ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ ಖರೀದಿಗೆ ಎರಡನೇ ಹಂತದ ಬುಕ್ಕಿಂಗ್ ಆರಂಭ

ಜರ್ಮನ್ ಮೂಲದ ಐಷಾರಾಮಿ ಕಾರು ತಯಾರಕ ಕಂಪನಿಯಾದ ಮರ್ಸಿಡಿಸ್ ಬೆಂಝ್ ತನ್ನ ಮೊದಲ ಪ್ರೀಮಿಯಂ ಎಲೆಕ್ಟ್ರಿಕ್ ಎಸ್‍ಯುವಿಯಾದ ಇಕ್ಯೂಸಿ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಕಳೆದ ವರ್ಷ ಬಿಡುಗಡೆಗೊಳಿಸಿತ್ತು. ಈ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಭರ್ಜರಿ ಬೇಡಿಕೆಯನ್ನು ಪಡೆದುಕೊಂಡಿದೆ.

ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ ಖರೀದಿಗೆ ಎರಡನೇ ಹಂತದ ಬುಕ್ಕಿಂಗ್ ಆರಂಭ

ಹೊಸ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯನ್ನು ಭಾರತದ ದೆಹಲಿ, ಮುಂಬೈ, ಪುಣೆ, ಬೆಂಗಳೂರು, ಚೆನ್ನೈ ಮತ್ತು ಹೈದರಾಬಾದ್ ನಗರಗಳಲ್ಲಿ ಮಾರಾಟ ಮಾಡಲಾಯಿತು. ಆದರೆ ಇತರ ನಗರಗಳ ಗ್ರಾಹಕರು ಸಹ ಅದನ್ನು ಖರೀದಿಸಲು ಆನ್‌ಲೈನ್‌ನಲ್ಲಿ ವಾಹನವನ್ನು ಕಾಯ್ದಿರಿಸಬಹುದಾಗಿದೆ. ಕಂಪನಿಯು ದೇಶಕ್ಕೆ ಬಂದ ಮೊದಲ ಬ್ಯಾಚ್ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯ ಎಲ್ಲಾ ಯುನಿಟ್ ಗಳನ್ನು ಮಾರಾಟಗೊಳಿಸಿವೆ. ಆದರೆ ಇದಿಗ ಕಂಪನಿಯು ಈ ಎಲೆಕ್ಟ್ರಿಕ್ ಎಸ್‍ಯುವಿಗಾಗಿ ಎರಡನೇ ಹಂತದ ಬುಕ್ಕಿಂಗ್ ಅನ್ನು ಪ್ರಾರಂಭಿಸಿದ್ದಾರೆ.

ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ ಖರೀದಿಗೆ ಎರಡನೇ ಹಂತದ ಬುಕ್ಕಿಂಗ್ ಆರಂಭ

ಇನ್ನು ಎರಡನೇ ಬ್ಯಾಚ್ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯ ಯುನಿಟ್ ಗಳನು ಇದೇ ತಿಂಗಳು ಆಮದು ಮಾಡಿಕೊಳ್ಳಬಹುದು. ಇನ್ನು ಇದರ ವಿತರಣೆಯನ್ನು ಕೂಡ ಶೀಘ್ರದಲ್ಲೇ ಪ್ರಾರಂಭಿಸಬಹುದು ಎಂದು ನಿರೀಕ್ಷಿಸುತ್ತೇವೆ.

MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ ಖರೀದಿಗೆ ಎರಡನೇ ಹಂತದ ಬುಕ್ಕಿಂಗ್ ಆರಂಭ

ಇನ್ನು ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ ವಿನ್ಯಾಸದ ಬಗ್ಗೆ ಹೇಳುವುದಾದರೆ, ಇದರ ಸ್ಟೈಲಿಂಗ್ ತುಂಬಾ ವಿಭಿನ್ನವಾಗಿದೆ. ಈ ಹೊಸ ಎಲೆಕ್ಟ್ರಿಕ್ ಎಸ್‍ಯುವಿಯ ಮುಂಭಾಗದಲ್ಲಿ ಮಲ್ಟಿ-ಸ್ಲ್ಯಾಟ್ ಗ್ರಿಲ್ ದೊಡ್ಡದಾಗಿದೆ ಮತ್ತು ಯು-ಆಕಾರದ ಕ್ರೋಮ್ ಸುತ್ತುವರೆದಿರುವ ಎಲ್ಇಡಿ ಹೆಡ್ ಲ್ಯಾಂಪ್ ಮತ್ತು ಎಲ್ಇಡಿ ಡೇಟೈಮ್ ರನ್ನಿಂಗ್ ಲ್ಯಾಂಪ್ ಗಳನ್ನು ಹೊಂದಿವೆ.

ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ ಖರೀದಿಗೆ ಎರಡನೇ ಹಂತದ ಬುಕ್ಕಿಂಗ್ ಆರಂಭ

ಇನ್ನು ಈ ಎಲೆಕ್ಟ್ರಿಕ್ ಎಸ್‍ಯುವಿಯ ಕ್ಯಾಬಿನ್ ನಲ್ಲಿ ಡ್ಯುಯಲ್ 10.3-ಇಂಚಿನ ಡಿಸ್ ಪ್ಲೇಯನ್ನು ಅಳವಡಿಸಲಾಗಿದೆ. ಇನ್ನು ಮಲ್ಟಿ-ಫಂಕ್ಷನಲ್ ಸ್ಟೀಯರಿಂಗ್ ವ್ಹೀಲ್ ಮತ್ತು ಟ್ರ್ಯಾಕ್‌ಪ್ಯಾಡ್‌ನೊಂದಿಗೆ ಸಿಗ್ನೇಚರ್ ಸೆಂಟರ್ ಕನ್ಸೋಲ್ ನೊಂದಿಗೆ ಎಂಬಿಎಕ್ಸ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಅಳವಡಿಸಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ ಖರೀದಿಗೆ ಎರಡನೇ ಹಂತದ ಬುಕ್ಕಿಂಗ್ ಆರಂಭ

ಈ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯನ್ನು ಭಾರತಕ್ಕೆ ಸಿಬಿಯು ಮಾರ್ಗದ ಮೂಲಕ ತರಲಾಗುತ್ತಿದೆ. ಈ ಹೊಸ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯಲ್ಲಿ 80 ಕಿ.ವ್ಯಾಟ್ ಲಿಥಿಯಂ-ಐಯಾನ್ ಬ್ಯಾಟರಿ ಪ್ಯಾಕನ್ನು ಅಳವಡಿಸಲಾಗಿದೆ.ಈ ಬ್ಯಾಟರಿಯನ್ನು ಪೂರ್ತಿಯಾಗಿ ಚಾರ್ಜ್ ಮಾಡಿದರೆ 471 ಕಿ.ಮೀಗಳವರೆಗೆ ಚಲಿಸುತ್ತದೆ.

ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ ಖರೀದಿಗೆ ಎರಡನೇ ಹಂತದ ಬುಕ್ಕಿಂಗ್ ಆರಂಭ

ಈ ಹೊಸ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯಲ್ಲಿ ಎರಡು ಎಲೆಕ್ಟ್ರಿಕ್ ಮೋಟಾರ್ ಅನ್ನು ಹೊಂದಿದೆ. ಒಂದು ಮೋಟಾರ್ ಈ ಎಲೆಕ್ಟ್ರಿಕ್ ಎಸ್‍ಯುವಿಯು ಮುಂಭಾಗದ ಆಕ್ಸಲ್ ಅನ್ನು ಚಾಲನೆ ಮಾಡುತ್ತದೆ ಮತ್ತು ಇನ್ನೊಂದು ಮೋಟಾರ್ ಹಿಂಭಾಗದ ಫ್ಹೋರ್ ವ್ಹೀಲ್ ಡ್ರೈವ್ ಸಿಸ್ಟಂ ಅನ್ನು ಹೊಂದಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ ಖರೀದಿಗೆ ಎರಡನೇ ಹಂತದ ಬುಕ್ಕಿಂಗ್ ಆರಂಭ

ಈ ಸಂಯೋಜಿತ ಎಲೆಕ್ಟ್ರಿಕ್ ಮೋಟಾರ್ 405 ಬಿಹೆಚ್‍ಪಿ ಪವರ್ ಮತ್ತು 765 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಜರ್ಮನ್ ಐಷಾರಾಮಿ ಕಾರು ತಯಾರಕರು ಇಕ್ಯೂಸಿಯನ್ನು ಅಭಿವೃದ್ಧಿಪಡಿಸುವಾಗ ಸಾಕಷ್ಟು ಚಿಂತನೆ ನಡೆಸಿದ್ದಾರೆ. ಅಲ್ಲದೇ ಇದು ಮರ್ಸಿಡಿಸ್ ಬೆಂಝ್ ಕಂಪನಿಯ ಮೊದಲ ಆಲ್-ಎಲೆಕ್ಟ್ರಿಕ್ ಸರಣಿ ಉತ್ಪಾದನಾ ಮಾದರಿಯಾಗಿದೆ.

ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ ಖರೀದಿಗೆ ಎರಡನೇ ಹಂತದ ಬುಕ್ಕಿಂಗ್ ಆರಂಭ

ಈ ಐಷಾರಾಮಿ ಮರ್ಸಿಡಿಸ್ ಬೆಂಝ್ ಇಕ್ಯೂಸಿ 400 ಎಸ್‍ಯುವಿ ಸುಮಾರು 500-ಲೀಟರ್ ಗಳಷ್ಟು ಬೂಟ್ ಸ್ಪೇಸ್ ಅನ್ನು ಪಡೆಯುತ್ತದೆ ಮತ್ತು ಹೆಚ್ಚಿನ ಸಾಮಗ್ರಿಗಳು ಇದ್ದಾಗ ಅಥವಾ ಹೆಚ್ಚಿನ ಸ್ಪೇಸ್ ಬೇಕದಾಗ ಮಧ್ಯದ ಸಾಲಿನ ಸೀಟುಗಳನ್ನು ಮಾಡಚಬಹುದು. ಬೂಟ್ ಲಿಡ್ ಎಲೆಕ್ಟ್ರಿಕ್ ಆಗಿದೆ.

ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ ಖರೀದಿಗೆ ಎರಡನೇ ಹಂತದ ಬುಕ್ಕಿಂಗ್ ಆರಂಭ

2016ರ ಪ್ಯಾರಿಸ್ ಮೋಟಾರ್ ಶೋದಲ್ಲಿ ಪ್ರದರ್ಶಿಸಲಾದ ಜನರೇಷನ್ ಇಕ್ಯೂ ಕಾನ್ಸೆಪ್ಟ್‌ನ ವಿನ್ಯಾಸವನ್ನು ಹೊಸ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯು ಹೊಂದಿದೆ. ಇನ್ನು ಈ ಹೊಸ ಎಲೆಕ್ಟ್ರಿಕ್ ಎಸ್‍ಯುವಿಯ ಕ್ಯಾಬಿನ್ ನಲ್ಲಿ ಹೊಸ ಪ್ರೀಮಿಯಂ ವಿನ್ಯಾಸವನ್ನು ಹೊಂದಿದೆ.

ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ ಖರೀದಿಗೆ ಎರಡನೇ ಹಂತದ ಬುಕ್ಕಿಂಗ್ ಆರಂಭ

ಈ ಎಲೆಕ್ಟ್ರಿಕ್ ಎಸ್‍ಯುವಿಯು ಕೇವಲ 5.1 ಸೆಕೆಂಡುಗಳಲ್ಲಿ 0 ದಿಂದ 100 ಕಿ.ಮೀ ವೇಗವನ್ನು ಕ್ರಮಿಸುತ್ತದೆ. ಈ ಕಾರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 180 ಕಿ.ಮೀಗಳಾಗಿದೆ. ಈ ಎಸ್‍ಯುವಿಗೆ ಯಾವುದೇ ನೇರ ಪ್ರತಿಸ್ಪರ್ಧಿಗಳಿಲ್ಲ, ಆದರೆ ಮುಂದಿನ ದಿನಗಳಲ್ಲಿ ಆಡಿ ಕಂಪನಿಯು ಇ-ಟ್ರಾನ್ ಅನ್ನು ಭಾರತದಲ್ಲಿ ಬಿಡುಗಡೆಗೊಂಡರೆ ಇಕ್ಯೂಸಿ ಪೈಪೋಟಿ ನೀಡುತ್ತದೆ.

ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ ಖರೀದಿಗೆ ಎರಡನೇ ಹಂತದ ಬುಕ್ಕಿಂಗ್ ಆರಂಭ

ಮರ್ಸಿಡಿಸ್ ಬೆಂಝ್ ಇಕ್ಯೂಸಿ 400 ಎಲೆಕ್ಟ್ರಿಕ್ ಎಸ್‍ಯುವಿ ಜಿಎಲ್ಸಿ ರೂಪಾಂತರವನ್ನು ಆಧರಿಸಿದ್ದರೂ, ಇದು ಖಂಡಿತವಾಗಿಯೂ ಫ್ಯೂಚರಿಸ್ಟಿಕ್ ಆಗಿ ಕಾಣುತ್ತದೆ ಮತ್ತು ಅಲ್ಲದೇ ಇದು ಕಣ್ಮನ ಸೆಳೆಯುವ ಲುಕ್ ಅನ್ನು ಹೊಂದಿದೆ. ಇಕ್ಯೂಸಿ 400 ಭಾರತೀಯ ಮಾರುಕಟ್ಟೆಯಲ್ಲಿ ಬ್ರ್ಯಾಂಡ್‌ನಿಂದ ಪಡೆದ ಮೊದಲ ಫುಲ್ ಎಲೆಕ್ಟ್ರಿಕ್ ಕೊಡುಗೆಯಾಗಿದೆ.

Most Read Articles

Kannada
English summary
Mercedes-Benz EQC Second Phase Bookings Commence. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X