ದೀಪಾವಳಿ ಸಂಭ್ರಮಕ್ಕಾಗಿ ಒಂದೇ ದಿನ 500 ಆಸ್ಟರ್ ಕಾರುಗಳನ್ನು ವಿತರಣೆ ಮಾಡಿದ ಎಂಜಿ ಮೋಟಾರ್
ಎಂಜಿ ಮೋಟಾರ್ ಕಂಪನಿಯು ಹೊಸ ಕಾರು ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕಂಪನಿಯು ಇತ್ತೀಚೆಗೆ ಬಿಡುಗಡೆ ಮಾಡಲಾದ ಆಸ್ಟರ್ ಪ್ರೀಮಿಯಂ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟದಲ್ಲಿ ಹಲವು ಹೊಸ ದಾಖಲೆಗಳನ್ನು ತನ್ನದಾಗಿಸಿಕೊಂಡಿದೆ.

ಭಾರತದ ಮೊದಲ ವ್ಯಯಕ್ತಿಕರಣಗೊಳಿಸಿದ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಸೌಲಭ್ಯ ಹೊಂದಿರುವ ಕಾರು ಮಾದರಿಯಾಗಿ ಆಸ್ಟರ್ ಎಸ್‌ಯುವಿ ಮಾರುಕಟ್ಟೆ ಪ್ರವೇಶಿಸಿದ್ದು, ಹೊಸ ಕಾರಿನ ಬುಕ್ಕಿಂಗ್ ಆರಂಭಿಸಿದ ಮೊದಲ ದಿನವೇ ಕೇವಲ 20 ನಿಮಿಷಗಳಲ್ಲಿ 5 ಸಾವಿರ ಯುನಿಟ್‌ಗಳಿಗೆ ಬುಕ್ಕಿಂಗ್ ಪಡೆದುಕೊಳ್ಳುವ ಮೂಲಕ 2021ರ ಅವಧಿಗೆ ಪೂರ್ತಿಯಾಗಿ ಮಾರಾಟಗೊಂಡಿದೆ.

ಎಂಜಿ ಮೋಟಾರ್ ಕಂಪನಿಯು ಸದ್ಯ ಹೊಸ ಆಸ್ಟರ್ ಕಾರಿಗಾಗಿ 2ನೇ ಹಂತದ ಬುಕ್ಕಿಂಗ್ ಆರಂಭಿಸುವ ಮೂಲಕ ಮೊದಲ ಹಂತದಲ್ಲಿ ಬುಕ್ಕಿಂಗ್ ಮಾಡಲಾದ ಗ್ರಾಹಕರಿಗೆ ವಿತರಣೆ ಆರಂಭಿಸಿದ್ದು, ದಸರಾ ಸಂಭ್ರಮದ ವೇಳೆ ಕಂಪನಿಯು ಸುಮಾರು 500 ಯುನಿಟ್ ಕಾರುಗಳನ್ನು ಒಂದೇ ದಿನದಲ್ಲಿ ದೇಶಾದ್ಯಂತ ಪ್ರಮುಖ ನಗರಗಳಲ್ಲಿ ವಿತರಣೆ ಮಾಡಿದೆ.

ದಕ್ಷಿಣ ಭಾರತದ ರಾಜ್ಯಗಳಲ್ಲಿ ದೀಪಾವಳಿ ಮೊದಲ ದಿನವಾಗಿ ಆಚರಿಸಲಾಗುವ ನರಕ ಚತುರ್ದಶಿಯನ್ನು ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಧಾಂತೆರಾಸ್ ಆಗಿ ಆಚರಿಸಲಿದ್ದು, ನರಕ ಚತುರ್ದಶಿ ಮತ್ತು ಧಾಂತೆರಾಸ್ ಸಂಭ್ರಮದಲ್ಲಿ ಕಂಪನಿಯು ಸುಮಾರು 500 ಯುನಿಟ್ ಆಸ್ಟರ್ ಮಾದರಿಯನ್ನು ಗ್ರಾಹಕರಿಗೆ ಹಸ್ತಾಂತರಿಸಿದೆ.

ಹೊಸ ಕಾರು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಅತ್ಯುತ್ತಮ ಫೀಚರ್ಸ್, ವಿವಿಧ ಎಂಜಿನ್ ಆಯ್ಕೆ ಮತ್ತು ಆಕರ್ಷಕ ಬೆಲೆಗಳನ್ನು ಪಡೆದುಕೊಂಡಿದ್ದು, ಸುಧಾರಿತ ತಂತ್ರಜ್ಞಾನ ಪ್ರೇರಿತ ತಾಂತ್ರಿಕ ಸೌಲಭ್ಯಗಳು ಮತ್ತು ಬಲಿಷ್ಠ ಎಂಜಿನ್ ಆಯ್ಕೆಯೊಂದಿಗೆ ವಿವಿಧ ವೆರಿಯೆಂಟ್ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.9.78 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 16.78 ಲಕ್ಷ ಬೆಲೆ ಹೊಂದಿದೆ.

ಹೊಸ ಕಾರಿನಲ್ಲಿ ಸ್ಟೈಲ್, ಸೂಪರ್, ಸ್ಮಾರ್ಟ್, ಸ್ಯಾವಿ ಮತ್ತು ಶಾರ್ಪ್ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಸ್ಪೋರ್ಟಿ ವಿನ್ಯಾಸದೊಂದಿಗೆ ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್‌ಗಳನ್ನು ಜೋಡಣೆ ಹೊಂದಿದೆ.

ಹೊಸ ಕಾರಿನಲ್ಲಿರುವ 1.5-ಲೀಟರ್ ಪೆಟ್ರೋಲ್ ಮಾದರಿಯು 5 ಸ್ಪೀಡ್ ಮ್ಯಾನುವಲ್ ಅಥವಾ 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 108-ಬಿಎಚ್‌ಪಿ, 144-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.3-ಲೀಟರ್ ಪೆಟ್ರೋಲ್ ಮಾದರಿಯು 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಸಿವಿಟಿ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 138-ಬಿಎಚ್‌ಪಿ, 220-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ಆಸ್ಟರ್ ಕಾರು ಆಕರ್ಷಕವಾದ ಗ್ರಿಲ್ ಜೊತೆ ಹ್ವಾಕ್ ಐ ಹೆಡ್‌ಲ್ಯಾಂಪ್ಸ್, ಕ್ರೊಮ್ ಸ್ಟಡ್ ಗ್ರಿಲ್, ಸ್ಪ್ಲಿಟ್ ಎಲ್ಇಡಿ ಟೈಲ್‌ಲ್ಯಾಂಪ್, 17-ಇಂಚಿನ ಅಲಾಯ್ ವ್ಹೀಲ್, ಡ್ಯುಯಲ್ ಎಕ್ಸಾಸ್ಟ್ ಟ್ರಿಪ್ಸ್, ರೂಫ್ ರೈಲ್ಸ್, ಆಲ್ ಅರೌಂಡ್ ಕ್ಲಾಡಿಂಗ್ ಹೊಂದಿರಲಿದ್ದು, ಕಾರಿನ ಒಳಭಾಗದಲ್ಲಿ 10.1 ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, 7 ಇಂಚಿನ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಪವರ್ ಅಡ್ಜೆಸ್ಟ್ ಸೀಟ್, ಡ್ರೈವ್ ಮತ್ತು ಸ್ಪೀರಿಂಗ್ ಮೋಡ್, ಪನೊರಮಿಕ್ ಸನ್‌ರೂಫ್, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ಹಿಟೆಡ್ ರಿಯರ್ ವ್ಯೂ ಮಿರರ್ ಸೌಲಭ್ಯವಿವೆ.

ಕ್ಯಾಬಿನ್ ಫೀಚರ್ಸ್ ಹೆಚ್ಚಿಸಲು ಫ್ರಂಟ್ ಅಂಡ್ ರಿಯಲ್ ಆರ್ಮ್ ರೆಸ್ಟ್, ಲೆದರ್ ಇಂಟಿರಿಯರ್, ರಿಯರ್ ಎಸಿ ವೆಂಟ್ಸ್, ಪಿಎಂ 2.5 ಕ್ಯಾಬಿನ್ ಫಿಲ್ಟರ್ ಜೊತೆಗೆ ಹೊಸ ಕಾರಿನ ಕನೆಕ್ಟೆಡ್ ಫೀಚರ್ಸ್‌ಗಳು ಕೂಡಾ ಸಾಕಷ್ಟು ಸುಧಾರಿತ ತಂತ್ರಜ್ಞಾನ ಪ್ರೇರಣೆ ಹೊಂದಿವೆ.

ಮತ್ತೊಂದು ವಿಶೇಷವೆಂದರೆ ಹೊಸ ಕಾರಿನಲ್ಲಿ ಭಾರತದ ಮೊದಲ ವ್ಯಯಕ್ತಿಕರಣಗೊಳಿಸಿದ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಸೌಲಭ್ಯ ಜೋಡಿಸಲಾಗಿದ್ದು, ಇದು ರಿಲಯನ್ಸ್ ಜಿಯೋದಿಂದ ಎರವಲು ಪಡೆಯಲಾದ ರಿಯಲ್-ಟೈಮ್ ಇನ್ಫೋಟೈನ್‌ಮೆಂಟ್ ಮತ್ತು ಟೆಲಿಮ್ಯಾಟಿಕ್ಸ್‌ಗಾಗಿ ಇ-ಸಿಮ್, ಐಒಟಿ ಟೆಕ್ ಅನ್ನು ಒಳಗೊಂಡಿರುವ ಹೊಸ ಕಾರು ಗರಿಷ್ಠ ಸುರಕ್ಷತೆ ಖಚಿತಪಡಿಸಲಿದೆ.

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ ಸೌಲಭ್ಯದೊಂದಿಗೆ ಮನರಂಜನೆ, ಕಾರಿನ ತಾಂತ್ರಿಕ ಅಂಶಗಳ ನ್ಯೂನತೆಗಳ ಪತ್ತೆ ಹಚ್ಚುವಲ್ಲಿ ಸಹಕಾರಿಯಾಗುವುದರ ಜೊತೆ ವಾಯ್ಸ್ ಅಸಿಸ್ಟ್ ಮೂಲಕ ಕಾರು ಚಾಲನೆಯನ್ನು ಸರಳಗೊಳಿಸುತ್ತದೆ.

ಹೊಸ ಕಾರಿನಲ್ಲಿರುವ ಲೆವಲ್ 2 ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ(ಎಡಿಎಎಸ್)ನಲ್ಲಿ ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಫಾರ್ವಡ್ ಕೂಲಿಷನ್ ಕಂಟ್ರೋಲ್, ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್, ಲೇನ್ ಕೀಪ್ ಅಸಿಸ್ಟ್, ಲೈನ್ ಡಿಫಾರ್ಚರ್ ಪ್ರಿವೆಷನ್, ಸ್ಪೀಡ್ ವಾರ್ನಿಂಗ್, ಇಂಟೆಲಿಜೆಂಟ್ ಮೋಡ್ ಹೊಂದಿರುವ ಸ್ಪಿಡ್ ಅಸಿಸ್ಟ್ ಸಿಸ್ಟಂ, ಮ್ಯಾನುವಲ್ ಮೋಡ್ ಹೊಂದಿರುವ ಸ್ಪೀಡ್ ಅಸಿಸ್ಟ್ ಸಿಸ್ಟಂ, ರಿಯರ್ ಡ್ರೈವ್ ಅಸಿಸ್ಟ್, ಲೈನ್ ಚೆಂಜ್ ಅಸಿಸ್ಟ್, ಬ್ಲೈಂಡ್ ಸ್ಪಾಟ್ ಡಿಟೆಕ್ಷನ್ ಮತ್ತು ಇಂಟೆಲಿಜೆಂಟ್ ಹೆಡ್‌ಲ್ಯಾಂಪ್ ಲೈಟಿಂಗ್ಸ್ ಕಂಟ್ರೋಲ್‌ಗಳಲಿವೆ.

ಆಕ್ಟಿವ್ ಸೇಫ್ಟಿ ಫೀಚರ್ಸ್‌ಗಳಲ್ಲಿ ಎಡಿಎಎಸ್ ತಂತ್ರಜ್ಞಾನವು ಅಗತ್ಯ ಸಂದರ್ಭಗಳಲ್ಲಿ ಅಟೊನೊಮಸ್ ಬ್ರೇಕಿಂಗ್ ಸೌಲಭ್ಯವಾಗಿಯೂ ಕಾರ್ಯ ನಿರ್ವಹಣೆ ಮಾಡಲಿದ್ದು, ಟಾಪ್ ಎಂಡ್ ಮಾದರಿಯಲ್ಲಿ ಆರು ಏರ್‌ಬ್ಯಾಗ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್(ಇಎಸ್‌ಪಿ), ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ, ಹಿಲ್ ಡಿಸೆಂಟ್ ಮತ್ತು 360 ಡಿಗ್ರಿ ವ್ಯೂ ಕ್ಯಾಮೆರಾ ಸೌಲಭ್ಯಗಳಿವೆ.


Click it and Unblock the Notifications