ಭಾರತದಲ್ಲಿ 15 ಹೊಸ ಕಾರುಗಳನ್ನು ಬಿಡುಗಡೆಗೊಳಿಸಲಿವೆ ಮರ್ಸಿಡಿಸ್ ಬೆಂಝ್

ಜರ್ಮನಿ ಮೂಲದ ಐಷಾರಾಮಿ ಕಾರು ತಯಾರಕ ಕಂಪನಿಯಾದ ಮರ್ಸಿಡಿಸ್ ಬೆಂಝ್ ಭಾರತೀಯ ಮಾರುಕಟ್ಟೆಯಲ್ಲಿ ಈ ವರ್ಷದ ಮಾರಾಟ ತಂತ್ರಗಾರಿಕೆಯನ್ನು ಬಹಿರಂಗಪಡಿಸಿದೆ. ಮರ್ಸಿಡಿಸ್ ಬೆಂಝ್ ಕಂಪನಿಯು ಈ ವರ್ಷದ ಅವಧಿಯಲ್ಲಿ 15 ಮಾದರಿಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಪರಿಚಯಿಸುವುದಾಗಿ ಘೋಷಿಸಿದ್ದಾರೆ.

ಭಾರತದಲ್ಲಿ 15 ಹೊಸ ಕಾರುಗಳನ್ನು ಬಿಡುಗಡೆಗೊಳಿಸಲಿವೆ ಮರ್ಸಿಡಿಸ್ ಬೆಂಝ್

ಇದರಲ್ಲಿ ಹಲವಾರು ಹೊಸ ಮಾದರಿಗಳನ್ನು ಒಳಗೊಂಡಿದೆ, ಜೊತೆಗೆ ಕೆಲವು ಫೇಸ್‌ಲಿಫ್ಟ್‌ಗಳನ್ನು ಸಹ ಒಳಗೊಂಡಿದೆ. 2020ರಲ್ಲಿ ಮರ್ಸಿಡಿಸ್ ಬೆಂಝ್ 10 ಮಾದರಿಗಳನ್ನು ಪರಿಚಯಿಸಿತು. ಆದರೆ 2021ರಲ್ಲಿ ಆಕ್ರಮಣಕಾರಿ ಮಾರುಕಟ್ಟೆ ತಂತ್ರವನ್ನು ಹೊಂದಿದ್ದಾರೆ. ಕಂಪನಿಯು ಹೊಸ ಎ-ಕ್ಲಾಸ್ ಲಿಮೋಸಿನ್ ಸೆಡಾನ್ ಅನ್ನು ಶೀಘ್ರದಲ್ಲೇ ಬಿಡುಗಡೆಗೊಳಿಸಲಿವೆ. ಎ-ಕ್ಲಾಸ್ ಲಿಮೋಸಿನ್ ಕಾರು ಮರ್ಸಿಡಿಸ್ ಬೆಂಝ್ ಕಂಫನಿಯು ಈ ವರ್ಷ ಬಿಡುಗಡೆಗೊಳಿಸುವ ಮೊದಲ ಮಾದರಿಗಲಿದೆ.

ಭಾರತದಲ್ಲಿ 15 ಹೊಸ ಕಾರುಗಳನ್ನು ಬಿಡುಗಡೆಗೊಳಿಸಲಿವೆ ಮರ್ಸಿಡಿಸ್ ಬೆಂಝ್

ಮರ್ಸಿಡಿಸ್ ಬೆಂಝ್ ಎ-ಕ್ಲಾಸ್ ಲಿಮೋಸಿನ್ ಅನ್ನು ಮೊದಲು 2020ರ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶಿಸಲಾಯಿತು. ಈ ಐಷಾರಾಮಿ ಕಾರು ಮುಂಬರುವ ವಾರಗಳಲ್ಲಿ ಭಾರತದ ಮಾರುಕಟ್ಟೆಗೆ ಬರುವ ನಿರೀಕ್ಷೆಯಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಭಾರತದಲ್ಲಿ 15 ಹೊಸ ಕಾರುಗಳನ್ನು ಬಿಡುಗಡೆಗೊಳಿಸಲಿವೆ ಮರ್ಸಿಡಿಸ್ ಬೆಂಝ್

ಎ-ಕ್ಲಾಸ್ ಲಿಮೋಸಿನ್ ಜೊತೆಗೆ, ಮರ್ಸಿಡಿಸ್ ಬೆಂಝ್ ಇಂಡಿಯಾ ಕಂಪನಿಯು ಇನ್ನೂ ಕೆಲವು ಮಾದರಿಗಳನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಇದು ಹೊಸ ಜಿಎಲ್‌ಎ, ಹೊಸ ಎಸ್-ಕ್ಲಾಸ್ ಮತ್ತು ಫೇಸ್‌ಲಿಫ್ಟೆಡ್ ಇ-ಕ್ಲಾಸ್ ಅನ್ನು ಒಳಗೊಂಡಿದೆ. ಇನ್ನು ಮರ್ಸಿಡಿಸ್-ಎಎಂಜಿ ಜಿಟಿ ಬ್ಲ್ಯಾಕ್ ಸರಣಿಯ ಮಾದರಿಗಳು ಕೂಡ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ.

ಭಾರತದಲ್ಲಿ 15 ಹೊಸ ಕಾರುಗಳನ್ನು ಬಿಡುಗಡೆಗೊಳಿಸಲಿವೆ ಮರ್ಸಿಡಿಸ್ ಬೆಂಝ್

ಈ ವರ್ಷದ ಮೊದಲು ಬಿಡುಗಡೆಯಾಗಲಿರುವ ಮರ್ಸಿಡಿಸ್ ಬೆಂಝ್ ತನ್ನ ಹೊಸ ಎ-ಕ್ಲಾಸ್ ಲಿಮೋಸಿನ್ ಕಾರಿನ ಬುಕ್ಕಿಂಗ್ ಅನ್ನು ಈಗಾಗಲೇ ಪ್ರಾರಂಭಿಸಲಾಗಿದೆ. ಈ ಹೊಸ ಎ-ಕ್ಲಾಸ್ ಲಿಮೋಸಿನ್ ಕಾರಿಗೆ ರೂ.2 ಲಕ್ಷ ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಭಾರತದಲ್ಲಿ 15 ಹೊಸ ಕಾರುಗಳನ್ನು ಬಿಡುಗಡೆಗೊಳಿಸಲಿವೆ ಮರ್ಸಿಡಿಸ್ ಬೆಂಝ್

ಮರ್ಸಿಡಿಸ್ ಬೆಂಝ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಮಾರ್ಟಿನ್ ಶ್ವೆಂಕ್ ಅವರು ಮಾತನಾಡಿ, ಕರೋನಾದಿಂದ ಮಾರುಕಟ್ಟೆ ಏರಿಳಿತಗಳನ್ನು ಎದುರಿಸುತ್ತಿದ್ದರೂ, ನಾವು ಆಶಾವಾದಿಯಾಗಿದ್ದೇವೆ ಮತ್ತು ಗಳಿಸಿದ ಮಾರಾಟದ ಬೆಳವಣಿಗೆ ವೇಗವನ್ನು ಮುಂದುವರೆಸುವ ವಿಶ್ವಾಸದಲ್ಲಿದ್ದೇವೆ.

ಭಾರತದಲ್ಲಿ 15 ಹೊಸ ಕಾರುಗಳನ್ನು ಬಿಡುಗಡೆಗೊಳಿಸಲಿವೆ ಮರ್ಸಿಡಿಸ್ ಬೆಂಝ್

ಮರ್ಸಿಡಿಸ್ ಬೆಂಝ್ ಇಂಡಿಯಾ 15 ಹೊಸ ಮಾದರಿಗಳನ್ನು ಬಿಡುಗಡೆಗೊಳಿಸುತ್ತೇವೆ. ಇದು ಗ್ರಾಹಕರಿಗೆ ಮತ್ತು ನಮ್ಮ ವ್ಯಾಪಾರಿ ಪಾಲುದಾರರಿಗೆ ಉತ್ಸಾಹವನ್ನು ನೀಡುತ್ತದೆ ಎಂದು ನಾವು ನಂಬುತ್ತೇವೆ ಎಂದು ಹೇಳಿದರು.

MOST READ: 2020ರ ಡಿಸೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಟೊಯೊಟಾ

ಭಾರತದಲ್ಲಿ 15 ಹೊಸ ಕಾರುಗಳನ್ನು ಬಿಡುಗಡೆಗೊಳಿಸಲಿವೆ ಮರ್ಸಿಡಿಸ್ ಬೆಂಝ್

ತಮ್ಮ ಮಾರಾಟ ತಂತ್ರವನ್ನು ಘೋಷಿಸುವುದರ ಹೊರತಾಗಿ, ಮರ್ಸಿಡಿಸ್ ಬೆಂಝ್ ಇಂಡಿಯಾವು 2020ರ ಅವಧಿಯಲ್ಲಿ 7893 ಯುನಿಟ್ ಗಳನ್ನು ಮಾರಟಗೊಳಿಸಿವೆ. ಆದರೆ ಇದು ವಾರ್ಷಿಕವಾ ಮಾರಾಟಕ್ಕೆ ಹೋಲಿಸಿದರೆ ಶೇ.42 ರಷ್ಟು ಕುಸಿತ ಕಂಡಿದೆ

ಭಾರತದಲ್ಲಿ 15 ಹೊಸ ಕಾರುಗಳನ್ನು ಬಿಡುಗಡೆಗೊಳಿಸಲಿವೆ ಮರ್ಸಿಡಿಸ್ ಬೆಂಝ್

ಮರ್ಸಿಡಿಸ್ ಬೆಂಝ್ ಇಂಡಿಯಾ ಕಂಪನಿಯು 2021ರಲ್ಲಿ ಆಕ್ರಮಣಕಾರಿ ಮಾರುಕಟ್ಟೆ ತಂತ್ರವನ್ನು ಹೊಂದಿದ್ದಾರೆ. ಇದರ ಸಲುವಾಗಿ ಈ ವರ್ಷದಲ್ಲಿ 15 ಹೊಸ ಕಾರುಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಪರಿಚಯಿಸುವುದಾಗಿ ಘೋಷಿಸಿದ್ದಾರೆ.

More from DriveSpark

Article Published On: Thursday, January 14, 2021, 9:46 [IST]
English summary
Mercedes-Benz India Confirms 15 Product Launches. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+