ಅತ್ಯಧಿಕ ಮೈಲೇಜ್ ಪ್ರೇರಿತ ಇಕ್ಯೂಎಸ್ ಇವಿ ಕಾರು ಉತ್ಪಾದನೆಗೆ ಚಾಲನೆ ನೀಡಿದ ಮರ್ಸಿಡಿಸ್ ಬೆಂಝ್
2030ರಿಂದ ವಿವಿಧ ಕಾರು ಉತ್ಪಾದನಾ ಕಂಪನಿಗಳು ಸಂಪೂರ್ಣವಾಗಿ ಇಂಧನ ಚಾಲಿತ ವಾಹನಗಳ ಮಾರಾಟವನ್ನು ಸ್ಥಗಿತಗೊಳಿಸಿ ಎಲೆಕ್ಟ್ರಿಕ್ ಕಾರುಗಳ ನಿರ್ಮಾಣದ ನಿರ್ಣಯ ಕೈಗೊಂಡಿದ್ದು, ಇದಕ್ಕೆ ಪೂರಕವಾಗಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಸಹ ಹೆಚ್ಚಿಸಲಾಗುತ್ತಿದೆ.

ಇವಿ ನೀತಿಗಳ ಪರಿಣಾಮ ಹೈಬ್ರಿಡ್ ಮತ್ತು ಪೂರ್ಣ ಪ್ರಮಾಣದ ಎಲೆಕ್ಟ್ರಿಕ್ ವಾಹನಗಳ ಮಾರಾಟವದಲ್ಲಿ ಸಾಕಷ್ಟು ಬೆಳವಣಿಗೆ ಕಂಡುಬರುತ್ತಿದ್ದು, ಜರ್ಮನ್ ಕಾರು ಉತ್ಪಾದನಾ ಕಂಪನಿಯಾಗಿರುವ ಮರ್ಸಿಡಿಸ್ ಬೆಂಝ್ ಕೂಡಾ ಈಗಾಗಲೇ ಇಕ್ಯೂಸಿ 400, ಇಕ್ಯೂಎ ಎಲೆಕ್ಟ್ರಿಕ್ ಎಸ್‌ಯುವಿಯೊಂದಿಗೆ ಹಲವು ಹೊಸ ದಾಖಲೆಗಳಿಗೆ ಕಾರಣವಾಗಿದೆ. ದುಬಾರಿ ಬೆಲೆ ನಡುವೆಯೂ ಹೊಸ ಇವಿ ಕಾರು ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿರುವ ಮರ್ಸಿಡಿಸ್ ಬೆಂಝ್ ಕಂಪನಿಯು 2023ರ ವೇಳೆಗೆ ಒಟ್ಟು 6 ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಮಾರಾಟ ಹೊಂದಿರುವ ಗುರಿಹೊಂದಿದೆ.

ಮರ್ಸಿಡಿಸ್ ಬೆಂಝ್ ಹೊಸ ಎಲೆಕ್ಟ್ರಿಕ್ ಕಾರುಗಳ ಪಟ್ಟಿಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಎಸ್‌ಯುವಿ, ಸೆಡಾನ್, ಎಂಪಿವಿ ಮತ್ತು ಸೂಪರ್ ಕಾರು ಮಾದರಿಗಳು ಸಹ ಒಳಗೊಂಡಿದ್ದು, ಹೊಸ ಕಾರುಗಳು ಸದ್ಯ ಮಾರುಕಟ್ಟೆಯಲ್ಲಿರುವ ಇಕ್ಯೂಸಿ 400, ಇಕ್ಯೂಎ ಮಾದರಿಗಿಂತಲೂ ಹೊಸ ಮಾದರಿಯ ತಂತ್ರಜ್ಞಾನ ಪಡೆದುಕೊಳ್ಳುವ ನೀರಿಕ್ಷೆಯಲ್ಲಿವೆ.

ಮರ್ಸಿಡಿಸ್ ಬೆಂಝ್ ಮುಂದಿನ ಎಲೆಕ್ಟ್ರಿಕ್ ಕಾರು ಮಾದರಿಯಾಗಿ ಇಕ್ಯೂಎಸ್ ಸೆಡಾನ್ ಮಾದರಿಯು ಬಿಡುಗಡೆಯಾಗುತ್ತಿದ್ದು, ಹೊಸ ಕಾರನ್ನು ಎಂಟ್ರಿ ಲೆವಲ್ ಕಾರು ಮಾದರಿಗಳ ಪ್ಲ್ಯಾಟ್‌ಫಾರ್ಮ್ ಆಧರಿಸಿ ನಿರ್ಮಾಣಗೊಳಿಸಲಾಗುತ್ತಿದೆ.

ಹೊಸ ಕಾರಿನ ಉತ್ಪಾದನಾ ಮಾದರಿಯನ್ನು ಈಗಾಗಲೇ ಅನಾವರಣಗೊಳಿಸಿರುವ ಮರ್ಸಿಡಿಸ್ ಬೆಂಝ್ ಕಂಪನಿಯು ಜರ್ಮನಿಯ ಸಿಂಡೆಲ್ಫಿಂಗನ್‌ನಲ್ಲಿರುವ ಮುಖ್ಯ ಕಾರು ಉತ್ಪಾದನಾ ಘಟಕದಲ್ಲಿ ಉತ್ಪಾದನೆಗೆ ಅಧಿಕೃತ ಚಾಲನೆ ನೀಡಿದ್ದು, ಹೊಸ ಕಾರಿನಲ್ಲಿ ಮರ್ಸಿಡಿಸ್ ಬೆಂಝ್ ಕಂಪನಿಯು ಈ ಹಿಂದಿನ ಇವಿ ಮಾದರಿಗಳಿಂತಲೂ ಹಲವಾರು ಅತ್ಯಾಧುನಿಕ ಫೀಚರ್ಸ್‌ಗಳನ್ನು ಅಳವಡಿಸಿದೆ.

ಮರ್ಸಿಡಿಸ್ ಬೆಂಝ್ ಹೊಸ ಕಾರನ್ನು ಭಾರತ ಸೇರಿದಂತೆ ವಿಶ್ವಾದ್ಯಂತ ಪ್ರಮುಖ ರಾಷ್ಟ್ರಗಳಿಗೆ ಪರಿಚಯಿಸುತ್ತಿದ್ದು, ಹೊಸ ಕಾರಿನ ಮಾಹಿತಿಯನ್ನು ಮರ್ಸಿಡಿಸ್ ಬೆಂಝ್ ಕಂಪನಿಯ ಇಂಡಿಯಾ ವೆಬ್‌ತಾಣದಲ್ಲೂ ಸಹ ಈಗಾಗಲೇ ಪ್ರದರ್ಶನಗೊಳಿಸಿದೆ.

ಹೈಪರ್ ಸ್ಕ್ರೀನ್ ಸೌಲಭ್ಯವನ್ನು ಹೊಂದಿರುವ ಹೊಸ ಇಕ್ಯೂಎಸ್ ಸೆಡಾನ್ ಮಾದರಿಯು ಡ್ಯಾಶ್‍ಬೋರ್ಡ್‌ನಲ್ಲಿ ನಿಯಂತ್ರಿಸಬಹುದಾದ ಸುಮಾರು ಫೀಚರ್ಸ್‌ಗಳನ್ನು ನೀಡಿದ್ದು, ಇದೀಗ ಹೊಸ ಕಾರಿನಲ್ಲಿ ಇಕ್ಯೂಎಸ್ 450 ಪ್ಲಸ್ ಮತ್ತು ಇಕ್ಯೂಎಸ್ 580 ಎರಡು ವೆರಿಯೆಂಟ್‌ಗಳೊಂದಿಗೆ ಪ್ರತಿ ಚಾರ್ಜ್‌ಗೆ ಗರಿಷ್ಠ 770 ಕಿ.ಮೀ ಮೈಲೇಜ್ ಹಿಂದಿರುಗಿಸುವ ಮಾಹಿತಿ ಹಂಚಿಕೊಂಡಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಇಕ್ಯೂಎಸ್ 580 ಆಲ್ ವೀಲ್ಹ್ ಡ್ರೈವ್ ವ್ಯವಸ್ಥೆಯೊಂದಿಗೆ ಟಾಪ್ ಎಂಡ್ ಮಾದರಿಯಾಗಿ ಮಾರಾಟಗೊಳ್ಳಲಿದ್ದು, ಮುಂದಿನ ಕೆಲವೇ ತಿಂಗಳುಗಳಲ್ಲಿ ಯುರೋಪ್ ಮತ್ತು ಅಮೆರಿಕದ ಪ್ರಮುಖ ಮಾರುಕಟ್ಟೆಗಳನ್ನು ಪ್ರವೇಶಿಸಲಿದೆ.

ತದನಂತರ ಭಾರತದಲ್ಲೂ ಬಿಡುಗಡೆಯಾಗಲಿರುವ ಹೊಸ ಕಾರು ದೇಶಿಯ ಮಾರುಕಟ್ಟೆಯಲ್ಲಿ ಈಗಾಗಲೇ ಮಾರಾಟಗೊಳ್ಳುತ್ತಿರುವ ಇಕ್ಯೂಸಿ 400 ಮಾದರಿಗಿಂತ ಕೆಳದರ್ಜೆಯಲ್ಲಿ ಮಾರಾಟವಾಗಲಿದ್ದರೂ ಹೆಚ್ಚಿನ ಮಟ್ಟದ ಮೈಲೇಜ್‌ನೊಂದಿಗೆ ಗ್ರಾಹಕರನ್ನು ಸೆಳೆಯಲಿದೆ.
MOST READ: ಕೋವಿಡ್ ಭೀತಿ: ಕಾರು ಉತ್ಪಾದನೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿದ ಎಂಜಿ ಮೋಟಾರ್

ಒಟ್ಟಿನಲ್ಲಿ ಹೊಸ ಕಾರು ಹಲವಾರು ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಕಾರು ಪ್ರಯಾಣವನ್ನು ಮತ್ತಷ್ಟು ಸುಲಭವಾಗಿಸುವುದಲ್ಲದೆ ಸುರಕ್ಷಿತ ಕಾರು ಚಾಲನೆಗೆ ಸಹಕಾರಿಯಾಗಿದ್ದು, ಹೊಸ ಕಾರು ಇಕ್ಯೂಸಿ 400, ಇಕ್ಯೂಎ ಮಾದರಿಗಿಂತಲೂ ಹೊಸ ಮಾದರಿಯ ತಂತ್ರಜ್ಞಾನ ಪ್ರೇರಣೆಯೊಂದಿಗೆ ಮಾರಾಟಗೊಳ್ಳುವುದು ಖಚಿತವಾಗಿದೆ.


Click it and Unblock the Notifications