Just In
- 7 min ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 55 min ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- 1 hr ago ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
- 1 hr ago Hero: ಮಧ್ಯಮ ವರ್ಗದವರ ನೆಚ್ಚಿನ ಬೈಕ್.. ರೂ.75 ಸಾವಿರ ಬೆಲೆ.. ಮೈಲೇಜ್ನಲ್ಲಿ ಸರಿ ಸಾಟಿಯಿಲ್ಲ!
Don't Miss!
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- News ಏಪ್ರಿಲ್ 28ಕ್ಕೆ ಬೆಣ್ಣೆನಗರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ: ಸಿದ್ಧತೆ ಹೇಗಿದೆ? ಮಾಹಿತಿ
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Sports ಟಿ20 ವಿಶ್ವಕಪ್ಗೆ 15 ಸದಸ್ಯರ ಭಾರತ ತಂಡದ ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ಸಂಜು, ರಾಹುಲ್ಗೆ ಸ್ಥಾನವಿಲ್ಲ!
- Movies ಮದುವೆ ಆಗದೇ ಗರ್ಭಿಣಿಯಾಗಿದ್ರಾ ಮಾಧುರಿ ದಿಕ್ಷಿತ್? ವಿವಾದಾತ್ಮಕ ಟ್ವೀಟ್ಗೆ ಫ್ಯಾನ್ಸ್ ಆಕ್ರೋಶ!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರತಿ ಚಾರ್ಜ್ಗೆ 770 ಕಿ.ಮೀ ಮೈಲೇಜ್ ನೀಡುತ್ತೆ ಮರ್ಸಿಡಿಸ್ ಬೆಂಝ್ ಹೊಸ ಇಕ್ಯೂಎಸ್ ಸೆಡಾನ್
ಹೆಚ್ಚುತ್ತಿರುವ ಮಾಲಿನ್ಯ ತಡೆಗಾಗಿ ವಿವಿಧ ರಾಷ್ಟ್ರಗಳು 2030ರಿಂದಲೇ ಸಂಪೂರ್ಣವಾಗಿ ಇಂಧನ ಚಾಲಿತ ವಾಹನಗಳ ಮಾರಾಟವನ್ನು ಪೂರ್ಣಪ್ರಮಾಣದಲ್ಲಿ ಸ್ಥಗಿತಗೊಳಿಸುವ ನಿರ್ಣಯ ಕೈಗೊಂಡಿದ್ದು, ಇದಕ್ಕೆ ಪೂರಕವಾಗಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಸಹ ಹೆಚ್ಚಿಸಲಾಗುತ್ತಿದೆ.
ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾಗಿ ಯುರೋಪ್ ಒಕ್ಕೂಟದಲ್ಲಿನ ಪ್ರಮುಖ ರಾಷ್ಟ್ರಗಳ ನಿರ್ಣಯದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟವು ಸಾಕಷ್ಟು ಇಳಿಕೆಯಾಗುತ್ತಿದ್ದು, ಹೈಬ್ರಿಡ್ ಮತ್ತು ಪೂರ್ಣ ಪ್ರಮಾಣದ ಎಲೆಕ್ಟ್ರಿಕ್ ವಾಹನಗಳ ಮಾರಾಟವದಲ್ಲಿ ಸಾಕಷ್ಟು ಬೆಳವಣಿಗೆ ಕಂಡುಬಂದಿದೆ. 2020ರಲ್ಲೇ ಯುರೋಪಿನ ಪ್ರಮುಖ ರಾಷ್ಟ್ರಗಳಲ್ಲಿ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಬರೋಬ್ಬರಿ 5 ಲಕ್ಷ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಿದ್ದು, ಮುಂಬರುವ ದಿನಗಳಲ್ಲಿ ವಿವಿಧ ಕಾರು ಕಂಪನಿಗಳು ಮತ್ತಷ್ಟು ಇವಿ ಮಾರಾಟವನ್ನು ಹೆಚ್ಚಿಸಲು ಸಜ್ಜಾಗುತ್ತಿವೆ.
ಜರ್ಮನ್ ಕಾರು ಉತ್ಪಾದನಾ ಕಂಪನಿಯಾಗಿರುವ ಮರ್ಸಿಡಿಸ್ ಬೆಂಝ್ ಕೂಡಾ ಈಗಾಗಲೇ ಇಕ್ಯೂಸಿ 400, ಇಕ್ಯೂಎ ಎಲೆಕ್ಟ್ರಿಕ್ ಎಸ್ಯುವಿಯೊಂದಿಗೆ ಹಲವು ಹೊಸ ದಾಖಲೆಗಳಿಗೆ ಕಾರಣವಾಗಿದ್ದು, ದುಬಾರಿ ಬೆಲೆ ನಡುವೆಯು ಹೊಸ ಇವಿ ಕಾರು ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ.
ಈ ನಿಟ್ಟಿನಲ್ಲಿ ಗ್ರಾಹಕರ ಬೇಡಿಕೆಯೆಂತೆ ಮತ್ತಷ್ಟು ಹೊಸ ಎಲೆಕ್ಟ್ರಿಕ್ ಕಾರು ಮಾದರಿಗಳ ಬಿಡುಗಡೆ ಸಿದ್ದವಾಗಿದ್ದು, ಗ್ರಾಹಕರ ಬೇಡಿಕೆಯಲ್ಲಿರುವ ಪ್ರಮುಖ ಕಾರು ಮಾದರಿಗಳನ್ನು ಎಲೆಕ್ಟ್ರಿಕ್ ಆವೃತ್ತಿಗಳನ್ನಾಗಿ ಬಿಡುಗಡೆಗೊಳಿಸಲು ಯೋಜನೆ ರೂಪಿಸಲಾಗಿದೆ.
ಜೊತೆಗೆ ಹಲವು ಹೊಚ್ಚ ಹೊಸ ಎಲೆಕ್ಟ್ರಿಕ್ ಕಾರು ಮಾದರಿಗಳ ಕಾನ್ಸೆಪ್ಟ್ ಆವೃತ್ತಿಯೊಂದಿಗೆ ರೋಡ್ ಟೆಸ್ಟಿಂಗ್ ಕೈಗೊಂಡಿರುವ ಮರ್ಸಿಡಿಸ್ ಬೆಂಝ್ ಕಂಪನಿಯು ಮುಂಬರುವ 2023ರ ವೇಳೆಗೆ ಒಟ್ಟು 6 ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಮಾರಾಟ ಹೊಂದಿರುವ ಗುರಿಹೊಂದಿದ್ದು, ಇದಕ್ಕೆ ಪೂರಕವಾಗಿ ಮಾರುಕಟ್ಟೆ ಅಧ್ಯಯನ ನಡೆಸುವ ಮೂಲಕ ಗ್ರಾಹಕರ ಬೇಡಿಕೆಯೆಂತೆ ಹೊಸ ತಂತ್ರಜ್ಞಾನ ಸೌಲಭ್ಯದೊಂದಿಗೆ ಹೊಸ ಕಾರುಗಳನ್ನು ಸಿದ್ದಪಡಿಸುತ್ತಿದೆ.
ಬಿಡುಗಡೆಯಾಗಲಿರುವ ಮರ್ಸಿಡಿಸ್ ಬೆಂಝ್ ಹೊಸ ಎಲೆಕ್ಟ್ರಿಕ್ ಕಾರುಗಳ ಪಟ್ಟಿಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಎಸ್ಯುವಿ, ಸೆಡಾನ್, ಎಂಪಿವಿ ಮತ್ತು ಸೂಪರ್ ಕಾರು ಮಾದರಿಗಳು ಸಹ ಒಳಗೊಂಡಿದ್ದು, ಹೊಸ ಕಾರುಗಳು ಸದ್ಯ ಮಾರುಕಟ್ಟೆಯಲ್ಲಿರುವ ಇಕ್ಯೂಸಿ 400, ಇಕ್ಯೂಎ ಮಾದರಿಗಿಂತಲೂ ಹೊಸ ಮಾದರಿಯ ತಂತ್ರಜ್ಞಾನ ಪಡೆದುಕೊಳ್ಳುವ ನೀರಿಕ್ಷೆಯಲ್ಲಿವೆ.
ಮರ್ಸಿಡಿಸ್ ಬೆಂಝ್ ಮುಂದಿನ ಎಲೆಕ್ಟ್ರಿಕ್ ಕಾರು ಮಾದರಿಯಾಗಿ ಇಕ್ಯೂಎಸ್ ಸೆಡಾನ್ ಮಾದರಿಯು ಬಿಡುಗಡೆಯಾಗುತ್ತಿದ್ದು, ಹೊಸ ಕಾರನ್ನು ಎಂಟ್ರಿ ಲೆವಲ್ ಕಾರು ಮಾದರಿಗಳ ಪ್ಲ್ಯಾಟ್ಫಾರ್ಮ್ ಆಧರಿಸಿ ನಿರ್ಮಾಣ ಕೈಗೊಂಡಿದೆ.
ಹೊಸ ಕಾರಿನ ಉತ್ಪಾದನಾ ಮಾದರಿಯನ್ನು ಅನಾವರಣಗೊಳಿಸಿರುವ ಮರ್ಸಿಡಿಸ್ ಬೆಂಝ್ ಕಂಪನಿಯು ಹೊಸ ಕಾರಿನಲ್ಲಿ ಹಲವಾರು ಅತ್ಯಾಧುನಿಕ ಫೀಚರ್ಸ್ಗಳನ್ನು ಅಳವಡಿಸಿದ್ದು, ಕಳೆದ ತಿಂಗಳ ಹಿಂದಷ್ಟೇ ಹೊಸ ಕಾರಿನ ಡ್ಯಾಶ್ಬೋರ್ಡ್ ಜೋಡಣೆ ಕುರಿತಾಗಿ ಕೆಲವು ಮಾಹಿತಿಗಳನ್ನು ಹಂಚಿಕೊಂಡಿತ್ತು.
MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!
ಹೈಪರ್ ಸ್ಕ್ರೀನ್ ಸೌಲಭ್ಯವನ್ನು ಹೊಂದಿರುವ ಹೊಸ ಇಕ್ಯೂಎಸ್ ಸೆಡಾನ್ ಮಾದರಿಯು ಡ್ಯಾಶ್ಬೋರ್ಡ್ನಲ್ಲಿ ನಿಯಂತ್ರಿಸಬಹುದಾದ ಸುಮಾರು ಫೀಚರ್ಸ್ಗಳನ್ನು ನೀಡಿದ್ದು, ಇದೀಗ ಹೊಸ ಕಾರಿನಲ್ಲಿ ಇಕ್ಯೂಎಸ್ 450 ಪ್ಲಸ್ ಮತ್ತು ಇಕ್ಯೂಎಸ್ 580 ಎರಡು ವೆರಿಯೆಂಟ್ಗಳೊಂದಿಗೆ ಪ್ರತಿ ಚಾರ್ಜ್ಗೆ ಗರಿಷ್ಠ 770 ಮೈಲೇಜ್ ಹಿಂದಿರುಗಿಸುವ ಮಾಹಿತಿ ಹಂಚಿಕೊಂಡಿದೆ.
ಇಕ್ಯೂಎಸ್ 580 ಆಲ್ ವೀಲ್ಹ್ ಡ್ರೈವ್ ವ್ಯವಸ್ಥೆಯೊಂದಿಗೆ ಟಾಪ್ ಎಂಡ್ ಮಾದರಿಯಾಗಿ ಮಾರಾಟಗೊಳ್ಳಲಿದ್ದು, 2021 ರ ಕೊನೆಯಲ್ಲಿ ಯುರೋಪಿಯನ್ ಮತ್ತು ಅಮೆರಿಕದ ಪ್ರಮುಖ ಮಾರುಕಟ್ಟೆಗಳನ್ನು ಪ್ರವೇಶಿಸಲಿದೆ.
MOST READ: ಪ್ರತಿ ಚಾರ್ಜ್ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್ಯುವಿ..!
ಒಟ್ಟಿನಲ್ಲಿ ಹೊಸ ಕಾರು ಹಲವಾರು ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಕಾರು ಪ್ರಯಾಣವನ್ನು ಮತ್ತಷ್ಟು ಸುಲಭವಾಗಿಸುವುದಲ್ಲದೆ ಸುರಕ್ಷಿತ ಕಾರು ಚಾಲನೆಗೆ ಸಹಕಾರಿಯಾಗಿದ್ದು, ಹೊಸ ಕಾರು ಇಕ್ಯೂಸಿ 400, ಇಕ್ಯೂಎ ಮಾದರಿಗಿಂತಲೂ ಹೊಸ ಮಾದರಿಯ ತಂತ್ರಜ್ಞಾನ ಪ್ರೇರಣೆಯೊಂದಿಗೆ ಮಾರಾಟಗೊಳ್ಳುವುದು ಖಚಿತವಾಗಿದೆ.