ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನದೊಂದಿಗೆ ಅನಾವರಣಗೊಳ್ಳಲಿದೆ ಎಂಜಿ ಆಸ್ಟರ್

ಎಂಜಿ ಮೋಟಾರ್ ಕಂಪನಿಯು ಭಾರತದಲ್ಲಿ ತನ್ನ ಐದನೇ ಕಾರು ಮಾದರಿಯಾಗಿ ಹೊಚ್ಚ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯೊಂದನ್ನು ಮುಂಬರುವ ಕೆಲವೇ ದಿನಗಳಲ್ಲಿ ಬಿಡುಗಡೆಗೊಳಿಸುತ್ತಿದ್ದು, ಹೊಸ ಕಾರು ಕಂಪ್ಯಾಕ್ಟ್ ಎಸ್‌ಯುವಿ ಸೆಗ್ಮೆಂಟ್‌ನಲ್ಲಿ ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ರಸ್ತೆಗಿಳಿಯಲು ಸಜ್ಜಾಗುತ್ತಿದೆ.

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನದೊಂದಿಗೆ ಅನಾವರಣಗೊಳ್ಳಲಿದೆ ಎಂಜಿ ಆಸ್ಟರ್ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯ ಮೂಲಕ ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಹೊಸ ಸಂಚಲನ ಸೃಷ್ಠಿಸುವ ತವಕದಲ್ಲಿರುವ ಎಂಜಿ ಮೋಟಾರ್ ಕಂಪನಿಯು ಸದ್ಯ ಹೊಸ ಕಾರನ್ನು ವಿವಿಧ ವೆರಿಯೆಂಟ್‌ನೊಂದಿಗೆ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ್ದು, ಉತ್ಪದನಾ ಮಾದರಿಯನ್ನು ಕಂಪನಿಯು ನಾಳೆ(ಅಗಸ್ಟ್ 18ರಂದು) ಅನಾವರಣಗೊಳಿಸುವುದಾಗಿ ಹೇಳಿಕೊಂಡಿದೆ.

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನದೊಂದಿಗೆ ಅನಾವರಣಗೊಳ್ಳಲಿದೆ ಎಂಜಿ ಆಸ್ಟರ್ ಕಂಪ್ಯಾಕ್ಟ್ ಎಸ್‌ಯುವಿ

ನಾಳೆ ಅನಾವರಣಗೊಳ್ಳಲಿರುವ ಹೊಸ ಆಸ್ಟರ್ ಕಾರು ಮುಂಬರುವ ದೀಪಾವಳಿ ಹೊತ್ತಿಗೆ ಬಿಡುಗಡೆಯಾಗಬಹುದೆಂದು ಅಂದಾಜಿಸಲಾಗಿದ್ದು, ಸ್ಟ್ಯಾಂಡರ್ಡ್ ಹೆಕ್ಟರ್ ಮಾದರಿಗಿಂತಲೂ ಕೆಳ ದರ್ಜೆಯ ಕಾರು ಮಾದರಿಯಾಗಿ ಮಾರಾಟಗೊಳ್ಳಲಿರುವ ಹೊಸ ಕಾರು ಹಲವಾರು ಹೊಸ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆಯಾಗಲಿದೆ.

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನದೊಂದಿಗೆ ಅನಾವರಣಗೊಳ್ಳಲಿದೆ ಎಂಜಿ ಆಸ್ಟರ್ ಕಂಪ್ಯಾಕ್ಟ್ ಎಸ್‌ಯುವಿ

ಎಂಜಿ ಕಂಪನಿಯು ಹೊಸ ಕಾರಿನ ಮೂಲಕ ಮಾರುತಿ ಎಸ್-ಕ್ರಾಸ್, ರೆನಾಲ್ಟ್ ಡಸ್ಟರ್, ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್ ಕಾರುಗಳಿಗೆ ಉತ್ತಮ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದ್ದು, ಸದ್ಯ ಮಾರುಕಟ್ಟೆಯಲ್ಲಿರುವ ಇತರೆ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಗಳಿಂತಲೂ ಹೆಚ್ಚಿನ ಮಟ್ಟದ ತಂತ್ರಜ್ಞಾನ ಜೋಡಣೆ ಪಡೆದುಕೊಂಡಿದೆ.

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನದೊಂದಿಗೆ ಅನಾವರಣಗೊಳ್ಳಲಿದೆ ಎಂಜಿ ಆಸ್ಟರ್ ಕಂಪ್ಯಾಕ್ಟ್ ಎಸ್‌ಯುವಿ

2020ರ ಫೆಬ್ರವರಿಯಲ್ಲಿ ನಡೆದಿದ್ದ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಮೊದಲ ಬಾರಿಗೆ ಜೆಡ್ಎಸ್ ಹೆಸರಿನಲ್ಲಿ ಅನಾವರಣಗೊಂಡಿದ್ದ ಎಂಜಿ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯು ಇದೀಗ ಉತ್ಪಾದನಾ ಮಾದರಿಯೊಂದಿಗೆ ಜೆಡ್ಎಸ್ ಬದಲಾಗಿ ಆಸ್ಟರ್ ಹೆಸರಿನೊಂದಿಗೆ ಬಿಡುಗಡೆಯಾಗುತ್ತಿದ್ದು, ಹೊಸ ಕಾರು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಭಿನ್ನವಾದ ತಾಂತ್ರಿಕ ಅಂಶಗಳೊಂದಿಗೆ ಗ್ರಾಹಕರನ್ನು ಸೆಳೆಯಲಿದೆ.

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನದೊಂದಿಗೆ ಅನಾವರಣಗೊಳ್ಳಲಿದೆ ಎಂಜಿ ಆಸ್ಟರ್ ಕಂಪ್ಯಾಕ್ಟ್ ಎಸ್‌ಯುವಿ

ಎಂಜಿ ಕಂಪನಿಯು ಹೊಸ ಕಾರಿನ ಆಸ್ಟರ್ ಹೆಸರನ್ನು ಈಗಾಗಲೇ ಕೇಂದ್ರ ಸಾರಿಗೆ ಇಲಾಖೆಯಲ್ಲಿ ಟ್ರೇಡ್‌ಮಾರ್ಕ್ ಸಲ್ಲಿಸಿದ್ದು, ಹೊಸ ಕಾರಿನಲ್ಲಿ ಕೃತಕ ಬುದ್ಧಿಮತ್ತೆ ಸೇರಿದಂತೆ ಹಲವು ತಂತ್ರಜ್ಞಾನಗಳನ್ನು ಪರಿಚಯಿಸಲಿದೆ.

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನದೊಂದಿಗೆ ಅನಾವರಣಗೊಳ್ಳಲಿದೆ ಎಂಜಿ ಆಸ್ಟರ್ ಕಂಪ್ಯಾಕ್ಟ್ ಎಸ್‌ಯುವಿ

ರಿಲಯನ್ಸ್ ಜಿಯೋ ರಿಯಲ್-ಟೈಮ್ ಇನ್ಫೋಟೈನ್‌ಮೆಂಟ್ ಮತ್ತು ಟೆಲಿಮ್ಯಾಟಿಕ್ಸ್‌ಗಾಗಿ ಇ-ಸಿಮ್ ಮತ್ತು ಐಒಟಿ ಟೆಕ್ ಅನ್ನು ಒಳಗೊಂಡಿರುವ ಹೊಸ ಕಾರು ಗರಿಷ್ಠ ಸುರಕ್ಷತೆ ಖಚಿತಪಡಿಸಲಿದ್ದು, ಪ್ರಾಥಮಿಕ ಹಂತದ ಆಟೊನಮಸ್ ಟೆಕ್ನಾಲಜಿ ಈ ಕಾರಿನಲ್ಲಿದೆ.

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನದೊಂದಿಗೆ ಅನಾವರಣಗೊಳ್ಳಲಿದೆ ಎಂಜಿ ಆಸ್ಟರ್ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಾರಿನಲ್ಲಿರುವ ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ(ಎಡಿಎಎಸ್) ಸೌಲಭ್ಯವು ಕಾರಿನ ಬೇಡಿಕೆಯನ್ನು ಮತ್ತಷ್ಟು ಹೆಚ್ಚಿಸುವ ನೀರಿಕ್ಷೆಯಿದ್ದು, ಹೊಸ ಎಡಿಎಎಸ್ ಸೌಲಭ್ಯ ಅಳವಡಿಕೆಯಿಂದಾಗಿ ಸುರಕ್ಷಿತ ಕಾರು ಚಾಲನೆಗೆ ಅನುಕೂಲಕರವಾಗಿದೆ.

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನದೊಂದಿಗೆ ಅನಾವರಣಗೊಳ್ಳಲಿದೆ ಎಂಜಿ ಆಸ್ಟರ್ ಕಂಪ್ಯಾಕ್ಟ್ ಎಸ್‌ಯುವಿ

ಕಾರು ಚಾಲನೆ ವೇಳೆ ರಸ್ತೆಗುಂಡಿಗಳನ್ನು ಸುಲಭವಾಗಿ ಪತ್ತೆಹಚ್ಚಲು ಎಡಿಎಎಸ್ ತಂತ್ರಜ್ಞಾನದಲ್ಲಿ ರಡಾರ್ ಬಳಕೆಯಾಗಲಿದ್ದು, ಇದು ಅಗತ್ಯ ಸಂದರ್ಭಗಳಲ್ಲಿ ಅಟೊನೊಮಸ್ ಬ್ರೇಕಿಂಗ್ ಸಿಸ್ಟಂನೊಂದಿಗೆ ಕಾರ್ಯ ನಿರ್ವಹಣೆ ಮಾಡುವ ಮೂಲಕ ರಸ್ತೆಗುಂಡಿಯಿಂದಾಗುವ ಅಪಾಯವನ್ನು ತಡೆಯಬಲ್ಲದು.

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನದೊಂದಿಗೆ ಅನಾವರಣಗೊಳ್ಳಲಿದೆ ಎಂಜಿ ಆಸ್ಟರ್ ಕಂಪ್ಯಾಕ್ಟ್ ಎಸ್‌ಯುವಿ

ಜೊತೆಗೆ ಚಾಲಕನಿಗೆ ಧ್ವನಿ ಸಂದೇಶ ಮೂಲಕ ಎಚ್ಚರಿಕೆ ನೀಡುವ ಎಡಿಎಎಸ್ ಸೌಲಭ್ಯವು ರಿವರ್ಸ್ ಸಂದರ್ಭದಲ್ಲಿ 3ಡಿ ಪನೊರಮಿಕ್ ವ್ಯೂ ಸೌಲಭ್ಯ ಒದಗಿಸಲಿದ್ದು, ಪ್ರಯಾಣಿಕರಿಗೆ ಸುರಕ್ಷತೆಯನ್ನು ಖಾತ್ರಿಪಡಿಸುತ್ತದೆ.

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನದೊಂದಿಗೆ ಅನಾವರಣಗೊಳ್ಳಲಿದೆ ಎಂಜಿ ಮೋಟಾರ್ ಆಸ್ಟರ್ ಕಂಪ್ಯಾಕ್ಟ್ ಎಸ್‌ಯುವಿ ಕಾರು

ಇದರೊಂದಿಗೆ ಹೊಸ ಕಾರಿನಲ್ಲಿ ಅತ್ಯುತ್ತಮ ಲೆದರ್ ವ್ಯಾರ್ಪ್ ಆಸನಗಳು, ಹಿಂಬದಿಯ ಪ್ರಯಾಣಿಕರಿಗೆ ಎಸಿ ವೆಂಟ್ಸ್, 10-ಇಂಚಿನ ಇನ್ಪೋಟೈನ್ ಸಿಸ್ಟಂ, ಆ್ಯಪಲ್ ಕಾರ್ ಪ್ಲೇ ಮತ್ತು ಅಂಡ್ರಾಯಿಡ್ ಆಟೋ, ಸೆಮಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಪ್ಲ್ಯಾಟ್-ಬಾಟಮ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್ಸ್, ಹಿಂಬದಿಯ ಪ್ರಯಾಣಿಕರಿಗೆ ಅರಾಮದಾಯಕವಾದ ಆಸನ ಸೌಲಭ್ಯಗಳಿವೆ.

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನದೊಂದಿಗೆ ಅನಾವರಣಗೊಳ್ಳಲಿದೆ ಎಂಜಿ ಆಸ್ಟರ್ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಾರು ಜೆಡ್ಎಸ್ ಎಲೆಕ್ಟ್ರಿಕ್ ಕಾರಿನ ಮಾದರಿಯಲ್ಲೇ ತುಸು ವಿಭಿನ್ನ ವಿನ್ಯಾಸವನ್ನು ಹೊಂದಿರುವ ಹೊಸ ಕಾರು ಎರಡು ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿರಲಿದೆ ಎನ್ನಲಾಗಿದ್ದು, ಗ್ರಾಹಕರು ತಮ್ಮ ಬೇಡಿಕೆಯೆಂತೆ ಸಾಮಾನ್ಯ ಪೆಟ್ರೋಲ್ ಮಾದರಿಯನ್ನು ಮತ್ತು ಪರ್ಫಾಮೆನ್ಸ್ ಬಯಸುವ ಗ್ರಾಹಕರು ಟರ್ಬೊ ಪೆಟ್ರೋಲ್ ಮಾದರಿಯನ್ನು ಖರೀದಿಸಬಹುದು.

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನದೊಂದಿಗೆ ಅನಾವರಣಗೊಳ್ಳಲಿದೆ ಎಂಜಿ ಆಸ್ಟರ್ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಆಸ್ಟರ್ ಕಾರಿನಲ್ಲಿ 1.5-ಲೀಟರ್ ಸಾಮಾನ್ಯ ಪೆಟ್ರೋಲ್ ಮತ್ತು ಹೈ ಎಂಡ್ ಮಾದರಿಗಾಗಿ 1.3-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ನೀಡುವ ಸಾಧ್ಯತೆಗಳಿದ್ದು, ಹೊಸ ಎಂಜಿನ್‌ನಲ್ಲಿ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಮತ್ತು 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಿರಬಹುದೆಂದು ಅಂದಾಜಿಸಲಾಗಿದೆ.

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನದೊಂದಿಗೆ ಅನಾವರಣಗೊಳ್ಳಲಿದೆ ಎಂಜಿ ಆಸ್ಟರ್ ಕಂಪ್ಯಾಕ್ಟ್ ಎಸ್‌ಯುವಿ

ಈ ಮೂಲಕ ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರುಗಳಲ್ಲೇ ಅತ್ಯುತ್ತಮ ಫೀಚರ್ಸ್ ಹೊಂದಿರುವ ಎಂಜಿ ಹೊಸ ಕಂಪ್ಯಾಕ್ಟ್ ಎಸ್‌ಯುವಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 9.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 14 ಲಕ್ಷ ಬೆಲೆ ಹೊಂದಬಹುದೆಂದು ಅಂದಾಜಿಸಲಾಗಿದ್ದು, ಪ್ರತಿ ಸ್ಪರ್ಧಿ ಕಾರು ಮಾದರಿಗಳಿಂತಲೂ ತಂತ್ರಜ್ಞಾನದಲ್ಲಿ ಮುಂಚೂಣಿ ಸಾಧಿಸುವ ಮೂಲಕ ಕಾರು ಮಾರಾಟದಲ್ಲಿ ಹೊಸ ಸಂಚಲನ ಮೂಡಿಸಲಿದೆ ಎನ್ನಬಹುದು.

Article Published On: Tuesday, August 17, 2021, 20:41 [IST]
English summary
Mg astor ai technology to reveal tomorrow details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+