Just In
Don't Miss!
- News
ತೊಂದರೆಗೊಳಗಾಗಿರುವ ರಾಜ್ಯಗಳಿಗೆ ಮುಂದಿನ ವಾರದೊಳಗೆ ಮತ್ತಷ್ಟು ಲಸಿಕೆ: ಕೇಂದ್ರ
- Finance
UMANG APP: ಇಪಿಎಫ್ಗೆ ಸಂಬಂಧಿಸಿದ ಆ್ಯಪ್, ವೈಶಿಷ್ಟ್ಯಗಳೇನು ತಿಳಿಯಿರಿ
- Movies
ಜಾಕಿ ಚಾನ್ ತಮ್ಮ ಮಗನಿಗೆ ಸಾವಿರಾರು ಕೋಟಿ ಆಸ್ತಿಯನ್ನು ಕೊಡುತ್ತಿಲ್ಲವೇಕೆ?
- Lifestyle
ಭಾನುವಾರದ ಭವಿಷ್ಯ: ಈ ದಿನ ಯಾವ ರಾಶಿಯವರಿಗೆ ಅದೃಷ್ಟದ ದಿನ
- Sports
ಹೈದರಾಬಾದ್ ಸೋಲಿಸಿ ಅಗ್ರ ಸ್ಥಾನಕ್ಕೇರಿದ ಮುಂಬೈ ಇಂಡಿಯನ್ಸ್
- Education
Ninasam Diploma Admission 2020-21: ಮೇ ತಿಂಗಳಲ್ಲಿ ನೀನಾಸಂ ಡಿಪ್ಲೋಮಾ ಪ್ರವೇಶಾತಿ ಆರಂಭ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮರ್ಸಿಡಿಸ್ ಇಕ್ಯೂಎಸ್ ಎಲೆಕ್ಟ್ರಿಕ್ ಸೆಡಾನ್ ಕಾರಿನ ಡ್ಯಾಶ್‌ಬೋರ್ಡ್ ಅನಾವರಣ
ಹೆಚ್ಚುತ್ತಿರುವ ಮಾಲಿನ್ಯ ತಡೆಗಾಗಿ ವಿವಿಧ ರಾಷ್ಟ್ರಗಳು 2030ರಿಂದಲೇ ಸಂಪೂರ್ಣವಾಗಿ ಇಂಧನ ಚಾಲಿತ ವಾಹನಗಳ ಮಾರಾಟವನ್ನು ಪೂರ್ಣಪ್ರಮಾಣದಲ್ಲಿ ಸ್ಥಗಿತಗೊಳಿಸುವ ನಿರ್ಣಯ ಕೈಗೊಂಡಿದ್ದು, ಇದಕ್ಕೆ ಪೂರಕವಾಗಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಸಹ ಹೆಚ್ಚಿಸಲಾಗುತ್ತಿದೆ.

ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾಗಿ ಯುರೋಪ್ ಒಕ್ಕೂಟದಲ್ಲಿನ ಪ್ರಮುಖ ರಾಷ್ಟ್ರಗಳ ನಿರ್ಣಯದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟವು ಸಾಕಷ್ಟು ಇಳಿಕೆಯಾಗುತ್ತಿದ್ದು, ಹೈಬ್ರಿಡ್ ಮತ್ತು ಪೂರ್ಣ ಪ್ರಮಾಣದ ಎಲೆಕ್ಟ್ರಿಕ್ ವಾಹನಗಳ ಮಾರಾಟವದಲ್ಲಿ ಸಾಕಷ್ಟು ಬೆಳವಣಿಗೆ ಕಂಡುಬಂದಿದೆ. 2020ರಲ್ಲೇ ಯುರೋಪಿನ ಪ್ರಮುಖ ರಾಷ್ಟ್ರಗಳಲ್ಲಿ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಬರೋಬ್ಬರಿ 5 ಲಕ್ಷ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಿದ್ದು, ಮುಂಬರುವ ದಿನಗಳಲ್ಲಿ ವಿವಿಧ ಕಾರು ಕಂಪನಿಗಳು ಮತ್ತಷ್ಟು ಇವಿ ಮಾರಾಟವನ್ನು ಹೆಚ್ಚಿಸಲು ಸಜ್ಜಾಗುತ್ತಿವೆ.

ಜರ್ಮನ್ ಕಾರು ಉತ್ಪಾದನಾ ಕಂಪನಿಯಾಗಿರುವ ಮರ್ಸಿಡಿಸ್ ಬೆಂಝ್ ಕೂಡಾ ಈಗಾಗಲೇ ಇಕ್ಯೂಸಿ 400, ಇಕ್ಯೂಎ ಎಲೆಕ್ಟ್ರಿಕ್ ಎಸ್‌ಯುವಿಯೊಂದಿಗೆ ಹಲವು ಹೊಸ ದಾಖಲೆಗಳಿಗೆ ಕಾರಣವಾಗಿದ್ದು, ದುಬಾರಿ ಬೆಲೆ ನಡುವೆಯು ಹೊಸ ಇವಿ ಕಾರು ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ.

ಈ ನಿಟ್ಟಿನಲ್ಲಿ ಗ್ರಾಹಕರ ಬೇಡಿಕೆಯೆಂತೆ ಮತ್ತಷ್ಟು ಹೊಸ ಎಲೆಕ್ಟ್ರಿಕ್ ಕಾರು ಮಾದರಿಗಳ ಬಿಡುಗಡೆ ಸಿದ್ದವಾಗಿದ್ದು, ಗ್ರಾಹಕರ ಬೇಡಿಕೆಯಲ್ಲಿರುವ ಪ್ರಮುಖ ಕಾರು ಮಾದರಿಗಳನ್ನು ಎಲೆಕ್ಟ್ರಿಕ್ ಆವೃತ್ತಿಗಳನ್ನಾಗಿ ಬಿಡುಗಡೆಗೊಳಿಸಲು ಯೋಜನೆ ರೂಪಿಸಲಾಗಿದೆ.

ಜೊತೆಗೆ ಹಲವು ಹೊಚ್ಚ ಹೊಸ ಎಲೆಕ್ಟ್ರಿಕ್ ಕಾರು ಮಾದರಿಗಳ ಕಾನ್ಸೆಪ್ಟ್ ಆವೃತ್ತಿಯೊಂದಿಗೆ ರೋಡ್ ಟೆಸ್ಟಿಂಗ್ ಕೈಗೊಂಡಿರುವ ಮರ್ಸಿಡಿಸ್ ಬೆಂಝ್ ಕಂಪನಿಯು ಮುಂಬರುವ 2023ರ ವೇಳೆಗೆ ಒಟ್ಟು 6 ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಮಾರಾಟ ಹೊಂದಿರುವ ಗುರಿಹೊಂದಿದ್ದು, ಇದಕ್ಕೆ ಪೂರಕವಾಗಿ ಮಾರುಕಟ್ಟೆ ಅಧ್ಯಯನ ನಡೆಸುವ ಮೂಲಕ ಗ್ರಾಹಕರ ಬೇಡಿಕೆಯೆಂತೆ ಹೊಸ ತಂತ್ರಜ್ಞಾನ ಸೌಲಭ್ಯದೊಂದಿಗೆ ಹೊಸ ಕಾರುಗಳನ್ನು ಸಿದ್ದಪಡಿಸುತ್ತಿದೆ.

ಬಿಡುಗಡೆಯಾಗಲಿರುವ ಮರ್ಸಿಡಿಸ್ ಬೆಂಝ್ ಹೊಸ ಎಲೆಕ್ಟ್ರಿಕ್ ಕಾರುಗಳ ಪಟ್ಟಿಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಎಸ್‌ಯುವಿ, ಸೆಡಾನ್, ಎಂಪಿವಿ ಮತ್ತು ಸೂಪರ್ ಕಾರು ಮಾದರಿಗಳು ಸಹ ಒಳಗೊಂಡಿದ್ದು, ಹೊಸ ಕಾರುಗಳು ಸದ್ಯ ಮಾರುಕಟ್ಟೆಯಲ್ಲಿರುವ ಇಕ್ಯೂಸಿ 400, ಇಕ್ಯೂಎ ಮಾದರಿಗಿಂತಲೂ ಹೊಸ ಮಾದರಿಯ ತಂತ್ರಜ್ಞಾನ ಪಡೆದುಕೊಳ್ಳುವ ನೀರಿಕ್ಷೆಯಲ್ಲಿವೆ.

ಮರ್ಸಿಡಿಸ್ ಬೆಂಝ್ ಮುಂದಿನ ಎಲೆಕ್ಟ್ರಿಕ್ ಕಾರು ಮಾದರಿಯಾಗಿ ಇಕ್ಯೂಎಸ್ ಸೆಡಾನ್ ಮಾದರಿಯು ಬಿಡುಗಡೆಯಾಗುತ್ತಿದ್ದು, ಹೊಸ ಕಾರನ್ನು ಎಂಟ್ರಿ ಲೆವಲ್ ಕಾರು ಮಾದರಿಗಳ ಪ್ಲ್ಯಾಟ್‌ಫಾರ್ಮ್ ಆಧರಿಸಿ ನಿರ್ಮಾಣ ಕೈಗೊಂಡಿದೆ.

ಹೊಸ ಕಾರಿನ ಉತ್ಪಾದನಾ ಮಾದರಿಯನ್ನು ಅನಾವರಣಗೊಳಿಸಲು ಸಜ್ಜಾಗಿರುವ ಮರ್ಸಿಡಿಸ್ ಬೆಂಝ್ ಕಂಪನಿಯು ಹೊಸ ಕಾರಿನಲ್ಲಿ ಹಲವಾರು ಅತ್ಯಾಧುನಿಕ ಫೀಚರ್ಸ್‌ಗಳನ್ನು ಅಳಡಿಸುತ್ತಿದ್ದು, ಹೊಸ ಕಾರಿನ ಡ್ಯಾಶ್‌ಬೋರ್ಡ್ ಜೋಡಣೆ ಕುರಿತಾಗಿ ಕೆಲವು ಮಾಹಿತಿಗಳನ್ನು ಹಂಚಿಕೊಂಡಿದೆ.

ಹೈಪರ್ ಸ್ಕ್ರೀನ್ ಸೌಲಭ್ಯವನ್ನು ಹೊಂದಿರುವ ಹೊಸ ಇಕ್ಯೂಎಸ್ ಸೆಡಾನ್ ಮಾದರಿಯು ಡ್ಯಾಶ್‍ಬೋರ್ಡ್‌ನಲ್ಲಿ ನಿಯಂತ್ರಿಸಬಹುದಾದ ಸುಮಾರು ಫೀಚರ್ಸ್‌ಗಳನ್ನು ನೀಡಿದ್ದು, ಎಂಬಿಯುಎಕ್ಸ್ ಹೈಪರ್ ಸ್ಕ್ರಿನ್ ಸುಮಾರು 141 ಇಂಚಿನಷ್ಟು ಅಗಲವಾಗಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಡ್ಯಾಶ್‌ಬೋರ್ಡ್ ಸಂಪೂರ್ಣವಾಗಿ ಟಚ್ ಸ್ಕ್ರೀನ್ ಸೌಲಭ್ಯವನ್ನೇ ಹೊಂದಿದ್ದು, ಮೂರು ವಿಭಾಗಳಲ್ಲಿ ಪ್ರತ್ಯೇಕಗೊಂಡಿರುವ ಟಚ್ ಸ್ಕೀನ್ ಸೌಲಭ್ಯದಲ್ಲಿ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಇನ್ಪೋಟೈನ್‌ಮೆಂಟ್ ಕ್ಲಸ್ಟರ್ ಮತ್ತು ಪ್ಯಾಸೆಂಜರ್ ಸೈಡ್ ಟಚ್ ಸ್ಕ್ರೀನ್ ಸೌಲಭ್ಯ ಹೊಂದಿದೆ.

ಒಟ್ಟಿನಲ್ಲಿ ಹೊಸ ಕಾರು ಹಲವಾರು ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಕಾರು ಪ್ರಯಾಣವನ್ನು ಮತ್ತಷ್ಟು ಸುಲಭವಾಗಿಸುವುದಲ್ಲದೆ ಸುರಕ್ಷಿತ ಕಾರು ಚಾಲನೆಗೆ ಸಹಕಾರಿಯಾಗಿದ್ದು, ಹೊಸ ಕಾರು ಮುಂದಿನ ಕೆಲವೇ ದಿನಗಳಲ್ಲಿ ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳ್ಳಲಿದೆ.
MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಇಕ್ಯೂಸಿ 400, ಇಕ್ಯೂಎ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಹೊಂದಿರುವ ಹೊಸ ಇಕ್ಯೂಎಸ್ ಮಾದರಿಯು ಮೈಲೇಜ್‌ನಲ್ಲೂ ಗಮನಸೆಳೆಯಲಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಹೊಸ ಕಾರು ಪ್ರಮುಖ ಅಂತರ್‌ರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.