನಿಯು ಇದೀಗ ಹೊಸ ಕಾರಿನ ಬೆಲೆಯನ್ನು ರೂ. 1.04 ಕೋಟಿಗೆ ನಿಗದಿ ಮಾಡಿದ್ದು, 2ನೇ ಬ್ಯಾಚ್ನಲ್ಲಿ ಆಮದುಗೊಳ್ಳುವ ಇಕ್ಯೂಸಿ 400 ಎಲೆಕ್ಟ್ರಿಕ್ ಎಸ್ಯುವಿಯಲ್ಲಿ ಪ್ರಮುಖ ತಂತ್ರಜ್ಞಾನಗಳ ಬದಲಾವಣೆಗಳೇ ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.

ಮರ್ಸಿಡಿಸ್ ಬೆಂಝ್ ನಿರ್ಮಾಣದ ಮೊದಲ ಎಲೆಕ್ಟ್ರಿಕ್ ಎಸ್ಯುವಿ ಕಾರು ಮಾದರಿಯಾಗಿ ಗುರುತಿಸಿಕೊಂಡಿರುವ ಇಕ್ಯೂಸಿ 400 ಆವೃತ್ತಿಯ ಹಲವು ವಿಶೇಷತೆಗಳೊಂದಿಗೆ ಅಭಿವೃದ್ದಿಗೊಂಡಿದ್ದು, ಇಕ್ಯೂಸಿ 400 ಎಲೆಕ್ಟ್ರಿಕ್ ಎಸ್ಯುವಿಯು ಒಂದು ಬಾರಿ ಚಾರ್ಜ್ ಮಾಡಿದಲ್ಲಿ ಗರಿಷ್ಠ 470 ಕಿ.ಮೀ ಮೈಲೇಜ್ ಹಿಂದಿರುಗಿಸುವ ಮೂಲಕ ಅತ್ಯುತ್ತಮ ಪರ್ಫಾಮೆನ್ಸ್ ನೀಡುತ್ತದೆ.

ಇಕ್ಯೂಸಿಯಲ್ಲಿನ ಫುಲ್ ಎಲೆಕ್ಟ್ರಿಕ್ ಪವರ್ಟ್ರೇನ್ ಮಾದರಿಯು 405-ಬಿಹೆಚ್ಪಿ ಪವರ್ ಮತ್ತು 765-ಎನ್ಎ ಟಾರ್ಕ್ ಉತ್ಪಾದಿಸಲಿದ್ದು, ಕೇವಲ 5.1 ಸೆಕೆಂಡುಗಳಲ್ಲಿ ಸೊನ್ನೆಯಿಂದ ನೂರು ಕಿ.ಮೀ ವೇಗದಲ್ಲಿ ಕ್ರಮಿಸುತ್ತದೆ.

ಜೊತೆಗೆ 4x4 ಡ್ರೈವ್ ಸಿಸ್ಟಂ ಹೊಂದಿರುವ ಹೊಸ ಕಾರು ಮಾದರಿಯು ಇಕೋ, ಕಂಫರ್ಟ್, ಡೈನಾಮಿಕ್ ಮತ್ತು ಇಂಡಿವಿಚ್ಯೂಲ್ ಎಂಬ ಡ್ರೈವಿಂಗ್ ಮೋಡ್ ಗಳನ್ನು ಒಳಗೊಂಡಿದ್ದು, ಚಾರ್ಜಿಂಗ್ ಸೌಲಭ್ಯಕ್ಕಾಗಿ ಇಕ್ಯೂಸಿ 400 ಮಲ್ಟಿಪಲ್ ಚಾರ್ಜಿಂಗ್ ಆಯ್ಕೆಗಳನ್ನು ಹೊಂದಿದೆ.
MOST READ: ಪ್ರತಿ ಚಾರ್ಜ್ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್ಯುವಿ..!

ವಾಲ್ ಸಾಕೆಟ್ ಚಾರ್ಜರ್ ಮಾಡಬಹುದಾದರೆ ಸಂಪೂರ್ಣವಾಗಿ ಚಾರ್ಜ್ ಆಗಲು ಸುಮಾರು 20 ಗಂಟೆಗಳನ್ನು ತೆಗೆದುಕೊಳ್ಳಲಿದ್ದು, ಎಸಿ ಚಾರ್ಜರ್ ಮೂಲಕ ಚಾರ್ಜ್ ಮಾಡಿದಲ್ಲಿ ಕನಿಷ್ಠ 10 ಗಂಟೆಗಳನ್ನು ತೆಗೆದುಕೊಳ್ಳುತ್ತದೆ. ಹಾಗೆಯೇ ಹೈ ಸ್ಪೀಡ್ ಚಾರ್ಜರ್ ಮೂಲಕ ಚಾರ್ಜ್ ಮಾಡಿದ್ದಲ್ಲಿ ಕನಿಷ್ಠ 90 ನಿಮಿಷ ತೆಗೆದುಕೊಳ್ಳಲಿದ್ದು, ಹೈಸ್ಪೀಡ್ ಚಾರ್ಜಿಂಗ್ ಸೌಲಭ್ಯಕ್ಕಾಗಿ ಹೆವಿ ಡ್ಯೂಟಿ ಲೈನ್ಸ್ ಪಡೆಯಬೇಕಾಗುತ್ತದೆ.

ಈ ಮೂಲಕ ಎಲೆಕ್ಟ್ರಿಕ್ ಎಸ್ಯುವಿ ಕಾರುಗಳಲ್ಲೇ ಹಲವಾರು ಐಷಾರಾಮಿ ಫೀಚರ್ಸ್ ಹೊಂದಿರುವ ಹೊಸ ಕಾರು ವಿದೇಶಿ ಮಾರುಕಟ್ಟೆಗಳಲ್ಲಿ 2021ರ ಆವೃತ್ತಿಯನ್ನು ನವೀಕರಿಸಲಾಗಿದ್ದು, ಭಾರತಕ್ಕೆ 2ನೇ ಬ್ಯಾಚ್ ಆಮದು ಮಾಡಿಕೊಳ್ಳಲಿರುವ ಮರ್ಸಿಡಿಸ್ ಬೆಂಝ್ ಕಂಪನಿಯು 2021ರ ಮಾದರಿಯನ್ನು ಮಾರಾಟ ಮಾಡಲಿದೆ.
MOST READ: 2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್ಯುವಿ ಕಾರುಗಳಿವು..!

ಯುರೋಪ್ ಮಾರುಕಟ್ಟೆಗಳಲ್ಲಿ ಸದ್ಯ ಅತ್ಯುತ್ತಮ ಎಲೆಕ್ಟ್ರಿಕ್ ಕಾರು ಮಾದರಿಯಾಗಿ ಹೊರಹೊಮ್ಮಿರುವ ಇಕ್ಯೂಸಿ 400 ಕಾರು ಮಾದರಿಯು ಆಡಿ ಇ-ಟ್ರಾನ್ ಮಾದರಿಯೊಂದಿಗೆ ಉತ್ತಮ ಪೈಪೋಟಿ ಹೊಂದಿದ್ದು, ದುಬಾರಿ ಬೆಲೆ ನಡುವೆಯೂ ಕಳೆದ ವರ್ಷ ಪ್ರಮುಖ ಪೆಟ್ರೋಲ್ ಕಾರುಗಳ ಮಾರಾಟ ಸಂಖ್ಯೆಯನ್ನೇ ಹಿಂದಿಕ್ಕಿ ಗ್ರಾಹಕರನ್ನು ಸೆಳೆಯುತ್ತಿದೆ.