2020ರ ಅವಧಿಯ ಕಾರು ಮಾರಾಟದಲ್ಲಿ ಕುಸಿತ ಕಂಡ ಮರ್ಸಿಡಿಸ್ ಬೆಂಝ್

ಜರ್ಮನಿ ಮೂಲದ ಐಷಾರಾಮಿ ಕಾರು ತಯಾರಕ ಕಂಪನಿಯಾದ ಮರ್ಸಿಡಿಸ್ ಬೆಂಝ್ ಇಂಡಿಯಾ 2020ರ ಅವಧಿಯ ಕಾರು ಮಾರಾಟದ ವರದಿಯನ್ನು ಬಹಿರಂಗಪಡಿಸಿದೆ. 2020ರ ಅವಧಿಯಲ್ಲಿ ಮರ್ಸಿಡಿಸ್ ಬೆಂಝ್ ಭಾರತೀಯ ಮಾರುಕಟ್ಟೆಯಲ್ಲಿ 7,893 ಕಾರುಗಳನ್ನು ಮಾರಾಟಗೊಳಿಸಿವೆ.

2020ರ ಅವಧಿಯ ಕಾರು ಮಾರಾಟದಲ್ಲಿ ಕುಸಿತ ಕಂಡ ಮರ್ಸಿಡಿಸ್ ಬೆಂಝ್

2019ರಲ್ಲಿ ಮರ್ಸಿಡಿಸ್ ಬೆಂಝ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ 13,786 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. 2019ರ ಅವಧಿಯ ಮಾರಾಟವನ್ನು 2020ರ ಅವಧಿಯ ಮಾರಾಟಕ್ಕೆ ಹೋಲಿಸಿದರೆ ಶೇ.42.75 ರಷ್ಟು ಭಾರಿ ಕುಸಿತ ಕಂಡಿದೆ. ಮರ್ಸಿಡಿಸ್ ಬೆಂಝ್ ಕರೋನಾ ಸೋಂಕಿನ ಕಾರಣ ಮಾರಾಟದಲ್ಲಿ ಕುಸಿತವನ್ನು ಕಂಡಿದೆ ಎಂದು ಹೇಳಿದೆ. 2020ರ ಅವಧಿಯ ಮಧ್ಯಾಂತರ ಅವದಿಯ ಬಳಿಕ ಮರ್ಸಿಡಿಸ್ ಬೆಂಝ್ ಕಾರುಗಳ ಮಾರಾಟದಲ್ಲಿ ಚೇತರಿಕೆಯನ್ನು ಕಂಡಿತ್ತು.

2020ರ ಅವಧಿಯ ಕಾರು ಮಾರಾಟದಲ್ಲಿ ಕುಸಿತ ಕಂಡ ಮರ್ಸಿಡಿಸ್ ಬೆಂಝ್

ಮರ್ಸಿಡಿಸ್ ಬೆಂಝ್ ಇಂಡಿಯಾ ತನ್ನ ಮಾರಾಟದ ಶೇ.14 ರಷ್ಟು ಆನ್‌ಲೈನ್ ಬುಕ್ಕಿಂಗ್ ಮೂಲಕ ಎಂದು ವರದಿ ಮಾಡಿದೆ. ಇದರಿಂದ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಲು 2021ರಲ್ಲಿ ಆಕ್ರಮಣಕಾರಿ ಮಾರುಕಟ್ಟೆ ತಂತ್ರವನ್ನು ಹೊಂದಿದ್ದಾರೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

2020ರ ಅವಧಿಯ ಕಾರು ಮಾರಾಟದಲ್ಲಿ ಕುಸಿತ ಕಂಡ ಮರ್ಸಿಡಿಸ್ ಬೆಂಝ್

ಮರ್ಸಿಡಿಸ್ ಬೆಂಝ್ ಕಂಪನಿಯು ಈ ವರ್ಷದ ಅವಧಿಯಲ್ಲಿ 15 ಮಾದರಿಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಪರಿಚಯಿಸುವುದಾಗಿ ಘೋಷಿಸಿದ್ದಾರೆ. ಇದರಲ್ಲಿ ಹಲವಾರು ಹೊಸ ಮಾದರಿಗಳನ್ನು ಒಳಗೊಂಡಿದೆ, ಜೊತೆಗೆ ಕೆಲವು ಫೇಸ್‌ಲಿಫ್ಟ್‌ಗಳನ್ನು ಸಹ ಒಳಗೊಂಡಿದೆ.

2020ರ ಅವಧಿಯ ಕಾರು ಮಾರಾಟದಲ್ಲಿ ಕುಸಿತ ಕಂಡ ಮರ್ಸಿಡಿಸ್ ಬೆಂಝ್

ಕಂಪನಿಯು ಹೊಸ ಎ-ಕ್ಲಾಸ್ ಲಿಮೋಸಿನ್ ಸೆಡಾನ್ ಅನ್ನು ಶೀಘ್ರದಲ್ಲೇ ಬಿಡುಗಡೆಗೊಳಿಸಲಿವೆ. ಎ-ಕ್ಲಾಸ್ ಲಿಮೋಸಿನ್ ಕಾರು ಮರ್ಸಿಡಿಸ್ ಬೆಂಝ್ ಕಂಫನಿಯು ಈ ವರ್ಷ ಬಿಡುಗಡೆಗೊಳಿಸುವ ಮೊದಲ ಮಾದರಿಯಾಗಲಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

2020ರ ಅವಧಿಯ ಕಾರು ಮಾರಾಟದಲ್ಲಿ ಕುಸಿತ ಕಂಡ ಮರ್ಸಿಡಿಸ್ ಬೆಂಝ್

ಮರ್ಸಿಡಿಸ್ ಬೆಂಝ್ ಎ-ಕ್ಲಾಸ್ ಲಿಮೋಸಿನ್ ಅನ್ನು ಮೊದಲು 2020ರ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶಿಸಲಾಯಿತು. ಈ ಐಷಾರಾಮಿ ಕಾರು ಮುಂಬರುವ ವಾರಗಳಲ್ಲಿ ಭಾರತದ ಮಾರುಕಟ್ಟೆಗೆ ಬರುವ ನಿರೀಕ್ಷೆಯಿದೆ.

2020ರ ಅವಧಿಯ ಕಾರು ಮಾರಾಟದಲ್ಲಿ ಕುಸಿತ ಕಂಡ ಮರ್ಸಿಡಿಸ್ ಬೆಂಝ್

ಮರ್ಸಿಡಿಸ್ ಬೆಂಝ್ ಕಂಪನಿಯು ತನ್ನ ಐಕಾನಿಕ್ ಆಫ್-ರೋಡರ್ ಜಿ-ಕ್ಲಾಸ್ ಅನ್ನು ಅನ್ನು 1979 ರಿಂದ ತಯಾರಿಸಲಾಗುತ್ತಿದೆ, ಇತ್ತೀಚೆಗೆ ಈ ಐಕಾನಿಕ್ ಮರ್ಸಿಡಿಸ್ ಬೆಂಝ್ ಜಿ-ಕ್ಲಾಸ್ ಎಸ್‍ಯುವಿಯು ಉತ್ಪಾದನೆಯಲ್ಲಿ 4 ಲಕ್ಷ ಮೈಲಿಗಲ್ಲನ್ನು ಮುಟ್ಟಿತು.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

2020ರ ಅವಧಿಯ ಕಾರು ಮಾರಾಟದಲ್ಲಿ ಕುಸಿತ ಕಂಡ ಮರ್ಸಿಡಿಸ್ ಬೆಂಝ್

ಮರ್ಸಿಡಿಸ್ ಬೆಂಝ್ ತನ್ನ ಮೊದಲ ಪ್ರೀಮಿಯಂ ಎಲೆಕ್ಟ್ರಿಕ್ ಎಸ್‍ಯುವಿಯಾದ ಇಕ್ಯೂಸಿ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಈ ಕಾರಿನ 80 ಕಿಲೋವ್ಯಾಟ್ ಬ್ಯಾಟರಿಯನ್ನು ಈಗ 7 ಗಂಟೆ 30 ನಿಮಿಷಗಳಲ್ಲಿ ಶೇ.10 ರಿಂದ ಶೇ.100 ರಷ್ಟು ಚಾರ್ಜ್ ಮಾಡಬಹುದು.

2020ರ ಅವಧಿಯ ಕಾರು ಮಾರಾಟದಲ್ಲಿ ಕುಸಿತ ಕಂಡ ಮರ್ಸಿಡಿಸ್ ಬೆಂಝ್

ಮರ್ಸಿಡಿಸ್ ಬೆಂಝ್ ಕಳೆದ ವರ್ಷ ಬಾರತೀಯ ಮಾರುಕಟ್ಟೆಯಲ್ಲಿ 10 ಮಾದರಿಗಳನ್ನು ಬಿಡುಗಡೆಗೊಳಿಸಿತ್ತು, ಅದರಲ್ಲಿ ಪ್ರೀಮಿಯಂ ಎಲೆಕ್ಟ್ರಿಕ್ ಕಾರು ಕೂಡ ಒಳಗೊಂಡಿದೆ. ಇನ್ನು ಕಳೆದ ಕೆಲವು ತಿಂಗಳುಗಳಿಂದ ಮರ್ಸಿಡಿಸ್ ಬೆಂಝ್ ಕಾರುಗಳ ಮಾರಾಟದಲ್ಲಿ ಚೇತರಿಕೆಯನ್ನು ಕಂಡಿದೆ.

Most Read Articles

Kannada
English summary
Mercedes-Benz India Sold 7,893 Cars In 2020. Read In Kannada.
Story first published: Thursday, January 14, 2021, 20:10 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X