2030ರ ವೇಳೆಗೆ ಇವಿ ಕಾರುಗಳನ್ನು ಮಾತ್ರ ಮಾರಾಟ ಮಾಡಲಿದೆ ಮರ್ಸಿಡಿಸ್ ಬೆಂಝ್

2030ರಿಂದಲೇ ವಿವಿಧ ಕಾರು ಉತ್ಪಾದನಾ ಕಂಪನಿಗಳು ಸಂಪೂರ್ಣವಾಗಿ ಇಂಧನ ಚಾಲಿತ ವಾಹನಗಳ ಮಾರಾಟವನ್ನು ಸ್ಥಗಿತಗೊಳಿಸಿ ಕೇವಲ ಎಲೆಕ್ಟ್ರಿಕ್ ಕಾರುಗಳ ನಿರ್ಮಾಣದ ನಿರ್ಣಯ ಕೈಗೊಂಡಿದ್ದು, ಇದಕ್ಕೆ ಪೂರಕವಾಗಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹಂತ-ಹಂತವಾಗಿ ಹೆಚ್ಚಿಸಲಾಗುತ್ತಿದೆ.

2030ರ ವೇಳೆಗೆ ಇವಿ ಕಾರುಗಳನ್ನು ಮಾತ್ರ ಮಾರಾಟ ಮಾಡಲಿದೆ ಮರ್ಸಿಡಿಸ್ ಬೆಂಝ್

ಇವಿ ನೀತಿಗಳ ಪರಿಣಾಮ ಹೈಬ್ರಿಡ್ ಮತ್ತು ಪೂರ್ಣ ಪ್ರಮಾಣದ ಎಲೆಕ್ಟ್ರಿಕ್ ವಾಹನಗಳ ಮಾರಾಟವದಲ್ಲಿ ಸಾಕಷ್ಟು ಬೆಳವಣಿಗೆ ಕಂಡುಬರುತ್ತಿದ್ದು, ಜರ್ಮನ್ ಕಾರು ಉತ್ಪಾದನಾ ಕಂಪನಿಯಾಗಿರುವ ಮರ್ಸಿಡಿಸ್ ಬೆಂಝ್ ಕೂಡಾ ಈಗಾಗಲೇ ಇಕ್ಯೂಸಿ 400, ಇಕ್ಯೂಎ ಎಲೆಕ್ಟ್ರಿಕ್ ಎಸ್‌ಯುವಿಯೊಂದಿಗೆ ಹಲವು ಹೊಸ ದಾಖಲೆಗಳಿಗೆ ಕಾರಣವಾಗಿದೆ.

2030ರ ವೇಳೆಗೆ ಇವಿ ಕಾರುಗಳನ್ನು ಮಾತ್ರ ಮಾರಾಟ ಮಾಡಲಿದೆ ಮರ್ಸಿಡಿಸ್ ಬೆಂಝ್

ದುಬಾರಿ ಬೆಲೆ ನಡುವೆಯು ಹೊಸ ಇವಿ ಕಾರು ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿರುವ ಮರ್ಸಿಡಿಸ್ ಬೆಂಝ್ ಕಂಪನಿಯು 2023ರ ವೇಳೆಗೆ ಒಟ್ಟು 6 ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಮಾರಾಟ ಹೊಂದಿರುವ ಗುರಿಹೊಂದಿದ್ದು, 2030ರ ವೇಳೆಗೆ ಸಂಪೂರ್ಣವಾಗಿ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟವನ್ನು ಸ್ಥಗಿತಗೊಳಿಸಲಿದೆ.

2030ರ ವೇಳೆಗೆ ಇವಿ ಕಾರುಗಳನ್ನು ಮಾತ್ರ ಮಾರಾಟ ಮಾಡಲಿದೆ ಮರ್ಸಿಡಿಸ್ ಬೆಂಝ್

ಮರ್ಸಿಡಿಸ್ ಬೆಂಝ್ ಹೊಸ ಎಲೆಕ್ಟ್ರಿಕ್ ಕಾರುಗಳ ಪಟ್ಟಿಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಎಸ್‌ಯುವಿ, ಸೆಡಾನ್, ಎಂಪಿವಿ ಮತ್ತು ಸೂಪರ್ ಕಾರು ಮಾದರಿಗಳು ಸಹ ಒಳಗೊಂಡಿದ್ದು, ಹೊಸ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅಭಿವೃದ್ದಿಗೊಳ್ಳಲಿರುವ ಭವಿಷ್ಯದ ಮರ್ಸಿಡಿಸ್ ಬೆಂಝ್ ಕಾರುಗಳು ಪ್ರತಿ ಚಾರ್ಜ್‌ಗೆ 1 ಸಾವಿರ ಕಿ.ಮೀ ಮೈಲೇಜ್ ಹಿಂದಿರುಗಿಸುವ ಬ್ಯಾಟರಿ ಪ್ಯಾಕ್ ಪಡೆದುಕೊಳ್ಳಲಿವೆ.

2030ರ ವೇಳೆಗೆ ಇವಿ ಕಾರುಗಳನ್ನು ಮಾತ್ರ ಮಾರಾಟ ಮಾಡಲಿದೆ ಮರ್ಸಿಡಿಸ್ ಬೆಂಝ್

ಹೊಸ ಯೋಜನೆಗಾಗಿ ಮರ್ಸಿಡಿಸ್ ಬೆಂಝ್ ಕಂಪನಿಯು ವಿಶ್ವಾದ್ಯಂತ ಕಾರ್ಯನಿರ್ವಹಣೆಯಲ್ಲಿರುವ ಪ್ರಮುಖ ಕಾರು ಉತ್ಪಾದನಾ ಘಟಕ ಉನ್ನತೀಕರಣಕ್ಕಾಗಿ ಅಂದಾಜು ರೂ. 3.50 ಲಕ್ಷ ಕೋಟಿ ಹೂಡಿಕೆ ಮಾಡುತ್ತಿದ್ದು, ಎಲೆಕ್ಟ್ರಿಕ್ ಪ್ಯಾಸೆಂಜರ್ ಕಾರುಗಳು, ಎಲೆಕ್ಟ್ರಿಕ್ ಸ್ಪೋರ್ಟ್ ವೆಹಿಕಲ್ ಮತ್ತು ಎಲೆಕ್ಟ್ರಿಕ್ ಕಮರ್ಷಿಯಲ್ ವೆಹಿಕಲ್ ವಿಭಾಗಗಳ ಮೇಲೆ ಪ್ರತ್ಯೇಕವಾಗಿ ಹೂಡಿಕೆ ಮಾಡುತ್ತಿದೆ.

2030ರ ವೇಳೆಗೆ ಇವಿ ಕಾರುಗಳನ್ನು ಮಾತ್ರ ಮಾರಾಟ ಮಾಡಲಿದೆ ಮರ್ಸಿಡಿಸ್ ಬೆಂಝ್

ಸದ್ಯ ಇಕ್ಯೂಸಿ 400, ಇಕ್ಯೂಎ ಎಲೆಕ್ಟ್ರಿಕ್ ಕಾರುಗಳ ಮೂಲಕ ಜಾಗತಿಕ ಮಾರುಕಟ್ಟೆಗಳಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಹೊಸ ಉತ್ಪನ್ನಗಳಿಗಾಗಿ ಕಂಪನಿಯು ನಿರಂತರವಾಗಿ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಕೈಗೊಳ್ಳುತ್ತಿದೆ.

2030ರ ವೇಳೆಗೆ ಇವಿ ಕಾರುಗಳನ್ನು ಮಾತ್ರ ಮಾರಾಟ ಮಾಡಲಿದೆ ಮರ್ಸಿಡಿಸ್ ಬೆಂಝ್

ಇನ್ನು ಮರ್ಸಿಡಿಸ್ ಬೆಂಝ್ ಮುಂದಿನ ಎಲೆಕ್ಟ್ರಿಕ್ ಕಾರು ಮಾದರಿಯಾಗಿ ಇಕ್ಯೂಎಸ್ ಸೆಡಾನ್ ಮಾದರಿಯು ಬಿಡುಗಡೆಯಾಗುತ್ತಿದ್ದು, ಹೊಸ ಕಾರನ್ನು ಎಂಟ್ರಿ ಲೆವಲ್ ಕಾರು ಮಾದರಿಗಳ ಪ್ಲ್ಯಾಟ್‌ಫಾರ್ಮ್ ಆಧರಿಸಿ ನಿರ್ಮಾಣ ಕೈಗೊಂಡಿದೆ.

2030ರ ವೇಳೆಗೆ ಇವಿ ಕಾರುಗಳನ್ನು ಮಾತ್ರ ಮಾರಾಟ ಮಾಡಲಿದೆ ಮರ್ಸಿಡಿಸ್ ಬೆಂಝ್

ಹೊಸ ಕಾರಿನ ಉತ್ಪಾದನಾ ಮಾದರಿಯನ್ನು ಈಗಾಗಲೇ ಅನಾವರಣಗೊಳಿಸಿರುವ ಮರ್ಸಿಡಿಸ್ ಬೆಂಝ್ ಕಂಪನಿಯು ಹೊಸ ಕಾರಿನಲ್ಲಿ ಹಲವಾರು ಅತ್ಯಾಧುನಿಕ ಫೀಚರ್ಸ್‌ಗಳನ್ನು ಅಳವಡಿಸಿದ್ದು, ಹೊಸ ಕಾರಿನ ಮಾಹಿತಿಯನ್ನು ಇದೀಗ ಮರ್ಸಿಡಿಸ್ ಬೆಂಝ್ ಇಂಡಿಯಾ ವೆಬ್‌ತಾಣದಲ್ಲೂ ಪ್ರದರ್ಶನಗೊಳಿಸಿದೆ.

2030ರ ವೇಳೆಗೆ ಇವಿ ಕಾರುಗಳನ್ನು ಮಾತ್ರ ಮಾರಾಟ ಮಾಡಲಿದೆ ಮರ್ಸಿಡಿಸ್ ಬೆಂಝ್

ಹೈಪರ್ ಸ್ಕ್ರೀನ್ ಸೌಲಭ್ಯವನ್ನು ಹೊಂದಿರುವ ಹೊಸ ಇಕ್ಯೂಎಸ್ ಸೆಡಾನ್ ಮಾದರಿಯು ಡ್ಯಾಶ್‍ಬೋರ್ಡ್‌ನಲ್ಲಿ ನಿಯಂತ್ರಿಸಬಹುದಾದ ಸುಮಾರು ಫೀಚರ್ಸ್‌ಗಳನ್ನು ನೀಡಿದ್ದು, ಇದೀಗ ಹೊಸ ಕಾರಿನಲ್ಲಿ ಇಕ್ಯೂಎಸ್ 450 ಪ್ಲಸ್ ಮತ್ತು ಇಕ್ಯೂಎಸ್ 580 ಎರಡು ವೆರಿಯೆಂಟ್‌ಗಳೊಂದಿಗೆ ಪ್ರತಿ ಚಾರ್ಜ್‌ಗೆ ಗರಿಷ್ಠ 770 ಕಿ.ಮೀ ಮೈಲೇಜ್ ಹಿಂದಿರುಗಿಸುವ ಮಾಹಿತಿ ಹಂಚಿಕೊಂಡಿದೆ.

2030ರ ವೇಳೆಗೆ ಇವಿ ಕಾರುಗಳನ್ನು ಮಾತ್ರ ಮಾರಾಟ ಮಾಡಲಿದೆ ಮರ್ಸಿಡಿಸ್ ಬೆಂಝ್

ಇಕ್ಯೂಎಸ್ 580 ಆಲ್ ವೀಲ್ಹ್ ಡ್ರೈವ್ ವ್ಯವಸ್ಥೆಯೊಂದಿಗೆ ಟಾಪ್ ಎಂಡ್ ಮಾದರಿಯಾಗಿ ಮಾರಾಟಗೊಳ್ಳಲಿದ್ದು, ಮುಂದಿನ ಕೆಲವೇ ತಿಂಗಳುಗಳಲ್ಲಿ ಯುರೋಪ್ ಮತ್ತು ಅಮೆರಿಕದ ಪ್ರಮುಖ ಮಾರುಕಟ್ಟೆಗಳನ್ನು ಪ್ರವೇಶಿಸಲಿದೆ.

2030ರ ವೇಳೆಗೆ ಇವಿ ಕಾರುಗಳನ್ನು ಮಾತ್ರ ಮಾರಾಟ ಮಾಡಲಿದೆ ಮರ್ಸಿಡಿಸ್ ಬೆಂಝ್

ತದನಂತರವಷ್ಟೇ ಭಾರತದಲ್ಲೂ ಬಿಡುಗಡೆಯಾಗಲಿರುವ ಹೊಸ ಕಾರು ದೇಶಿಯ ಮಾರುಕಟ್ಟೆಯಲ್ಲಿ ಈಗಾಗಲೇ ಮಾರಾಟಗೊಳ್ಳುತ್ತಿರುವ ಇಕ್ಯೂಸಿ 400 ಮಾದರಿಗಿಂತ ಕೆಳದರ್ಜೆಯಲ್ಲಿ ಮಾರಾಟವಾಗಲಿದ್ದರೂ ಹೆಚ್ಚಿನ ಮಟ್ಟದ ಮೈಲೇಜ್‌ನೊಂದಿಗೆ ಗ್ರಾಹಕರನ್ನು ಸೆಳೆಯಲಿದೆ.

More from DriveSpark

Article Published On: Friday, July 23, 2021, 13:50 [IST]
English summary
Mercedes-Benz Plans To Go Completely Electric By 2030. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+