ಶೀಘ್ರದಲ್ಲೇ ಭಾರತಕ್ಕೆ ಬರಲಿದೆ Mercedes-Benz EQC ಎಲೆಕ್ಟ್ರಿಕ್ ಎಸ್‍ಯುವಿಯ ಮುಂದಿನ ಬ್ಯಾಚ್
ಐಷಾರಾಮಿ ಕಾರು ತಯಾರಕ ಕಂಪನಿಯಾದ ಮರ್ಸಿಡಿಸ್ ಬೆಂಝ್ ತನ್ನ ಮೊದಲ ಪ್ರೀಮಿಯಂ ಎಲೆಕ್ಟ್ರಿಕ್ ಎಸ್‍ಯುವಿಯಾದ ಇಕ್ಯೂಸಿ(EQC) ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಕಳೆದ ವರ್ಷ ಬಿಡುಗಡೆಗೊಳಿಸಿತ್ತು. ಈ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಗೆ ಭಾರತೀಯ ಮಾರುಕಟ್ಟೆಯಲ್ಲಿ ಭರ್ಜರಿ ಬೇಡಿಕೆಯನ್ನು ಪಡೆದುಕೊಂಡಿತು.

ಇದೀಗ ಮರ್ಸಿಡಿಸ್ ಬೆಂಝ್ ಇಂಡಿಯಾ ಕಂಪನಿಯು ಇಕ್ಯೂಸಿ ಎಲೆಕ್ಟ್ರಿಕ್ ಐಷಾರಾಮಿ ಎಸ್‌ಯುವಿಯ ಮುಂದಿನ ಬ್ಯಾಚ್‌ಗಾಗಿ ಬುಕ್ಕಿಂಗ್ ಸ್ವೀಕರಿಸಲು ಆರಂಭಿಸಿದೆಪ್ರಸ್ತುತ, ಎಲೆಕ್ಟ್ರಿಕ್ ಎಸ್‌ಯುವಿಯು ಭಾರತಕ್ಕೆ ಸಂಪೂರ್ಣ ನಿರ್ಮಿತ ಯುನಿಟ್ (ಸಿಬಿಯು) ಮಾದರಿಯಾಗಿ ಬರುತ್ತಿದೆ. ಹೊಸ ಬ್ಯಾಚ್ ಈ ವರ್ಷದ ಅಕ್ಟೋಬರ್ ತಿಂಗಳಿನಲ್ಲಿ ಭಾರತದ ತೀರವನ್ನು ತಲುಪುತ್ತದೆ. ಮರ್ಸಿಡಿಸ್ ಬೆಂಝ್ ಕಂಪನಿಯು ಈ ಇಕ್ಯೂಸಿ ಎಲೆಕ್ಟ್ರಿಕ್ ಐಷಾರಾಮಿ ಎಸ್‌ಯುವಿಯನ್ನು ಕಳೆದ ವರ್ಷದ ಅಕ್ಟೋಬರ್ ತಿಂಗಳಿನಲ್ಲಿ ಬಿಡುಗಡೆ ಮಾಡಲಾಯಿತು.

ಇದು ಭಾರತದಲ್ಲಿ ಬಿಡುಗಡೆಯಾದ ಮೊದಲ ಐಷಾರಾಮಿ ಎಲೆಕ್ಟ್ರಿಕ್ ವಾಹನವಾಗಿದೆ. ಈ ಎಲೆಕ್ಟ್ರಿಕ್ ಎಸ್‌ಯುವಿಯ ಮೊದಲ ಬ್ಯಾಚ್ ಮೂರು ತಿಂಗಳಲ್ಲಿ ಮಾರಾಟವಾಯಿತು. ಇದಲ್ಲದೆ, ಮರ್ಸಿಡಿಸ್ ಈಗ ಭಾರತದಾದ್ಯಂತದ 50 ನಗರಗಳಿಂದ ಇಕ್ಯೂಸಿ ಅನ್ನು ಮಾರಾಟ ಮಾಡಲಿದೆ,

ಅದರ ಪ್ರಾರಂಭದ ಸಮಯದಲ್ಲಿ ಭಾರತದ ದೆಹಲಿ, ಮುಂಬೈ, ಪುಣೆ, ಬೆಂಗಳೂರು, ಚೆನ್ನೈ ಮತ್ತು ಹೈದರಾಬಾದ್ ಎಂಬ 6 ನಗರಗಳಲ್ಲಿ ಮಾರಾಟ ಮಾಡಲಾಯಿತು.ಕಂಪನಿಯು ದೇಶಕ್ಕೆ ಬಂದ ಮೊದಲ ಬ್ಯಾಚ್ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯ ಎಲ್ಲಾ ಯುನಿಟ್ ಗಳನ್ನು ಈಗಾಗಲೇ ಮಾರಾಟಗೊಳಿಸಿವೆ.

ಜಾಗ್ವಾರ್ ಐ-ಪೇಸ್ ಮತ್ತು ಆಡಿ ಇ-ಟ್ರಾನ್ ಎಲೆಕ್ಟ್ರಿಕ್ ಎಸ್‍ಯುವಿಗಳಿಗೆ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಪೈಪೋಟಿ ನೀಡುತ್ತದೆ. ಈ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯ ಸ್ಟೈಲಿಂಗ್ ತುಂಬಾ ವಿಭಿನ್ನವಾಗಿದೆ. ಈ ಹೊಸ ಎಲೆಕ್ಟ್ರಿಕ್ ಎಸ್‍ಯುವಿಯ ಮುಂಭಾಗದಲ್ಲಿ ಮಲ್ಟಿ-ಸ್ಲ್ಯಾಟ್ ಗ್ರಿಲ್ ದೊಡ್ಡದಾಗಿದೆ ಮತ್ತು ಯು-ಆಕಾರದ ಕ್ರೋಮ್ ಸುತ್ತುವರೆದಿರುವ ಎಲ್ಇಡಿ ಹೆಡ್ ಲ್ಯಾಂಪ್ ಮತ್ತು ಎಲ್ಇಡಿ ಡೇಟೈಮ್ ರನ್ನಿಂಗ್ ಲ್ಯಾಂಪ್ ಗಳನ್ನು ಹೊಂದಿವೆ.

ಇನ್ನು ಈ ಎಲೆಕ್ಟ್ರಿಕ್ ಎಸ್‍ಯುವಿಯ ಕ್ಯಾಬಿನ್ ನಲ್ಲಿ ಡ್ಯುಯಲ್ 10.3-ಇಂಚಿನ ಡಿಸ್ ಪ್ಲೇಯನ್ನು ಅಳವಡಿಸಲಾಗಿದೆ. ಇನ್ನು ಮಲ್ಟಿ-ಫಂಕ್ಷನಲ್ ಸ್ಟೀಯರಿಂಗ್ ವ್ಹೀಲ್ ಮತ್ತು ಟ್ರ್ಯಾಕ್‌ಪ್ಯಾಡ್‌ನೊಂದಿಗೆ ಸಿಗ್ನೇಚರ್ ಸೆಂಟರ್ ಕನ್ಸೋಲ್ ನೊಂದಿಗೆ ಎಂಬಿಎಕ್ಸ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಕೂಡ ಇದರಲ್ಲಿ ಕಾಣಬಹುದು.

ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯಲ್ಲಿ ಎರಡು ಎಲೆಕ್ಟ್ರಿಕ್ ಮೋಟಾರ್ ಅನ್ನು ಹೊಂದಿದೆ. ಒಂದು ಮೋಟಾರ್ ಈ ಎಲೆಕ್ಟ್ರಿಕ್ ಎಸ್‍ಯುವಿಯು ಮುಂಭಾಗದ ಆಕ್ಸಲ್ ಅನ್ನು ಚಾಲನೆ ಮಾಡುತ್ತದೆ ಮತ್ತು ಇನ್ನೊಂದು ಮೋಟಾರ್ ಹಿಂಭಾಗದ ಫ್ಹೋರ್ ವ್ಹೀಲ್ ಡ್ರೈವ್ ಸಿಸ್ಟಂ ಅನ್ನು ಹೊಂದಿದೆ. ಈ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯಲ್ಲಿ 80 ಕಿ.ವ್ಯಾಟ್ ಲಿಥಿಯಂ-ಐಯಾನ್ ಬ್ಯಾಟರಿ ಪ್ಯಾಕನ್ನು ಅಳವಡಿಸಲಾಗಿದೆ.

ಈ ಬ್ಯಾಟರಿ ಪ್ಯಾಕ್ ಅನ್ನು ಪೂರ್ತಿಯಾಗಿ ಚಾರ್ಜ್ ಮಾಡಿದರೆ 471 ಕಿ.ಮೀಗಳವರೆಗೆ ಚಲಿಸುತ್ತದೆ. ಈ ಸಂಯೋಜಿತ ಎಲೆಕ್ಟ್ರಿಕ್ ಮೋಟಾರ್ 405 ಬಿಹೆಚ್‍ಪಿ ಪವರ್ ಮತ್ತು 765 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮಥ್ಯವನ್ನು ಹೊಂದಿದೆ. ಜರ್ಮನ್ ಐಷಾರಾಮಿ ಕಾರು ತಯಾರಕರು ಇಕ್ಯೂಸಿಯನ್ನು ಅಭಿವೃದ್ಧಿಪಡಿಸುವಾಗ ಸಾಕಷ್ಟು ಚಿಂತನೆ ನಡೆಸಿದ್ದಾರೆ.

2016ರ ಪ್ಯಾರಿಸ್ ಮೋಟಾರ್ ಶೋದಲ್ಲಿ ಪ್ರದರ್ಶಿಸಲಾದ ಜನರೇಷನ್ ಇಕ್ಯೂ ಕಾನ್ಸೆಪ್ಟ್‌ನ ವಿನ್ಯಾಸವನ್ನು ಹೊಸ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯು ಹೊಂದಿದೆ. ಜರ್ಮನ್ ಐಷಾರಾಮಿ ಕಾರು ತಯಾರಕರು ಇಕ್ಯೂಸಿಯನ್ನು ಅಭಿವೃದ್ಧಿಪಡಿಸುವಾಗ ಸಾಕಷ್ಟು ಚಿಂತನೆ ನಡೆಸಿದ್ದಾರೆ.

ಇನ್ನು ಈ ಹೊಸ ಎಲೆಕ್ಟ್ರಿಕ್ ಎಸ್‍ಯುವಿಯ ಕ್ಯಾಬಿನ್ ನಲ್ಲಿ ಹೊಸ ಪ್ರೀಮಿಯಂ ವಿನ್ಯಾಸವನ್ನು ಹೊಂದಿದೆ.ಈ ಎಲೆಕ್ಟ್ರಿಕ್ ಎಸ್‍ಯುವಿಯು ಕೇವಲ 5.1 ಸೆಕೆಂಡುಗಳಲ್ಲಿ 0 ದಿಂದ 100 ಕಿ.ಮೀ ವೇಗವನ್ನು ಕ್ರಮಿಸುತ್ತದೆ. ಈ ಕಾರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 180 ಕಿ.ಮೀಗಳಾಗಿದೆ.

ಮರ್ಸಿಡಿಸ್ ಬೆಂಝ್ ಇಕ್ಯೂಸಿ 400 ಎಲೆಕ್ಟ್ರಿಕ್ ಎಸ್‍ಯುವಿ ಜಿಎಲ್ಸಿ ರೂಪಾಂತರವನ್ನು ಆಧರಿಸಿದ್ದರೂ, ಇದು ಖಂಡಿತವಾಗಿಯೂ ಫ್ಯೂಚರಿಸ್ಟಿಕ್ ಆಗಿ ಕಾಣುತ್ತದೆ ಮತ್ತು ಅಲ್ಲದೇ ಇದು ಕಣ್ಮನ ಸೆಳೆಯುವ ಲುಕ್ ಅನ್ನು ಹೊಂದಿದೆ. ಇಕ್ಯೂಸಿ 400 ಭಾರತೀಯ ಮಾರುಕಟ್ಟೆಯಲ್ಲಿ ಬ್ರ್ಯಾಂಡ್‌ನಿಂದ ಪಡೆದ ಮೊದಲ ಫುಲ್ ಎಲೆಕ್ಟ್ರಿಕ್ ಕೊಡುಗೆಯಾಗಿದೆ.

ಅಲ್ಲದೇ ಇದು ಮರ್ಸಿಡಿಸ್ ಬೆಂಝ್ ಕಂಪನಿಯ ಮೊದಲ ಆಲ್-ಎಲೆಕ್ಟ್ರಿಕ್ ಸರಣಿ ಉತ್ಪಾದನಾ ಮಾದರಿಯಾಗಿದೆ. ಈ ಮರ್ಸಿಡಿಸ್ ಬೆಂಝ್ ಇಕ್ಯೂಸಿ 400 ಎಸ್‍ಯುವಿ ಸುಮಾರು 500-ಲೀಟರ್ ಗಳಷ್ಟು ಬೂಟ್ ಸ್ಪೇಸ್ ಅನ್ನು ಪಡೆಯುತ್ತದೆ ಮತ್ತು ಹೆಚ್ಚಿನ ಸಾಮಗ್ರಿಗಳು ಇದ್ದಾಗ ಅಥವಾ ಹೆಚ್ಚಿನ ಸ್ಪೇಸ್ ಬೇಕದಾಗ ಮಧ್ಯದ ಸಾಲಿನ ಸೀಟುಗಳನ್ನು ಮಾಡಚಬಹುದು. ಬೂಟ್ ಲಿಡ್ ಎಲೆಕ್ಟ್ರಿಕ್ ಆಗಿದೆ.

ಇನ್ನು ಜನಪ್ರಿಯ ಐಷಾರಾಮಿ ಕಾರು ತಯಾರಕ ಕಂಪನಿಯಾದ ಮರ್ಸಿಡಿಸ್ ಬೆಂಝ್ 2030ರ ವೇಳೆಗೆ ಸಂಪೂರ್ಣವಾಗಿ ಎಲೆಕ್ಟ್ರಿಕ್ ವಾಹನಗಳನ್ನು ಮಾತ್ರ ಬಿಡುಗಡೆಗೊಳಿಸುವ ಗುರಿಯನ್ನು ಹೊಂದಿದೆ. ಇತರ ಹಲವು ಜನಪ್ರಿಯ ವಾಹನ ತಯಾರಕ ಕಂಪನಿಗಳು ಇಂಧನ ಚಾಲಿತ ವಾಹನಗಳನ್ನು ಕೈಬಿಟ್ಟು ಎಲೆಕ್ಟ್ರಿಕ್ ವಾಹನಗಳ ಕಡೆ ಮುಖಮಾಡುತ್ತಿದ್ದಾರೆ. ಮರ್ಸಿಡಿಸ್ ಬೆಂಝ್ ಕಂಪನಿಯು ತನ್ನ ಇಕ್ಯೂ ಎಲೆಕ್ಟ್ರಿಕ್ ಕಾರಿನ ಸರಣಿಯನ್ನು ವಿಸ್ತರಿಸುತ್ತಿದೆ. ಈ ಹೊಸ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಮತ್ತು ಇಕ್ಯೂಎಸ್ ನಂತರ ಹೊಸ ಇಕ್ಯೂಇ ಪೋರ್ಟ್ಫೋಲಿಯೊಗೆ ಸೇರಲಿದೆ.


Click it and Unblock the Notifications








