Just In
- 10 min ago ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- 1 hr ago ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- 1 hr ago Maruti: ಜಪಾನ್ನಲ್ಲಿ ಗರಿಷ್ಟ ಗುಣಮಟ್ಟದ ಸ್ವಿಫ್ಟ್ ಕಾರು! ಭಾರತಕ್ಕೆ ಮಾತ್ರ ಕಳಪೆ ಗುಣಮಟ್ಟ ಏಕೆ?
- 2 hrs ago ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
Don't Miss!
- Lifestyle ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Finance Lok Sabha Election 2024: ಮತದಾನ ಮಾಡಿ ಹೋಟೆಲ್ಗಳಲ್ಲಿ ಫ್ರೀಯಾಗಿ, ರಿಯಾಯಿತಿಯಲ್ಲಿ ಟಿಫನ್ ತಿನ್ನಿ!
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Movies ತಮನ್ನಾ ಪಾಲಿಗೆ 'ದುಬಾರಿ' ಆಯಿತು 'ಪ್ರಚಾರ' ; ಮಿಲ್ಕಿ ಬ್ಯೂಟಿಯನ್ನ ವಿಚಾರಣೆಗೆ ಕರೆದ ಸೈಬರ್ ಇಲಾಖೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇಕ್ಯೂಎ ಎಲೆಕ್ಟ್ರಿಕ್ ಕಂಪ್ಯಾಕ್ಟ್ ಎಸ್ಯುವಿ ಕಾರಿನ ಟೀಸರ್ ಬಿಡುಗಡೆ ಮಾಡಿದ ಮರ್ಸಿಡಿಸ್ ಬೆಂಝ್
ಮರ್ಸಿಡಿಸ್ ಬೆಂಝ್ ಕಂಪನಿಯು ಇಕ್ಯೂಸಿ 400 ಎಲೆಕ್ಟ್ರಿಕ್ ಕಾರು ಮಾದರಿಯ ಬಿಡುಗಡೆಯ ನಂತರ ಮತ್ತಷ್ಟು ಹೊಸ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗೆ ಸಿದ್ದವಾಗಿದ್ದು, ಎರಡನೇ ಎಲೆಕ್ಟ್ರಿಕ್ ಕಾರು ಮಾದರಿಯಾಗಿ ಇಕ್ಯೂಎ ಕಂಪ್ಯಾಕ್ಟ್ ಎಸ್ಯುವಿಯನ್ನು ಬಿಡುಗಡೆ ಮಾಡುತ್ತಿದೆ. ಹೊಸ ಕಾರು ಅನಾವರಣಕ್ಕೆ ಸಜ್ಜಾಗಿರುವ ಕಂಪನಿಯು ಇದೀಗ ಮೊದಲ ಟೀಸರ್ ಚಿತ್ರವನ್ನು ಬಿಡುಗಡೆ ಮಾಡಿದೆ.
ಮಾಲಿನ್ಯ ತಡೆಗಾಗಿ ವಿವಿಧ ರಾಷ್ಟ್ರಗಳು 2030ರಿಂದಲೇ ಸಂಪೂರ್ಣವಾಗಿ ಇಂಧನ ಚಾಲಿತ ವಾಹನಗಳ ಮಾರಾಟವನ್ನು ಪೂರ್ಣಪ್ರಮಾಣದಲ್ಲಿ ಸ್ಥಗಿತಗೊಳಿಸುವ ನಿರ್ಣಯ ಕೈಗೊಂಡಿದ್ದು, ಇದಕ್ಕೆ ಪೂರಕವಾಗಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಸಹ ಹೆಚ್ಚಿಸಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾಗಿ ಯುರೋಪ್ ಒಕ್ಕೂಟದಲ್ಲಿನ ಪ್ರಮುಖ ರಾಷ್ಟ್ರಗಳ ನಿರ್ಣಯದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟವು ಸಾಕಷ್ಟು ಇಳಿಕೆಯಾಗುತ್ತಿದ್ದು, ಹೈಬ್ರಿಡ್ ಮತ್ತು ಪೂರ್ಣ ಪ್ರಮಾಣದ ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಸಾಕಷ್ಟು ಬೆಳವಣಿಗೆ ಕಂಡುಬಂದಿದೆ.
2020ರಲ್ಲೇ ಯುರೋಪಿನ ಪ್ರಮುಖ ರಾಷ್ಟ್ರಗಳಲ್ಲಿ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಬರೋಬ್ಬರಿ 5 ಲಕ್ಷ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಿದ್ದು, ಮುಂಬರುವ ದಿನಗಳಲ್ಲಿ ವಿವಿಧ ಕಾರು ಕಂಪನಿಗಳು ಮತ್ತಷ್ಟು ಇವಿ ಮಾರಾಟವನ್ನು ಹೆಚ್ಚಿಸಲು ಸಜ್ಜಾಗೊಳ್ಳುತ್ತಿವೆ.
ಜರ್ಮನ್ ಕಾರು ಉತ್ಪಾದನಾ ಕಂಪನಿಯಾಗಿರುವ ಮರ್ಸಿಡಿಸ್ ಬೆಂಝ್ ಕೂಡಾ ಈಗಾಗಲೇ ಇಕ್ಯೂಸಿ 400 ಎಲೆಕ್ಟ್ರಿಕ್ ಎಸ್ಯುವಿಯೊಂದಿಗೆ ಹಲವು ಹೊಸ ದಾಖಲೆಗಳಿಗೆ ಕಾರಣವಾಗಿದ್ದು, ದುಬಾರಿ ಬೆಲೆ ನಡುವೆಯು ಹೊಸ ಇವಿ ಕಾರು ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ.
ಈ ನಿಟ್ಟಿನಲ್ಲಿ ಗ್ರಾಹಕರ ಬೇಡಿಕೆಯೆಂತೆ ಮತ್ತಷ್ಟು ಹೊಸ ಎಲೆಕ್ಟ್ರಿಕ್ ಕಾರು ಮಾದರಿಗಳ ಬಿಡುಗಡೆ ಸಿದ್ದವಾಗಿದ್ದು, ಶೀಘ್ರದಲ್ಲೇ ತನ್ನ ಐಷಾರಾಮಿ ಇಕ್ಯೂಎ ಕಂಪ್ಯಾಕ್ಟ್ ಎಲೆಕ್ಟ್ರಿಕ್ ಎಸ್ಯುವಿ ಮಾದರಿಯನ್ನು ಜಾಗತಿಕ ಮಾರುಕಟ್ಟೆಗಾಗಿ ಅನಾವರಣಗೊಳಿಸುತ್ತಿದೆ. ಇದೇ ತಿಂಗಳು 20ರಂದು ಹೊಸ ಇಕ್ಯೂಎ ಕಂಪ್ಯಾಕ್ಟ್ ಎಸ್ಯುವಿ ಮಾದರಿಯನ್ನು ಅನಾವರಣಗೊಳಿಸಲು ಸಜ್ಜಾಗುತ್ತಿರುವ ಮರ್ಸಿಡಿಸ್ ಬೆಂಝ್ ಕಂಪನಿಯು ಅಂತಿಮ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದ್ದು, ಹೊಸ ಕಾರಿನ ಮೊದಲ ಇಂಟಿರಿಯರ್ ಚಿತ್ರದ ಟೀಸರ್ ಬಿಡುಗಡೆ ಮಾಡಿದೆ.
ಹೊಸ ಇಕ್ಯೂಎ ಇವಿ ಕಾರು ಮಾದರಿಯ ಬ್ಯಾಟರಿ ಸಾಮರ್ಥ್ಯದ ಕುರಿತಾದ ಸ್ಪಷ್ಟ ಮಾಹಿತಿಗಳಿಲ್ಲವಾದರೂ ಹೊಸ ಕಾರು 267-ಬಿಎಚ್ಪಿ ಉತ್ಪಾದನೆ ಮಾಡುವ ಎಲೆಕ್ಟ್ರಿಕ್ ಮೋಟಾರ್ ಹೊಂದಿದೆ ಎನ್ನಲಾಗಿದ್ದು, ಪ್ರತಿ ಚಾರ್ಜ್ಗೆ ಗರಿಷ್ಠ 400 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.
ಚಾರ್ಜಿಂಗ್ ಸಮಸ್ಯೆಯನ್ನು ಬಗೆಹರಿಸಲು ಹೊಸ ಕಾರಿನಲ್ಲಿ ಡಿಸಿ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತಿದ್ದು, ಜನವರಿ 20ರಂದು ಹೊಸ ಕಾರಿನ ಸಂಪೂರ್ಣ ಮಾಹಿತಿ ಲಭ್ಯವಾಗಲಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!
ಜೊತೆಗೆ ಹಲವು ಹೊಚ್ಚ ಹೊಸ ಎಲೆಕ್ಟ್ರಿಕ್ ಕಾರು ಮಾದರಿಗಳ ಕಾನ್ಸೆಪ್ಟ್ ಆವೃತ್ತಿಯೊಂದಿಗೆ ರೋಡ್ ಟೆಸ್ಟಿಂಗ್ ಕೈಗೊಂಡಿರುವ ಮರ್ಸಿಡಿಸ್ ಬೆಂಝ್ ಕಂಪನಿಯು ಮುಂಬರುವ 2023ರ ವೇಳೆಗೆ ಒಟ್ಟು 6 ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಮಾರಾಟ ಹೊಂದಿರುವ ಗುರಿಹೊಂದಿದ್ದು, ಇದಕ್ಕೆ ಪೂರಕವಾಗಿ ಮಾರುಕಟ್ಟೆ ಅಧ್ಯಯನ ನಡೆಸುವ ಮೂಲಕ ಗ್ರಾಹಕರ ಬೇಡಿಕೆಯೆಂತೆ ಹೊಸ ತಂತ್ರಜ್ಞಾನ ಸೌಲಭ್ಯದೊಂದಿಗೆ ಹೊಸ ಕಾರುಗಳನ್ನು ಸಿದ್ದಪಡಿಸುತ್ತಿದೆ.
ಬಿಡುಗಡೆಯಾಗಲಿರುವ ಮರ್ಸಿಡಿಸ್ ಬೆಂಝ್ ಹೊಸ ಎಲೆಕ್ಟ್ರಿಕ್ ಕಾರುಗಳ ಪಟ್ಟಿಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಎಸ್ಯುವಿ, ಸೆಡಾನ್, ಎಂಪಿವಿ ಮತ್ತು ಸೂಪರ್ ಕಾರು ಮಾದರಿಗಳು ಸಹ ಒಳಗೊಂಡಿದ್ದು, ಹೊಸ ಕಾರುಗಳು ಸದ್ಯ ಮಾರುಕಟ್ಟೆಯಲ್ಲಿರುವ ಇಕ್ಯೂಸಿ 400 ಮಾದರಿಗಿಂತಲೂ ಹೊಸ ಮಾದರಿಯ ತಂತ್ರಜ್ಞಾನ ಪಡೆದುಕೊಳ್ಳುವ ನೀರಿಕ್ಷೆಯಲ್ಲಿವೆ.
MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು
ಮರ್ಸಿಡಿಸ್ ನಿರ್ಮಾದ ಮೊದಲ ಎಲೆಕ್ಟ್ರಿಕ್ ಎಸ್ಯುವಿ ಕಾರು ಮಾದರಿಯಾಗಿರುವ ಇಕ್ಯೂಸಿ 400 ಆವೃತ್ತಿಯ ಹಲವು ವಿಶೇಷತೆಗಳೊಂದಿಗೆ ಅಭಿವೃದ್ದಿಗೊಂಡಿದ್ದು, ಇಕ್ಯೂಸಿ 400 ಎಲೆಕ್ಟ್ರಿಕ್ ಎಸ್ಯುವಿಯು ಒಂದು ಬಾರಿ ಚಾರ್ಜ್ ಮಾಡಿದಲ್ಲಿ ಗರಿಷ್ಠ 470 ಕಿ.ಮೀ ಮೈಲೇಜ್ ಹಿಂದಿರುಗಿಸುವ ಮೂಲಕ ಅತ್ಯುತ್ತಮ ಪರ್ಫಾಮೆನ್ಸ್ ನೀಡುತ್ತದೆ.