Just In
- 41 min ago
ಫೋಕ್ಸ್ವ್ಯಾಗನ್ ಐಡಿ.4 ಜಿಟಿಎಕ್ಸ್ ಪರ್ಫಾಮೆನ್ಸ್ ಎಲೆಕ್ಟ್ರಿಕ್ ಕಾರಿನ ಟೀಸರ್ ಬಿಡುಗಡೆ
- 42 min ago
ಕೇವಲ 48 ನಿಮಿಷಗಳಲ್ಲಿ ಸೋಲ್ಡ್ ಔಟ್ ಆದ ಕೆಟಿಎಂ 1290 ಸೂಪರ್ ಡ್ಯೂಕ್ ಆರ್ಆರ್
- 2 hrs ago
ಹೆರ್ಮೆಸ್ 75 ವಾಣಿಜ್ಯ ಬಳಕೆಯ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದ ಕಬೀರಾ ಮೊಬಿಲಿಟಿ
- 2 hrs ago
ದುಬಾರಿ ಬೆಲೆಯ ಲ್ಯಾಂಡ್ ರೋವರ್ ಡಿಫೆಂಡರ್ ಎಸ್ಯುವಿ ಖರೀದಿಸಿದ ನಟ ಅರ್ಜುನ್ ಕಪೂರ್
Don't Miss!
- News
ಸುಳ್ಳು ಹೇಳಿದ್ದು ಸಾಬೀತಾದರೆ ಮೋದಿ ಬಸ್ಕಿ ಹೊಡೆಯಬೇಕು; ಮಮತಾ ಬ್ಯಾನರ್ಜಿ
- Sports
ಸ್ವಿಗ್ಗಿಯಿಂದ ರೋಹಿತ್ ಶರ್ಮಾಗೆ ಅವಮಾನ ; ಕಿಡಿಕಾರಿದ ಫ್ಯಾನ್ಸ್
- Lifestyle
ರಕ್ತದಲ್ಲಿ ಕಬ್ಬಿಣದಂಶ ಹೆಚ್ಚಾದರೆ ಆಯುಸ್ಸು ಕಡಿಮೆಯಾಗುವುದು
- Education
NEET PG Admit Card 2021: ನೀಟ್ ಪಿಜಿ ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು ಹೇಗೆ ?
- Finance
ಸುಮಾರು 5,550 ಕೋಟಿ ರು ಡಿವಿಡೆಂಡ್ ಘೋಷಿಸಿದ ಟಿಸಿಎಸ್
- Movies
'ಅಮಿತಾಭ್ ಮಗಳ ಪಾತ್ರ ಮಾಡ್ತಿದ್ದೇನೆ' ಎಂದಾಗ ರಶ್ಮಿಕಾ ಪೋಷಕರ ಪ್ರತಿಕ್ರಿಯೆ ಹೇಗಿತ್ತು?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್ಯುವಿ
ಐಷಾರಾಮಿ ಕಾರು ತಯಾರಕ ಕಂಪನಿಯಾದ ಮರ್ಸಿಡಿಸ್ ಬೆಂಝ್ ತನ್ನ ಮೊದಲ ಪ್ರೀಮಿಯಂ ಎಲೆಕ್ಟ್ರಿಕ್ ಎಸ್ಯುವಿಯಾದ ಇಕ್ಯೂಸಿ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಕಳೆದ ವರ್ಷ ಬಿಡುಗಡೆಗೊಳಿಸಿತ್ತು. ಈ ಹೊಸ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಭರ್ಜರಿ ಬೇಡಿಕೆಯನ್ನು ಪಡೆದುಕೊಂಡಿದೆ.

ಹೊಸ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್ಯುವಿಯನ್ನು ಭಾರತದ ದೆಹಲಿ, ಮುಂಬೈ, ಪುಣೆ, ಬೆಂಗಳೂರು, ಚೆನ್ನೈ ಮತ್ತು ಹೈದರಾಬಾದ್ ನಗರಗಳಲ್ಲಿ ಮಾರಾಟ ಮಾಡಲಾಯಿತು. ಆದರೆ ಇತರ ನಗರಗಳ ಗ್ರಾಹಕರು ಸಹ ಅದನ್ನು ಖರೀದಿಸಲು ಆನ್ಲೈನ್ನಲ್ಲಿ ವಾಹನವನ್ನು ಕಾಯ್ದಿರಿಸಬಹುದು. ಕಂಪನಿಯು ದೇಶಕ್ಕೆ ಬಂದ ಮೊದಲ ಬ್ಯಾಚ್ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್ಯುವಿಯ ಎಲ್ಲಾ ಯುನಿಟ್ ಗಳನ್ನು ಮಾರಾಟಗೊಳಿಸಿವೆ ಎಂದು ವರದಿಗಳಾಗಿದೆ. ಆದರೆ ಕಂಪನಿಯು ಈ ಎಲೆಕ್ಟ್ರಿಕ್ ಎಸ್ಯುವಿಗಾಗಿ ಬುಕ್ಕಿಂಗ್ ಅನ್ನು ಸ್ವೀಕರಿಸುತ್ತಿದ್ದಾರೆ.

ಇನ್ನು ಎರಡನೇ ಬ್ಯಾಚ್ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್ಯುವಿಯ ಯುನಿಟ್ ಗಳು ಶೀಘ್ರದಲ್ಲೇ ಬರಬಹುದು. ಇದನ್ನು 2021ರ ಫೆಬ್ರವರಿ ಅಥವಾ ಮಾರ್ಚ್ ತಿಂಗಳಲ್ಲಿ ವಿತರಣೆ ಮಾಡಬಹುದು.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಇನ್ನು ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್ಯುವಿ ವಿನ್ಯಾಸದ ಬಗ್ಗೆ ಹೇಳುವುದಾದರೆ, ಇದರ ಸ್ಟೈಲಿಂಗ್ ತುಂಬಾ ವಿಭಿನ್ನವಾಗಿದೆ. ಈ ಹೊಸ ಎಲೆಕ್ಟ್ರಿಕ್ ಎಸ್ಯುವಿಯ ಮುಂಭಾಗದಲ್ಲಿ ಮಲ್ಟಿ-ಸ್ಲ್ಯಾಟ್ ಗ್ರಿಲ್ ದೊಡ್ಡದಾಗಿದೆ ಮತ್ತು ಯು-ಆಕಾರದ ಕ್ರೋಮ್ ಸುತ್ತುವರೆದಿರುವ ಎಲ್ಇಡಿ ಹೆಡ್ ಲ್ಯಾಂಪ್ ಮತ್ತು ಎಲ್ಇಡಿ ಡೇಟೈಮ್ ರನ್ನಿಂಗ್ ಲ್ಯಾಂಪ್ ಗಳನ್ನು ಒಳಗೊಂಡಿದೆ.

ಇನ್ನು ಈ ಪ್ರೀಮಿಯಂ ಎಲೆಕ್ಟ್ರಿಕ್ ಎಸ್ಯುವಿಯ ಕ್ಯಾಬಿನ್ ನಲ್ಲಿ ಡ್ಯುಯಲ್ 10.3-ಇಂಚಿನ ಡಿಸ್ ಪ್ಲೇಯನ್ನು ಅಳವಡಿಸಲಾಗಿದೆ. ಇನ್ನು ಮಲ್ಟಿ-ಫಂಕ್ಷನಲ್ ಸ್ಟೀಯರಿಂಗ್ ವ್ಹೀಲ್ ಮತ್ತು ಟ್ರ್ಯಾಕ್ಪ್ಯಾಡ್ನೊಂದಿಗೆ ಸಿಗ್ನೇಚರ್ ಸೆಂಟರ್ ಕನ್ಸೋಲ್ ನೊಂದಿಗೆ ಎಂಬಿಎಕ್ಸ್ ಇನ್ಫೋಟೈನ್ಮೆಂಟ್ ಸಿಸ್ಟಂ ಅನ್ನು ಅಳವಡಿಸಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಈ ಹೊಸ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್ಯುವಿಯನ್ನು ಭಾರತಕ್ಕೆ ಸಿಬಿಯು ಮಾರ್ಗದ ಮೂಲಕ ತರಲಾಗುತ್ತಿದೆ. ಈ ಹೊಸ ಇಕ್ಯೂಸಿ ಎಲೆಕ್ಟ್ರಿಕ್ ಎಸ್ಯುವಿಯಲ್ಲಿ 80 ಕಿ.ವ್ಯಾಟ್ ಲಿಥಿಯಂ-ಐಯಾನ್ ಬ್ಯಾಟರಿ ಪ್ಯಾಕನ್ನು ಅಳವಡಿಸಲಾಗಿದೆ.ಈ ಬ್ಯಾಟರಿಯನ್ನು ಪೂರ್ತಿಯಾಗಿ ಚಾರ್ಜ್ ಮಾಡಿದರೆ 471 ಕಿ.ಮೀಗಳವರೆಗೆ ಚಲಿಸುತ್ತದೆ.

ಈ ಹೊಸ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್ಯುವಿಯಲ್ಲಿ ಎರಡು ಎಲೆಕ್ಟ್ರಿಕ್ ಮೋಟಾರ್ ಅನ್ನು ಹೊಂದಿದೆ. ಒಂದು ಮೋಟಾರ್ ಈ ಎಲೆಕ್ಟ್ರಿಕ್ ಎಸ್ಯುವಿಯು ಮುಂಭಾಗದ ಆಕ್ಸಲ್ ಅನ್ನು ಚಾಲನೆ ಮಾಡುತ್ತದೆ ಮತ್ತು ಇನ್ನೊಂದು ಮೋಟಾರ್ ಹಿಂಭಾಗದ ಫ್ಹೋರ್ ವ್ಹೀಲ್ ಡ್ರೈವ್ ಸಿಸ್ಟಂ ಅನ್ನು ಹೊಂದಿರುತ್ತದೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಈ ಸಂಯೋಜಿತ ಎಲೆಕ್ಟ್ರಿಕ್ ಮೋಟಾರ್ 405 ಬಿಹೆಚ್ಪಿ ಪವರ್ ಮತ್ತು 765 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಜರ್ಮನ್ ಐಷಾರಾಮಿ ಕಾರು ತಯಾರಕರು ಇಕ್ಯೂಸಿಯನ್ನು ಅಭಿವೃದ್ಧಿಪಡಿಸುವಾಗ ಸಾಕಷ್ಟು ಚಿಂತನೆ ನಡೆಸಿದ್ದಾರೆ. ಮರ್ಸಿಡಿಸ್ ಬೆಂಝ್ ಕಂಪನಿಯ ಮೊದಲ ಆಲ್-ಎಲೆಕ್ಟ್ರಿಕ್ ಸರಣಿ ಉತ್ಪಾದನಾ ಮಾದರಿಯಾಗಿದೆ.

ಈ ಸಂಯೋಜಿತ ಎಲೆಕ್ಟ್ರಿಕ್ ಮೋಟಾರ್ 405 ಬಿಹೆಚ್ಪಿ ಪವರ್ ಮತ್ತು 765 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಜರ್ಮನ್ ಐಷಾರಾಮಿ ಕಾರು ತಯಾರಕರು ಇಕ್ಯೂಸಿಯನ್ನು ಅಭಿವೃದ್ಧಿಪಡಿಸುವಾಗ ಸಾಕಷ್ಟು ಚಿಂತನೆ ನಡೆಸಿದ್ದಾರೆ. ಇದು ಮರ್ಸಿಡಿಸ್ ಬೆಂಝ್ ಕಂಪನಿಯ ಮೊದಲ ಆಲ್-ಎಲೆಕ್ಟ್ರಿಕ್ ಸರಣಿ ಉತ್ಪಾದನಾ ಮಾದರಿಯಾಗಿದೆ.

ಈ ಎಲೆಕ್ಟ್ರಿಕ್ ಎಸ್ಯುವಿಯು ಕೇವಲ 5.1 ಸೆಕೆಂಡುಗಳಲ್ಲಿ 0 - 100 ಕಿ.ಮೀ ವೇಗವನ್ನು ಕ್ರಮಿಸುತ್ತದೆ. ಈ ಕಾರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 180 ಕಿ.ಮೀಗಳಾಗಿದೆ. ಈ ಎಸ್ಯುವಿಗೆ ಯಾವುದೇ ನೇರ ಪ್ರತಿಸ್ಪರ್ಧಿಗಳಿಲ್ಲ, ಆದರೆ ಮುಂದಿನ ದಿನಗಳಲ್ಲಿ ಆಡಿ ಕಂಪನಿಯು ಇ-ಟ್ರಾನ್ ಅನ್ನು ಭಾರತದಲ್ಲಿ ಬಿಡುಗಡೆಗೊಂಡರೆ ಇಕ್ಯೂಸಿ ಪೈಪೋಟಿಯನ್ನು ನೀಡುತ್ತದೆ.