ಸೆಪ್ಟೆಂಬರ್ 2ನೇ ವಾರದಲ್ಲಿ ಬಿಡುಗಡೆಯಾಗಲಿದೆ MG Astor ಕಂಪ್ಯಾಕ್ಟ್ ಎಸ್‌ಯುವಿ!
MG Motor ಕಂಪನಿಯು ಶೀಘ್ರದಲ್ಲೇ ತನ್ನ ಬಹುನೀರಿಕ್ಷಿತ Astor ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಭಾರತದಲ್ಲಿ ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಹೊಸ ಕಾರು ಮುಂದಿನ ತಿಂಗಳು ಸೆಪ್ಟೆಂಬರ್ ಎರಡನೇ ವಾರದಲ್ಲಿ ಮಾರುಕಟ್ಟೆ ಪ್ರವೇಶಿಸುವುದು ಬಹುತೇಕ ಖಚಿತವಾಗಿದೆ.

ಹೊಸ ಕಾರು ಮಾರಾಟದಲ್ಲಿ ಕಳೆದ ಎರಡು ವರ್ಷಗಳಲ್ಲಿ ಸಾಕಷ್ಟು ಬದಲಾವಣೆಗಳನ್ನು ಪರಿಚಯಿಸಿರುವ MG Motor ಕಂಪನಿಯು Hector, Hectro Plus, Gloster ಮತ್ತು ZS EV ಕಾರು ಮಾದರಿಯೊಂದಿಗೆ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕಂಪನಿಯು ಮಾರುಕಟ್ಟೆಯಲ್ಲಿನ ಬೇಡಿಕೆ ಅನುಸಾರವಾಗಿ ಶೀಘ್ರದಲ್ಲೇ Astor ಕಂಪ್ಯಾಕ್ಟ್ ಎಸ್‌ಯುವಿಯನ್ನು ಮಾರಾಟ ಮಾಡುವ ಯೋಜನೆಯಲ್ಲಿದೆ.

ವಿನೂತನ ವಿನ್ಯಾಸ ಮತ್ತು ಸುಧಾರಿತ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅಭಿವೃದ್ದಿಗೊಂಡಿರುವ ಹೊಸ Astor ಕಾರು ಪ್ರಮುಖ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದ್ದು, ಹೊಸ ಕಾರು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚಿನ ಮಟ್ಟದ ತಾಂತ್ರಿಕ ಸೌಲಭ್ಯಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ.

ಸೆಗ್ಮೆಂಟ್ ಫಸ್ಟ್ ಫೀಚರ್ಸ್‌ಗಳೊಂದಿಗೆ ಪ್ರತಿಸ್ಪರ್ಧಿ ಮಾದರಿಗಳಿಂತಲೂ ವಿಭಿನ್ನವಾಗಿ ಗುರುತಿಸಿಕೊಳ್ಳಲಿರುವ MG Astor ಕಾರಿನಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನದ ಮೂಲಕ ವಿಭಿನ್ನವಾದ ಚಾಲನಾ ಅನುಭವ ನೀಡಲಿದೆ.

2020ರ ಫೆಬ್ರವರಿಯಲ್ಲಿ ನಡೆದಿದ್ದ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಮೊದಲ ಬಾರಿಗೆ ZS ಹೆಸರಿನಲ್ಲಿ ಅನಾವರಣಗೊಂಡಿದ್ದ ಹೊಸ ಕಂಪ್ಯಾಕ್ಟ್ ಎಸ್‌ಯುವಿಯು ಇದೀಗ ಉತ್ಪಾದನಾ ಮಾದರಿಯೊಂದಿಗೆ ZS ಬದಲಾಗಿ Astor ಹೆಸರಿನೊಂದಿಗೆ ಬಿಡುಗಡೆಯಾಗುತ್ತಿದೆ.

ಸ್ಟ್ಯಾಂಡರ್ಡ್ Hector ಮಾದರಿಗಿಂತಲೂ ಕೆಳ ದರ್ಜೆಯ ಕಾರು ಮಾದರಿಯಾಗಿ ಮಾರಾಟಗೊಳ್ಳಲಿರುವ ಹೊಸ ಕಾರು ಹಲವಾರು ಹೊಸ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆಯಾಗಲಿದ್ದು, ವ್ಯಯಕ್ತಿಕರಣಗೊಳಿಸಿದ ಮೊದಲ ಕೃತಕ ಬುದ್ಧಿಮತ್ತೆ ಸೌಲಭ್ಯ ಹೊಂದಿರುವ ಭಾರತದ ಮೊದಲ ಕಾರು ಮಾದರಿಯಾಗಲಿದೆ.

ರಿಲಯನ್ಸ್ ಜಿಯೋದಿಂದ ಎರವಲು ಪಡೆಯಲಾದ ರಿಯಲ್-ಟೈಮ್ ಇನ್ಫೋಟೈನ್‌ಮೆಂಟ್ ಮತ್ತು ಟೆಲಿಮ್ಯಾಟಿಕ್ಸ್‌ಗಾಗಿ ಇ-ಸಿಮ್ ಮತ್ತು ಐಒಟಿ ಟೆಕ್ ಅನ್ನು ಒಳಗೊಂಡಿರುವ ಹೊಸ ಕಾರು ಗರಿಷ್ಠ ಸುರಕ್ಷತೆ ಖಚಿತಪಡಿಸಲಿದ್ದು, 4ಜಿ ಇಂಟರ್‌ನೆಟ್ ಸೌಲಭ್ಯದೊಂದಿಗೆ ಹಲವಾರು ಆಟೋಮೋಟಿವ್ ಸಂಬಂಧಿತ ಗ್ರಾಹಕರ ಸೇವೆಗಳನ್ನು ಸುಲಭವಾಗಿ ಹೊಸ ಪ್ಲ್ಯಾಟ್‌ಫಾರ್ಮ್ ಮೂಲಕ ಪಡೆದುಕೊಳ್ಳಬಹುದು.

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ ಸೌಲಭ್ಯದೊಂದಿಗೆ ಮನರಂಜನೆ, ಕಾರಿನ ತಾಂತ್ರಿಕ ಅಂಶಗಳ ನ್ಯೂನತೆಗಳ ಪತ್ತೆ ಹಚ್ಚುವಲ್ಲಿ ಸಹಕಾರಿಯಾಗುವುದರ ಜೊತೆ ವಾಯ್ಸ್ ಅಸಿಸ್ಟ್ ಮೂಲಕ ಚಾಲನೆಯನ್ನು ಸರಳಗೊಳಿಸುತ್ತದೆ.

ಹೊಸ ಕಾರಿನಲ್ಲಿ MG ಕಂಪನಿಯು ಬಾಷ್ ಕಂಪನಿಯ ಜೊತೆಗೂಡಿ ಅಭಿವೃದ್ದಿಗೊಳಿಸಲಾದ ಎರಡನೇ ಹಂತದ ಆಟೊನಮಸ್ ಟೆಕ್ನಾಲಜಿ ಪ್ರೇರಿತ ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ(ಎಡಿಎಎಸ್) ಸೌಲಭ್ಯವು ಸಹ ಈ ಕಾರಿನಲ್ಲಿದ್ದು, ಹೊಸ ಎಡಿಎಎಸ್ ಸೌಲಭ್ಯ ಅಳವಡಿಕೆಯಿಂದಾಗಿ ಸುರಕ್ಷಿತ ಕಾರು ಚಾಲನೆಗೆ ಅನುಕೂಲಕರವಾಗಿದೆ.

ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ(ಎಡಿಎಎಸ್)ನಲ್ಲಿ ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಫಾರ್ವಡ್ ಕೂಲಿಷನ್ ಕಂಟ್ರೋಲ್, ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್, ಲೇನ್ ಕೀಪ್ ಅಸಿಸ್ಟ್, ಲೈನ್ ಡಿಫಾರ್ಚರ್ ಪ್ರಿವೆಷನ್, ಸ್ಪೀಡ್ ವಾರ್ನಿಂಗ್, ಇಂಟೆಲಿಜೆಂಟ್ ಮೋಡ್ ಹೊಂದಿರುವ ಸ್ಪಿಡ್ ಅಸಿಸ್ಟ್ ಸಿಸ್ಟಂ, ಮ್ಯಾನುವಲ್ ಮೋಡ್ ಹೊಂದಿರುವ ಸ್ಪೀಡ್ ಅಸಿಸ್ಟ್ ಸಿಸ್ಟಂ, ರಿಯರ್ ಡ್ರೈವ್ ಅಸಿಸ್ಟ್, ಲೈನ್ ಚೆಂಜ್ ಅಸಿಸ್ಟ್, ಬ್ಲೈಂಡ್ ಸ್ಪಾಟ್ ಡಿಟೆಕ್ಷನ್ ಮತ್ತು ಇಂಟೆಲಿಜೆಂಟ್ ಹೆಡ್‌ಲ್ಯಾಂಪ್ ಲೈಟಿಂಗ್ಸ್ ಕಂಟ್ರೋಲ್‌ಗಳಲಿವೆ.

ಹಾಗೆಯೇ ಮ್ಯಾನುವಲ್ ಮೋಡ್ ಹೊಂದಿರುವ ಸ್ಪೀಡ್ ಅಸಿಸ್ಟ್ ಸಿಸ್ಟಂ, ರಿಯರ್ ಡ್ರೈವ್ ಅಸಿಸ್ಟ್, ಲೈನ್ ಚೆಂಜ್ ಅಸಿಸ್ಟ್, ಬ್ಲೈಂಡ್ ಸ್ಪಾಟ್ ಡಿಟೆಕ್ಷನ್ ಮತ್ತು ಇಂಟೆಲಿಜೆಂಟ್ ಹೆಡ್‌ಲ್ಯಾಂಪ್ ಲೈಟಿಂಗ್ಸ್ ಕಂಟ್ರೋಲ್‌ಗಳಲಿವೆ.

ಜೊತೆಗೆ ಕಾರು ಚಾಲನೆ ವೇಳೆ ರಸ್ತೆಗುಂಡಿಗಳನ್ನು ಸುಲಭವಾಗಿ ಪತ್ತೆಹಚ್ಚಲು ಎಡಿಎಎಸ್ ತಂತ್ರಜ್ಞಾನದಲ್ಲಿ ರಡಾರ್ ಸೌಲಭ್ಯವಿದ್ದು, ಇದು ಅಗತ್ಯ ಸಂದರ್ಭಗಳಲ್ಲಿ ಅಟೊನೊಮಸ್ ಬ್ರೇಕಿಂಗ್ ಸಿಸ್ಟಂನೊಂದಿಗೆ ಕಾರ್ಯ ನಿರ್ವಹಣೆ ಮಾಡುವ ಮೂಲಕ ರಸ್ತೆಗುಂಡಿಯಿಂದಾಗುವ ಅಪಾಯವನ್ನು ತಡೆಯಬಲ್ಲದು.

ಅಪಾಯದ ಮುನ್ಸೂಚನೆಯನ್ನು ಚಾಲಕನಿಗೆ ಧ್ವನಿ ಸಂದೇಶ ಮೂಲಕ ಎಚ್ಚರಿಕೆ ನೀಡುವ ಎಡಿಎಎಸ್ ಸೌಲಭ್ಯವು ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆಯನ್ನು ಖಾತ್ರಿಪಡಿಸಲಿದ್ದು, ಜೊತೆಗೆ 10-ಇಂಚಿನ ಇನ್ಪೋಟೈನ್ ಸಿಸ್ಟಂ, ಆ್ಯಪಲ್ ಕಾರ್ ಪ್ಲೇ ಮತ್ತು ಅಂಡ್ರಾಯಿಡ್ ಆಟೋ, ಸೆಮಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಪ್ಲ್ಯಾಟ್-ಬಾಟಮ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್ಸ್, ಹಿಂಬದಿಯ ಪ್ರಯಾಣಿಕರಿಗೆ ಅರಾಮದಾಯಕವಾದ ಆಸನ ಸೌಲಭ್ಯಗಳಿವೆ.

ಹೊಸ Mg Astor ಕಾರು ಎರಡು ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿರಲಿದೆ ಎನ್ನಲಾಗಿದ್ದು, ಗ್ರಾಹಕರು ತಮ್ಮ ಬೇಡಿಕೆಯೆಂತೆ ಸಾಮಾನ್ಯ ಪೆಟ್ರೋಲ್ ಮಾದರಿಯನ್ನು ಮತ್ತು ಪರ್ಫಾಮೆನ್ಸ್ ಬಯಸುವ ಗ್ರಾಹಕರು ಟರ್ಬೊ ಪೆಟ್ರೋಲ್ ಮಾದರಿಯನ್ನು ಖರೀದಿಸಬಹುದು.

1.5-ಲೀಟರ್ ಸಾಮಾನ್ಯ ಪೆಟ್ರೋಲ್ ಮತ್ತು ಹೈ ಎಂಡ್ ಮಾದರಿಗಾಗಿ 1.3-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ನೀಡುವ ಸಾಧ್ಯತೆಗಳಿದ್ದು, ಹೊಸ ಎಂಜಿನ್‌ನಲ್ಲಿ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಮತ್ತು 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಿರಬಹುದೆಂದು ಅಂದಾಜಿಸಲಾಗಿದೆ.

ಈ ಮೂಲಕ ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರುಗಳಲ್ಲೇ ಅತ್ಯುತ್ತಮ ಫೀಚರ್ಸ್ ಹೊಂದಿರುವ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 11 ಲಕ್ಷ ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17 ಲಕ್ಷ ಬೆಲೆ ಹೊಂದಬಹುದೆಂದು ಅಂದಾಜಿಸಲಾಗಿದ್ದು, ಹೊಸ ಕಾರು ಮುಂದಿನ ತಿಂಗಳು ಸೆಪ್ಟೆಂಬರ್ ಮಧ್ಯಂತರದಲ್ಲಿ ಮಾರುಕಟ್ಟೆ ಪ್ರವೇಶಿಸುವ ಸಾಧ್ಯತೆಗಳಿವೆ.


Click it and Unblock the Notifications