Just In
- 23 min ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
- 31 min ago ಹ್ಯುಂಡೈನ ಈ ಕಾರಿಗೆ ಭಾರತದಲ್ಲಿ ಭರ್ಜರಿ ಡಿಸ್ಕೌಂಟ್: ಇದಕ್ಕಿಂತ ಉತ್ತಮ ಆಫರ್ ಸದ್ಯಕ್ಕಿಲ್ಲ!
- 40 min ago ರೈತರ ವಿಶ್ವಾಸದೊಂದಿಗೆ 40 ಲಕ್ಷ ಟ್ರ್ಯಾಕ್ಟರ್ ಮಾರಾಟ ಮೈಲಿಗಲ್ಲು ಸಾಧಿಸಿದ ಮಹೀಂದ್ರಾ
- 1 hr ago Bangaluru: ನಮ್ಮ ಯಾತ್ರಿ ಕ್ಯಾಬ್ ಸೇವೆ ಆರಂಭ.. ಎಷ್ಟಿದೆ ದರ?
Don't Miss!
- Movies ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ; ಸುಮಲತಾ ಅಂಬರೀಶ್ ಪ್ರತಿಕ್ರಿಯೆ
- News Bengaluru Rain: ಸುದೀರ್ಘ ಕಾಯುವಿಕೆ ಅಂತ್ಯ: ಬೆಂಗಳೂರಿಗೆ ಎಂಟ್ರಿ ಕೊಟ್ಟ ಮಳೆ; ವಿಡಿಯೋ ನೋಡಿ
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Technology oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭಾರತದಲ್ಲೂ ಬಿಡುಗಡೆಯಾಗಲಿದೆ ಅತ್ಯಧಿಕ ಮೈಲೇಜ್ ಪ್ರೇರಿತ ಮರ್ಸಿಡಿಸ್ ಇಕ್ಯೂಎಸ್
2030ರಿಂದಲೇ ವಿವಿಧದ ಕಾರು ಉತ್ಪಾದನಾ ಕಂಪನಿಗಳು ಸಂಪೂರ್ಣವಾಗಿ ಇಂಧನ ಚಾಲಿತ ವಾಹನಗಳ ಮಾರಾಟವನ್ನು ಪೂರ್ಣಪ್ರಮಾಣದಲ್ಲಿ ಸ್ಥಗಿತಗೊಳಿಸಿ ಎಲೆಕ್ಟ್ರಿಕ್ ಕಾರುಗಳ ನಿರ್ಮಾಣದ ನಿರ್ಣಯ ಕೈಗೊಂಡಿದ್ದು, ಇದಕ್ಕೆ ಪೂರಕವಾಗಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಸಹ ಹೆಚ್ಚಿಸಲಾಗುತ್ತಿದೆ.
ಇವಿ ನೀತಿಗಳ ಪರಿಣಾಮ ಹೈಬ್ರಿಡ್ ಮತ್ತು ಪೂರ್ಣ ಪ್ರಮಾಣದ ಎಲೆಕ್ಟ್ರಿಕ್ ವಾಹನಗಳ ಮಾರಾಟವದಲ್ಲಿ ಸಾಕಷ್ಟು ಬೆಳವಣಿಗೆ ಕಂಡುಬರುತ್ತಿದ್ದು, ಜರ್ಮನ್ ಕಾರು ಉತ್ಪಾದನಾ ಕಂಪನಿಯಾಗಿರುವ ಮರ್ಸಿಡಿಸ್ ಬೆಂಝ್ ಕೂಡಾ ಈಗಾಗಲೇ ಇಕ್ಯೂಸಿ 400, ಇಕ್ಯೂಎ ಎಲೆಕ್ಟ್ರಿಕ್ ಎಸ್ಯುವಿಯೊಂದಿಗೆ ಹಲವು ಹೊಸ ದಾಖಲೆಗಳಿಗೆ ಕಾರಣವಾಗಿದೆ.
ದುಬಾರಿ ಬೆಲೆ ನಡುವೆಯು ಹೊಸ ಇವಿ ಕಾರು ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿರುವ ಮರ್ಸಿಡಿಸ್ ಬೆಂಝ್ ಕಂಪನಿಯು 2023ರ ವೇಳೆಗೆ ಒಟ್ಟು 6 ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಮಾರಾಟ ಹೊಂದಿರುವ ಗುರಿಹೊಂದಿದೆ.
ಮರ್ಸಿಡಿಸ್ ಬೆಂಝ್ ಹೊಸ ಎಲೆಕ್ಟ್ರಿಕ್ ಕಾರುಗಳ ಪಟ್ಟಿಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಎಸ್ಯುವಿ, ಸೆಡಾನ್, ಎಂಪಿವಿ ಮತ್ತು ಸೂಪರ್ ಕಾರು ಮಾದರಿಗಳು ಸಹ ಒಳಗೊಂಡಿದ್ದು, ಹೊಸ ಕಾರುಗಳು ಸದ್ಯ ಮಾರುಕಟ್ಟೆಯಲ್ಲಿರುವ ಇಕ್ಯೂಸಿ 400, ಇಕ್ಯೂಎ ಮಾದರಿಗಿಂತಲೂ ಹೊಸ ಮಾದರಿಯ ತಂತ್ರಜ್ಞಾನ ಪಡೆದುಕೊಳ್ಳುವ ನೀರಿಕ್ಷೆಯಲ್ಲಿವೆ.
ಮರ್ಸಿಡಿಸ್ ಬೆಂಝ್ ಮುಂದಿನ ಎಲೆಕ್ಟ್ರಿಕ್ ಕಾರು ಮಾದರಿಯಾಗಿ ಇಕ್ಯೂಎಸ್ ಸೆಡಾನ್ ಮಾದರಿಯು ಬಿಡುಗಡೆಯಾಗುತ್ತಿದ್ದು, ಹೊಸ ಕಾರನ್ನು ಎಂಟ್ರಿ ಲೆವಲ್ ಕಾರು ಮಾದರಿಗಳ ಪ್ಲ್ಯಾಟ್ಫಾರ್ಮ್ ಆಧರಿಸಿ ನಿರ್ಮಾಣ ಕೈಗೊಂಡಿದೆ. ಹೊಸ ಕಾರಿನ ಉತ್ಪಾದನಾ ಮಾದರಿಯನ್ನು ಅನಾವರಣಗೊಳಿಸಿರುವ ಮರ್ಸಿಡಿಸ್ ಬೆಂಝ್ ಕಂಪನಿಯು ಹೊಸ ಕಾರಿನಲ್ಲಿ ಹಲವಾರು ಅತ್ಯಾಧುನಿಕ ಫೀಚರ್ಸ್ಗಳನ್ನು ಅಳವಡಿಸಿದ್ದು, ಹೊಸ ಕಾರಿನ ಮಾಹಿತಿಯನ್ನು ಇದೀಗ ಮರ್ಸಿಡಿಸ್ ಬೆಂಝ್ ಇಂಡಿಯಾ ವೆಬ್ತಾಣದಲ್ಲೂ ಪ್ರದರ್ಶನಗೊಳಿಸಿದೆ.
ಹೈಪರ್ ಸ್ಕ್ರೀನ್ ಸೌಲಭ್ಯವನ್ನು ಹೊಂದಿರುವ ಹೊಸ ಇಕ್ಯೂಎಸ್ ಸೆಡಾನ್ ಮಾದರಿಯು ಡ್ಯಾಶ್ಬೋರ್ಡ್ನಲ್ಲಿ ನಿಯಂತ್ರಿಸಬಹುದಾದ ಸುಮಾರು ಫೀಚರ್ಸ್ಗಳನ್ನು ನೀಡಿದ್ದು, ಇದೀಗ ಹೊಸ ಕಾರಿನಲ್ಲಿ ಇಕ್ಯೂಎಸ್ 450 ಪ್ಲಸ್ ಮತ್ತು ಇಕ್ಯೂಎಸ್ 580 ಎರಡು ವೆರಿಯೆಂಟ್ಗಳೊಂದಿಗೆ ಪ್ರತಿ ಚಾರ್ಜ್ಗೆ ಗರಿಷ್ಠ 770 ಕಿ.ಮೀ ಮೈಲೇಜ್ ಹಿಂದಿರುಗಿಸುವ ಮಾಹಿತಿ ಹಂಚಿಕೊಂಡಿದೆ.
MOST READ: ಬಿಡುಗಡೆಯಾಗಲಿರುವ 4x4 ಡ್ರೈವ್ ಸಿಸ್ಟಂ ಸೌಲಭ್ಯವುಳ್ಳ ಟಾಪ್ 5 ಕಾರುಗಳಿವು..!
ಇಕ್ಯೂಎಸ್ 580 ಆಲ್ ವೀಲ್ಹ್ ಡ್ರೈವ್ ವ್ಯವಸ್ಥೆಯೊಂದಿಗೆ ಟಾಪ್ ಎಂಡ್ ಮಾದರಿಯಾಗಿ ಮಾರಾಟಗೊಳ್ಳಲಿದ್ದು, ಮುಂದಿನ ಕೆಲವೇ ತಿಂಗಳುಗಳಲ್ಲಿ ಯುರೋಪ್ ಮತ್ತು ಅಮೆರಿಕದ ಪ್ರಮುಖ ಮಾರುಕಟ್ಟೆಗಳನ್ನು ಪ್ರವೇಶಿಸಲಿದೆ.
ತದನಂತರ ಭಾರತದಲ್ಲೂ ಬಿಡುಗಡೆಯಾಗಲಿರುವ ಹೊಸ ಕಾರು ದೇಶಿಯ ಮಾರುಕಟ್ಟೆಯಲ್ಲಿ ಈಗಾಗಲೇ ಮಾರಾಟಗೊಳ್ಳುತ್ತಿರುವ ಇಕ್ಯೂಸಿ 400 ಮಾದರಿಗಿಂತ ಕೆಳದರ್ಜೆಯಲ್ಲಿ ಮಾರಾಟವಾಗಲಿದ್ದರೂ ಹೆಚ್ಚಿನ ಮಟ್ಟದ ಮೈಲೇಜ್ನೊಂದಿಗೆ ಗ್ರಾಹಕರನ್ನು ಸೆಳೆಯಲಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!
ಒಟ್ಟಿನಲ್ಲಿ ಹೊಸ ಕಾರು ಹಲವಾರು ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಕಾರು ಪ್ರಯಾಣವನ್ನು ಮತ್ತಷ್ಟು ಸುಲಭವಾಗಿಸುವುದಲ್ಲದೆ ಸುರಕ್ಷಿತ ಕಾರು ಚಾಲನೆಗೆ ಸಹಕಾರಿಯಾಗಿದ್ದು, ಹೊಸ ಕಾರು ಇಕ್ಯೂಸಿ 400, ಇಕ್ಯೂಎ ಮಾದರಿಗಿಂತಲೂ ಹೊಸ ಮಾದರಿಯ ತಂತ್ರಜ್ಞಾನ ಪ್ರೇರಣೆಯೊಂದಿಗೆ ಮಾರಾಟಗೊಳ್ಳುವುದು ಖಚಿತವಾಗಿದೆ.