ಮರ್ಸಿಡಿಸ್-ಮೇಬ್ಯಾಚ್ ಜಿಎಲ್ಎಸ್600 ಅಲ್ಟ್ರಾ ಲಗ್ಷುರಿ ಎಸ್‌ಯುವಿ ಭಾರತದಲ್ಲಿ ಬಿಡುಗಡೆ

ಮರ್ಸಿಡಿಸ್ ಬೆಂಝ್ ಇಂಡಿಯಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ತನ್ನ ಬಹುನೀರಿಕ್ಷಿತ ಮರ್ಸಿಡಿಸ್-ಮೇಬ್ಯಾಚ್ ಜಿಎಲ್ಎಸ್600 ಅಲ್ಟ್ರಾ ಲಗ್ಷುರಿ ಎಸ್‌ಯುವಿ ಬಿಡುಗಡೆ ಮಾಡಿದ್ದು, ಹೊಸ ಕಾರು ದುಬಾರಿ ಬೆಲೆಯೊಂದಿಗೆ ಹಲವಾರು ಆಧುನಿಕ ತಾಂತ್ರಿಕ ಸೌಲಭ್ಯಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದೆ.

ಮರ್ಸಿಡಿಸ್-ಮೇಬ್ಯಾಚ್ ಜಿಎಲ್ಎಸ್600 ಅಲ್ಟ್ರಾ ಲಗ್ಷುರಿ ಎಸ್‌ಯುವಿ ಭಾರತದಲ್ಲಿ ಬಿಡುಗಡೆ

ಹೊಸ ಮರ್ಸಿಡಿಸ್-ಮೇಬ್ಯಾಚ್ ಜಿಎಲ್ಎಸ್600 ಅಲ್ಟ್ರಾ ಲಗ್ಷುರಿ ಎಸ್‌ಯುವಿ ಮಾದರಿಯನ್ನು ಮೊದಲ ಬಾರಿಗೆ 2019ರಲ್ಲಿ ಪ್ರಮುಖ ಅಂತರ್‌ರಾಷ್ಟ್ರೀಯ ಮಾರುಕಟ್ಟೆಗಳಿಗೆ ಪರಿಚಯಿಸಿದ್ದ ಮರ್ಸಿಡಿಸ್ ಬೆಂಝ್ ಕಂಪನಿಯು ಕಳೆದ ವರ್ಷದ ಭಾರತದಲ್ಲೂ ಬಿಡುಗಡೆ ಮಾಡುವ ಯೋಜನೆಯಲ್ಲಿತ್ತು. ಆದರೆ ಕೋವಿಡ್ ಪರಿಣಾಮ ಹೊಸ ಕಾರಿನ ಬಿಡುಗಡೆ ಮುಂದೂಡಿಕೆ ಮಾಡುತ್ತಾ ಬಂದಿದ್ದ ಕಂಪನಿಯು ಇದೀಗ ಬಿಡುಗಡೆ ಮಾಡಿದ್ದು, ಹೊಸ ಕಾರು ಹಲವಾರು ಐಷಾರಾಮಿ ಸೌಲಭ್ಯಗಳೊಂದಿಗೆ ಅಭಿವೃದ್ದಿಗೊಂಡಿದೆ.

ಮರ್ಸಿಡಿಸ್-ಮೇಬ್ಯಾಚ್ ಜಿಎಲ್ಎಸ್600 ಅಲ್ಟ್ರಾ ಲಗ್ಷುರಿ ಎಸ್‌ಯುವಿ ಭಾರತದಲ್ಲಿ ಬಿಡುಗಡೆ

ಮರ್ಸಿಡಿಸ್-ಮೇಬ್ಯಾಚ್ ಜಿಎಲ್ಎಸ್600 ಅಲ್ಟ್ರಾ ಲಗ್ಷುರಿ ಎಸ್‌ಯುವಿ ಮಾದರಿಯು 4 ಮ್ಯಾಟಿಕ್ ಎನ್ನುವ ಒಂದೇ ಒಂದು ವೆರಿಯೆಂಟ್ ಹೊಂದಿದ್ದು, ಕಾರಿನ ಬೆಲೆಯನ್ನು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ರೂ. 2.43 ಕೋಟಿಗೆ ನಿಗದಿಪಡಿಸಲಾಗಿದೆ.

ಮರ್ಸಿಡಿಸ್-ಮೇಬ್ಯಾಚ್ ಜಿಎಲ್ಎಸ್600 ಅಲ್ಟ್ರಾ ಲಗ್ಷುರಿ ಎಸ್‌ಯುವಿ ಭಾರತದಲ್ಲಿ ಬಿಡುಗಡೆ

ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ 4 ಸೀಟರ್ ಅಥವಾ 5 ಸೀಟರ್ ಮಾದರಿಯೊಂದಿಗೆ ಖರೀದಿ ಮಾಡಬಹುದಾಗಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನವೇ ಭಾರತದಲ್ಲಿ ಈಗಾಗಾಲೇ 50ಕ್ಕೂ ಹೆಚ್ಚು ಗ್ರಾಹಕರು ಮರ್ಸಿಡಿಸ್-ಮೇಬ್ಯಾಚ್ ಜಿಎಲ್ಎಸ್600 ಕಾರಿಗಾಗಿ ಬುಕ್ಕಿಂಗ್ ಸಲ್ಲಿಕೆ ಮಾಡಿರುವುದಾಗಿ ಕಂಪನಿಯೇ ಮಾಹಿತಿ ನೀಡಿದೆ.

ಮರ್ಸಿಡಿಸ್-ಮೇಬ್ಯಾಚ್ ಜಿಎಲ್ಎಸ್600 ಅಲ್ಟ್ರಾ ಲಗ್ಷುರಿ ಎಸ್‌ಯುವಿ ಭಾರತದಲ್ಲಿ ಬಿಡುಗಡೆ

ಮೇಬ್ಯಾಕ್ ಜಿಎಲ್‌ಎಸ್ 600 ಹಲವಾರು ಅತ್ಯಾಧುನಿಕ ಸೌಲಭ್ಯಗಳೊಂದಿಗೆ ತನ್ನ ಸರಣಿ ಕಾರುಗಳಲ್ಲಿಯೇ ವಿಭಿನ್ನವಾಗಿ ಗುರುತಿಸಿಕೊಂಡಿದ್ದು, ಸುಧಾರಿತ ತಂತ್ರಜ್ಞಾನ ಪ್ರೇರಿತ ಹಲವಾರು ತಾಂತ್ರಿಕ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ಪಡೆದುಕೊಂಡಿದೆ.

ಮರ್ಸಿಡಿಸ್-ಮೇಬ್ಯಾಚ್ ಜಿಎಲ್ಎಸ್600 ಅಲ್ಟ್ರಾ ಲಗ್ಷುರಿ ಎಸ್‌ಯುವಿ ಭಾರತದಲ್ಲಿ ಬಿಡುಗಡೆ

ಮೇಬ್ಯಾಚ್ ಜಿಎಲ್ಎಸ್ 600 ಮೇಬ್ಯಾಕ್ ಒಳಗೆ ಮತ್ತು ಹೊರಗೆ ಬೆಸ್ಪೋಕ್ ವೈಶಿಷ್ಟ್ಯಗಳನ್ನು ಹೊಂದಿರಲಿದ್ದು, ಇದರ ಒಟ್ಟಾರೆ ವಿನ್ಯಾಸವು ಐಷಾರಾಮಿ ಮತ್ತು ಪ್ರೀಮಿಯಂ ಅನುಭವ ನೀಡುತ್ತವೆ. ದೊಡ್ಡದಾದ ವರ್ಟಿಕಲ್ ಸ್ಲ್ಯಾಟ್ ಗ್ರಿಲ್, ವಿಂಡೋ ಲೈನ್, ಸೈಡ್-ಸ್ಟೆಪ್, ಮುಂಭಾಗ ಮತ್ತು ಹಿಂಭಾಗದ ಬಂಪರ್‌ಗಳಲ್ಲಿ ಡಿಸೈನ್ ಆಕ್ಸೆಂಟ್, ರೂಫ್ ರೈಲ್ಸ್ ಮತ್ತು ಸ್ಪೋರ್ಟಿ ಎಕ್ಸಾಸ್ ನೋಟ್ ಹೊಂದಿದೆ.

ಮರ್ಸಿಡಿಸ್-ಮೇಬ್ಯಾಚ್ ಜಿಎಲ್ಎಸ್600 ಅಲ್ಟ್ರಾ ಲಗ್ಷುರಿ ಎಸ್‌ಯುವಿ ಭಾರತದಲ್ಲಿ ಬಿಡುಗಡೆ

ಪ್ರೀಮಿಯಂ ಐಷಾರಾಮಿ ಎಸ್‌ಯುವಿ ಕಾರಿನ ವಿನ್ಯಾಸಕ್ಕೆ ತಕ್ಕಂತೆ 23 ಇಂಚಿನ ಬ್ರಷ್ಡ್ ಮಲ್ಟಿ-ಸ್ಪೋಕ್ ವೀಲ್ಹ್ ಆಯ್ಕೆ ಜೊತೆಗೆ ವಿಂಡೋ ಪಿಲ್ಲರ್, ರೂಫ್ ಮೇಲೆ ಕಪ್ಪು ಬಣ್ಣದ ಡ್ಯುಯಲ್ ಟೋನ್ ಪೇಂಟ್ ಸ್ಕೀಮ್ ಮತ್ತು 'ಮೇಬ್ಯಾಕ್' ಬ್ರಾಂಡ್ ಬ್ಯಾಡ್ಜ್ ಹೊಂದಿದೆ.

ಮರ್ಸಿಡಿಸ್-ಮೇಬ್ಯಾಚ್ ಜಿಎಲ್ಎಸ್600 ಅಲ್ಟ್ರಾ ಲಗ್ಷುರಿ ಎಸ್‌ಯುವಿ ಭಾರತದಲ್ಲಿ ಬಿಡುಗಡೆ

ಮೊದಲೇ ಹೇಳಿದಂತೆ ಜಿಎಲ್‌ಎಸ್ 600 ಮೇಬ್ಯಾಕ್‌ನ ಒಳಾಂಗಣದಲ್ಲಿ ಪ್ರವೇಶಿಸುವಾಗ ಇದರ ಬೆಸ್ಪೋಕ್ ವೈಶಿಷ್ಟ್ಯತೆಗಳು ಸಂಪೂರ್ಣ ಐಷಾರಾಮಿ ಸ್ವಾಗತ ನೀಡಲಿದ್ದು, ಹಿಂಭಾಗದ ಆಸನಗಳನ್ನು ಗರಿಷ್ಠ ಐಷಾರಾಮಿ ಸೌಲಭ್ಯಕ್ಕಾಗಿ ಸಂಪೂರ್ಣ ಪವರ್ ಆಪರೇಟೆಡ್ ರೆಕ್ಲೈನಿಂಗ್ ಲೆದರ್ ಸೀಟುಗಳೊಂದಿಗೆ ಬದಲಾಯಿಸಲಾಗಿದೆ.

ಮರ್ಸಿಡಿಸ್-ಮೇಬ್ಯಾಚ್ ಜಿಎಲ್ಎಸ್600 ಅಲ್ಟ್ರಾ ಲಗ್ಷುರಿ ಎಸ್‌ಯುವಿ ಭಾರತದಲ್ಲಿ ಬಿಡುಗಡೆ

ಹೊಸ ಕಾರಿನ ಪ್ರತಿ ಆಸನವು ವೆಂಟಿಲೆಟರ್ ಮತ್ತು ಮಸಾಜ್ ಫಂಕ್ಷನ್ ವೈಶಿಷ್ಟ್ಯತೆ ಒಳಗೊಂಡಿದ್ದು, ಪ್ರತಿ ಆಸನದಲ್ಲೂ ಆಡಿಯೋ, ಹವಾಮಾನ ನಿಯಂತ್ರಣ, ಆಂಬಿಯೆಂಟ್ ಲೈಟಿಂಗ್, ಸನ್ಶೇಡ್ಸ್ ಮತ್ತು ನ್ಯಾವಿಗೇಷನ್ ಅನ್ನು ಒಳಗೊಂಡಿದೆ.

MOST READ: ಲಾಕ್‌ಡೌನ್ ಹಿನ್ನಲೆ ವಾಹನ ದಾಖಲೆಗಳ ಮಾನ್ಯತಾ ಅವಧಿ ಕುರಿತು ಸಾರಿಗೆ ಇಲಾಖೆಯಿಂದ ಹೊಸ ಆದೇಶ

ಮರ್ಸಿಡಿಸ್-ಮೇಬ್ಯಾಚ್ ಜಿಎಲ್ಎಸ್600 ಅಲ್ಟ್ರಾ ಲಗ್ಷುರಿ ಎಸ್‌ಯುವಿ ಭಾರತದಲ್ಲಿ ಬಿಡುಗಡೆ

ಹಾಗೆಯೇ ಆಸನದ ಹಿಂಭಾಗದ ಫೋರ್ಡರ್‌ಗಳಲ್ಲಿ ರೆಫ್ರಿಜರೇಟರ್ ಅನ್ನು ಸಹ ಒಳಗೊಂಡಿದ್ದು, ದೊಡ್ಡದಾದ ಪನೋರಮಿಕ್ ಮೂನ್‌ರೂಫ್, 12.3-ಇಂಚಿನ ಎಂಬಿಯುಎಕ್ಸ್ ಇನ್ಫೋಟೈನ್‌ಮೆಂಟ್ ಸಿಸ್ಟಂ, ಮತ್ತು 12.3-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಬರ್ಮೆಸ್ಟರ್ ಸರೌಂಡ್ ಸೌಂಡ್ ಸಿಸ್ಟಮ್, 64 ಬಣ್ಣ ಮತ್ತು ಹೆಚ್ಚಿನ ಎಲ್ಇಡಿ ಆಪ್ಟಿಕಲ್ ಫೈಬರ್ ಆಂಬಿಯೆಂಟ್ ಲೈಟಿಂಗ್ ಸೇರಿವೆ.

ಮರ್ಸಿಡಿಸ್-ಮೇಬ್ಯಾಚ್ ಜಿಎಲ್ಎಸ್600 ಅಲ್ಟ್ರಾ ಲಗ್ಷುರಿ ಎಸ್‌ಯುವಿ ಭಾರತದಲ್ಲಿ ಬಿಡುಗಡೆ

ಮೇಬ್ಯಾಚ್ ಜಿಎಲ್ಎಸ್ 600 ಕಾರಿನಲ್ಲಿ ಕಂಪನಿಯು ವಿಶೇಷ ತಂತ್ರಜ್ಞಾನ ಪ್ರೇರಿತ ಇ-ಆಕ್ಟಿವ್ ಬಾಡಿ ಕಂಟ್ರೋಲ್ ಸಸ್ಷೆಷನ್ ವ್ಯವಸ್ಥೆಯನ್ನು ಹೊಂದಿದ್ದು, ಫ್ರಂಟ್ ಕ್ಯಾಮೆರಾ ಮೂಲಕ ಕಾರು ಚಾಲನೆಯಲ್ಲಿರುವಾಗ ರಸ್ತೆಯನ್ನು ಸ್ಕ್ಯಾನ್ ಮಾಡುವ ಮೂಲಕ ಮತ್ತು ಸಸ್ಷೆಂಷನ ಹೊಂದಾಣಿಕೆಯೊಂದಿಗೆ ಅಂಡರ್ ಬಾಡಿ ಡ್ಯಾಮೆಜ್ ತಪ್ಪಿಸಲು ನೆರವಾಗುತ್ತದೆ.

MOST READ: ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಿಕ್ ವಾಹನ ಖರೀದಿಸುವ ಮುನ್ನ ತಿಳಿದಿರಬೇಕಾದ ಪ್ರಮುಖ ಅಂಶಗಳಿವು

ಮರ್ಸಿಡಿಸ್-ಮೇಬ್ಯಾಚ್ ಜಿಎಲ್ಎಸ್600 ಅಲ್ಟ್ರಾ ಲಗ್ಷುರಿ ಎಸ್‌ಯುವಿ ಭಾರತದಲ್ಲಿ ಬಿಡುಗಡೆ

ಎಂಜಿನ್ ಮತ್ತು ಪರ್ಫಮೆನ್ಸ್

ಮರ್ಸಿಡಿಸ್-ಮೇಬ್ಯಾಕ್ ಜಿಎಲ್ಎಸ್ 600 ಕಾರಿನಲ್ಲಿ ಕಂಪನಿಯು 4.0 ಲೀಟರ್ ವಿ8 ಪೆಟ್ರೋಲ್ ಎಂಜಿನ್ ಜೋಡಿಸಿದ್ದು, ಇದು 9 ಜಿ-ಟ್ರಾನಿಕ್ ಸ್ವಯಂಚಾಲಿತ ಗೇರ್‌ಬಾಕ್ಸ್‌ನೊಂದಿಗೆ 550ಬಿಎಚ್‌ಪಿ ಮತ್ತು 730ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಮರ್ಸಿಡಿಸ್-ಮೇಬ್ಯಾಚ್ ಜಿಎಲ್ಎಸ್600 ಅಲ್ಟ್ರಾ ಲಗ್ಷುರಿ ಎಸ್‌ಯುವಿ ಭಾರತದಲ್ಲಿ ಬಿಡುಗಡೆ

ಜೊತೆಗೆ ಹೊಸ ಎಂಜಿನ್‌ನಲ್ಲಿ 21ಬಿಎಚ್‌ಪಿ ಮತ್ತು 249ಎನ್ಎಂ ಟಾರ್ಕ್ ಕೊಡುಗೆ ನೀಡುವ ಸಂಯೋಜಿತ ಇಕ್ಯೂ ಬೂಸ್ಟ್ ಸ್ಟಾರ್ಟರ್-ಜನರೇಟರ್ ಅನ್ನು ಸಹ ಹೊಂದಿದ್ದು, 250ಕಿ.ಮೀ ಟಾಪ್ ಸ್ಪೀಡ್ ಹೊಂದಿದೆ. 5 ಮೀಟರ್‌ಗಿಂತಲೂ ಹೆಚ್ಚು ಉದ್ದಳತೆ ಹೊಂದಿರುವ ಹೊಸ ಕಾರಿನಲ್ಲಿ ಸಾಕಷ್ಟು ಸ್ಥಳಾವಕಾಶವಿದ್ದು, ಶೀಘ್ರದಲ್ಲೇ ಹೊಸ ಕಾರಿನ ವಿತರಣೆಯು ಆರಂಭವಾಗಲಿದೆ.

Most Read Articles

Kannada
English summary
The Mercedes-Maybach GLS 600 has been launched in the Indian market. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X