Just In
- 2 hrs ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 4 hrs ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 4 hrs ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- 5 hrs ago ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
Don't Miss!
- Movies Puttakkana Makkalu: ಮಗಳ ಜೀವನ ಹಾಳಾಗುವ ಆತಂಕದಲ್ಲಿ ಪುಟ್ಟಕ್ಕ; ಬಂಗಾರಮ್ಮ ಬೇಸರ
- News ಲೋಕಸಭಾ ಚುನಾವಣೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್ಡಿಕೆ ಮೇಕೆದಾಟು ಅಸ್ತ್ರ
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೊಸ Astor ಎಸ್ಯುವಿ ಮಾದರಿಯಲ್ಲಿ ಸ್ಯಾವಿ ವೆರಿಯೆಂಟ್ ಬಿಡುಗಡೆ ಮಾಡಿದ MG Motor
ಎಂಜಿ ಮೋಟಾರ್(MG Motor) ಕಂಪನಿಯು ಕಳೆದ ವಾರವಷ್ಟೇ ತನ್ನ ಹೊಚ್ಚ ಹೊಸ ಆಸ್ಟರ್(Astor) ಪ್ರೀಮಿಯಂ ಕಂಪ್ಯಾಕ್ಟ್ ಎಸ್ಯುವಿ ಮಾದರಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದ್ದು, ಹೊಸ ಕಾರಿನಲ್ಲಿ ಇದೀಗ ಕಂಪನಿಯು ಮತ್ತೊಂದು ಪ್ರಮುಖ ವೆರಿಯೆಂಟ್ ಪರಿಚಯಿಸಿದೆ.
ಆಸ್ಟರ್ ಕಾರು ಮಾದರಿಯು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹಲವಾರು ವಿಶೇಷತೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದು, ಸುಧಾರಿತ ತಂತ್ರಜ್ಞಾನ ಪ್ರೇರಿತ ತಾಂತ್ರಿಕ ಸೌಲಭ್ಯಗಳು ಮತ್ತು ಬಲಿಷ್ಠ ಎಂಜಿನ್ ಆಯ್ಕೆಯೊಂದಿಗೆ ವಿವಿಧ ವೆರಿಯೆಂಟ್ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ.9.78 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 16.78 ಲಕ್ಷ ಬೆಲೆ ಹೊಂದಿದೆ.
ಹೊಸ ಕಾರಿನಲ್ಲಿ ಸ್ಟೈಲ್, ಸೂಪರ್, ಸ್ಮಾರ್ಟ್, ಶಾರ್ಪ್ ವೆರಿಯೆಂಟ್ ಬಿಡುಗಡೆ ಮಾಡಿದ್ದ ಎಂಜಿ ಕಂಪನಿಯು ಇದೀಗ ಹೊಸದಾಗಿ ಸ್ಯಾವಿ ಎನ್ನುವ ಟಾಪ್ ವೆರಿಯೆಂಟ್ ಬಿಡುಗಡೆ ಮಾಡಿದ್ದು, ಹೊಸ ಆವೃತ್ತಿಯು ಸ್ಮಾರ್ಟ್ ಮತ್ತು ಶಾರ್ಪ್ ನಡುವಿನ ಸ್ಥಾನದೊಂದಿಗೆ ಎಕ್ಸ್ಶೋರೂಂ ಪ್ರಕಾರ ರೂ. 15.78 ಲಕ್ಷ ಬೆಲೆ ಹೊಂದಿದೆ.
ಸ್ಯಾವಿ ಮಾದರಿಯು ಎರಡು ಪೆಟ್ರೋಲ್ ಎಂಜಿನ್ ಆಯ್ಕೆಯೊಂದಿಗೆ ಹೈ ಎಂಡ್ ಮಾದರಿಯಲ್ಲಿ ನೀಡಲಾಗುತ್ತಿರುವ ಎಡಿಎಎಸ್ ಸೌಲಭ್ಯವನ್ನು ಸ್ಟ್ಯಾಂಡರ್ಡ್ ಆಗಿ ಪಡೆದುಕೊಂಡಿದ್ದು, ಹೊಸ ಆವೃತ್ತಿಯು ಹಲವಾರು ಐಷಾರಾಮಿ ಫೀಚರ್ಸ್ಗಳನ್ನು ಹೊಂದಿದೆ.
ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಆಕರ್ಷಕ ಬೆಲೆಯಲ್ಲಿ ಹೆಚ್ಚಿನ ಮಟ್ಟದ ತಂತ್ರಜ್ಞಾನ ಪ್ರೇರಣೆಯನ್ನು ಪಡೆದುಕೊಂಡಿರುವ ಆಸ್ಟರ್ ಕಾರು ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೊಸ್ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲಿದ್ದು, ಸ್ಪೋರ್ಟಿ ವಿನ್ಯಾಸದೊಂದಿಗೆ ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್ಗಳನ್ನು ಜೋಡಣೆ ಹೊಂದಿದೆ.
ಹೊಸ ಕಾರಿನಲ್ಲಿರುವ 1.5-ಲೀಟರ್ ಪೆಟ್ರೋಲ್ ಮಾದರಿಯು 5 ಸ್ಪೀಡ್ ಮ್ಯಾನುವಲ್ ಅಥವಾ 8-ಸ್ಪೀಡ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆಯೊಂದಿಗೆ 108-ಬಿಎಚ್ಪಿ, 144-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.3-ಲೀಟರ್ ಪೆಟ್ರೋಲ್ ಮಾದರಿಯು 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಸಿವಿಟಿ ಗೇರ್ಬಾಕ್ಸ್ ಆಯ್ಕೆಯೊಂದಿಗೆ 138-ಬಿಎಚ್ಪಿ, 220-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.
ಆಸ್ಟರ್ ಕಾರು ಆಕರ್ಷಕವಾದ ಗ್ರಿಲ್ ಜೊತೆ ಹ್ವಾಕ್ ಐ ಹೆಡ್ಲ್ಯಾಂಪ್ಸ್, ಕ್ರೊಮ್ ಸ್ಟಡ್ ಗ್ರಿಲ್, ಸ್ಪ್ಲಿಟ್ ಎಲ್ಇಡಿ ಟೈಲ್ಲ್ಯಾಂಪ್, 17-ಇಂಚಿನ ಅಲಾಯ್ ವ್ಹೀಲ್, ಡ್ಯುಯಲ್ ಎಕ್ಸಾಸ್ಟ್ ಟ್ರಿಪ್ಸ್, ರೂಫ್ ರೈಲ್ಸ್, ಆಲ್ ಅರೌಂಡ್ ಕ್ಲಾಡಿಂಗ್ ಹೊಂದಿರಲಿದೆ.
ಸೆಗ್ಮೆಂಟ್ ಫಸ್ಟ್ ಫೀಚರ್ಸ್ ಜೋಡಣೆ ಹೊಂದಿರುವ ಆಸ್ಟರ್ ಕಾರಿನಲ್ಲಿ 10.1 ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್ಮೆಂಟ್ ಸಿಸ್ಟಂ, 7 ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಪವರ್ ಅಡ್ಜೆಸ್ಟ್ ಸೀಟ್, ಡ್ರೈವ್ ಮತ್ತು ಸ್ಪೀರಿಂಗ್ ಮೋಡ್, ಪನೊರಮಿಕ್ ಸನ್ರೂಫ್, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ಹಿಟೆಡ್ ರಿಯರ್ ವ್ಯೂ ಮಿರರ್ ಸೌಲಭ್ಯವಿವೆ.
ಕ್ಯಾಬಿನ್ ಫೀಚರ್ಸ್ ಹೆಚ್ಚಿಸಲು ಫ್ರಂಟ್ ಅಂಡ್ ರಿಯಲ್ ಆರ್ಮ್ ರೆಸ್ಟ್, ಲೆದರ್ ಇಂಟಿರಿಯರ್, ರಿಯರ್ ಎಸಿ ವೆಂಟ್ಸ್, ಪಿಎಂ 2.5 ಕ್ಯಾಬಿನ್ ಫಿಲ್ಟರ್ ಜೊತೆಗೆ ಹೊಸ ಕಾರಿನ ಕನೆಕ್ಟೆಡ್ ಫೀಚರ್ಸ್ಗಳು ಕೂಡಾ ಸಾಕಷ್ಟು ಸುಧಾರಿತ ತಂತ್ರಜ್ಞಾನ ಪ್ರೇರಣೆ ಹೊಂದಿವೆ.
ಭಾರತದ ಮೊದಲ ವ್ಯಯಕ್ತಿಕರಣಗೊಳಿಸಿದ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಸೌಲಭ್ಯ ಹೊಂದಿರುವ ಆಸ್ಟರ್ ಕಾರು ರಿಲಯನ್ಸ್ ಜಿಯೋದಿಂದ ಎರವಲು ಪಡೆಯಲಾದ ರಿಯಲ್-ಟೈಮ್ ಇನ್ಫೋಟೈನ್ಮೆಂಟ್ ಮತ್ತು ಟೆಲಿಮ್ಯಾಟಿಕ್ಸ್ಗಾಗಿ ಇ-ಸಿಮ್, ಐಒಟಿ ಟೆಕ್ ಅನ್ನು ಒಳಗೊಂಡಿರುವ ಹೊಸ ಕಾರು ಗರಿಷ್ಠ ಸುರಕ್ಷತೆ ಖಚಿತಪಡಿಸಲಿದೆ.
ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ ಸೌಲಭ್ಯದೊಂದಿಗೆ ಮನರಂಜನೆ, ಕಾರಿನ ತಾಂತ್ರಿಕ ಅಂಶಗಳ ನ್ಯೂನತೆಗಳ ಪತ್ತೆ ಹಚ್ಚುವಲ್ಲಿ ಸಹಕಾರಿಯಾಗುವುದರ ಜೊತೆ ವಾಯ್ಸ್ ಅಸಿಸ್ಟ್ ಮೂಲಕ ಕಾರು ಚಾಲನೆಯನ್ನು ಸರಳಗೊಳಿಸುತ್ತದೆ.
ಹೊಸ ಕಾರಿನಲ್ಲಿರುವ ಲೆವಲ್ 2 ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ(ಎಡಿಎಎಸ್)ನಲ್ಲಿ ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಫಾರ್ವಡ್ ಕೂಲಿಷನ್ ಕಂಟ್ರೋಲ್, ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್, ಲೇನ್ ಕೀಪ್ ಅಸಿಸ್ಟ್, ಲೈನ್ ಡಿಫಾರ್ಚರ್ ಪ್ರಿವೆಷನ್, ಸ್ಪೀಡ್ ವಾರ್ನಿಂಗ್, ಇಂಟೆಲಿಜೆಂಟ್ ಮೋಡ್ ಹೊಂದಿರುವ ಸ್ಪಿಡ್ ಅಸಿಸ್ಟ್ ಸಿಸ್ಟಂ, ಮ್ಯಾನುವಲ್ ಮೋಡ್ ಹೊಂದಿರುವ ಸ್ಪೀಡ್ ಅಸಿಸ್ಟ್ ಸಿಸ್ಟಂ, ರಿಯರ್ ಡ್ರೈವ್ ಅಸಿಸ್ಟ್, ಲೈನ್ ಚೆಂಜ್ ಅಸಿಸ್ಟ್, ಬ್ಲೈಂಡ್ ಸ್ಪಾಟ್ ಡಿಟೆಕ್ಷನ್ ಮತ್ತು ಇಂಟೆಲಿಜೆಂಟ್ ಹೆಡ್ಲ್ಯಾಂಪ್ ಲೈಟಿಂಗ್ಸ್ ಕಂಟ್ರೋಲ್ಗಳಲಿವೆ.
ಆಕ್ಟಿವ್ ಸೇಫ್ಟಿ ಫೀಚರ್ಸ್ಗಳಲ್ಲಿ ಎಡಿಎಎಸ್ ತಂತ್ರಜ್ಞಾನವು ಅಗತ್ಯ ಸಂದರ್ಭಗಳಲ್ಲಿ ಅಟೊನೊಮಸ್ ಬ್ರೇಕಿಂಗ್ ಸೌಲಭ್ಯವಾಗಿಯೂ ಕಾರ್ಯ ನಿರ್ವಹಣೆ ಮಾಡಲಿದ್ದು, ಟಾಪ್ ಎಂಡ್ ಮಾದರಿಯಲ್ಲಿ ಆರು ಏರ್ಬ್ಯಾಗ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್(ಇಎಸ್ಪಿ), ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ, ಹಿಲ್ ಡಿಸೆಂಟ್ ಮತ್ತು 360 ಡಿಗ್ರಿ ವ್ಯೂ ಕ್ಯಾಮೆರಾ ಸೌಲಭ್ಯಗಳಿವೆ.
ಹೊಸ ಕಾರು 4323 ಎಂಎಂ ಉದ್ದ, 1650 ಎಂಎಂ ಎತ್ತರ, 1809 ಎಂಎಂ ಅಗಲ ಹೊಂದಿದ್ದು, ಹೊಸ ಕಾರಿನಲ್ಲಿ ಕಂಪನಿಯು ಬ್ಲೂಟೂಥ್ ಪ್ರೇರಿತ ಡಿಜಿಟಲ್ ಕೀ ಸೌಲಭ್ಯವನ್ನು ಜೋಡಣೆ ಮಾಡಿದೆ.
ಕಾರು ಚಾಲನೆಗೆ ಪೂರಕವಾಗಿ ಹೊಸ ಆಸ್ಟರ್ನಲ್ಲಿ ಅರ್ಬನ್, ನಾರ್ಮಲ್ ಮತ್ತು ಡೈನಾಮಿಕ್ ಡ್ರೈವ್ ಮೋಡ್ ನೀಡಲಾಗಿದ್ದು, ವೆರಿಯೆಂಟ್ಗಳಿಗೆ ಅನುಗುಣವಾಗಿ ಕಾರಿನ ಫೀಚರ್ಸ್ ಮತ್ತು ಬೆಲೆ ನಿರ್ಧಾರವಾಗಲಿದೆ.