ಹೊಸ ಇಕ್ಯೂಎಸ್ ಮಾದರಿಗಾಗಿ ರಿಯರ್ ವ್ಹೀಲ್ ಡ್ರೈವ್ ಆಯ್ಕೆ ನೀಡಲಿದೆ ಮರ್ಸಿಡಿಸ್ ಬೆಂಝ್

2030ರಿಂದಲೇ ವಿವಿಧದ ಕಾರು ಉತ್ಪಾದನಾ ಕಂಪನಿಗಳು ಸಂಪೂರ್ಣವಾಗಿ ಇಂಧನ ಚಾಲಿತ ವಾಹನಗಳ ಮಾರಾಟವನ್ನು ಪೂರ್ಣಪ್ರಮಾಣದಲ್ಲಿ ಸ್ಥಗಿತಗೊಳಿಸಿ ಎಲೆಕ್ಟ್ರಿಕ್ ಕಾರುಗಳ ನಿರ್ಮಾಣದ ನಿರ್ಣಯ ಕೈಗೊಂಡಿದ್ದು, ಇದಕ್ಕೆ ಪೂರಕವಾಗಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಸಹ ಹೆಚ್ಚಿಸಲಾಗುತ್ತಿದೆ.

ಇಕ್ಯೂಎಸ್ ಮಾದರಿಗಾಗಿ ರಿಯರ್ ವ್ಹೀಲ್ ಡ್ರೈವ್ ಆಯ್ಕೆ ನೀಡಲಿದೆ ಮರ್ಸಿಡಿಸ್ ಬೆಂಝ್

ಹೊಸ ಇವಿ ನೀತಿಗಳ ಪರಿಣಾಮ ಹೈಬ್ರಿಡ್ ಮತ್ತು ಪೂರ್ಣ ಪ್ರಮಾಣದ ಎಲೆಕ್ಟ್ರಿಕ್ ವಾಹನಗಳ ಮಾರಾಟವದಲ್ಲಿ ಸಾಕಷ್ಟು ಬೆಳವಣಿಗೆ ಕಂಡುಬರುತ್ತಿದ್ದು, ಜರ್ಮನ್ ಕಾರು ಉತ್ಪಾದನಾ ಕಂಪನಿಯಾಗಿರುವ ಮರ್ಸಿಡಿಸ್ ಬೆಂಝ್ ಕೂಡಾ ಈಗಾಗಲೇ ಇಕ್ಯೂಸಿ 400, ಇಕ್ಯೂಎ ಎಲೆಕ್ಟ್ರಿಕ್ ಎಸ್‌ಯುವಿಯೊಂದಿಗೆ ಹಲವು ಹೊಸ ದಾಖಲೆಗಳಿಗೆ ಕಾರಣವಾಗಿದೆ.

ಇಕ್ಯೂಎಸ್ ಮಾದರಿಗಾಗಿ ರಿಯರ್ ವ್ಹೀಲ್ ಡ್ರೈವ್ ಆಯ್ಕೆ ನೀಡಲಿದೆ ಮರ್ಸಿಡಿಸ್ ಬೆಂಝ್

ದುಬಾರಿ ಬೆಲೆ ನಡುವೆಯು ಹೊಸ ಇವಿ ಕಾರು ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿರುವ ಮರ್ಸಿಡಿಸ್ ಬೆಂಝ್ ಕಂಪನಿಯು 2023ರ ವೇಳೆಗೆ ಒಟ್ಟು 6 ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಮಾರಾಟ ಹೊಂದಿರುವ ಗುರಿಹೊಂದಿದೆ.

ಇಕ್ಯೂಎಸ್ ಮಾದರಿಗಾಗಿ ರಿಯರ್ ವ್ಹೀಲ್ ಡ್ರೈವ್ ಆಯ್ಕೆ ನೀಡಲಿದೆ ಮರ್ಸಿಡಿಸ್ ಬೆಂಝ್

ಮರ್ಸಿಡಿಸ್ ಬೆಂಝ್ ಹೊಸ ಎಲೆಕ್ಟ್ರಿಕ್ ಕಾರುಗಳ ಪಟ್ಟಿಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಎಸ್‌ಯುವಿ, ಸೆಡಾನ್, ಎಂಪಿವಿ ಮತ್ತು ಸೂಪರ್ ಕಾರು ಮಾದರಿಗಳು ಸಹ ಒಳಗೊಂಡಿದ್ದು, ಹೊಸ ಕಾರುಗಳು ಸದ್ಯ ಮಾರುಕಟ್ಟೆಯಲ್ಲಿರುವ ಇಕ್ಯೂಸಿ 400, ಇಕ್ಯೂಎ ಮಾದರಿಗಿಂತಲೂ ಹೊಸ ಮಾದರಿಯ ತಂತ್ರಜ್ಞಾನ ಪಡೆದುಕೊಳ್ಳುವ ನೀರಿಕ್ಷೆಯಲ್ಲಿವೆ.

ಇಕ್ಯೂಎಸ್ ಮಾದರಿಗಾಗಿ ರಿಯರ್ ವ್ಹೀಲ್ ಡ್ರೈವ್ ಆಯ್ಕೆ ನೀಡಲಿದೆ ಮರ್ಸಿಡಿಸ್ ಬೆಂಝ್

ಮರ್ಸಿಡಿಸ್ ಬೆಂಝ್ ಮುಂದಿನ ಎಲೆಕ್ಟ್ರಿಕ್ ಕಾರು ಮಾದರಿಯಾಗಿ ಇಕ್ಯೂಎಸ್ ಸೆಡಾನ್ ಮಾದರಿಯು ಬಿಡುಗಡೆಯಾಗುತ್ತಿದ್ದು, ಹೊಸ ಕಾರನ್ನು ಎಂಟ್ರಿ ಲೆವಲ್ ಕಾರು ಮಾದರಿಗಳ ಪ್ಲ್ಯಾಟ್‌ಫಾರ್ಮ್ ಆಧರಿಸಿ ನಿರ್ಮಾಣ ಕೈಗೊಂಡಿದೆ. ಹೊಸ ಕಾರಿನ ಉತ್ಪಾದನಾ ಮಾದರಿಯನ್ನು ಅನಾವರಣಗೊಳಿಸಿರುವ ಮರ್ಸಿಡಿಸ್ ಬೆಂಝ್ ಕಂಪನಿಯು ಹೊಸ ಕಾರಿನಲ್ಲಿ ಹಲವಾರು ಅತ್ಯಾಧುನಿಕ ಫೀಚರ್ಸ್‌ಗಳನ್ನು ಅಳವಡಿಸಿದ್ದು, ಹೊಸ ಕಾರು ಆಲ್ ವ್ಹೀಲ್ ಡ್ರೈವ್ ಮತ್ತು ರಿಯರ್ ವ್ಹೀಲ್ ಡ್ರೈವ್ ಆಯ್ಕೆ ಪಡೆದುಕೊಳ್ಳಲಿದೆ.

ಇಕ್ಯೂಎಸ್ ಮಾದರಿಗಾಗಿ ರಿಯರ್ ವ್ಹೀಲ್ ಡ್ರೈವ್ ಆಯ್ಕೆ ನೀಡಲಿದೆ ಮರ್ಸಿಡಿಸ್ ಬೆಂಝ್

ವಿವಿಧ ಮಾರುಕಟ್ಟೆಗಳಿಗಾಗಿ ರಿಯರ್ ವ್ಹೀಲ್ ಡ್ರೈವ್ ಆಯ್ಕೆಯನ್ನು ನೀಡಲಾಗುತ್ತಿದ್ದು, ಹೊಸ ಡ್ರೈವ್ ಸಿಸ್ಟಂ ಮೂಲಕ ಸುಮಾರು 10 ಡಿಗ್ರಿಗಳವರೆಗೂ ತಿರುಗಲು ಅನುವು ಮಾಡಿಕೊಡುತ್ತದೆ.

ಇಕ್ಯೂಎಸ್ ಮಾದರಿಗಾಗಿ ರಿಯರ್ ವ್ಹೀಲ್ ಡ್ರೈವ್ ಆಯ್ಕೆ ನೀಡಲಿದೆ ಮರ್ಸಿಡಿಸ್ ಬೆಂಝ್

ಜೊತೆಗೆ ಹೈಪರ್ ಸ್ಕ್ರೀನ್ ಸೌಲಭ್ಯವನ್ನು ಹೊಂದಿರುವ ಹೊಸ ಇಕ್ಯೂಎಸ್ ಸೆಡಾನ್ ಮಾದರಿಯು ಡ್ಯಾಶ್‍ಬೋರ್ಡ್‌ನಲ್ಲಿ ನಿಯಂತ್ರಿಸಬಹುದಾದ ಸುಮಾರು ಫೀಚರ್ಸ್‌ಗಳನ್ನು ನೀಡಿದ್ದು, ಹೊಸ ಕಾರು ಇಕ್ಯೂಎಸ್ 450 ಪ್ಲಸ್ ಮತ್ತು ಇಕ್ಯೂಎಸ್ 580 ಎರಡು ವೆರಿಯೆಂಟ್‌ಗಳೊಂದಿಗೆ ಪ್ರತಿ ಚಾರ್ಜ್‌ಗೆ ಗರಿಷ್ಠ 770 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಇಕ್ಯೂಎಸ್ ಮಾದರಿಗಾಗಿ ರಿಯರ್ ವ್ಹೀಲ್ ಡ್ರೈವ್ ಆಯ್ಕೆ ನೀಡಲಿದೆ ಮರ್ಸಿಡಿಸ್ ಬೆಂಝ್

ಇನ್ನು ಟಾಪ್ ಎಂಡ್ ಇಕ್ಯೂಎಸ್ 580 ಮಾದರಿಯಲ್ಲಿ ಮಾತ್ರವೇ ಆಲ್ ವೀಲ್ಹ್ ಡ್ರೈವ್ ವ್ಯವಸ್ಥೆ ಹೊಂದಿದ್ದು, ಹೊಸ ಕಾರು ಮುಂದಿನ ಕೆಲವೇ ತಿಂಗಳುಗಳಲ್ಲಿ ಯುರೋಪ್ ಮತ್ತು ಅಮೆರಿಕದ ಪ್ರಮುಖ ಮಾರುಕಟ್ಟೆಗಳನ್ನು ಪ್ರವೇಶಿಸಲಿದೆ.

ಇಕ್ಯೂಎಸ್ ಮಾದರಿಗಾಗಿ ರಿಯರ್ ವ್ಹೀಲ್ ಡ್ರೈವ್ ಆಯ್ಕೆ ನೀಡಲಿದೆ ಮರ್ಸಿಡಿಸ್ ಬೆಂಝ್

ತದನಂತರ ಭಾರತದಲ್ಲೂ ಬಿಡುಗಡೆಯಾಗಲಿರುವ ಹೊಸ ಕಾರು ದೇಶಿಯ ಮಾರುಕಟ್ಟೆಯಲ್ಲಿ ಈಗಾಗಲೇ ಮಾರಾಟಗೊಳ್ಳುತ್ತಿರುವ ಇಕ್ಯೂಸಿ 400 ಮಾದರಿಗಿಂತ ಕೆಳದರ್ಜೆಯಲ್ಲಿ ಮಾರಾಟವಾಗಲಿದ್ದರೂ ಹೆಚ್ಚಿನ ಮಟ್ಟದ ಮೈಲೇಜ್‌ನೊಂದಿಗೆ ಗ್ರಾಹಕರನ್ನು ಸೆಳೆಯಲಿದೆ.

ಇಕ್ಯೂಎಸ್ ಮಾದರಿಗಾಗಿ ರಿಯರ್ ವ್ಹೀಲ್ ಡ್ರೈವ್ ಆಯ್ಕೆ ನೀಡಲಿದೆ ಮರ್ಸಿಡಿಸ್ ಬೆಂಝ್

ಒಟ್ಟಿನಲ್ಲಿ ಹೊಸ ಕಾರು ಹಲವಾರು ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಕಾರು ಪ್ರಯಾಣವನ್ನು ಮತ್ತಷ್ಟು ಸುಲಭವಾಗಿಸುವುದಲ್ಲದೆ ಸುರಕ್ಷಿತ ಕಾರು ಚಾಲನೆಗೆ ಸಹಕಾರಿಯಾಗಿದ್ದು, ಹೊಸ ಕಾರು ಇಕ್ಯೂಸಿ 400, ಇಕ್ಯೂಎ ಮಾದರಿಗಿಂತಲೂ ಹೊಸ ಮಾದರಿಯ ತಂತ್ರಜ್ಞಾನ ಪ್ರೇರಣೆಯೊಂದಿಗೆ ಮಾರಾಟಗೊಳ್ಳುವುದು ಖಚಿತವಾಗಿದೆ.

More from DriveSpark

Article Published On: Wednesday, July 28, 2021, 13:09 [IST]
English summary
Mercedes Benz Planning To Introduce Rear Wheel Drive Option In EQS. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+